Homeಕರ್ನಾಟಕಅಮಿತ್ ಶಾ ಸೂಚನೆಯಂತೆ ಗಲಭೆಗೆ ತಯಾರಿಯೇ?: ಪರಮೇಶ್ವರ್ ಮೇಲಿನ ಹಲ್ಲೆಗೆ ಕಾಂಗ್ರೆಸ್ ಆಕ್ರೋಶ

ಅಮಿತ್ ಶಾ ಸೂಚನೆಯಂತೆ ಗಲಭೆಗೆ ತಯಾರಿಯೇ?: ಪರಮೇಶ್ವರ್ ಮೇಲಿನ ಹಲ್ಲೆಗೆ ಕಾಂಗ್ರೆಸ್ ಆಕ್ರೋಶ

- Advertisement -
- Advertisement -

ಮಾಜಿ ಉಪಮುಖ್ಯಮಂತ್ರಿ, ದಲಿತ ನಾಯಕ ಡಾ.ಜಿ.ಪರಮೇಶ್ವರ್‌ ಅವರ ಮೇಲೆ ನಡೆದಿರುವ ಕಲ್ಲು ತೂರಾಟಕ್ಕೆ ರಾಜ್ಯ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಕೇಂದ್ರ ಗೃಹಸಚಿವರ ಹೇಳಿಕೆಯನ್ನು ಉಲ್ಲೇಖಿಸಿ, ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದೆ.

“ರಾಜ್ಯದಲ್ಲಿ ಆಗಲಿರುವ ಗಲಭೆಗಳಿಗೆ ಇದು ಪೂರ್ವ ಭಾವಿ ತಯಾರಿಯೇ?” ಇದು ಎಂದು ಕಾಂಗ್ರೆಸ್‌ ಪ್ರಶ್ನೆ ಮಾಡಿದೆ.

ಕೊರಟಗೆರೆ ತಾಲ್ಲೂಕಿನ ಭೈರೇನಹಳ್ಳಿಯಲ್ಲಿ ಶುಕ್ರವಾರ ಪ್ರಚಾರದ ವೇಳೆ ಕಲ್ಲು ತೂರಿದ್ದು, ಪರಮೇಶ್ವರ ಗಾಯಗೊಂಡಿದ್ದಾರೆ. ತಲೆಗೆ ಗಾಯವಾಗಿದ್ದು, ಸಮೀಪದ ಅಕ್ಕಿರಾಮಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ನಂತರ ಅವರನ್ನು ತುಮಕೂರಿನ ಸಿದ್ಧಾರ್ಥ ಮೆಡಿಕಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಘಟನೆಯ ಕುರಿತು ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

“ಜಿ. ಪರಮೇಶ್ವರ ಅವರ ಮೇಲೆ ಷಡ್ಯಂತ್ರ ರೂಪಿಸಿ ಕಲ್ಲು ತೂರಿದ ಘಟನೆಯು ಕರ್ನಾಟಕವೇ ತಲೆತಗ್ಗಿಸುವಂತಹದ್ದು. ವಿರೋಧ ಪಕ್ಷಗಳ ನಾಯಕರ ಮೇಲೆ ಮೊದಲಿಂದಲೂ ವ್ಯವಸ್ಥಿತವಾಗಿ ದಾಳಿ ನಡೆಸಲಾಗುತ್ತಿದೆ. ಇದು ಅಮಿತ್ ಶಾ ಅವರ ‘ಗಲಭೆ ನಡೆಯುತ್ತದೆ’ ಎಂಬ ಎಚ್ಚರಿಕೆಯ ಹಿಂದಿನ ಪೂರ್ವಭಾವಿ ತಯಾರಿಗಳೇ? ದಲಿತ ನಾಯಕರ ಮೇಲೆ ಬಿಜೆಪಿಗೆ ಏಕಿಷ್ಟು ದ್ವೇಷ?” ಎಂದು ಪ್ರಶ್ನಿಸಿದೆ.

“ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಯಾವ ಹಂತಕ್ಕೆ ತಂದಿಟ್ಟಿದ್ದೀರಿ ಆರಗ ಜ್ಞಾನೇಂದ್ರ ಅವರೇ? ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ದಾಳಿ ಮಾಡಿದವರ ಮೇಲೆ ಕ್ರಮವಿಲ್ಲ. ಪರಮೇಶ್ವರ ಅವರಿಗೆ ಸೂಕ್ತ ರಕ್ಷಣೆ ಇಲ್ಲ. ಇದೆಲ್ಲವೂ ಬಿಜೆಪಿಯ ವೈಫಲ್ಯವೋ, ಷಡ್ಯಂತ್ರವೋ? ಅಮಿತ್ ಶಾ ಅವರ ನಿರ್ದೇಶನದಂತೆ ‘ಗಲಭೆಯುಕ್ತ ಕರ್ನಾಟಕ’ ಮಾಡಲು ತಯಾರಿಯೇ?” ಎಂದು ಕೇಳಿದಿದೆ.

