Homeಕರ್ನಾಟಕಲಿಂಗಾಯತರನ್ನು ಕಳ್ಳರೆಂದು ಬಿಜೆಪಿ ನಿಂದಿಸಿದೆ: ಮೋದಿ ಹೇಳಿರುವುದಾಗಿ ರಾಜ್ಯ ಬಿಜೆಪಿ ಟ್ವೀಟ್!

ಲಿಂಗಾಯತರನ್ನು ಕಳ್ಳರೆಂದು ಬಿಜೆಪಿ ನಿಂದಿಸಿದೆ: ಮೋದಿ ಹೇಳಿರುವುದಾಗಿ ರಾಜ್ಯ ಬಿಜೆಪಿ ಟ್ವೀಟ್!

- Advertisement -
- Advertisement -

“ನನ್ನನ್ನಷ್ಟೇ ಅಲ್ಲ, ಲಿಂಗಾಯತ ಸಮುದಾಯವನ್ನೂ ಬಿಜೆಪಿ ನಿಂದಿಸಿದೆ. ಅವರನ್ನು (ಲಿಂಗಾಯತರನ್ನು) ಕಳ್ಳರೆಂದು ನಿಂದಿಸಿದ್ದಾರೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿರುವುದಾಗಿ ರಾಜ್ಯ ಬಿಜೆಪಿ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

ಮುಂದಿನ ಸಾಲಿನಲ್ಲಿ, “ಈ ದುರುಪಯೋಗಕ್ಕೆ ಕರ್ನಾಟಕವು ಮತಗಳ ಮೂಲಕ ಉತ್ತರಿಸುತ್ತದೆ ಎಂಬುದನ್ನು ಕಾಂಗ್ರೆಸ್ ನೆನಪಿನಲ್ಲಿಟ್ಟುಕೊಳ್ಳಬೇಕು” ಎಂದು ಮೋದಿ ಹೇಳಿದ್ದಾರೆಂದು ಬರೆಯಲಾಗಿದೆ.

ಟ್ವೀಟ್‌ ಮಾಡಿದ ಬಳಿಕ ತಕ್ಷಣ ಡಿಲೀಟ್ ಮಾಡಲಾಗಿದೆ. ಆದರೆ ಟ್ವೀಟ್ ಡಿಲೀಟ್ ಮಾಡುವಷ್ಟರೊಳಗೆ ಅದನ್ನು ಅರ್ಕೈವ್ ಮಾಡಿರುವುದು ಕಂಡು ಬಂದಿದೆ. (ಅರ್ಕ್ವೈವ್‌ ಲಿಂಕ್‌ ನೋಡಲು ‘ಇಲ್ಲಿ ಕ್ಲಿಕ್ ಮಾಡಿ’)

ಇದನ್ನು ಎಡಿಟ್ ಮಾಡಿ ಅಥವಾ ಡಿಲೀಟ್ ಮಾಡಿ ಎಂದು ಕೆಲವು ಬಿಜೆಪಿ ಕಾರ್ಯಕರ್ತರು ಬಿಜೆಪಿಗೆ ಮನವಿ ಮಾಡಿರುವುದನ್ನೂ ಇಲ್ಲಿ ಕಾಣಬಹುದು.

“ಕಾಂಗ್ರೆಸ್ ಎಂದು ಟೈಪ್‌ ಮಾಡ್ರೋ” ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ತಕ್ಷಣ ಎಚ್ಚೆತ್ತುಕೊಂಡ ಬಿಜೆಪಿ ಟ್ವೀಟ್ ಡಿಲೀಟ್ ಮಾಡಿದರೂ ಅರ್ಕ್ವೈವ್‌ನಲ್ಲಿ ಅದು ದಾಖಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಉದ್ದೇಶಿಸಿ ಸಿದ್ದರಾಮಯ್ಯನವರು ಹೇಳಿದ ಮಾತನ್ನು ಇಡೀ ಲಿಂಗಾಯತ ಸಮುದಾಯಕ್ಕೆ ಅನ್ವಯಿಸಿ ರಾಜ್ಯ ಬಿಜೆಪಿ ರಾಜಕಾರಣ ಮಾಡುತ್ತಿದೆ. ಮೋದಿಯವರೇ ಈಗ ಇಂತಹ ತಪ್ಪನ್ನು ಮಾಡಿರುವಾಗಿ ಟ್ವೀಟ್‌ನಲ್ಲಿ ಬರೆದಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಸಿದ್ದರಾಮಯ್ಯನವರು ತಮ್ಮ ಮಾತಿಗೆ ಈಗಾಗಲೇ ಸ್ಪಷ್ಟನೆಯನ್ನು ನೀಡಿದ್ದಾರೆ. ಆದರೂ ಬಿಜೆಪಿ ಈ ಕುರಿತು ರಾಜಕಾರಣವನ್ನು ಮುಂದುವರಿಸುತ್ತಿದೆ.

“ಬಿಜೆಪಿಯವರು ನನ್ನ ಹೇಳಿಕೆಯ ವೀಡಿಯೋವನ್ನು ಕಟ್ ಮಾಡಿ ತಮಗೆ ಬೇಕಾದಂತೆ ಎಡಿಟ್ ಮಾಡಿಕೊಂಡು ಲಿಂಗಾಯತರೆಲ್ಲ ಭ್ರಷ್ಟರೆಂದು ಹೇಳಿದ್ದೇನೆ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಷ್ಟಪಡಿಸಿದ್ದಾರೆ.

