Homeಕರ್ನಾಟಕಉತ್ತರ ಕರ್ನಾಟಕ ಭಾಗದ ಪ್ರವಾಹ ಸಂತ್ರಸ್ತರನ್ನು ಕಂಡು ಮನಸ್ಸು ಮರುಗುತ್ತಿದೆ: ಸಿದ್ದರಾಮಯ್ಯ

ಉತ್ತರ ಕರ್ನಾಟಕ ಭಾಗದ ಪ್ರವಾಹ ಸಂತ್ರಸ್ತರನ್ನು ಕಂಡು ಮನಸ್ಸು ಮರುಗುತ್ತಿದೆ: ಸಿದ್ದರಾಮಯ್ಯ

- Advertisement -
- Advertisement -

“ಉತ್ತರ ಕರ್ನಾಟಕ ಭಾಗದ ಪ್ರವಾಹ ಸಂತ್ರಸ್ತರನ್ನು ಕಂಡು ಮನಸ್ಸು ಮರುಗುತ್ತಿದೆ. ಇಂಥ ಸಂದರ್ಭದಲ್ಲಿ ಅವರೊಂದಿಗೆ ಇರಬೇಕಿತ್ತು ಎನಿಸಿದರೂ ವೈದ್ಯರ ಸಲಹೆ ಮೇರೆಗೆ ಕೆಲವು ದಿನಗಳ‌ ಕಾಲದ ವಿಶ್ರಾಂತಿ ಪಡೆಯಬೇಕಾಗಿದೆ. ನನ್ನ ಕ್ಷೇತ್ರ ಬಾದಾಮಿಯಲ್ಲಿ ಸಹ ಪ್ರವಾಹ ಭೀತಿ ಎದುರಾಗಿದ್ದು, ಈಗಾಗಲೇ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ.” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ನವಿಲುತೀರ್ಥ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುವುದರಿಂದ ಮಲಪ್ರಭಾ ನದಿ ದಡದ ಗ್ರಾಮಗಳಲ್ಲಿ ಪ್ರವಾಹ ಉಂಟಾಗಲಿದೆ. ಆದ್ದರಿಂದ ಗ್ರಾಮಸ್ಥರು ಸುರಕ್ಷಿತ ತಾಣಕ್ಕೆ ತೆರಳಬೇಕೆಂದು ಈ ಮೂಲಕ ಮನವಿ ಮಾಡುತ್ತಿದ್ದೇನೆ ಎಂದು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

ಉಂಟಾಗಬಹುದಾದ ಪ್ರವಾಹಪರಿಸ್ಥಿತಿ ನಿಭಾಯಿಸಲು ಹಾಗೂ ಸಂತ್ರಸ್ತರಿಗೆ ಪರಿಹಾರ ಕಾರ್ಯ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಸ್ಥಳ ಪರಿಶೀಲನೆ ನಡೆಸಿರುವ ಅಧಿಕಾರಿಗಳು ಈಗಾಗಲೇ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಸುರಕ್ಷಿತ ತಾಣಕ್ಕೆ ತೆರಳುವವರಿಗೆ ಅಗತ್ಯ ಸೌಕರ್ಯ ಕಲ್ಪಿಸಲು ಅಧಿಕಾರಿಗಳ ತಂಡ ಸಜ್ಜಾಗಿದೆ. ಈ ಸಂಬಂಧ ಬಾದಾಮಿ ತಹಶಿಲ್ದಾರ್, ಬಾಗಲಕೋಟೆ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿದ್ದೇನೆ.

ಕ್ಷೇತ್ರದ ಜನತೆಗೆ ಯಾವ ತೊಂದರೆಯೂ ಆಗದ ರೀತಿಯಲ್ಲಿ ಸುವ್ಯವಸ್ಥೆ ಕಲ್ಪಿಸುವ ಹೊಣೆ ನಮ್ಮದು ಎಂದಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...