“ಉತ್ತರ ಪ್ರದೇಶ, ಬಿಹಾರದಿಂದ ಬಿಜೆಪಿ ಬಾಡಿಗೆ ಗೂಂಡಾಗಳನ್ನು ಕರೆಸಿ ಪ್ರತಿ ಕ್ಷೇತ್ರಗಳಲ್ಲಿ ಬಿಟ್ಟಿರುವುದು ವರದಿಯಾಗಿದೆ. ಈ ಗೂಂಡಾಪಡೆ ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ವಿಧ್ವಂಸಕ ಕೃತ್ಯಗಳನ್ನು ನಡೆಸುವ ಷಡ್ಯಂತ್ರ ನಡೆಸಿರುವುದಕ್ಕೆ ಜಿ. ಪರಮೇಶ್ವರ ಅವರ ಮೇಲಿನ ಹಲ್ಲೆಯೇ ಸಾಕ್ಷಿ. ಚುನಾವಣಾ ಆಯುಕ್ತರು ಶಾಂತಿಯುತ ಮತದಾನ ನಡೆಸಲು ಕ್ರಮವಹಿಸಬೇಕು” ಎಂದು ಕಾಂಗ್ರೆಸ್‌ ಒತ್ತಾಯಿಸಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಗಲಭೆ ಉಂಟಾಗುತ್ತದೆ ಎಂಬ ಗೃಹ ಸಚಿವ ಅಮಿತ್ ಶಾ ಹೇಳಿಕೆ ವಿರುದ್ಧ ಕಾಂಗ್ರೆಸ್ ಈಗಾಗಲೇ ದೂರು ಸಲ್ಲಿಸಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಮತ್ತು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರರಾದ ಗೌರವ್ ವಲ್ಲಭ್‌ರವರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ತೇರದಾಳದಲ್ಲಿ ಮಾತನಾಡಿದ್ದ ಕೇಂದ್ರ ಸಚಿವ ಅಮಿತ್ ಶಾ, ”ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಸರ್ಕಾರ ರಚಿಸಿದರೆ ರಾಜ್ಯವು ಗಲಭೆಗಳಿಂದ ತುಂಬಿಹೋಗುತ್ತದೆ. ವಂಶಾಡಳಿತ ಮುನ್ನೆಲೆಗೆ ಬರುತ್ತದೆ” ಎಂದು ಹೇಳಿದ್ದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಹಿಂಸಾಚಾರ ನಡೆಯುತ್ತದೆ ಎಂದು ರಾಜ್ಯದ ಮತದಾರರಿಗೆ ಬೆದರಿಕೆ ಒಡ್ಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ.

ಈ ಹೇಳಿಕೆಯನ್ನು ಖಂಡಿಸಿರುವ ಜೈರಾಮ್ ರಮೇಶ್ ಅವರು, ”ಭಯ ಹುಟ್ಟುಹಾಕುವ ಸಲುವಾಗಿಯೇ ಇಂತಹ ಹೇಳಿಕೆ ನೀಡಲು ನಾಚಿಕೆಯಾಗುವುದಿಲ್ಲವೇ?” ಎಂದು ಪ್ರಶ್ನೆ ಮಾಡಿದ್ದಾರೆ.

“ಅಮಿತ್ ಶಾ ಹೇಳಿಕೆಯು ಅತ್ಯಂತ ನಿರ್ಲಜ್ಜತನದ ಮತ್ತು ಬೆದರಿಸುವ ಹೇಳಿಕೆಯಾಗಿದೆ. ಭಾರತದ ಮೊಟ್ಟಮೊದಲ ಗೃಹ ಸಚಿವರಿಂದ ನಿಷೇಧಿಸಲ್ಪಟ್ಟ ಸಂಘಟನೆ(ಆರ್ ಎಸ್ಎಸ್)ಗೆ ನಿಷ್ಠರಾಗಿರುವ ಕೇಂದ್ರ ಗೃಹ ಸಚಿವರು ಈಗ ಚುನಾವಣಾ ಪ್ರಚಾರದ ಸಮಯದಲ್ಲಿ ಸೋಲಿನ ಆತಂಕದಿಂದ ಬೆದರಿಕೆಗಳನ್ನು ಹಾಕುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿರಿ: ಬಿಜೆಪಿ ಬಹುಮತ ಪಡೆಯುವುದಿಲ್ಲ ಎಂಬುದನ್ನು ಧ್ವನಿಸಿತೇ ಪ್ರೀತಂಗೌಡರ ಭಾಷಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...