Homeಮುಖಪುಟಬೀಳಗ್ಯಾಗ ರೊಕ್ಕ ನಡಿಲಿಲ್ಲ, ಬಾಗಲಕೋಟದಾಗ ಸೊಕ್ಕ ನಡಿಲಿಲ್ಲ; ಲೆಕ್ಕ ಚುಕ್ತಾ ಮಾಡಿದ ಮತದಾರರು

ಬೀಳಗ್ಯಾಗ ರೊಕ್ಕ ನಡಿಲಿಲ್ಲ, ಬಾಗಲಕೋಟದಾಗ ಸೊಕ್ಕ ನಡಿಲಿಲ್ಲ; ಲೆಕ್ಕ ಚುಕ್ತಾ ಮಾಡಿದ ಮತದಾರರು

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ನಿನ್ನೆಯಷ್ಟೇ ಹೊರಬಂದಿದೆ. ಬಾಗಲಕೋಟೆ ಜಿಲ್ಲೆಯ ಇಬ್ಬರು ಸಚಿವರು ಸೋಲು ಕಂಡಿದ್ದಾರೆ. ಬಿಜೆಪಿಯ ಭದ್ರಕೋಟೆ ಬಾಗಲಕೋಟೆ ಮತಕ್ಷೇತ್ರದಲ್ಲಿಯೇ ಬಿಜೆಪಿ ಅಭ್ಯರ್ಥಿ ಸೋಲು ಕಂಡಿದ್ದಾರೆ. ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಕೇವಲ ಎರಡು ಕ್ಷೇತ್ರದಲ್ಲಿ ಮಾತ್ರ ಬಿಜೆಪಿಗೆ ಗೆಲುವಾಗಿದ್ದು, ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ.

ಬಿಜೆಪಿಯ ಭದ್ರಕೋಟೆ ಬಾಗಲಕೋಟೆ ಹಾಗೂ ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದ ಮುರಗೇಶ ನಿರಾಣಿ ಅವರು ಸ್ಪರ್ಧಿಸುವ ಬೀಳಗಿ ಮತಕ್ಷೇತ್ರ ಭಾರೀ ಕುತೂಹಲ ಹುಟ್ಟುಹಾಕಿತ್ತು. ಆದರೆ ಅಂತಿಮವಾಗಿ ಎರಡು ಕ್ಷೇತ್ರಗಳಲ್ಲೂ ಬಿಜೆಪಿ ಸೋಲು ಕಂಡಿದೆ. ಫಲಿತಾಂಶದ ಬಳಿಕ ಜಿಲ್ಲೆಯ ಮತದಾರರಿಂದ, ”ಬೀಳಗ್ಯಾಗ ರೊಕ್ಕ ನಡಿಲಿಲ್ಲ, ಬಾಗಲಕೋಟದಾಗ ಸೊಕ್ಕ ನಡಿಲಿಲ್ಲ” ಎನ್ನುವ ಮಾತು ಕೇಳಿಬರುತ್ತಿದೆ.

ಬೀಳಗಿಯಲ್ಲಿ ಹಣದ ಹೊಳೆ ಹರಿಸಿದ್ದ ಮುರಗೇಶ್ ನಿರಾಣಿ

ಬೀಳಗಿ ಮತಕ್ಷೇತ್ರದಿಂದ ಮುರಗೇಶ್ ನಿರಾಣಿ ಅವರು ಈಗಾಗಲೇ ನಾಲ್ಕು ಬಾರಿ ಸ್ಪರ್ಧೆ ಮಾಡಿ ಮೂರು ಬಾರಿ ಗೆಲುವು ಸಾಧಿಸಿದ್ದರು. ಮುಂದಿನ ಮುಖ್ಯಮಂತ್ರಿ ರೇ ಸ್‌ನಲ್ಲೂ ನಿರಾಣಿ ಹೆಸರು ಮುಂಚೂಣಿಯಲ್ಲಿತ್ತು. ಆದರೆ ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆ ಜೋರಾಗಿಯೇ ಇತ್ತು. ಕ್ಷೇತ್ರದ ಬಹಳಷ್ಟು ಹಳ್ಳಿಗಳ ಮತದಾರರು ಚುನಾವಣೆಗೂ ಮುನ್ನ ಹೇಳುತ್ತಿದ್ದ ಒಂದೇ ಒಂದು ಮಾತಂದ್ರೆ, ”ನಿರಾಣಿ ಸಾಹೇಬ್ ಓಟ್ ಕೇಳಾಕ್ ಅಷ್ಟೇ ನಮ್ಮೂರಿಗೆ ಬರ್ತಾನ ರೀ, ಆರಿಸಿ ಬಂದ್ಮೇಲೆ ಇತ್ಲಾಗ ತಲೆನೇ ಹಾಕಲ್ಲ, ಇನ್ನ ನಮ್ಮ ಕಷ್ಟ ಯಾವಾಗ ಕೇಳತಾನ್ರೀ ಅಂವಾ” ಎನ್ನುತ್ತಿದ್ದರು.

