Homeಮುಖಪುಟಪಾಕ್ ಪರ ಕರಪತ್ರ ಸೃಷ್ಟಿಸಿ ಕೋಮುಗಲಭೆಗೆ ಸಂಚು ಆರೋಪ: ಮುನಿರತ್ನ ಸೇರಿ ಪಕ್ಷೇತರ ಅಭ್ಯರ್ಥಿ ವಿರುದ್ಧ...

ಪಾಕ್ ಪರ ಕರಪತ್ರ ಸೃಷ್ಟಿಸಿ ಕೋಮುಗಲಭೆಗೆ ಸಂಚು ಆರೋಪ: ಮುನಿರತ್ನ ಸೇರಿ ಪಕ್ಷೇತರ ಅಭ್ಯರ್ಥಿ ವಿರುದ್ಧ ದೂರು

- Advertisement -
- Advertisement -

ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನರವರು ತಮ್ಮ ಪ್ರಾಯೋಜಿತ ಪಕ್ಷೇತರ ಅಭ್ಯರ್ಥಿ ಜೊತೆ ಸೇರಿ ಪಾಕ್ ಪರ ಕರಪತ್ರ ಸೃಷ್ಟಿಸಿ ಕೋಮುಗಲಭೆಗೆ ಸಂಚು ರೂಪಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮ ಹನುಮಂತರಾಯಪ್ಪನವರು ದೂರು ಸಲ್ಲಿಸಿದ್ದಾರೆ.

ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರಿ ನೀಡಿರುವ ಅವರು,  “ಪಕ್ಷೇತರ ಅಭ್ಯರ್ಥಿಯಾದ ಆರಿಫ್ ಪಾಷಾ ಅಲಿಯಾಸ್ ಯಾರಬ್ ಎಂಬುವವರು ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೊತೆಗೂಡಿ ಪಾಕಿಸ್ತಾನದ ಹೆಸರಿನಲ್ಲಿ ನಕಲಿಯಾಗಿ ಕರಪತ್ರ ರಚಿಸಿ ನನಗೆ ಬೆಂಬಲ ಸೂಚಿಸುವುದಾಗಿ ಘೋಷಣೆ ಮಾಡುವ ಷಡ್ಯಂತ್ರ ರೂಪಿಸಿದ್ದಾರೆ. ಆ ಮೂಲಕ ಕ್ಷೇತ್ರದಲ್ಲಿ ಗೊಂದಲ ಮೂಡಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ. ಪದೇ ಪದೇ ಶಾಂತಿ-ಸುವ್ಯವಸ್ಥೆಯನ್ನು ಕದಡಿ ಕೋಮುಗಲಭೆ ಸೃಷ್ಟಿಸಲೆತ್ನಿಸುತ್ತಿರುವ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಯಾರಬ್ ಮುದ್ರಿಸಿದ ಕರಪತ್ರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಭಾವಚಿತ್ರಗಳು ಮತ್ತು ಚಿಹ್ನೆಯ ಜೊತೆಗೆ ದುರುದ್ದೇಶಪೂರ್ವಕವಾಗಿ ಪಾಕಿಸ್ತಾನದ ಧ್ವಜವನ್ನು ಸೇರಿಸಿದ್ದಾರೆ. ಈ ಕರಪತ್ರದಲ್ಲಿ ಸ್ವಯಂಘೋಷಿತವಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಘೋಷಿಸಿಕೊಂಡು ತಮ್ಮ ಬೆಂಬಲವನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಕುಸುಮ.ಹೆಚ್ ಅವರಿಗೆ ನೀಡುತ್ತಿರುವುದಾಗಿ ಮುದ್ರಿಸಿದ್ದಾರೆ. ಆದರೆ ಯಾರಬ್ ಸಚಿವ ಮತ್ತು ಕ್ಷೇತ್ರದ ಶಾಸಕ ಮುನಿರತ್ನ, ಬಿಜೆಪಿ ಮುಖಂಡ ವೇಲು ನಾಯ್ಕ ಮುಂತಾದವರೊಂದಿಗೆ ಇರುವ ಚಿತ್ರಗಳು, ಬಿಜೆಪಿ ಮುಖಂಡರೊಬ್ಬರ ಹುಟ್ಟು ಹಬ್ಬಕ್ಕೆ ಶುಭ ಹಾರೈಸಿದ ಪ್ಲೆಕ್ಸ್ ಡಿಸೈನ್‌ಗಳು ಲಭ್ಯವಿದೆ. ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮತದಾರರಲ್ಲಿ ಗೊಂದಲ ಮೂಡಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ನನ್ನ ಮೇಲೆ ಕೋಮು ಪ್ರಚೋದನೆ ಮೂಡಿಸುವ ಸಲುವಾಗಿ ಬಿಜೆಪಿ ಪಕ್ಷದ ಅಭ್ಯರ್ಥಿ ಮುನಿರತ್ನ ದುರುದ್ದೇಶಪೂರ್ವಕವಾಗಿ ಯಾರಬ್ ಅವರನ್ನು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಪ್ರೇರಣೆ ನೀಡಿ ಆತನಿಂದ ಪಾಕಿಸ್ತಾನದ ಧ್ವಜ ಹೊಂದಿರುವ ಕರಪತ್ರ ಮುದ್ರಿಸಿ ಚುನಾವಣೆಯಲ್ಲಿ ಗಲಭೆ ಮೂಡಿಸುವ ಸಂಚು ರೂಪಿಸಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಮತ್ತು ಅಭ್ಯರ್ಥಿಯಾದ ನನ್ನ ವಿರುದ್ಧ ಅಪಪ್ರಚಾರ ಮಾಡುವ ಹುನ್ನಾರದಿಂದ ಪ್ರಚೋದನಕಾರಿ ಕರಪತ್ರ ಮುದ್ರಿಸಿ ಹಂಚಿರುವ ಯಾರಬ್, ಆತನಿಗೆ ಪ್ರೇರಣೆ ನೀಡಿರುವ ಬಿಜೆಪಿ ಪಕ್ಷದ ಅಭ್ಯರ್ಥಿ ಮುನಿರತ್ನ ಹಾಗೂ ವೇಲು ನಾಯ್ಕ ಮುಂತಾದ ಬಿಜೆಪಿ ನಾಯಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಎಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮ ದೂರಿನಲ್ಲಿ ತಿಳಿಸಿದ್ದಾರೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕುಸುಮರವರು ಭಾನುವಾರ ರಾತ್ರಿ ಫೇಸ್‌ಬುಕ್ ಲೈವ್‌ನಲ್ಲಿ ಮಾತನಾಡಿದ್ದು, ಯಾರಬ್ ಯಶವಂತಪುರದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚು ಇರುವ ಕಡೆ ರ್ಯಾಲಿ ನಡೆಸಲು ಉದ್ದೇಶಿಸಿದ್ದಾರೆ. ಈ ಬಗ್ಗೆ ಯಾರೂ ಗೊಂದಲಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದ್ದರು.

ಇದನ್ನೂ ಓದಿ; BJP ಕಳೆದ ಚುನಾವಣೆಯಲ್ಲಿ ನೀಡಿದ್ದ 90% ಭರವಸೆಗಳನ್ನು ಈಡೇರಿಸಿಲ್ಲ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...