Homeಕರ್ನಾಟಕಭ್ರಷ್ಟಾಚಾರದ ರೇಟ್ ಕಾರ್ಡ್ ಕೊಟ್ಟಿದ್ದು ನಾನಲ್ಲ, ಬಿಜೆಪಿಯವರೇ ಕೊಟ್ಟಿದ್ದು: ಆಯೋಗದ ನೋಟಿಸ್‌ಗೆ ಡಿಕೆಶಿ ಪ್ರತಿಕ್ರಿಯೆ

ಭ್ರಷ್ಟಾಚಾರದ ರೇಟ್ ಕಾರ್ಡ್ ಕೊಟ್ಟಿದ್ದು ನಾನಲ್ಲ, ಬಿಜೆಪಿಯವರೇ ಕೊಟ್ಟಿದ್ದು: ಆಯೋಗದ ನೋಟಿಸ್‌ಗೆ ಡಿಕೆಶಿ ಪ್ರತಿಕ್ರಿಯೆ

- Advertisement -
- Advertisement -

ರಾಜ್ಯ ಕಾಂಗ್ರೆಸ್ ಪಕ್ಷವು ಬಿಜೆಪಿ ಸರ್ಕಾರದ ವಿರುದ್ಧ ಪತ್ರಿಕೆಗಳಿಗೆ ನೀಡಿರುವ ‘ಭ್ರಷ್ಟಾಚಾರದ ರೇಟ್ ಕಾರ್ಡ್’ ಜಾಹೀರಾತಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಶನಿವಾರ ನೋಟಿಸ್ ಜಾರಿ ಮಾಡಿದೆ.  ನೀತಿ ಸಂಹಿತೆ ಉಲ್ಲಂಘನೆ ದೂರಿನ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿಗೊಳಿಸಿದೆ. ಕಾಂಗ್ರೆಸ್ ಮಾಡಿರುವ ನಿರ್ದಿಷ್ಟ ಆರೋಪಗಳ ಕುರಿತಾಗಿ ಸಾಕ್ಷ್ಯಾಧಾರ ಹಾಜರುಪಡಿಸುವಂತೆ ಚುನಾವಣಾ ಆಯೋಗ ತಾಕೀತು ಮಾಡಿದೆ. ಈ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

”ರೇಟ್​ ಕಾರ್ಡ್ ಕೊಟ್ಟಿದ್ದು ನಾನಲ್ಲ, ಬಿಜೆಪಿಯವರು. ರೇಟ್​ ಕಾರ್ಡ್ ನೀಡಿದ್ದು ಯತ್ನಾಳ್​, ಗೂಳಿಹಟ್ಟಿ ಶೇಖರ್, ​ಹೆಚ್​.ವಿಶ್ವನಾಥ್ ಎಂದು ಡಿಕೆ ಶಿವಕುಮಾರ್ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಸಿಎಂ ಸ್ಥಾನಕ್ಕೆ ರೇಟ್​ ಎಷ್ಟು ಎಂಬುವುದನ್ನು ಬಿಜೆಪಿಯವರೇ ಹೇಳಿದ್ದಾರೆ. ಮಂತ್ರಿ ಸ್ಥಾನಕ್ಕೆ ಎಷ್ಟು ರೇಟ್​​, ಮಠಗಳ ಸ್ವಾಮೀಜಿಗಳಿಂದ ಎಷ್ಟು ರೇಟ್​. ಈ ರೇಟ್​ ಕಾರ್ಡ್​ ನೀಡಿದ್ದು ಬಿಜೆಪಿಯವರೇ. ಬಿಜೆಪಿಯವರೇ ನೀಡಿದ ರೇಟ್​​​ ಕಾರ್ಡ್​ನ್ನು ನಾವು ನೀಡಿದ್ದೇವೆ ಅಷ್ಟೇ” ಎಂದು ಹೇಳಿದ್ದಾರೆ.

