HomeUncategorizedಕರ್ನಾಟಕದ ಸಾರ್ವಭೌಮತೆಗೆ ಧಕ್ಕೆ ತರಲು ಅವಕಾಶ ನೀಡುವುದಿಲ್ಲ: ಸೋನಿಯಾ ಗಾಂಧಿ ಹೇಳಿಕೆಗೆ ಬಿಜೆಪಿ ಆಯೋಗಕ್ಕೆ ದೂರು

ಕರ್ನಾಟಕದ ಸಾರ್ವಭೌಮತೆಗೆ ಧಕ್ಕೆ ತರಲು ಅವಕಾಶ ನೀಡುವುದಿಲ್ಲ: ಸೋನಿಯಾ ಗಾಂಧಿ ಹೇಳಿಕೆಗೆ ಬಿಜೆಪಿ ಆಯೋಗಕ್ಕೆ ದೂರು

- Advertisement -
- Advertisement -

”ಕರ್ನಾಟಕದ ಪ್ರತಿಷ್ಠೆ, ಸಾರ್ವಭೌಮತೆ ಅಥವಾ ಸಮಗ್ರತೆಗೆ ಧಕ್ಕೆ ತರಲು ಯಾರಿಗೂ ಅವಕಾಶ ನೀಡುವುದಿಲ್ಲ”  ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಕರ್ನಾಟಕದ ಚುನಾವಣಾ ರ‍್ಯಾಲಿಯಲ್ಲಿ ಹೇಳಿದ್ದರು. ಈ ಹೇಳಿಕೆ ವಿರುದ್ಧ ಬಿಜೆಪಿ ಸೋಮವಾರ ಭಾರತ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

”6.5 ಕೋಟಿ ಕನ್ನಡಿಗರಿಗೆ ಸೋನಿಯಾ ಗಾಂಧಿ ಗಟ್ಟಿ ಸಂದೇಶ ರವಾನಿಸಿದ್ದಾರೆ. ಕರ್ನಾಟಕದ ಪ್ರತಿಷ್ಠೆ, ಸಾರ್ವಭೌಮತೆ ಅಥವಾ ಸಮಗ್ರತೆಗೆ ಧಕ್ಕೆ ತರಲು ಕಾಂಗ್ರೆಸ್ ಯಾರಿಗೂ ಅವಕಾಶ ನೀಡುವುದಿಲ್ಲ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಸೋಮವಾರ, ಕೇಂದ್ರ ಸಚಿವ ಭೂಪೇಂದರ್ ಯಾದವ್ ನೇತೃತ್ವದ ಬಿಜೆಪಿಯ ನಿಯೋಗವು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಸೋನಿಯಾ ಗಾಂಧಿ ವಿರುದ್ಧ ತಕ್ಷಣ ಮತ್ತು ದೃಢವಾದ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇದು ಕಾಂಗ್ರೆಸ್‌ ಮಾನ್ಯತೆಯನ್ನೂ ರದ್ದು ಮಾಡಬೇಕು ಎಂದು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

”ಕರ್ನಾಟಕದಲ್ಲಿನ ಸೌಹಾರ್ದತೆ ಮತ್ತು ಶಾಂತಿಯನ್ನು ಕದಡುವುದಕ್ಕಾಗಿ ಕೇವಲ ಕೆಲವು ಆಯ್ದ ಸಮುದಾಯಗಳು ಅಥವಾ ಗುಂಪುಗಳ ಮತಗಳು ಗಳಿಸುವುದು ಕಾಂಗ್ರೆಸ್ ಉದ್ದೇಶವಾಗಿದೆ. ಅವರ ಏಕೈಕ ಉದ್ದೇಶವು ಭಾರತೀಯ ರಾಜ್ಯದ ಅಸ್ತಿತ್ವವನ್ನು ಅಡ್ಡಿಪಡಿಸುವುದಾಗಿದೆ” ಎಂದು ಬಿಜೆಪಿ ಆರೋಪಿಸಿದೆ.

”ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು “ತುಕ್ಡೆ ತುಕ್ಡೆ ಗ್ಯಾಂಗ್” ನಂತಹ ಪ್ರತ್ಯೇಕತಾವಾದಿ ಸಂಘಟನೆಗಳನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ” ಎಂದು ಹಿಂದುತ್ವವಾದಿ ಪಕ್ಷ ಬಿಜೆಪಿ ಆರೋಪ ಮಾಡಿದೆ.

”ಕರ್ನಾಟಕವು ಭಾರತದ ಒಕ್ಕೂಟದಲ್ಲಿ ಅತ್ಯಂತ ಪ್ರಮುಖ ರಾಜ್ಯವಾಗಿದೆ ಮತ್ತು ಅದರ ಸಾರ್ವಭೌಮತ್ವವನ್ನು ರಕ್ಷಿಸುವ ಬಗ್ಗೆ ಮಾತನಾಡುವುದು ಪ್ರತ್ಯೇಕತೆಯ ಕರೆಗೆ ಸಮಾನವಾಗಿರುತ್ತದೆ ಮತ್ತು ಇದು ಅಪಾಯಕಾರಿ ಮತ್ತು ಹಾನಿಕಾರಕ ಪರಿಣಾಮಗಳಿಂದ ತುಂಬಿದೆ” ಎಂದು ಬಿಜೆಪಿ ಹೇಳಿದೆ.

ಇದನ್ನೂ ಓದಿ: ಧರ್ಮದ ಹೆಸರಲ್ಲಿ ಮೋದಿ ಮತಯಾಚನೆ, ಪ್ರಣಾಳಿಕೆ ಸುಟ್ಟುಹಾಕಿದ ಈಶ್ವರಪ್ಪ: ಆಯೋಗಕ್ಕೆ ಕಾಂಗ್ರೆಸ್ ದೂರು

ಭಾನುವಾರ, ಮೈಸೂರಿನಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೋನಿಯಾ ಗಾಂಧಿಯವರ ಟೀಕೆಗಳನ್ನು ಉಲ್ಲೇಖಿಸಿದರು. ಕಾಂಗ್ರೆಸ್‌ಗೆ ”ತುಕ್ಡೆ-ತುಕ್ಡೆ ಗ್ಯಾಂಗ್” ನ ‘ರೋಗ’ ಹೆಚ್ಚಾಗಿದೆ ಎಂದು ಆರೋಪಿಸಿದರು.

ಬಿಜೆಪಿಯು ತನ್ನ ಪ್ರತಿಪಕ್ಷಗಳು ಮತ್ತು ಸರ್ಕಾರವನ್ನು ಟೀಕಿಸುವವರನ್ನು ದೇಶವಿರೋಧಿಗಳು ಎಂದು ಹೇಳುತ್ತದೆ ಮತ್ತು ಅವರಿಗೆ ”ತುಕ್ಡೆ ತುಕ್ಡೆ ಗ್ಯಾಂಗ್” ಎಂದು ಲೇಬಲ್ ಮಾಡುತ್ತದೆ. ಆದರೆ, ಜನವರಿ 2020ರಲ್ಲಿ, ಕೇಂದ್ರ ಗೃಹ ಸಚಿವಾಲಯವು ಮಾಹಿತಿ ಹಕ್ಕು ಅರ್ಜಿಗೆ ಪ್ರತಿಕ್ರಿಯೆಯಾಗಿ ಭಾರತದಲ್ಲಿ ಅಂತಹ ಯಾವುದೇ ದೇಶವಿಭಜನೆ ಮಾಡುವ ಗ್ಯಾಂಗ್ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....