Homeಕರ್ನಾಟಕಬಜರಂಗದಳ ನಿಷೇಧಿಸುವ ಯಾವುದೇ ಯೋಜನೆ ಕಾಂಗ್ರೆಸ್ಸಿಗಿಲ್ಲ: ವೀರಪ್ಪ ಮೊಯ್ಲಿ

ಬಜರಂಗದಳ ನಿಷೇಧಿಸುವ ಯಾವುದೇ ಯೋಜನೆ ಕಾಂಗ್ರೆಸ್ಸಿಗಿಲ್ಲ: ವೀರಪ್ಪ ಮೊಯ್ಲಿ

- Advertisement -
- Advertisement -

ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ ಹಿಂದುತ್ವ ಸಂಘಟನೆ ಬಜರಂಗದಳವನ್ನು ನಿಷೇಧಿಸುವ ಯಾವುದೇ ಯೋಜನೆ ಕಾಂಗ್ರೆಸ್ ಹೊಂದಿಲ್ಲ; ಯಾವುದೇ ಸಂಘಟನೆಯನ್ನು ನಿಷೇಧಿಸುವ ಅಧಿಕಾರಕ್ಕೆ ಕೇಂದ್ರ ಸರ್ಕಾರಕ್ಕೆ ಇರುತ್ತದೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ಬುಧವಾರ ಹೇಳಿರುವಾಗಿ `ಇಂಡಿಯಾ ಟುಡೇ’ ವರದಿ ಮಾಡಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಸಂವಿಧಾನ ವಿರೋಧಿ ಕೃತ್ಯಗಳನ್ನು ಎಸಗುವ ಸಂಘಟನೆಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಕಾಂಗ್ರೆಸ್ ಆಶ್ವಾಸನೆ ನೀಡಿದೆ.

ಬಜರಂಗದಳ ಮತ್ತು ಇಸ್ಲಾಮಿಕ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮೇಲೆ ನಿಷೇಧ ಹೇರುವುದಾಗಿ ಭರವಸೆ ನೀಡಿದ ಎರಡು ದಿನಗಳ ನಂತರ ಮೊಯ್ಲಿ ಅವರ ಹೇಳಿಕೆ ಹೊರಬಿದ್ದಿದೆ. ಸಮುದಾಯಗಳ ನಡುವೆ ದ್ವೇಷ ಉಂಟು ಮಾಡುವ ಸಂಘಟನೆಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಕಾಂಗ್ರೆಸ್ ಪ್ರಣಾಳಿಕೆ ತಿಳಿಸಿದೆ.

ಕಾಂಗ್ರೆಸ್‌ನ ಭರವಸೆಯು ಭಾರತೀಯ ಜನತಾ ಪಕ್ಷದಿಂದ ತೀವ್ರ ಟೀಕೆಗೆ ಒಳಗಾಗಿತ್ತು, ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಕ್ರಿಯಿಸಿ, `ಹಿಂದೂ ದೇವತೆ ಹನುಮಂತನನ್ನು ಅವಮಾನಿಸಿದ್ದಾರೆ’ ಎಂದು ಆರೋಪಿಸಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಮೊಯ್ಲಿ, ಸಂಘಟನೆಗಳನ್ನು ನಿಷೇಧಿಸುವುದು ಕೇಂದ್ರ ಸರ್ಕಾರದ ಅಧೀನಕ್ಕೆ ಬರುತ್ತದೆಯೇ ಹೊರತು ರಾಜ್ಯ ಸರ್ಕಾರದ್ದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಅದನ್ನು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ವೀರಪ್ಪಮೊಯ್ಲಿಯವರು ಉಲ್ಲೇಖಿಸಿರುವುದಾಗಿ `ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದ್ದಾರೆ.

ದ್ವೇಷದ ಭಾಷಣ ಮಾಡುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಸ್ತಾಪವನ್ನು ಮಾಡಿದೆ ಎಂದು ಮೊಯ್ಲಿ ತಿಳಿಸಿದ್ದಾರೆ.

ಸಮಾಜದಲ್ಲಿನ ಶಾಂತಿಯುತ ವಾತಾವರಣವನ್ನು ಹಾಳುಮಾಡುವ ಯಾವುದೇ ಸಂಘಟನೆಗಳಾದರೂ- ಅದು ಪಿ.ಎಫ್.ಐ ಇರಲಿ, ಬಜರಂಗದಳ ಇರಲಿ- ಅಂಥವುಗಳನ್ನು ನಿಷೇಧಿಸಬೇಕಾಗುತ್ತದೆ ಎಂದು ನಾವು ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿದ್ದೇವೆ’’ ಎಂದಿದ್ದಾರೆ.

ಇದರ ನಡುವೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರ ಪವನ್ ಖೇರಾ, “ಮೋದಿಯವರು ಹನುಮಂತನನ್ನು ಬಜರಂಗದಳಕ್ಕೆ ಸಮೀಕರಿಸಿದ್ದಾರೆ. ಇದಕ್ಕಾಗಿ ಕ್ಷಮೆಯಾಚಿಸಬೇಕು’’ ಎಂದು ಆಗ್ರಹಿಸಿದ್ದಾರೆ.

ಹನುಮಂತನನ್ನು ಪೂಜಿಸುವವರನ್ನು ಬಂಧಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಮೋದಿ ಆರೋಪಿಸಿದ್ದಾರೆ.

ಕಾಂಗ್ರೆಸ್ ಪ್ರಣಾಳಿಕೆ ಸುಟ್ಟು ಪ್ರತಿಭಟಿಸಿರುವ, ವಿವಾದಾತ್ಮಕ ಹೇಳಿಕೆಗಳಿಗೆ ಹೆಸರಾದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, “ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯು ಮುಹಮ್ಮದ್ ಅಲಿ ಜಿನ್ನಾ ಅವರು ಸ್ಥಾಪಿಸಿದ ಮುಸ್ಲಿಂ ಲೀಗ್‌ಗೆ ಹೋಲಿಕೆಯಾಗುತ್ತದೆ’’ ಎಂದು ಟೀಕಿಸಿದ್ದಾರೆ.

ಭಜರಂಗದಳವನ್ನು ನಿಷೇಧಿಸುವ ಬಗ್ಗೆ ಮಾತನಾಡಲು ಅವರಿಗೆ (ಕಾಂಗ್ರೆಸ್) ಎಷ್ಟು ಧೈರ್ಯವಿದೆ ಎಂದು ಈಶ್ವರಪ್ಪ ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...