Homeಕರ್ನಾಟಕಸಿಟಿ ರವಿ ಸೋಲಿಸಲು ಕಾಂಗ್ರೆಸ್‌ಗೆ ಮತ ಹಾಕಿ: ಕೈ ಅಭ್ಯರ್ಥಿ ಪರ ಜೆಡಿಎಸ್ ಮುಖಂಡನ ಪ್ರಚಾರ

ಸಿಟಿ ರವಿ ಸೋಲಿಸಲು ಕಾಂಗ್ರೆಸ್‌ಗೆ ಮತ ಹಾಕಿ: ಕೈ ಅಭ್ಯರ್ಥಿ ಪರ ಜೆಡಿಎಸ್ ಮುಖಂಡನ ಪ್ರಚಾರ

- Advertisement -
- Advertisement -

ಸಿದ್ರಾಮುಲ್ಲಾಖಾನ್ ಎಂದು ಹೇಳುವ ಶಾಸಕ ಸಿಟಿ ರವಿಯನ್ನು ಸೋಲಿಸಲು ಕಾಂಗ್ರೆಸ್‌ಗೆ ಮತ ಹಾಕಿ ಎಂದು ಹೇಳುವ ಮೂಲಕ ಎಚ್​ಡಿ ಕುಮಾರಸ್ವಾಮಿ ಆಪ್ತ, ಜೆಡಿಎಸ್ ಮುಖಂಡ ಎಸ್ ಎಲ್ ಭೋಜೇಗೌಡ ಅವರು ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸಿ ಪ್ರಚಾರ ಮಾಡಿದ್ದಾರೆ.

ಜೆಡಿಎಸ್ ಎಮ್‌ಎಲ್‌ಸಿ ಎಸ್.ಎಲ್ ಭೋಜೇಗೌಡ ಅವರು, ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣ ಸಮೀಪದ ಚಿಕ್ಕಗೌಜ ಗ್ರಾಮದ ದೇವರಕಟ್ಟೆಯ ಮುಂದೆ ಕೂತು ಕಾಂಗ್ರೆಸ್ ಅಭ್ಯರ್ಥಿ ಎಚ್‌.ಡಿ ತಮ್ಮಯ್ಯನಿಗೆ ಮತ ಹಾಕುವಂತೆ ಬಹಿರಂಗವಾಗಿ ಮನವಿ ಮಾಡಿದ್ದಾರೆ. ಪ್ರಚಾರ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್‌ ಆಗುತ್ತಿದೆ.

ಜೆಡಿಎಸ್ ಮುಖಂಡ ಭೋಜೇಗೌಡ ಅವರು ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ಮಾಡಿರುವ ವಿಡಿಯೋದಲ್ಲಿ, ”ಶಾಸಕ ಸಿ.ಟಿ. ರವಿ ಸೋಲಿಸಲು ಕಾಂಗ್ರೆಸ್‌ಗೆ ಮತ ಹಾಕಿ. ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾಖಾನ್ ಎನ್ನುತ್ತಾರೆ. ದೇವೇಗೌಡರನ್ನು ಮುಂದಿನ ಜನ್ಮದಲ್ಲಿ ಸಾಬರಾಗಿ ಹುಟ್ಟಿ ಎನ್ನುತ್ತಾರೆ. ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್ ಬಗ್ಗೆ ಮಾತನಾಡುತ್ತಾ ಇಷ್ಟುದ್ದ ಬೆಳೆದವನನ್ನು ನೀವು ಸೋಲಿಸಬೇಕು” ಎಂದು ಮತದಾರರಲ್ಲಿ ಮನವಿ ಮಾಡಿದ್ದಾರೆ.

”ನೀವು ಹಾಲುಮತದ ಕುಟುಂಬದಲ್ಲಿ ಹುಟ್ಟಿದ್ದರೆ, ಸಿದ್ದರಾಮಯ್ಯನಿಗೆ ಅವಮಾನ ಮಾಡಿದವನಿಗೆ ಬುದ್ಧಿ ಕಲಿಸಿ. ಹಾಲು ಮತದ ಕುಟುಂಬದಲ್ಲಿ ನೀವೆಲ್ಲ ಹುಟ್ಟಿದ್ದರೆ ಸಿದ್ದರಾಮಯ್ಯನವರ ಗೌರವ ಉಳಿಸಿ. ಇಲ್ಲ ನೀವು ಆ ಕುಟುಂಬದಲ್ಲಿ ಹುಟ್ಟೇ ಇಲ್ಲ” ಎಂದು ಚಿಕ್ಕಗೌಜ ಗ್ರಾಮದ ಗ್ರಾಮಸ್ಥರ ಜೊತೆ ಭೋಜೇಗೌಡ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.

ಚಿಕ್ಕಮಗಳೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ತಿಮ್ಮ ಶೆಟ್ಟಿ ಕಣದಲ್ಲಿದ್ದರೂ ಕೂಡ ಭೊಜೇಗೌಡ ಮಾತ್ರ ಕಾಂಗ್ರೆಸ್‌ ಅಭ್ಯರ್ಥಿ ಎಚ್‌.ಡಿ ತಮ್ಮಯ್ಯನಿಗೆ ಮತ ಹಾಕುವಂತೆ ಬಹಿರಂಗ ಪ್ರಚಾರ ಮಾಡುತ್ತಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಎಸ್.ಎಲ್ ಭೋಜೇಗೌಡ ಅವರು ಎಚ್.ಡಿ‌ ಕುಮಾರಸ್ವಾಮಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಹೀಗಿದ್ದರೂ ಜೆಡಿಎಸ್‌ ಅಭ್ಯರ್ಥಿ ಬಿಟ್ಟು ಕಾಂಗ್ರೆಸ್‌ ಅಭ್ಯರ್ಥಿಗೆ ಬೆಂಬಲ ಸೂಚಿಸಿರುವುದನ್ನು ನೋಡುತ್ತಿದ್ದರೆ, ಸಿ.ಟಿ.ರವಿ ಸೋಲಿಸಲು ಕಾಂಗ್ರೆಸ್- ಜೆಡಿಎಸ್ ಒಂದಾಗಿದ್ದಾರೆ ಎನ್ನುವ ಅನುಮಾನ ಹುಟ್ಟುಹಾಕಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಚಿಕ್ಕಮಗಳೂರು: ಕೋಮು ಕಾರ್ಮೋಡದ ನಡುವೆ ಮೂಡಿದ “ರವಿ”ಗೆ ಗ್ರಹಣ?!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....