Homeಮುಖಪುಟಜೆಡಿಎಸ್ ಅಭ್ಯರ್ಥಿಗೆ ಆಮಿಷ: ವಿ.ಸೋಮಣ್ಣನವರ ಮೇಲೆ ಎಫ್‌ಐಆರ್

ಜೆಡಿಎಸ್ ಅಭ್ಯರ್ಥಿಗೆ ಆಮಿಷ: ವಿ.ಸೋಮಣ್ಣನವರ ಮೇಲೆ ಎಫ್‌ಐಆರ್

- Advertisement -
- Advertisement -

ಚಾಮರಾಜನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿಯವರ ನಾಮಪತ್ರ ಹಿಂಪಡೆಯುವಂತೆ ಆಮಿಷ ಒಡ್ಡಿದ್ದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣನವರ ಮೇಲೆ ಎಫ್‌ಐಆರ್ ದಾಖಲಾಗಿದೆ.

ಚುನಾವಣಾ ಫ್ಲೈಯಿಂಗ್‌ ಸ್ಕ್ಯಾಡ್‌ನ ಮ್ಯಾಜಿಸ್ಟ್ರೇಟ್‌ ಡಾ.ಬಿ.ಆರ್‌.ಜಯಣ್ಣ ನೀಡಿರುವ ದೂರಿನ ಆಧಾರದ ಮೇಲೆ ಚಾಮರಾಜನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಅದರಲ್ಲಿ ಸೋಮಣ್ಣ ಅವರಿಗೆ ಸಂಬಂಧಿಸಿದ ವಿವರಗಳನ್ನು ಉಲ್ಲೇಖಿಸಲಾಗಿಲ್ಲ. ಅವರನ್ನು ಅಪರಿಚಿತನೆಂದು ಉಲ್ಲೇಖಿಸಲಾಗಿದೆ. ಸೋಮಣ್ಣ ಅವರದ್ದು ಎನ್ನಲಾದ ಆಡಿಯೋದಲ್ಲಿ ಸುದೀಪ್‌ ಮತ್ತು ನಟರಾಜು ಎಂಬ ಹೆಸರುಗಳೂ ಕೇಳಿಬಂದಿದ್ದು, ‌ಆ ಎರಡು ಹೆಸರುಗಳನ್ನೂ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಮತ್ತು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರರಾದ ಗೌರವ್ ವಲ್ಲಭ್‌ರವರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ದೂರವಾಣಿ ಕರೆ ಮಾಡಿದ್ದ ವಿ. ಸೋಮಣ್ಣ, ನಾಮಪತ್ರ ಹಿಂಪಡೆದರೆ 50 ಲಕ್ಷ ರೂ. ಹಣ ಹಾಗೂ ಗೂಟದ ಕಾರನ್ನು ನೀಡುವ ಆಮೀಷ ಒಡ್ಡಿದ್ದಾರೆ. ಸೋಮಣ್ಣ ಅವರಿಂದ ತಮಗೆ ಕರೆ ಬಂದಿದ್ದನ್ನು ಸ್ವತಃ ಮಲ್ಲಿಕಾರ್ಜುನ ಸ್ವಾಮಿ ಅವರೇ ಒಪ್ಪಿಕೊಂಡಿದ್ದಾರೆ. ಇದು ಐಪಿಸಿ ಸೆಕ್ಷನ್ ( 171ಸಿ, 171 F) ಪ್ರಕಾರ ಅಪರಾಧವಾಗಿದೆ. ಈ ನಿಟ್ಟಿನಲ್ಲಿ ಸಚಿವ ಸೋಮಣ್ಣ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.

ಬಿಜೆಪಿ ಹೈಕಮಾಂಡ್ ಆದೇಶದ ಮೇರೆಗೆ ಸ್ವಕ್ಷೇತ್ರ ಗೋವಿಂದರಾಜನಗರ ಬದಲು ಚಾಮರಾಜನಗರ ಮತ್ತು ವರುಣಾ ಕ್ಷೇತ್ರಗಳಲ್ಲಿ ಕಣಕ್ಕಿಳಿದಿರುವ ಸಚಿವ ವಿ.ಸೋಮಣ್ಣನವರು ಒಂದು ಕ್ಷೇತ್ರದಲ್ಲಾದರೂ ಗೆಲುವು ಸಾಧಿಸಲು ಹರಸಾಹಸ ಪಡುತ್ತಿದ್ದಾರೆ. ಅದರ ಭಾಗವಾಗಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಉಪ್ಪಾರ ಸಮುದಾಯದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನಸ್ವಾಮಿಯವರ ನಾಮಪತ್ರ ಹಿಂತೆಗೆಸಲು ಪ್ರಯತ್ನಿಸಿರುವುದು ಬೆಳಕಿಗೆ ಬಂದಿದೆ.

