Homeಮುಖಪುಟ370ನೇ ವಿದಿ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಆರೆಸ್ಸೆಸ್ ವಕೀಲನಿಂದಲೇ ಅರ್ಜಿ: ಅಮಿತ್ ಶಾರ...

370ನೇ ವಿದಿ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಆರೆಸ್ಸೆಸ್ ವಕೀಲನಿಂದಲೇ ಅರ್ಜಿ: ಅಮಿತ್ ಶಾರ ಹೊಸ ನಾಟಕ

ಜಮ್ಮು ಮತ್ತು ಕಾಶ್ಮೀರ ಕುರಿತ ರಾಷ್ಟ್ರಪತಿ ಆದೇಶದ ವಿರುದ್ಧ ಸುಪ್ರೀಂಕೋರ್ಟಿನಲ್ಲಿ ಪ್ರಶ್ನೆಯ ನಾಟಕ! ಅತ್ಯಾಚಾರ ಸಮರ್ಥಿಸಿದ್ದ ಆರೆಸ್ಸೆಸ್ ವಕೀಲನಿಂದ ಅರ್ಜಿ!

- Advertisement -
- Advertisement -

ರಾಷ್ಟ್ರಪತಿಯವರು ಹೊರಡಿಸಿರುವ ಸಾಂವಿಧಾನಿಕ (ಜಮ್ಮು ಮತ್ತು ಕಾಶ್ಮೀರಕ್ಕೆ ಅನ್ವಯ) ಆದೇಶ 2019ನ್ನು ಪ್ರಶ್ನಿಸಿ ವಿಧಿ 32ರ ಅನ್ವಯ ಆರೆಸ್ಸೆಸ್‌ಗೆ ನಿಕಟವಾಗಿರುವ ಕುಖ್ಯಾತ ವಕೀಲ ಮನೋಹರಲಾಲ್ ಶರ್ಮಾ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.

ಇದು ಕೇಂದ್ರ ಗೃಹಮಂತ್ರಿ ಅಮಿತ್ ಶಾ ಮಾಡಿರುವ ತಂತ್ರವೆಂದು ನ್ಯಾಯಾಂಗ ವಲಯದಲ್ಲಿ ಮಾತನಾಡಲಾಗುತ್ತಿದ್ದು, ಅವರ ಕೋರಿಕೆಯಂತೆಯೇ ಶರ್ಮಾ ಈ ಅರ್ಜಿ ಸಲ್ಲಿಸಿದ್ದಾರೆಂದು ಹೇಳಲಾಗುತ್ತಿದೆ.

ತನ್ನದೇ ಕಾನೂನುಬಾಹಿರ ಕ್ರಮದ ವಿರುದ್ಧ ಬಲವಾದ ಪ್ರಕರಣವನ್ನು ದುರ್ಬಲಗೊಳಿಸಲೆಂದೇ ದುರ್ಬಲವಾದ ಅರ್ಜಿಯೊಂದನ್ನು ಸಲ್ಲಿಸಲಾಗಿದ್ದು, ಒಂದು ವೇಳೆ ಸುಪ್ರೀಂಕೋರ್ಟ್ ಈ ಅರ್ಜಿಯನ್ನು ವಜಾ ಮಾಡಿದಲ್ಲಿ ಈ ಆದೇಶವನ್ನು ನಿಜವಾಗಿಯೂ ವಿರೋಧಿಸುವ ಬೇರಾರಿಗೂ ಮುಂದೆ ಅದನ್ನು ಪ್ರಶ್ನಿಸುವುದು ಕಷ್ಟವಾಗುತ್ತದೆ. ಇದಕ್ಕಾಗಿಯೇ ಈ ಕುಟಿಲತಂತ್ರವನ್ನು ಹೆಣೆಯಲಾಗಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕಿತ್ತುಹಾಕುವ ರಾಷ್ಟ್ರಪತಿಯವರ ಆದೇಶವು ಸಂವಿಧಾನಬಾಹಿರವಾಗಿದೆ ಎಂದು ಅರ್ಜಿಯಲ್ಲಿ ಹೇಳಿರುವ ಶರ್ಮಾ, ಸರಕಾರವು ಇದಕ್ಕಾಗಿ ಸಂಸದೀಯ ಹಾದಿಯಲ್ಲಿ ಮುಂದುವರಿಯಬೇಕಾಗಿತ್ತು ಎಂದು  ಹೇಳಿದ್ದಾರೆ.

