Homeಕರ್ನಾಟಕಬಿಜೆಪಿಯ ಲೂಟಿ, ಸುಳ್ಳು, ಅಹಂಕಾರ, ದ್ವೇಷ ತೊಡೆದುಹಾಕದೆ ಕರ್ನಾಟಕದ ಪ್ರಗತಿ ಸಾಧ್ಯವಿಲ್ಲ: ಸೋನಿಯಾ ಗಾಂಧಿ ವಾಗ್ದಾಳಿ

ಬಿಜೆಪಿಯ ಲೂಟಿ, ಸುಳ್ಳು, ಅಹಂಕಾರ, ದ್ವೇಷ ತೊಡೆದುಹಾಕದೆ ಕರ್ನಾಟಕದ ಪ್ರಗತಿ ಸಾಧ್ಯವಿಲ್ಲ: ಸೋನಿಯಾ ಗಾಂಧಿ ವಾಗ್ದಾಳಿ

- Advertisement -
- Advertisement -

ಆಡಳಿತ ಪಕ್ಷದ ಲೂಟಿ, ಸುಳ್ಳು, ಅಹಂಕಾರ ಮತ್ತು ದ್ವೇಷವನ್ನು ತೊಡೆದುಹಾಕದೆ ಕರ್ನಾಟಕ ಮತ್ತು ದೇಶದ ಉಳಿದ ಭಾಗಗಳು ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಶನಿವಾರ ಹುಬ್ಬಳ್ಳಿಯಲ್ಲಿ ವಾಗ್ದಾಳಿ ನಡೆಸಿದರು.

“ರಾಹುಲ್ ಗಾಂಧಿಯವರ 4,000 ಕಿಮೀ ಪಾದಯಾತ್ರೆ ನಡೆಸಿದರು. ಈ ವೇಳೆ ಲಕ್ಷಾಂತರ ಜನರು ಸೇರಿದ್ದರು ಏಕೆಂದರೆ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ದ್ವೇಷವನ್ನು ಹರಡುವವರ ವಿರುದ್ಧವಾಗಿತ್ತು” ಎಂದು ಹೇಳಿದರು.

”ಬಿಜೆಪಿಯ ಲೂಟಿ, ಸುಳ್ಳು, ಅಹಂ ಮತ್ತು ದ್ವೇಷದ ವಾತಾವರಣವನ್ನು ತೊಡೆದುಹಾಕದೆ ಕರ್ನಾಟಕ ಅಥವಾ ಭಾರತ ಪ್ರಗತಿ ಸಾಧಿಸಲು ಸಾಧ್ಯವಿಲ್ಲ” ಎಂದು ಸೋನಿಯಾ ಗಾಂಧಿ ಅವರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯ ತಮ್ಮ ಮೊದಲ ಸಾರ್ವಜನಿಕ ರ್ಯಾಲಿಯಲ್ಲಿ ಹೇಳಿದರು.

ಈ (ಬಿಜೆಪಿ) ಸರ್ಕಾರದ ಕರಾಳ ಆಡಳಿತದ ವಿರುದ್ಧ ನಮ್ಮ ಧ್ವನಿಯನ್ನು ಬಲಪಡಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷರು ಹೇಳಿದರು.

ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಎಷ್ಟು ಬೆಚ್ಚಿಬಿದ್ದಿದೆ ಎಂಬುದನ್ನು ಜನರು ನೋಡಿದ್ದಾರೆ, ಅದಕ್ಕಾಗಿಯೇ ಅದು ಎಲ್ಲಾ ರೀತಿಯ ದಬ್ಬಾಳಿಕೆಯನ್ನು ನಡೆಸುತ್ತಿದೆ ಎಂದರು.