ಮತದಾನಕ್ಕೆ ಮೂರೇ ದಿನ ಬಾಕಿ ಉಳಿದಿದ್ದು, ಈ ನಡುವೆ ಆಡಳಿತ ಪಕ್ಷ ಬಿಜೆಪಿ ವಿರುದ್ಧ ಕಾಂಗ್ರೆಸ್ ಜಾಹಿರಾತು ಬಿಡುಗಡೆ ಮಾಡಿದೆ. ಇದು ನೀತಿ ಸಂಹಿತೆ ಉಲ್ಲಂಘನೆ ಎಂದು ಬಿಜೆಪಿ ದೂರು ನೀಡಿದ್ದು, ಚುನಾವಣಾ ಆಯೋಗ ಕೂಡಾ ಜಾಹಿರಾತನ್ನು ಗಂಭೀರವಾಗಿ ಪರಿಗಣಿಸಿದೆ. ಪ್ರಜಾ ಪ್ರಾತಿನಿಧ್ಯ ಕಾಯ್ದೆ ಸೆಕ್ಷನ್ 123(4), ಐಪಿಸಿ ಸೆಕ್ಷನ್ 171 ಜಿ ಅಡಿ ಅಪರಾಧವಾಗಿದೆ. ಕಾಂಗ್ರೆಸ್ ಪಕ್ಷದ ಜಾಹೀರಾತಿನಲ್ಲಿನ ನಿರ್ದಿಷ್ಟ ಭ್ರಷ್ಟಾಚಾರ ಆರೋಪಗಳು ಚುನಾವಣೆ ಪ್ರಕ್ರಿಯೆ ಮೇಲೂ ಪರಿಣಾಮ ಬೀರಬಹುದಾದ ಕಾರಣ ನಾಳೆಯೇ ಭ್ರಷ್ಟಾಚಾರ ಆರೋಪಗಳಿಗೆ ಸಾಕ್ಷ್ಯಾಧಾರ ಒದಗಿಸುವಂತೆ ಚುನಾವಣಾ ಆಯೋಗ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗೆ ನೋಟಿಸ್ ಜಾರಿಗೊಳಿಸಿದೆ.

ಇದನ್ನೂ ಓದಿ: ಭ್ರಷ್ಟಾಚಾರದ ರೇಟ್ ಕಾರ್ಡ್ ಜಾಹೀರಾತು: ಕಾಂಗ್ರೆಸ್‌ಗೆ ಚುನಾವಣಾ ಆಯೋಗ ನೋಟಿಸ್

ಕಾಂಗ್ರೆಸ್ ಪಕ್ಷವು ಬಿಜೆಪಿಯ ಭ್ರಷ್ಟಾಚಾರದ ವಿಚಾರವಾಗಿ ಮೇ.5 ರಂದು ಪತ್ರಿಕೆಗಳಿಗೆ ಜಾಹಿರಾತು ನೀಡಿತ್ತು. ಇದೀಗ ಚುನಾವಣಾ ಆಯೋಗದ ಈ ಕ್ರಮಕ್ಕೆ ಮುಂದಾಗಿದೆ. ಭ್ರಷ್ಟಾಚಾರ ಆರೋಪಗಳಿರುವ ಆಧಾರರಹಿತ ಜಾಹಿರಾತು ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ದೂರು ಪರಿಶೀಲಿಸಿದ ಚುನಾವಣಾ ಆಯೋಗ ಆರೋಪಗಳ ಬಗ್ಗೆ ನೈಜ ಸಾಕ್ಷ್ಯ ಒದಗಿಸಲು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗೆ ಸೂಚನೆ ನೀಡಿದೆ.

ಬಿಜೆಪಿ ದೂರಿನ ಮೇರೆಗೆ ಚುನಾವಣಾ ಆಯೋಗ ಕಾಂಗ್ರೆಸ್‌ಗೆ ನೋಟಿಸ್ ಜಾರಿ ಮಾಡಿದೆ. ಮೇಲ್ನೋಟಕ್ಕೆ ಕಾಂಗ್ರೆಸ್ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ ಎಂದು ಆಯೋಗ ಹೇಳಿದೆ.

”ಸಾಧನೆಯ ಕೊರತೆ, ದುಷ್ಕೃತ್ಯಗಳು, ರಾಜಕೀಯ ವಿರೋಧಿಗಳ ಭ್ರಷ್ಟಾಚಾರ, ಮುಕ್ತ ಆಡಳಿತವನ್ನು ಖಾತರಿಪಡಿಸದಿರುವ ಸಾಮಾನ್ಯ ಉಲ್ಲೇಖಗಳು ಮತ್ತು ಪ್ರಸ್ತಾಪಗಳು ರಾಜಕೀಯ ಪ್ರಚಾರಗಳಲ್ಲಿ ಇರುತ್ತವೆ. ನಿರ್ದಿಷ್ಟ ಆರೋಪಗಳನ್ನು ಪ್ರತ್ಯೇಕಿಸಬೇಕಾಗಿದೆ. ಏಕೆಂದರೆ ಅವುಗಳು ಪರಿಶೀಲಿಸಬೇಕಾದ ಸತ್ಯಗಳಿಂದ ಇರಬೇಕು” ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ನೀಡಿದ ನೋಟಿಸ್‌ನಲ್ಲಿ ತಿಳಿಸಲಾಗಿದೆ.

