ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದವರ ಕೊಲೆಗೆ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಸಂಚು ನಡೆಸಿದ್ದಾರೆ ಎನ್ನಲಾದ ಆಡಿಯೋ ಕುರಿತಂತೆ ಪ್ರಕರಣ ದಾಖಲಿಸುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಣಿಕಂಠ ರಾಠೋಡ್ ಮಾತಾಡಿದ ಫೋನ್ ಧ್ವನಿ ಮುದ್ರಿಕೆ ವಿಚಾರದಲ್ಲಿ ಪ್ರಕರಣ ದಾಖಲಿಸಿ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸುತ್ತೇವೆ. ಧ್ವನಿ ಮುದ್ರಿಕೆ ವಿಚಾರದಲ್ಲಿ ಅನುಮಾನವಿದೆ. ಅದನ್ನು ತಿರುಚಲಾಗಿದೆಯೋ ಏನು ಎಂಬುವುದನ್ನು ನೋಡಬೇಕು. ಆ ಬಳಿಕ ಇದರ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ” ಎಂದಿದ್ದಾರೆ.
“ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸೋಲು ಕಾಣುತ್ತಿದೆ ಮತ್ತು ನಿಧಾನವಾಗಿ ಅದರ ಮುಖವಾಡ ಕಳಚಿ ಬೀಳುತ್ತಿದೆ. ಕರ್ನಾಟಕದ ಪುತ್ರ, ಎಐಸಿಸಿ ಅಧ್ಯಕ್ಷ ಖರ್ಗೆ ಕುಟುಂಬವನ್ನು ಅಳಿಸಿ ಹಾಕಲು ಬಿಜೆಪಿ ನಾಯಕರೊಬ್ಬರು ಸಂಚು ರೂಪಿಸಿ ಸಿಕ್ಕಿಬಿದ್ದಿರುವುದು ಆಡಿಯೋ ರೆಕಾರ್ಡಿಂಗ್‌ನಲ್ಲಿದೆ. ಇದು ತೀವ್ರ ಕಳವಳಕಾರಿ ಮತ್ತು ಸಮಸ್ಯಾತ್ಮಕವಾಗಿದೆ. ಈ ಭಯಾನಕ ಬೆದರಿಕೆಯ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ಅಥವಾ ಚುನಾವಣಾ ಆಯೋಗ ಧೈರ್ಯ ಮಾಡುತ್ತದೆಯೇ?” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
BJP is staring at a humongous defeat in Karnataka and slowly the masks are coming off.
It is deeply disturbing and problematic that a BJP leader has been caught conspiring to 'wipe off' Karnataka's son, AICC President Sri @Kharge and his family in an audio recording.
Will BJP… pic.twitter.com/67XGO9DgIQ
— DK Shivakumar (@DKShivakumar) May 6, 2023
ಖರ್ಗೆಯವರ ಕೊಲೆ ಬೆದರಿಕೆ ವಿಚಾರವಾಗಿ ಕಾಂಗ್ರೆಸ್ ಪಕ್ಷ ಕಿಡಿಕಾರಿದೆ. “ದಲಿತ ಸಮುದಾಯದ ಉನ್ನತ ನಾಯಕ, ದೇಶದ ಹಿರಿಯ ಹಾಗೂ ಮುತ್ಸದ್ದಿ ನಾಯಕ ಎಐಸಿಸಿ ಅಧ್ಯಕ್ಷರಾದ ಖರ್ಗೆ ಅವರ ಇಡೀ ಕುಟುಂಬವನ್ನು ಹತ್ಯೆ ಮಾಡುವ ಬಿಜೆಪಿಯ ಸಂಚು ಮಣಿಕಂಠ ರಾಥೋಡನ ಬಾಯಲ್ಲಿ ಹೊರಬಂದಿದೆ. ಖರ್ಗೆ ಕುಟುಂಬದ ಹತ್ಯೆಗೆ ನೀಡಿದ ಸುಪಾರಿಗಾಗಿಯೇ ರೌಡಿ ಶೀಟರ್‌ಗೆ ಟಿಕೆಟ್ ನೀಲಾಗಿದೆಯೇ ನರೇಂದ್ರ ಮೋದಿಯವರೆ? ಖರ್ಗೆ ಪ್ರಶ್ನಿಸುತ್ತಾರೆ ಎಂಬ ಒಂದೇ ಕಾರಣಕ್ಕೆ ಈ ಪರಿ ದ್ವೇಷವೇ ಮೋದಿಯವರೇ?” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ದಲಿತ ಸಮುದಾಯದ ಉನ್ನತ ನಾಯಕ, ದೇಶದ ಹಿರಿಯ ಹಾಗೂ ಮುತ್ಸದ್ದಿ ನಾಯಕ ಎಐಸಿಸಿ ಅಧ್ಯಕ್ಷರಾದ @kharge ಅವರ ಇಡೀ ಕುಟುಂಬವನ್ನು ಹತ್ಯೆ ಮಾಡುವ ಬಿಜೆಪಿಯ ಸಂಚು ಮಣಿಕಂಠ ರಾಥೋಡನ ಬಾಯಲ್ಲಿ ಹೊರಬಂದಿದೆ.
ಖರ್ಗೆ ಕುಟುಂಬದ ಹತ್ಯೆಗೆ ನೀಡಿದ ಸುಪಾರಿಗಾಗಿಯೇ ರೌಡಿ ಶೀಟರ್‌ಗೆ ಟಿಕೆಟ್ ನೀಲಾಗಿದೆಯೇ @narendramodi ಅವರೇ?
ಪ್ರಶ್ನಿಸುತ್ತಾರೆ ಎಂಬ ಒಂದೇ… pic.twitter.com/bBtnjQzqCD
— Karnataka Congress (@INCKarnataka) May 6, 2023
ವೈರಲ್ ಆಡಿಯೋದಲ್ಲಿ ರವಿ ಎಂಬ ಬಿಜೆಪಿ ಕಾರ್ಯಕರ್ತನೊಬ್ಬ ಮಣಿಕಂಠ ರಾಥೋಡ್‌ರವರಿಗೆ ಫೋನ್ ಮಾಡಿ ನಿಮ್ಮ ಮೇಲೆ 40 ಕೇಸುಗಳಿವೆ ಅನ್ನುತ್ತಾರೆ. ಈ ಕುರಿತು ಖರ್ಗೆಯವರನ್ನು ಪ್ರಶ್ನೆ ಮಾಡ್ತೀನಿ ಅವರ ನಂಬರ್ ಕೊಡಿ ಅಣ್ಣ ಎಂದು ಕೇಳುತ್ತಾನೆ. ಇದಕ್ಕೆ ಉತ್ತರಿಸುವ ಮಣಿಕಂಠ ರಾಥೋಡ್, “ನನ್ನ ಬಳಿ ಅವರ ಫೋನ್ ನಂಬರ್ ಇದ್ರೆ ಅವರ ಹೆಂಡ್ರು ಮಕ್ಕಳು ಎಲ್ಲರನ್ನು ಸಾಫ್ ಮಾಡ್ತೀನಿ. ಅದಕ್ಕೆ ನನ್ನ ಬಳಿ ನಂಬರ್ ಇಲ್ಲ” ಎನ್ನುವುದು ದಾಖಲಾಗಿದೆ.
ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಕೊಲೆ ಮಾಡಲು ಬಿಜೆಪಿ ಮುಖಂಡರಿಂದ ಸಂಚು: ಕಾಂಗ್ರೆಸ್ ಆರೋಪ