”ನೀವು 2018ರಲ್ಲಿ ಅವರಿಗೆ ಅಧಿಕಾರ ನೀಡಲಿಲ್ಲ ಆದರೆ ಅವರು ಸರ್ಕಾರವನ್ನು ಲೂಟಿ ಮಾಡಿ ಅದನ್ನು ವಶಪಡಿಸಿಕೊಂಡರು. ನಂತರ ಅವರ 40 ಪರ್ಸೆಂಟ್ ಕಮಿಷನ್ ಸರ್ಕಾರವು ಲೂಟಿಯಲ್ಲಿ ನಿರತವಾಯಿತು. ಇದು ನಿಮಗೆ ಅಧಿಕಾರದಲ್ಲಿರುವವರ ದಂಧೆ ಎಂದು ಅನಿಸುವುದಿಲ್ಲವೇ?” ಎಂದು ಅವರು ಆರೋಪ ಮಾಡಿದರು.

”ಬಿಜೆಪಿ ನಾಯಕರು ”ಅಹಂಕಾರಿ”ಗಳು ಏಕೆಂದರೆ ಅವರು ಜನಸಮಾfಯರ ಕುರಿತಾದ ಯಾವುದೇ ಪ್ರಶ್ನೆಗಳಿಗೆ ಅಥವಾ ಅವರನ್ನು ಉದ್ದೇಶಿಸಿ ಬರೆದ ಯಾವುದೇ ಪತ್ರಕ್ಕೆ ಉತ್ತರಿಸುವುದಿಲ್ಲ” ಎಂದು ಹೇಳಿದರು.

ರಾಜ್ಯದಲ್ಲಿನ ಅಭಿವೃದ್ಧ ಕೆಲಸಗಳಿಗೆ ಶೇ.40ರಷ್ಟು ಕಮಿಷನ್ ವಸೂಲಿ ಮಾಡುತ್ತಿರುವ ಬಗ್ಗೆ ಕರ್ನಾಟಕದ ಗುತ್ತಿಗೆದಾರರ ಸಂಘವು ಪ್ರಧಾನಿಗೆ ಪತ್ರ ಬರೆದಿರುವ ಬಗ್ಗೆ ಸೋನಿಯಾ ಗಾಂಧಿ ಪರೋಕ್ಷವಾಗಿ ಉಲ್ಲೇಖಿಸಿದ್ದಾರೆ.

”ಅವರಿಗೆ (ಬಿಜೆಪಿ ನಾಯಕರು) ಉತ್ತರ ನೀಡುವ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಅವರು ಎಲ್ಲಾ ಸಾಂವಿಧಾನಿಕ ಸಂಸ್ಥೆಗಳನ್ನು ಜೇಬಿಗೆ ಹಾಕಿಕೊಂಡಿದ್ದಾರೆ ಎಂದು ಅವರು ಭಾವಿಸುತ್ತಾರೆ. ಇಂತಹ ನಿರಂಕುಶತೆಯನ್ನು ನೀವು ಎಂದಾದರೂ ನೋಡಿದ್ದೀರಾ? ಪ್ರಜಾಪ್ರಭುತ್ವವು ಈ ರೀತಿ ಕಾರ್ಯನಿರ್ವಹಿಸುತ್ತದೆಯೇ? ಇಲ್ಲ” ಎಂದು ಸೋನಿಯಾ ಗಾಂಧಿ ಸಾರ್ವಜನಿಕರು ಪ್ರಶ್ನೆ ಮಾಡಿದರು.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಕೊಲೆ ಮಾಡಲು ಬಿಜೆಪಿ ಮುಖಂಡರಿಂದ ಸಂಚು: ಕಾಂಗ್ರೆಸ್ ಆರೋಪ

”ಅವರ ಪ್ರಕಾರ, ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಗೆಲ್ಲದಿದ್ದರೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿಯವರ “ಆಶೀರ್ವಾದ” ಸಿಗುವುದಿಲ್ಲ ಎಂದು ಬಿಜೆಪಿ ನಾಯಕರು ಬಹಿರಂಗವಾಗಿ ಬೆದರಿಕೆ ಹಾಕುವ ಪರಿಸ್ಥಿತಿ ಇಂದಿನದು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಗಲಭೆಯಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚುನಾವಣಾ ರ್ಯಾಲಿಯಲ್ಲಿ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿದ ಸೋನಿಯಾ ಗಾಂಧಿ, ಅವರನ್ನು ಹೆಸರಿಸದೆ ಹೇಳಿದರು.

