Homeಮುಖಪುಟಉದ್ಧವ್‌ ಠಾಕ್ರೆಗೆ ಮತ್ತೆ ಸಿಎಂ ಸ್ಥಾನ ದೊರಕಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಉದ್ಧವ್‌ ಠಾಕ್ರೆಗೆ ಮತ್ತೆ ಸಿಎಂ ಸ್ಥಾನ ದೊರಕಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

- Advertisement -
- Advertisement -

ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಶಾಸಕರ ಗುಂಪು ಬಂಡಾಯವೆದ್ದ ನಂತರ ಉದ್ಧವ್ ಠಾಕ್ರೆ ಸರ್ಕಾರ ಬಹುಮತ ಕಳೆದುಕೊಂಡಿದೆ ಎಂದು ನಿರ್ಧರಿಸುವಲ್ಲಿ ಮಹಾರಾಷ್ಟ್ರದ ಮಾಜಿ ಗವರ್ನರ್ ಭಗತ್ ಸಿಂಗ್ ಕೊಶ್ಯಾರಿ ತಪ್ಪು ಮಾಡಿದ್ದಾರೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.

ಆದರೆ ಉದ್ಧವ್ ಠಾಕ್ರೆ ಅವರು ಬಹುಮತ ಸಾಬೀತು ಮಾಡದೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಮರು ಸ್ಥಾಪಿಸಲು ಸಾಧ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠ ಹೇಳಿರುವುದಾಗಿ ಬಾರ್‌ ಅಂಡ್ ಬೆಂಚ್ ವರದಿ ಮಾಡಿದೆ.

ಜೂನ್ 29 ರಂದು, ಉದ್ದವ್‌ ಠಾಕ್ರೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವಿಶ್ವಾಸ ಮತವನ್ನು ತಡೆಯಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಕೆಲವು ಗಂಟೆಗಳ ನಂತರ ಠಾಕ್ರೆ ನೇತೃತ್ವದ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳನ್ನೊಳಗೊಂಡ ಮಹಾ ವಿಕಾಸ್ ಅಘಾಡಿ ಸರ್ಕಾರ ಪಥನವಾಯಿತು.

ಶಿವಸೇನೆಯ 55 ಶಾಸಕರ ಪೈಕಿ 39 ಶಾಸಕರು ಮತ್ತು 10 ಸ್ವತಂತ್ರ ಶಾಸಕರ ಬೆಂಬಲ ತಮಗಿದೆ ಎಂದು ಏಕನಾಥ್ ಶಿಂಧೆಯವರು ಠಾಕ್ರೆ ವಿರುದ್ಧ ಬಂಡಾಯವೆದ್ದಿದ್ದರು. ನಂತರ ರಾಜ್ಯಪಾಲ ಕೊಶ್ಯಾರಿಯವರು ಹೊಸ ಸರ್ಕಾರ ರಚಿಸಲು ಆಹ್ವಾನಿಸಿದ್ದರು.

ಯಾವುದೇ ವಸ್ತುನಿಷ್ಠ ಸಂಗತಿ ಇಲ್ಲವಾದರೂ ಬಹುಮತ ಸಾಬೀತು ಮಾಡುವಂತೆ ಕೊಶ್ಯಾರಿಯವರು ತೆಗೆದುಕೊಂಡ ನಿರ್ಧಾರವು ತಪ್ಪಾಗಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಗಮನಿಸಿದೆ.

“‘ಶಿಂಧೆ ನೇತೃತ್ವದ ಶಾಸಕರು ಸರ್ಕಾರದಿಂದ ಹೊರಬರಲು ಬಯಸಿದ್ದರು ಎಂದು ಭಾವಿಸಲಾಗಿದ್ದರೂ, ಅವರು ಕೇವಲ ಒಂದು ಬಣವನ್ನು ರಚಿಸಿದ್ದರು” ಎಂದು ಚಂದ್ರಚೂಡ್ ತಿಳಿಸಿದ್ದಾರೆ. “ಪಕ್ಷದ ಆಂತರಿಕ ವಿವಾದದ ವಿಚಾರದಲ್ಲಿ ಬಹುಮತ ಸಾಬೀತು ಮಾಡಬೇಕೆಂದು ಹೇಳಲಾಗದು” ಎಂದಿದ್ದಾರೆ.

ಠಾಕ್ರೆ ಮತ್ತು ಶಿಂಧೆ ಬಣಗಳೆರಡೂ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಶಿವಸೇನೆಯಿಂದ ಬೇರ್ಪಟ್ಟು ಬಿಜೆಪಿ ಜೊತೆಯಲ್ಲಿ ಹೋದ ಶಿಂಧೆ ಮತ್ತು ಇತರ 15 ಶಾಸಕರನ್ನು ಅನರ್ಹಗೊಳಿಸುವಂತೆ ಉದ್ಧವ್ ಠಾಕ್ರೆ ಕೋರಿದ್ದರು.

ಅಂದು ಉಪಸಭಾಪತಿಯಾಗಿದ್ದ ನರಹರಿ ಝಿರ್ವಾಲ್ ಅವರು ಶಿಂಧೆ ಗುಂಪಿನ ಶಾಸಕರಿಗೆ ನೀಡಿದ್ದ ಅನರ್ಹತೆ ನೋಟಿಸ್ ವಿರುದ್ಧ ಶಿಂಧೆ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಈ ವಿಷಯಕ್ಕೆ ಸಂಬಂಧಿಸಿದ ತೀರ್ಪು- 2016ರಿಂದಲೂ ಸುಪ್ರೀಂ ಕೋರ್ಟ್‌‌ನ ನಬಮ್ ರೆಬಿಯಾ ತೀರ್ಪಿನ ಮೇಲೆ ಅವಲಂಬಿತವಾಗಿದೆ. ಅರುಣಾಚಲ ಪ್ರದೇಶ ವಿಧಾನಸಭೆ ಸ್ಪೀಕರ್ ಆಗಿದ್ದ ರೆಬಿಯಾ ಅವರಿಗೆ ಸಂಬಂಧಿಸಿದ ತೀರ್ಪು ಇದಾಗಿದೆ. “ಅನರ್ಹತೆ ಅರ್ಜಿಗಳ ಕುರಿತು ನಿರ್ಣಯವನ್ನು ಕೋರುವವರೆಗೆ ಅನರ್ಹತೆಯನ್ನು ಸ್ಪೀಕರ್‌ ನಿರ್ಧರಿಸಲಾಗದು” ಎಂಬ ವಿಷಯವನ್ನು ಈ ತೀರ್ಪು ಒಳಗೊಂಡಿದೆ.

ನಬಮ್ ರೆಬಿಯಾ ತೀರ್ಪಿನ ಸಿಂಧುತ್ವವನ್ನು ವಿಸ್ತೃತ ಪೀಠಕ್ಕೆ ಉಲ್ಲೇಖಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರ್ಧರಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...