Homeಮುಖಪುಟಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರ ಹಲ್ಲೆ: 'ನೀವು ನಮ್ಮನ್ನು ಕೊಲ್ಲಲು ಬಯಸಿದರೆ, ಕೊಲ್ಲಬಹುದು' ಎಂದು ಕಣ್ಣೀರಿಟ್ಟ...

ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರ ಹಲ್ಲೆ: ‘ನೀವು ನಮ್ಮನ್ನು ಕೊಲ್ಲಲು ಬಯಸಿದರೆ, ಕೊಲ್ಲಬಹುದು’ ಎಂದು ಕಣ್ಣೀರಿಟ್ಟ ವಿನೇಶ್ ಫೋಗಟ್

- Advertisement -
- Advertisement -

ದೆಹಲಿಯ ಜಂತರ್ ಮಂತರ್‌ನಲ್ಲಿ ಕೆಲ ದಿನಗಳಿಂದ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದು, ಬುಧವಾರ ರಾತ್ರಿ ದೆಹಲಿ ಪೊಲೀಸ್ ಸಿಬ್ಬಂದಿ, ಅವರ ಮೇಲೆ ಹಲ್ಲೆ ನಡೆಸಿ ನಿಂದಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಬುಧವಾರ ತಡರಾತ್ರಿ ಪಾನಮತ್ತ ಪೊಲೀಸರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕುಸ್ತಿಪಟುಗಳು ಆರೋಪಿಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಮಡಚುವ ಹಾಸಿಗೆಗಳನ್ನು ತರಲು ಬಯಸಿದಾಗ ಪೊಲೀಸರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕುಸ್ತಿಪಟುಗಳು ಹೇಳಿದ್ದಾರೆ.

ಹಲವು ಕುಸ್ತಿಪಟುಗಳ ತಲೆಗೆ ಪೆಟ್ಟಾಗಿದ್ದು ಇಬ್ಬರಿಗೆ ಗಾಯಗಳಾಗಿವೆ. ಒಬ್ಬ ವ್ಯಕ್ತಿ ಪ್ರಜ್ಞೆ ತಪ್ಪಿ ಬಿದ್ದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಪೊಲೀಸರ ಪ್ರಕಾರ, ”ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಸೋಮನಾಥ್ ಭಾರ್ತಿ ಅನುಮತಿಯಿಲ್ಲದೆ ಮಡಿಸುವ ಹಾಸಿಗೆಗಳೊಂದಿಗೆ ಪ್ರತಿಭಟನಾ ಸ್ಥಳಕ್ಕೆ ತಲುಪಿದರು. ಪೊಲೀಸರು ಮಧ್ಯಪ್ರವೇಶಿಸಿದಾಗ, ಸಣ್ಣ ವಾಗ್ವಾದ ನಡೆಯಿತು, ನಂತರ ಎಎಪಿ ನಾಯಕ ಮತ್ತು ಇತರ ಇಬ್ಬರನ್ನು ಬಂಧಿಸಲಾಯಿತು” ಎಂದು ಪೊಲೀಸರು ತಿಳಿಸಿದ್ದಾರೆ.

ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಕೆಲವು ಪ್ರತಿಭಟನಾಕಾರರು ಪೊಲೀಸ್ ಸಿಬ್ಬಂದಿ ಕುಡಿದ ಅಮಲಿನಲ್ಲಿ ಕುಸ್ತಿಪಟುಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

”ಕುಡಿದ ಪೋಲೀಸ್ ಧರೆಮೇಂದ್ರ, ವಿನೇಶ್ ಫೋಗಟ್ ಅವರನ್ನು ನಿಂದಿಸಿ ನಮ್ಮೊಂದಿಗೆ ಜಗಳವಾಡಿದರು” ಎಂದು ಮಾಜಿ ಕುಸ್ತಿಪಟು ರಾಜ್‌ವೀರ್ ಹೇಳಿದರು.

ಒಲಿಂಪಿಯನ್ ಮತ್ತು ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಗೀತಾ ಫೋಗಟ್ ಅವರು, ”ತಮ್ಮ ಕಿರಿಯ ಸಹೋದರ ದುಶ್ಯಂತ್ ಫೋಗಟ್ ಅವರ ತಲೆ ಒಡೆದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕುಸ್ತಿಪಟುಗಳ #MeToo ಪ್ರತಿಭಟನೆಯನ್ನು ಹತ್ತಿಕ್ಕಲು ಅನುರಾಗ್ ಠಾಕೂರ್ ಯತ್ನ; ಸ್ಪೋಟಕ ಮಾಹಿತಿ ಬಿಚ್ಚಿಟ್ಟ ವಿನೇಶ್ ಫೋಗಟ್

ಏಷ್ಯನ್ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ಅವರು, ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದು, ”ಅವರು ಈ ರೀತಿಯಲ್ಲಿ ನಡೆಸಿಕೊಳ್ಳಬೇಕಾದ ಅಪರಾಧ ನಾವೇನೂ ಮಾಡಿಲ್ಲ ಎಂದು ಹೇಳಿದರು. ”ನೀವು ನಮ್ಮನ್ನು ಕೊಲ್ಲಲು ಬಯಸಿದರೆ, ನಮ್ಮನ್ನು ಕೊಲ್ಲಬಹುದು” ಎಂದು ಫೋಗಟ್ ಅಳುತ್ತಾ ಹೇಳಿದರು ಎಂದು ಸುದ್ದಿ ಸಂಸ್ಥೆ ಪಿಟಿಐ ಉಲ್ಲೇಖಿಸಿದೆ.

ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಬಜರಂಗ್ ಪುನಿಯಾ ಅವರು ಎನ್‌ಡಿಟಿವಿಯೊಂದಿಗೆ ಮಾತನಾಡುತ್ತಾ, ”ನಾನು ಗೆದ್ದ ಎಲ್ಲಾ ಪದಕಗಳನ್ನು ಸರ್ಕಾರವು ಹಿಂದಕ್ಕೆ ತೆಗೆದುಕೊಳ್ಳುವಂತೆ ನಾನು ವಿನಂತಿಸುತ್ತೇನೆ” ಎಂದು ಹೇಳಿದರು.

ಘರ್ಷಣೆಯ ನಂತರ, ಪ್ರತಿಭಟನಾ ಸ್ಥಳದಲ್ಲಿ ಭಾರೀ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ ಮತ್ತು ಇಡೀ ಪ್ರದೇಶವನ್ನು ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ, ಪ್ರತಿಭಟನಾ ನಿರತ ಕುಸ್ತಿಪಟುಗಳ ಬಳಿಗೆ ಮಾಧ್ಯಮದ ಸಿಬ್ಬಂದಿಗೆ ತೆರಳಲು ಅವಕಾಶ ನೀಡಲಿಲ್ಲ.

ತಡರಾತ್ರಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕಾಂಗ್ರೆಸ್ ಮುಖಂಡ ದೀಪೇಂದರ್ ಸಿಂಗ್ ಹೂಡಾ, ದೆಹಲಿ ಪೊಲೀಸರು ತನ್ನನ್ನು ಬಂಧಿಸಿ ವಸಂತ ವಿಹಾರ್ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ ಎಂದು ಹೇಳಿದ್ದಾರೆ.

ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ಭಾರತದ ಅಗ್ರ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಆರು ಬಾರಿ ಸಂಸದರಾಗಿರುವ ಅವರು ತಮ್ಮ ವಿರುದ್ಧದ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ.

ಸಿಂಗ್ ವಿರುದ್ಧ ಕುಸ್ತಿಪಟುಗಳು ಸಲ್ಲಿಸಿರುವ ಅರ್ಜಿಯನ್ನು ಭಾರತದ ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.

ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ವಿರುದ್ಧ ಏಸ್ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ, ಸಾಕ್ಷಿ ಮಲ್ಲಿಖ್ ಮತ್ತು ಇತರ ಉನ್ನತ ಗ್ರಾಪ್ಲರ್‌ಗಳು ಪ್ರತಿಭಟನೆ ನಡೆಸುತ್ತಿದ್ದರು ಮತ್ತು ಅವರು ಬ್ರಿಜ್ ಭೂಷಣ್ ಅವರನ್ನು ಬಂಧಿಸುವಂತೆ ಒತ್ತಾಯಿಸುತ್ತಿದ್ದಾರೆ.

ಪೊಲೀಸರು ಮತ್ತು ಕುಸ್ತಿಪಟುಗಳ ನಡುವಿನ ಘರ್ಷಣೆಯ ನಂತರ, ಕಾಂಗ್ರೆಸ್ ನಾಯಕ ದೀಪೇಂದರ್ ಹೂಡಾ ಮತ್ತು ಎಎಪಿ ನಾಯಕ ಸೋಮನಾಥ್ ಭಾರ್ತಿ ಸೇರಿದಂತೆ ಕುಸ್ತಿಪಟುಗಳ ಹಲವಾರು ಬೆಂಬಲಿಗರನ್ನು ಬಂಧಿಸಲಾಯಿತು.

ಈ ಬಗ್ಗೆ ಮಾತನಾಡಿರುವ ದೆಹಲಿ ಡಿಸಿಪಿ ಪ್ರಣವ್ ತಾಯಲ್, ”ಕುಸ್ತಿಪಟುಗಳ ಬೆಂಬಲಿಗರು ಪ್ರತಿಭಟನಾ ಸ್ಥಳಕ್ಕೆ ಹಾಸಿಗೆಗಳನ್ನು ತೆಗೆದುಕೊಂಡು ಹೋಗುತ್ತಿದ್ದರು ಇದನ್ನು ನಮ್ಮ ಪೊಲೀಸರು ತಡೆದ ನಂತರ ಗೊಂದಲಕ್ಕೆ ಕಾರಣವಾಯಿತು” ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

”ಜಂತರ್ ಮಂತರ್‌ನಲ್ಲಿರುವ ಪ್ರತಿಭಟನಾ ಸ್ಥಳಕ್ಕೆ ಹಾಸಿಗೆಗಳನ್ನು ತರಲಾಯಿತು. ಯಾವುದೇ ಅನುಮತಿ ಇಲ್ಲದ ಕಾರಣ ನಾವು ಅದಕ್ಕೆ ಅವಕಾಶ ನೀಡಲಿಲ್ಲ, ಆದ್ದರಿಂದ ಪ್ರತಿಭಟನಾ ನಿರತ ಕುಸ್ತಿಪಟುಗಳ ಕೆಲವು ಬೆಂಬಲಿಗರು ಟ್ರಕ್‌ನಿಂದ ಹಾಸಿಗೆಗಳನ್ನು ತೆಗೆದುಕೊಡುಬರಲು ಪ್ರಯತ್ನಿಸಿದರು ಮತ್ತು ಇದು ವಾಗ್ವಾದಕ್ಕೆ ಕಾರಣವಾಯಿತು” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Shameless and inhuman.
    Ruthless and undemocratic.
    The wrestlers are asking for basic respect.
    The ruling party in power does not care for ordinary hard working people any more. To them people are just there to be used purely for their privelege and pelf. Power has gone to their head. It is a casteist mind. Disrespecting women is the Sanskar of the current dispensation in power
    They think they are always going to be in power and that the 85% will remain their slaves.
    The sooner this Government is removed from power better for the society and the world at large.
    The more the oppression the stronger the rebellion.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...