ಕರ್ನಾಟಕದ ಜನರು ಮೇ 10 ರಂದು ನಿಮಗೆ ಬುದ್ದಿ ಕಲಿಸುತ್ತಾರೆ. ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರಾಂಡ್ ಅನ್ನು ಗುಜರಾತ್ ಮೂಲದ ಅಮುಲ್ ಜೊತೆ ವಿಲೀನಗೊಳಿಸುವ ಪ್ರಯತ್ನದ ಬಗ್ಗೆಯೂ ಸೋನಿಯಾ ಗಾಂಧಿ ಪ್ರಸ್ತಾಪಿಸಿದರು.

ಲಕ್ಷಾಂತರ ರೈತರು ಮತ್ತು ಹಾಲು ಉತ್ಪಾದಕರ ಹಿತಾಸಕ್ತಿಗಳನ್ನು ಕಡೆಗಣಿಸಿ ನಂದಿನಿಯಂತಹ ಉತ್ತಮ ಸಂಸ್ಥೆಯನ್ನು (ಕರ್ನಾಟಕ ಹಾಲು ಒಕ್ಕೂಟದ ಸಹಕಾರಿ ಡೈರಿ ಬ್ರಾಂಡ್) ಲೂಟಿ ಮಾಡುವ ಸಂಚು ಇಲ್ಲಿ ನಡೆಯುವುದಿಲ್ಲ ಎಂದು ಅವರಿಗೆ (ಬಿಜೆಪಿ) ಹೇಳುವ ಸಮಯ ಈಗ ಬಂದಿದೆ ಎಂದರು.

ನಾಯಕರ ಭವಿಷ್ಯವನ್ನು ಜನರ ಆಶೀರ್ವಾದದಿಂದ ನಿರ್ಧರಿಸಲಾಗುತ್ತದೆಯೇ ಹೊರತು ಬೇರೆ ರೀತಿಯಲ್ಲಿ ಅಲ್ಲ ಎಂಬುದನ್ನು ಅಧಿಕಾರದಲ್ಲಿರುವವರಿಗೆ ನೆನಪಿಸಬೇಕೆಂದು ಸೋನಿಯಾ ಗಾಂಧಿ ಜನರಿಗೆ ಮನವಿ ಮಾಡಿದರು.

12ನೇ ಶತಮಾನದ ಸಮಾಜ ಸುಧಾರಕ ಬಸವೇಶ್ವರರ ನಾಮಸ್ಮರಣೆ ಮಾಡಿದ ಅವರು, ‘ಭಗವಾನ್ ಬಸವಣ್ಣ’ ಯಾವುದೇ ತಾರತಮ್ಯವಿಲ್ಲದೆ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡುತ್ತಿದ್ದರು.

ಬಿಜೆಪಿಯು ಕನ್ನಡದ ಮಹಾನ್ ಕವಿ ಕುವೆಂಪು ಅವರನ್ನು ಅವಮಾನಿಸುತ್ತಿದೆ ಎಂದು ಸೋನಿಯಾ ಗಾಂಧಿ ಹೇಳಿದರು.

”ನಿಮ್ಮ (ಬಿಜೆಪಿ) ರಾಜಕೀಯ ಹಿತಾಸಕ್ತಿಗಳನ್ನು ಪೂರೈಸಲು, ರಾಷ್ಟ್ರ ಮತ್ತು ಕರ್ನಾಟಕವನ್ನು ವಿನಾಶದತ್ತ ತಳ್ಳಬೇಡಿ” ಎಂದು ಸೋನಿಯಾ ಗಾಂಧಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...