ಸೋಮವಾರ ಮಧ್ಯಾಹ್ನ ಕರೆ ಮಾಡಿದ ಸೋಮಣ್ಣನವರು ಏಯ್ ನಾಮಪತ್ರ ವಾಪಸ್ ತಗೋ. ಆಮೇಲೆ ಬಾಕಿದ್ದು ನಿನಗೆ ಏನು ಬೇಕೊ ಮಾಡಿಕೊಡ್ತೀನಿ. ಏನಯ್ಯ ನೀನು ಯಾವನೋ ಮಾತು ಕೇಳಿಕೊಂಡು ನಾಮಪತ್ರ ಹಾಕಿದ್ದೀಯ ಎಂದು ಸೋಮಣ್ಣನವರು ಜೋರು ಮಾಡುವುದು ಆಡಿಯೋದಲ್ಲಿದೆ.

ನೀನು ನನಗೆ ಒಬ್ಬ ಹಳೆಯ ಸ್ನೇಹಿತ. ಅವನ್ಯಾವನೋ ತೊಟ್ಟಿ ನನ್ನ ಮಗನ ಮಾತು ಕೇಳೋಕೆ ಹೋಗಬೇಡ. ನಿನಗೆ ಬದುಕುವುದಕ್ಕೆ ಏನು ಬೇಕು ಎಲ್ಲವೂ ಮಾಡ್ತೀನಿ. ಮೊದ್ಲು ನಾಮಪತ್ರ ವಾಪಸ್ ತಗೋ ಆಮೇಲೆ ಬಾಕಿದ್ದು ನಾನು ಮಾತನಾಡುತ್ತೇನೆ. ನಿನ್ನ ಹಿತ ಕಾಪಾಡುವುದು ನನ್ನ, ಸುದೀಪಣ್ಣ ಮತ್ತು ಮರಮಕಲ್ ರವರ ಜವಾಬ್ದಾರಿ. ನಾನೀಗ ಉಪ್ಪಾರರ ದೇವಾಸ್ಥಾನದಲ್ಲಿ ಇದ್ದೀನಿ. ನಿನ್ನನ್ನು ಎಲ್ಲಿಗೆ ತಗೊಂಡು ಹೋಗಿ ಬಿಡಬೇಕು ಅಲ್ಲಿಗೆ ಬಿಡುತ್ತೇನೆ. ಮೊದಲು ವಾಪಸ್ ತಗೊ ನಿನಗೆ ಕೈ ಮುಗಿಯುತ್ತೇನೆ ಎಂದು ಸೋಮಣ್ಣನವರು ಹೇಳಿದ್ದಾರೆ.

ಮುಂದುವರೆದು, “ಇನ್ನೊಂದು ಗಂಟೆ ಮಾತ್ರ ಸಮಯವಿದೆ. ಅವನ್ಯಾವನೋ ಪೋಲಿ ನನ್ ಮಗನ ಮಾತು ಕೇಳ್ಕೊಂಡು ನಿಂತಿದ್ದೀಯ. ನೀನು ಮೊದಲು ವಾಪಸ್ ತಗೋ. ನಮ್ ಸರ್ಕಾರ ಬರುತ್ತದೆ. ನಿನಗೆ ಒಂದು ಗೂಟದ ಕಾರು ಬೇಕು, ನಾನು ಕೊಡಿಸ್ತೀನಿ ಎಂದು ಸೋಮಣ್ಣ ಹೇಳಿರುವುದು ದಾಖಲಾಗಿದೆ. ಇದೇ ಸಂದರ್ಭದಲ್ಲಿ ಸೋಮಣ್ಣನವರ ಫೋನ್‌ನಿಂದ ಮಾತನಾಡುವ ಮತ್ತೊಬ್ಬರು ಮಲ್ಲ, ಜಿ.ಟಿ ದೇವೇಗೌಡರ ಕೈಲಿ ಹೇಳಿಸ್ತೀನಿ. ನಾಮಪತ್ರ ವಾಪಸ್ ತಗೋ ಎನ್ನುತ್ತಾರೆ.

ಉಪ್ಪಾರರು ನೀವು. ನಾನು ಉಪ್ಪಾರರ ದೇವರ ಮುಂದೆ ನಿಂತಿದ್ದೀನಿ. ನೀನು ಯಾವನ ಮಾತು ಕೇಳಬೇಡ. ಮೊದ್ಲು ನಾಮಪತ್ರ ವಾಪಸ್ ತಗೊ. ಜಿ.ಟಿ ದೇವೇಗೌಡ ನಾವೆಲ್ಲ ಸ್ನೇಹಿತರು, ನಾನು ಮಾತನಾಡುತ್ತೇನೆ. ಪ್ಲೀಸ್ ತಗೋ ಎನ್ನುತ್ತಾರೆ.

ಇದನ್ನೂ ಓದಿ: ಕಾಂಗ್ರೆಸ್ ದಿಗ್ಗಜರ ವಿರುದ್ಧ ಸೋಮಣ್ಣ, ಅಶೋಕ್: ಹೊಂದಾಣಿಕೆ ರಾಜಕಾರಣದ ವಿರುದ್ಧ ಬಿಜೆಪಿಯ ಸ್ಪಷ್ಟ ಸಂದೇಶ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...