HomeಮುಖಪುಟNCERT ಪುಸ್ತಕದಿಂದ 'ಡಾರ್ವಿನ್‌ನ ವಿಕಾಸದ ಸಿದ್ಧಾಂತ' ಕೈಬಿಡುವುದನ್ನು ಸಮರ್ಥಿಸಿಕೊಂಡ ಶಿಕ್ಷಣ ಸಚಿವ

NCERT ಪುಸ್ತಕದಿಂದ ‘ಡಾರ್ವಿನ್‌ನ ವಿಕಾಸದ ಸಿದ್ಧಾಂತ’ ಕೈಬಿಡುವುದನ್ನು ಸಮರ್ಥಿಸಿಕೊಂಡ ಶಿಕ್ಷಣ ಸಚಿವ

- Advertisement -
- Advertisement -

ಎನ್‌ಸಿಇಆರ್‌ಟಿ ಪ್ರಕಟಿಸಿದ 10ನೇ ತರಗತಿಯ ಪಠ್ಯಪುಸ್ತಕದಿಂದ ‘ಚಾರ್ಲ್ಸ್ ಡಾರ್ವಿನ್ ಅವರ ವಿಕಾಸದ ಸಿದ್ಧಾಂತ’ವನ್ನು ತೆಗೆದುಹಾಕಿರುವುದನ್ನು ಪ್ರಚಾರಕ್ಕಾಗಿ ವಿವಾದ ಮಾಡಲಾಗುತ್ತಿದೆ ಎಂದು ಕೇಂದ್ರ ಶಿಕ್ಷಣ ರಾಜ್ಯ ಖಾತೆ ಸಚಿವ ಸುಭಾಸ್ ಸರ್ಕಾರ್ ಶನಿವಾರ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

NCERT ಕಳೆದ ವರ್ಷ 10ನೇ ತರಗತಿಯ ವಿಜ್ಞಾನ ಪಠ್ಯಪುಸ್ತಕದಲ್ಲಿ “ಆನುವಂಶಿಕತೆ ಮತ್ತು ವಿಕಸನ” ಅಧ್ಯಾಯವನ್ನು “ಆನುವಂಶಿಕತೆ” ಎಂದು ಬದಲಾಯಿಸಲಾಗುವುದು ಎಂದು ಘೋಷಿಸಿತು.

ಏಪ್ರಿಲ್ 20ರಂದು, ದೇಶಾದ್ಯಂತ 1,800 ಕ್ಕೂ ಹೆಚ್ಚು ವಿಜ್ಞಾನಿಗಳು, ಶಿಕ್ಷಕರು ಹಾಗೂ ಶಿಕ್ಷಣತಜ್ಞರು ಆ ವಿಷಯವನ್ನು ತೆಗೆದುಹಾಕುವ ಬಗ್ಗೆ NCERT ಗೆ ಮುಕ್ತ ಪತ್ರವನ್ನು ಬರೆದಿದ್ದರು.

ವಿಕಸನದ ಸಿದ್ದಾಂತವು ವಿಜ್ಞಾನದ ಮೂಲಭೂತ ಆವಿಷ್ಕಾರಕ್ಕೆ ಒಡ್ಡಿಕೊಳ್ಳುವುದಾಗಿದೆ. ಅದನ್ನೇ ನೀವು ಕೈ ಬಿಟ್ಟರೆ ವಿದ್ಯಾರ್ಥಿಗಳು ತಮ್ಮ ಆಲೋಚನಾ ಪ್ರಕ್ರಿಯೆಗಳಲ್ಲಿ ”ಅಂಗವಿಕಲರಾಗಿ” ಉಳಿಯುತ್ತಾರೆ ಎಂದು ವೈಜ್ಞಾನಿಕ ಸಮುದಾಯವು ಭಾವಿಸುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಕಂಗೆಡುತ್ತಿರುವ ಪ್ರಜಾಪ್ರಭುತ್ವ ಮತ್ತು ಬೆದರಿದ ರಾಜಕೀಯಕ್ಕೆ ಬಲಿಪಶುಗಳಾದ ಪಠ್ಯಪುಸ್ತಕಗಳು

