ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಮೂರನೇ ಸುತ್ತಿನ ಮತ ಎಣಿಕೆ ಮುಗಿದಿದ್ದು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸಿ.ಟಿ ರವಿ ಸತತ ಮೂರು ಸುತ್ತುಗಳಲ್ಲಿಯೂ ಹಿನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್‌ನ ಎಚ್.ಡಿ ತಮ್ಮಯ್ಯ 359 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಡಾ.ಕೆ ಸುಧಾಕರ್ ಸತತ ಎರಡನೇ ಸುತ್ತಿನಲ್ಲಿಯೂ ಹಿನ್ನಡೆ ಅನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ 1588 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಹುಬ್ಬಳ್ಳಿ ಧಾರವಾಡ ಕೇಂದ್ರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಜಗದೀಶ್ ಶೆಟ್ಟರ್ ಹಿನ್ನಡೆ ಅನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ರಾಜ್ಯದೆಲ್ಲೆಡೆ ಎರಡನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. 120 ಸ್ಥಾನಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸುವ ಮೂಲಕ ಸರಳ ಬಹುಮತದತ್ತ ದಾಪುದಾಲು ಇಟ್ಟಿದೆ.
ಬಿಜೆಪಿಯು 73 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಜೆಡಿಎಸ್ ಕೂಡ 26 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 5 ಕಡೆ ಇತರ ಪಕ್ಷಗಳು ಮತ್ತು ಪಕ್ಷೇತರ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.
ಇದನ್ನೂ ಓದಿ: 121 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್: ಸರಳ ಬಹುಮತದತ್ತ ದಾಪುದಾಲು


