Homeಮುಖಪುಟಪ್ರಧಾನಿ ಮೋದಿ ರೋಡ್ ಶೋನಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಕ್ರಮಕ್ಕೆ ದಲಿತ ಮುಖಂಡರ ಆಗ್ರಹ

ಪ್ರಧಾನಿ ಮೋದಿ ರೋಡ್ ಶೋನಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಕ್ರಮಕ್ಕೆ ದಲಿತ ಮುಖಂಡರ ಆಗ್ರಹ

- Advertisement -
- Advertisement -

ಇಂದು ಪ್ರಧಾನಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸುವ ವೇಳೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಅಂಬೇಡ್ಕರ್ ಫ್ಲೆಕ್ಸ್ ಹರಿದು ಅವಮಾನ ಮಾಡಲಾಗಿದೆ ಎಂದು ದಲಿತ ಮುಖಂಡರ ಆರೋಪಿಸಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದಾರೆ.

ದಲಿತ ಮುಖಂಡ ಚಿಕ್ಕರಾಮುರವರು ಮಾತನಾಡಿ, “ಪ್ರಪಂಚಾದ್ಯಂತ ಮನ್ನಣೆ ಪಡೆದಿರುವ ಡಾ.ಬಿ.ಆರ್ ಅಂಬೇಡ್ಕರ್‌ರವರ ಭಾವಚಿತ್ರವನ್ನು ಇಂದಿನ ಪ್ರಧಾನಿಗಳ ರ್ಯಾಲಿಗೆ ಬಳಸಿಕೊಳ್ಳಲಾಗಿದೆ. ಆದರೆ ಯಾರೋ ಕಿಡಿಗೇಡಿಗಳು ದುರುದ್ದೇಶದಿಂದ ಡಾ. ಅಂಬೇಡ್ಕರ್‌ರವರ ಭಾವಚಿತ್ರ ಇರುವ ಫ್ಲೆಕ್ಸ್ ಅನ್ನು ಹರಿಯುವ ಮೂಲಕ ವಿಕೃತಿ ಮೆರೆದಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಇಂದು ಕೆಎಚ್‌ಬಿ ಕಾಲೋನಿಯಿಂದ ನವರಂಗ್ ಥಿಯೇಟರ್‌ವರೆಗೂ ಬಿಜೆಪಿ ರ್ಯಾಲಿ ಇತ್ತು. ಆ ಪ್ರಯುಕ್ತ ಶಂಕರಮಠ ಸರ್ಕಲ್‌ನಲ್ಲಿ ಅಂಬೇಡ್ಕರ್‌ರವರ ಭಾವಚಿತ್ರವನ್ನು ಬಳಸಿಕೊಂಡು ಆ ನಂತರ ಜಾತಿವಾದಿಗಳು ಅದನ್ನು ವಿರೂಪಗೊಳಿಸಲಾಗಿದೆ. ಇದರಲ್ಲಿ ಬಿಜೆಪಿಯ ಬೇಜವಬ್ದಾರಿತನವೂ ಇದೆ” ಎಂದು ಕಿಡಿಕಾರಿದರು.

ಅಂಬೇಡ್ಕರ್‌ರವರು ಇಡೀ ಪ್ರಪಂಚದ ಆಸ್ತಿಯಾಗಿದ್ದಾರೆ. ಅವರ ಭಾವಚಿತ್ರಗಳನ್ನು ಬಳಸಿಕೊಳ್ಳುವ ರಾಜಕೀಯ ಪಕ್ಷಗಳಿಗೆ ಆ ಭಾವಚಿತ್ರಗಳಿಗೆ ಗೌರವ ಕೊಡಬೇಕು, ಅದನ್ನು ಸಂರಕ್ಷಿಸಬೇಕು ಎನ್ನುವ ಜವಾಬ್ದಾರಿ ಇರಬೇಕು. ಅದು ಬಿಟ್ಟು ಈ ರೀತಿ ಬಳಸಿ ಬಿಸಾಕುವುದು ಸರಿಯಲ್ಲ. ನಾವು ಏನು ಮಾಡಿದರೂ ಹೇಳುವವರು-ಕೇಳುವವರು ಯಾರು ಇಲ್ಲ ಎನ್ನುವ ಅಹಂಕಾರದಿಂದ ಇಂದಿನ ಘಟನೆ ಜರುಗಿದೆ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದರು.

ಈ ಕೃತ್ಯದಿಂದ ಸಮಾಜದಲ್ಲಿ ಅಶಾಂತಿ, ದಳ್ಳೂರಿ ಉದ್ಭವಿಸುವ ಅಪಾಯವಿದೆ. ಹಾಗಾಗಿ ಪೊಲೀಸ್ ಇಲಾಖೆ ಕೂಡಲೇ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಕಾನೂನು ಸುವ್ಯವಸ್ಥೆ ಕಾಪಾಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನವೆಸಗಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಇಂದು ದಲಿತ ಒಕ್ಕೂಟದ ಕಾರ್ಯಕರ್ತರು ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: EWS ಮೀಸಲಾತಿ ತೀರ್ಪು ಮರುಪರಿಶೀಲನಾ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Ee su makkalu eke Ambedkar photo annu chunavanege balasikollabeku.Adu hakiruvudu shankara mata ( chaddi)dalli yake hakabeku.Namma Ambedkar avrige. Vishvave gowrava koduttade ee nicha janaru kottarestu bittrestu.Vazra yavahottu vajra ve ivara hage maanina hente galalla.

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...