”ನೀವು ನೀಡಿದ ಜಾಹೀರಾತಿನಲ್ಲಿ ಉಲ್ಲೇಖಿಸಲಾದ ನೇಮಕಾತಿಗಳು, ವರ್ಗಾವಣೆಗಳು, ಉದ್ಯೋಗಗಳು ಮತ್ತು ಕಮಿಷನ್ ಪ್ರಕಾರಗಳ ದರಗಳಿಗೆ ಪುರಾವೆಗಳನ್ನು ಮೇ 7, 2023 ರಂದು ಸಂಜೆ 7 ಗಂಟೆಗಳ ಒಳಗೆ ಯಾವುದೇ ವಿವರಣೆಯೊಂದಿಗೆ ಮತ್ತು ಅದನ್ನು ಸಾರ್ವಜನಿಕ ವೇದಿಕೆಯಲ್ಲಿ ಪ್ರಕಟಿಸುವ ಮೂಲಕ ಪಕ್ಷ ಮಾಡಿದ ಆರೋಪಗಳನ್ನು ಸಾಬೀತುಪಡಿಸಲು ಪುರಾವೆಗಳನ್ನು ನೀಡಬೇಕು” ಎಂದು ಸೂಚಿಸಿದೆ.

”ಪುರಾವೆಗಳನ್ನು ಸಲ್ಲಿಸಲು ವಿಫಲವಾದರೆ ನೀತಿ ಸಂಹಿತೆಗೆ ಸಂಬಂಧಿತ ಕಾನೂನು ನಿಬಂಧನೆಗಳನ್ನು ನಿಮ್ಮ ವಿರುದ್ಧ ಜರುಗಿಸಲಾಗುವುದು. ಜನಪ್ರತಿನಿಧಿ ಕಾಯ್ದೆ ಮತ್ತು ಐಪಿಸಿಯ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದೆ.

ಇನ್ನು ಕಾಂಗ್ರೆಸ್ ಪಕ್ಷದ ಜಾಹಿರಾತಿನ ಬಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೇಶವಪ್ರಸಾದ್ ವತಿಯಿಂದ ಇಂದು ಲೀಗಲ್ ನೋಟೀಸ್ ಜಾರಿಗೊಳಿಸಲಾಗಿದೆ. ತಕ್ಷಣ ಆರೋಪ ಹಿಂಪಡೆದು ಪತ್ರಿಕೆಗಳಲ್ಲಿ ಕ್ಷಮೆಯಾಚನೆ ಜಾಹಿರಾತು ನೀಡಬೇಕು. ಇಲ್ಲವಾದರೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಕೆ ನೀಡಲಾಗಿದೆ. ಸದ್ಯ ಚುನಾವಣಾ ಆಯೋಗ ಮೇ 7 ರವರೆಗೆ ಗಡುವು ನೀಡಿದ್ದು ಕಾಂಗ್ರೆಸ್ ಪಕ್ಷ ಅಷ್ಟರೊಳಗೆ ಸಾಕ್ಷ್ಯಾಧಾರ ಒದಗಿಸಬೇಕಿದೆ.

ಜಾಹೀರಾತಿನಲ್ಲಿ ಏನಿದೆ?

”ಈ ಟ್ರಬಲ್ ಇಂಜಿನ್ ಸರ್ಕಾರ- ಭ್ರಷ್ಟಾಚಾರದ ರೇಟ್ ಕಾರ್ಡ್ 2019-2023” ಎಂಬ ಶೀರ್ಷಿಕೆಯೊಂದಿಗೆ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿದೆ.

”ಸಿಎಂ ಹುದ್ದೆಗೆ 2500 ಕೋಟಿ ರೂ., ಮಂತ್ರಿಗಳ ಹುದ್ದೆಗೆ 500 ಕೋಟಿ ರೂಗಳನ್ನು ಬಿಜೆಪಿ ಪಡೆಯುತ್ತದೆ” ಎಂದು ಆರೋಪಿಸಲಾಗಿದೆ.

ನೇಮಕಾತಿ ಮತ್ತು ವರ್ಗಾವಣೆ ದರ

ಕೆಎಸ್‌ಡಿಎಲ್: 5ರಿಂ 15 ಕೋಟಿ ರೂ.,

ಇಂಜಿನಿಯರ್‌: 1ರಿಂದ 5 ಕೋಟಿ ರೂ.

ಸಬ್‌ ರಿಜಿಸ್ಟ್ರಾರ್‌: 50 ಲಕ್ಷ ರೂ.ಗಳಿಂದ 5 ಕೋಟಿ ರೂ.

ಬೆಸ್ಕಾ: 1 ಕೋಟಿ ರೂ.

ಪಿಎಸ್‌ಐ: 80 ಲಕ್ಷ ರೂ.

ಸಹಾಯಕ ಪ್ರಾಧ್ಯಾಪಕ: 50 ಲಕ್ಷ – 70 ಲಕ್ಷ ರೂ.