ಸಂವಿಧಾನದ ವಿಧಿ 370ನ್ನು ಅದೇ ವಿಧಿಯಲ್ಲಿನ ಅಧಿಕಾರಗಳನ್ನು ಬಳಸಿಕೊಂಡು ಅಸಿಂಧುಗೊಳಿಸುವುದು ಸಂವಿಧಾನಬಾಹಿರ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಆಗಸ್ಟ್ 5, 2019ರಂದು ರಾಷ್ಟ್ರಪತಿಯವರು ಹೊರಡಿಸಿರುವ ಸಾಂವಿಧಾನಿಕ (ಜಮ್ಮು ಮತ್ತು ಕಾಶ್ಮೀರಕ್ಕೆ ಅನ್ವಯ) ಆದೇಶ 1954ನ್ನು ಅಸಿಂಧುಗೊಳಿಸುತ್ತದೆ. ಅದು ಭಾರತೀಯ ಸಂವಿಧಾನದ ಎಲ್ಲಾ ವಿಧಿಗಳು ಜಮ್ಮು ಮತ್ತು ಕಾಶ್ಮೀರಕ್ಕೂ ಅನ್ವಯವಾಗುವುದಾಗಿ ಹೇಳುತ್ತದೆ. ‘ರಾಜ್ಯ ಸಾಂವಿಧಾನಿಕ ವಿಧಾನಸಭೆ’ ಎಂಬ ಪದವನ್ನು ಅದು ‘ರಾಜ್ಯ ಶಾಸಕಾಂಗ ವಿಧಾನಸಭೆ’ ಎಂಬ ಪದದಿಂದ ಬದಲಿಸುತ್ತದೆ. ಇದು ಜಮ್ಮು ಮತ್ತು ಕಾಶ್ಮೀರವನ್ನು ನೇರವಾಗಿ ಕೇಂದ್ರ ಸರಕಾರದ ನಿಯಂತ್ರಣಕ್ಕೆ ತರುತ್ತದೆ.

ಆರೆಸ್ಸೆಸ್ ವಕೀಲ ಎಂದೇ ಪರಿಚಿತರಾಗಿರುವ ಮನೋಹರಲಾಲ್ ಶರ್ಮಾ ಎಷ್ಟು ಕುಖ್ಯಾತ ವಕೀಲ ಎಂದರೆ 2013ರಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣವೊಂದರಲ್ಲಿ ಆರೋಪಿಗಳ ಪರ ವಾದಿಸುತ್ತಾ, ಭಾರತದಲ್ಲಿ ಈ ತನಕ ‘ಗೌರವಾರ್ಹ ಮಹಿಳೆ’ಯೊಬ್ಬರ ಮೇಲೆ ಅತ್ಯಾಚಾರ ನಡೆದಿರುವುದನ್ನು ತಾನು ಕೇಳಿಯೇ ಇಲ್ಲ ಎಂದು ಹೇಳಿದ್ದರು.

ಕೊಲೆಯಾದ ಕಾಲೇಜು ವಿದ್ಯಾರ್ಥಿನಿಯ ಸಂಗಾತಿಯೇ ಈ ಪ್ರಕರಣಕ್ಕೆ ‘ಸಂಪೂರ್ಣ ಹೊಣೆ’ ಎಂದು ವಾದಿಸಿದ್ದ ಈತ, ಅವಿವಾಹಿತ ಜೋಡಿ ರಾತ್ರಿ ಹೊತ್ತು ರಸ್ತೆಯಲ್ಲಿ ಇರಲೇಬಾರದಿತ್ತು ಎಂದು ಹೇಳಿದ್ದರು.

ಕೃಪೆ: ಅಕ್ಷಿತಾ ಸಕ್ಸೇನಾ, (ಲೈವ್ ಲಾ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...