”ವೈಜ್ಞಾನಿಕ ಮನೋಭಾವ ಮತ್ತು ತರ್ಕಬದ್ಧ ದೃಷ್ಟಿಕೋನ ನಿರ್ಮಿಸುವಲ್ಲಿ ವಿಕಾಸದ ಪ್ರಕ್ರಿಯೆಯ ತಿಳುವಳಿಕೆಯು ನಿರ್ಣಾಯಕವಾಗಿದೆ. ಡಾರ್ವಿನ್‌ನ ಶ್ರಮದಾಯಕ ಅವಲೋಕನಗಳು ಮತ್ತು ಅವನ ತೀಕ್ಷ್ಣವಾದ ಒಳನೋಟಗಳು ಅವನನ್ನು ನೈಸರ್ಗಿಕ ಆಯ್ಕೆಯ ಸಿದ್ಧಾಂತದ ಕಡೆಗೆ ಕರೆದೊಯ್ದವು, ವಿಜ್ಞಾನದ ಪ್ರಕ್ರಿಯೆ ಮತ್ತು ವಿಮರ್ಶಾತ್ಮಕ ಚಿಂತನೆಯ ಪ್ರಾಮುಖ್ಯತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತದೆ” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಕೋವಿಡ್ -19 ಸಾಂಕ್ರಾಮಿಕ ರೋಗದ ನಂತರ ವಿದ್ಯಾರ್ಥಿಗಳಿಗೆ ಪಠ್ಯಕ್ರಮವನ್ನು ಕಡಿಮೆ ಮಾಡಲು ಎನ್‌ಸಿಇಆರ್‌ಟಿಯ ಕೆಲವು ಭಾಗಗಳನ್ನು ಕೈಬಿಡಲಾಗಿದೆ ಎಂದು ಶನಿವಾರ ಸರ್ಕಾರ್ ಹೇಳಿದರು.

ಮಕ್ಕಳು ಅಧ್ಯಯನ ಮಾಡಲು ಬಯಸಿದರೆ, ಡಾರ್ವಿನ್ ಸಿದ್ಧಾಂತವು ಎಲ್ಲಾ ವೆಬ್‌ಸೈಟ್‌ಗಳಲ್ಲಿ ಲಭ್ಯವಿದೆ. 12ನೇ ತರಗತಿಯಲ್ಲಿ, ಪಠ್ಯಕ್ರಮದಲ್ಲಿ ಈಗಾಗಲೇ ಡಾರ್ವಿನ್ ಸಿದ್ಧಾಂತವಿದೆ, ಆದ್ದರಿಂದ ಅಂತಹ ಸುಳ್ಳು ಪ್ರಚಾರ ಮಾಡಬಾರದು ಎಂದು ಸರ್ಕಾರ್ ಹೇಳಿರುವುದಾಗಿ ANI ವರದಿ ಮಾಡಿದೆ.

2018ರಲ್ಲಿ, ಬಿಜೆಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸತ್ಯಪಾಲ್ ಸಿಂಗ್ ಅವರು, ”ಡಾರ್ವಿನ್ ಅವರ ಮನುಷ್ಯನ ವಿಕಾಸದ ಸಿದ್ಧಾಂತವು ‘ವೈಜ್ಞಾನಿಕವಾಗಿ ತಪ್ಪು’ ಮತ್ತು ಅದನ್ನು ಬದಲಾಯಿಸಬೇಕು” ಎಂದು ಹೇಳಿದ್ದರು.

”ಮನುಷ್ಯನು ಭೂಮಿಯ ಮೇಲೆ ಕಾಣಿಸಿಕೊಂಡಾಗಿನಿಂದ ಅವನು ಯಾವಾಗಲೂ ಮನುಷ್ಯನಾಗಿದ್ದಾನೆ. ನಮ್ಮ ಪೂರ್ವಜರು ಸೇರಿದಂತೆ ಯಾರೂ ಲಿಖಿತ ಅಥವಾ ಮೌಖಿಕವಾಗಿ, ಮಂಗವು ಮನುಷ್ಯನಾಗುವುದನ್ನು ನೋಡಿದ್ದೇವೆ ಎಂದು ಹೇಳಿಲ್ಲ. ನಾವು ಓದಿದ ಯಾವುದೇ ಪುಸ್ತಕಗಳು ಅಥವಾ ನಮ್ಮ ಅಜ್ಜಿಯರು ನಮಗೆ ಹೇಳಿದ ಕಥೆಗಳು ಅಂತಹ ಉಲ್ಲೇಖವನ್ನು ಹೊಂದಿಲ್ಲ” ಎಂದು ಅವರು ಹೇಳಿದ್ದರು.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...