ಉಪನ್ಯಾಸಕ: 30 ಲಕ್ಷ- 50 ಲಕ್ಷ ರೂ.

ಎಫ್‌ಡಿಎ:30 ಲಕ್ಷ ರೂ.

ಸಹಾಯಕ ಇಂಜಿನಿಯರ್‌: 30 ಲಕ್ಷ ರೂ.

ಬಮುಲ್- 25 ಲಕ್ಷ ರೂ.

ಪಿಡಬ್ಲ್ಯುಡಿ ಸಹಾಯಕ ಇಂಜಿನಿಯರ್‌ 10 ಲಕ್ಷ ರೂ.

ಪೊಲೀಸ್ ಪೇದೆ 10 ಲಕ್ಷ ರೂ.

ಹುದ್ದೆಗಳ ದರ 

ಬಿಡಿಎ ಆಯುಕ್ತ : 10 ಕೋಟಿ – 15 ಕೋಟಿ ರೂ.

ಕೆಪಿಎಸ್‌ಸಿ ಅಧ್ಯಕ್ಷ: 5 ರಿಂದ 15 ಕೋಟಿ ರೂ.

ಡಿಸಿ ಮತ್ತು ಎಸ್‌ಪಿ:  5 ರಿಂದ 15 ಕೋಟಿ ರೂ.

ಉಪಕುಲಪತಿ: 5 ರಿಂದ 10 ಕೋಟಿ ರೂ.

ಎಸಿ ಮತ್ತು ತಹಸೀಲ್ದಾರ್‌ 50 ಲಕ್ಷ- 3 ಕೋಟಿ ರೂ.

ಸರ್ಕಾರದ ಡೀಲ್‌ಗಳು

ಕೋವಿಡ್ ಕಿಟ್ ಪೂರೈಕೆ: 75%

ಪಿಡಬ್ಲ್ಯುಡಿ ಗುತ್ತಿಗೆಗಳು: 40 %

ಮಠಕ್ಕೆ ಅನುದಾನ: 30%

ಉಪಕರಣಗಳ ಪೂರೈಕೆ: 40%

ಮೊಟ್ಟೆ ಪೂರೈಕೆ: 30%

ರಸ್ತೆ ಗುತ್ತಿಗೆಗಳು: 40%

ಹೀಗೆ ಜಾಹೀರಾತಿನಲ್ಲಿ ಆರೋಪಗಳನ್ನು ಕಾಂಗ್ರೆಸ್ ಮಾಡಿದೆ. ”ಕಳೆದ ನಾಲ್ಕೇ ವರ್ಷಗಳಲ್ಲಿ 40% ಸರ್ಕಾರ ಕನ್ನಡಿಗರಿಂದ  1,50,000 ಕೋಟಿ ರೂ.ಗೂ ಹೆಚ್ಚು ಹಣವನ್ನು ಲೂಟಿ ಮಾಡಿದೆ. ಇದೇ ಗತಿಯಲ್ಲಿ ಸಾಗಿದರೆ ನಮ್ಮ ರಾಜ್ಯವೇ ನಾಶವಾಗುತ್ತದೆ. ಈ ಲೂಟಿಯನ್ನು ನಿಲ್ಲಿಸಿ. ಬದಲಾವಣೆ ಹಾಗೂ ಪ್ರಗತಿಗೆ ನಿಮ್ಮ ಮತ ನೀಡಿ. ಕಾಂಗ್ರೆಸ್‌ಗೆ ಮತ ನೀಡಿ” ಎಂದು ಜಾಹೀರಾತಿನಲ್ಲಿ ಉಲ್ಲೇಖಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಚುನಾವಣಾ ಪ್ರಚಾರದ ಸಭೆಗಳಲ್ಲಿ ಮಾತನಾಡಿದ್ದನ್ನೆಲ್ಲಾ ನೀತಿ ಸಂಹಿತೆ ಒಳಗೆ ಬರುವದಾದರೆ ಚುನಾವಣಾ ಪ್ರಚಾರವನ್ನು ತೆಗೆದು ಹಾಕಬೇಕು ಪ್ರಜಾಪ್ರಭುತ್ವದಲ್ಲಿ ಆರೋಪ ಮತ್ತು ಪ್ರತ್ಯಾಾರೂಪಗಳು ಇದ್ದೇ ಇರುತ್ತವೆ ಇದೊಂದು ವಿಚಿತ್ರ ಪ್ರಜಾಪ್ರಭುತ್ವ ಭ್ರಷ್ಟ ಸರ್ಕಾರ ಅಂತ ಹೇಳಿದ್ದನ್ನು ಪ್ರೂವ್ ಮಾಡುವುದು ಹೇಗೆ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...