ವಿಡಿಯೊವೊಂದನ್ನು ಹಂಚಿಕೊಂಡಿದ್ದ ರಾಜ್ಯ ಬಿಜೆಪಿ, “ಈ ಹಿಂದೆ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಯತ್ನಿಸಿದ ಸಿದ್ದರಾಮಯ್ಯ, ಈಗ ಆ ಸಮುದಾಯದವರೆಲ್ಲ ಭ್ರಷ್ಟರು, ರಾಜ್ಯವನ್ನು ಹಾಳುಗೆಡವುವವರು ಎಂಬ ಸಂವೇದನಾರಹಿತ ದ್ವೇಷಪೂರಿತ ಹೇಳಿಕೆ ನೀಡಿರುವುದು ಅಕ್ಷಮ್ಯ. ಜಗದ್ಗುರು ಬಸವಣ್ಣನ ಆದರ್ಶ ಪಾಲಿಸುವ 7 ಕೋಟಿ ಕನ್ನಡಿಗರು, ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ” ಎಂದು ಆರೋಪಿಸಿತ್ತು.

ಇದಕ್ಕೆ ಸ್ಪಷ್ಟನೆಯನ್ನು ನೀಡಿದ್ದ ಸಿದ್ದರಾಮಯ್ಯನವರು, “ಚುನಾವಣಾ ಲಾಭ ಪಡೆಯುವ ಇಂಥ ಷಡ್ಯಂತ್ರಗಳಿಗೆ ನಾಡಿನ ಲಿಂಗಾಯತ ಸಮುದಾಯ ಕಿವಿಗೊಡುವುದಿಲ್ಲ ಎಂಬ ನಂಬಿಕೆ ನನಗಿದೆ” ಎಂದು ಭರವಸೆ ವ್ಯಕ್ತಪಡಿಸಿದ್ದರು.

“ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸುವಾಗ ಬಿಜೆಪಿಯವರು ಲಿಂಗಾಯತ ಅಸ್ತ್ರವನ್ನು ಪ್ರಯೋಗ ಮಾಡುತ್ತಿದ್ದಾರೆ, ಬಸವರಾಜ ಬೊಮ್ಮಾಯಿ ಅವರೊಬ್ಬ ಭ್ರಷ್ಟ ಮುಖ್ಯಮಂತ್ರಿ ಎಂದು ಹೇಳಿದ್ದೆ. ಲಿಂಗಾಯತರೆಲ್ಲ ಭ್ರಷ್ಟರು ಎಂದು ನಾನು ಹೇಳಿಯೇ ಇಲ್ಲ. ಅದೆಲ್ಲ ಬಿಜೆಪಿಯವರ ಸೃಷ್ಟಿಸಿದ ಸುಳ್ಳುಗಳಷ್ಟೆ” ಎಂದು ತಿಳಿಸಿದ್ದರು.

“ವೀರೇಂದ್ರ ಪಾಟೀಲರು, ನಿಜಲಿಂಗಪ್ಪನವರು, ಜೆ.ಹೆಚ್ ಪಟೇಲರು, ಬಿ.ಡಿ ಜತ್ತಿ, ಎಸ್.ಆರ್ ಕಂಠಿ ಇಂಥ ಅನೇಕ ಪ್ರಾಮಾಣಿಕ ಮುಖ್ಯಮಂತ್ರಿಗಳನ್ನು ಲಿಂಗಾಯತ ಸಮುದಾಯ ಈ ನಾಡಿಗೆ ನೀಡಿದೆ. ಈ ಎಲ್ಲಾ ನಾಯಕರ ಬಗೆಗೆ ನನಗೆ ವಿಶೇಷ ಪ್ರೀತಿ, ಅಭಿಮಾನವಿದೆ” ಎಂದು ಹೇಳಿದ್ದರು.

“ವೀರಶೈವ – ಲಿಂಗಾಯತರ ಬಗ್ಗೆ ನಮಗೆ ಗೌರವ ಇರುವುದರಿಂದಲೇ ಹೆಚ್ಚು ಟಿಕೇಟನ್ನು ಅವರಿಗೆ ನೀಡಿದ್ದೇವೆ. ಕಳೆದ ಬಾರಿ 47 ಲಿಂಗಾಯತ ಅಭ್ಯರ್ಥಿಗಳಿಗೆ ಪಕ್ಷದ ಟಿಕೆಟ್ ನೀಡಿದ್ದರೆ, ಈ ಬಾರಿ ಅದಕ್ಕಿಂತ ಹೆಚ್ಚು ಅಂದರೆ ಸುಮಾರು 52 – 53 ಕ್ಷೇತ್ರಗಳಲ್ಲಿ ಟಿಕೆಟ್ ನೀಡಿದ್ದೇವೆ” ಎಂದಿದ್ದರು.

“ನಮ್ಮಲ್ಲಿ ಜಾತಿ ಆಧಾರದ ಮೇಲೆ ಮುಖ್ಯಮಂತ್ರಿ ಯಾರಾಗಬೇಕೆಂದು ತೀರ್ಮಾನ ಮಾಡುವುದಿಲ್ಲ, ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇದು ನಮ್ಮಲ್ಲಿ ನಡೆದುಕೊಂಡುಬಂದ ಪದ್ಧತಿ. ಬಿಜೆಪಿಯವರು ಜಾತಿ ಮೇಲೆ ಮಾಡಿದರೆ ಅದು ಅವರ ಪಕ್ಷದ ವಿಚಾರ. ಅದಕ್ಕೆ ನಮ್ಮ ತಕರಾರಿಲ್ಲ” ಎಂದು ಸ್ಪಷ್ಟನೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...