ಸೋಲಿನ ಭೀತಿ ಎದುರಿಸುತ್ತಿರುವ ಮುರಗೇಶ್ ನಿರಾಣಿ ಅವರು ಗೆಲ್ಲಲೇ ಬೇಕು ಎನ್ನುವ ಹಠದಿಂದ ಹಣದ ಹೊಳೆ ಹರಿಸಲು ಸಿದ್ದರಾಗಿದ್ದರು. ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ಖಾನೆ ಸಿಬ್ಬಂದಿ ಕ್ವಾರ್ಟರ್ಸ್‌ನಲ್ಲಿ ನಿರಾಣಿಗೆ ಸಂಬಂಧಿಸಿದ 21.45 ಲಕ್ಷ ಮೌಲ್ಯದ 963 ಸಾಂಪ್ರದಾಯಿಕ ಬೆಳ್ಳಿ ದೀಪಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ವಿಚಾರವಾಗಿ ಮುರುಗೇಶ್ ನಿರಾಣಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇನ್ನು ಕೆಲವಡೆ ಆಮಿಷ ಒಡ್ಡುವ ಮೂಲಕ ಮತ ಗಳಿಸಲು ನಿರಾಣಿ ಮುಂದಾಗಿದ್ದಾರೆ ಎಂದು ಹೇಳಲಾಗಿತ್ತು.

ಕ್ಷೇತ್ರದ ಪ್ರಬುದ್ಧ ಮತದಾರರು ತಮ್ಮ ಮತವನ್ನು ಹಣಕ್ಕೆ ಮಾರಿಕೊಳ್ಳಲಿಲ್ಲ ಎನ್ನುವುದು ಫಲಿತಾಂಶದ ಬಳಿಕ ಗೊತ್ತಾಯಿತು. ಇಷ್ಟೆಲ್ಲಾ ಹಣ ಆಮಿಷ ಒಡ್ಡಿ ಮತ ಸೆಳೆಯಲು ನಿರಾಣಿ ಮುಂದಾದರೂ, ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ಮಾತ್ರ ಕಿಂಚಿತ್ತು ದೃತಿಗೆಡಲಿಲ್ಲ. ಜನರ ಬಳಿ ಹೋದ ಜೆಟಿ ಪಾಟೀಲ್ ಅವರು, ”ಯಾರರ ರೊಕ್ಕ ಕೊಟ್ಟು, ಓಟ್ ಹಾಕ್ರಿ ಅಂದ್ರ, ರೊಕ್ಕ ಇಸ್ಕೊಳ್ರಿ ಆದ್ರ, ನಿಮ್ಮ ಓಟ್ ಮಾತ್ರ ಯಾರ ಕೆಲಸ ಮಾಡಿದಾರ, ನಿಮ್ಮ ಊರ ಅಭಿವೃದ್ಧಿ ಯಾರ ಮಾಡ್ಯಾರ ಅವರಿಗೆ ಹಾಕ್ರಿ” ಅಂತ ಹೇಳುತ್ತಿದ್ದರು. ಹಾಗಾಗಿನೇ ಇದೀಗ ಕ್ಷೇತ್ರದಲ್ಲಿ ರೊಕ್ಕ ನಡಿಲಿಲ್ಲ ಎಂದು ಹೇಳುತ್ತಾರೆ.

ಬಾಗಲಕೋಟೆ ಜಿಲ್ಲೆಯ ಸರಳ, ಸಜ್ಜನಿಕೆ ರಾಜಕಾರಣಿಯಾಗಿರುವ ಜೆಟಿ ಪಾಟೀಲ್ ಅವರು, 95,652 ಮತ ಗಳಿಸುವ ಮೂಲಕ ಮುರಗೇಶ್ ನಿರಾಣಿ ಅವರನ್ನು 11,129 ಮತಗಳಿಂದ ಮಕಾಡೆ ಮಲಗಿಸಿದ್ದಾರೆ.

ಒಟ್ಟು 1,84,837 ಮತದಾರರು ಮತ ಚಲಾಯಿಸಿದ್ದರು. ಗೆಲುವು ಕಂಡಿರುವ ಜೆಟಿ ಪಾಟೀಲ್ ಅವರು 95,652 ಮತ ಗಳಿಸಿದ್ದಾರೆ. ಇನ್ನು ಪ್ರಬಲ ಪೈಪೋಟಿಯೊಡ್ಡಿದ ಮುರಗೇಶ್ ನಿರಾಣಿ ಅವರು 84,523 ಮತ ಗಳಿಸುವ ಮೂಲಕ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟರು.

ಅಧಿಕಾರದ ಮದವೇರಿಸಿಕೊಂಡಿದ್ದ ಚರಂತಿಮಠಗೆ ಸೋಲು

ಭೂಮಿ ಫಲವತ್ತಾಗಿದ್ದಾಗ ಫಸಲು ತಾನಾಗಿಯೇ ಬರುತ್ತದೆ ಎನ್ನುವಂತೆ ಬಾಗಲಕೋಟೆ ಮತಕ್ಷೇತ್ರದಲ್ಲಿ ಪಿ.ಎಚ್. ಪೂಜಾರ, ಸೇರಿದಂತೆ ಸಂಘಪರಿವಾರದ ನಾಯಕರು ಬಿಜೆಪಿ ಪಕ್ಷದ ಸಂಘಟನೆಯನ್ನು ಚೆನ್ನಾಗಿ ಮಾಡಿದ್ದರು. 2004ರ ಸಮಯದಲ್ಲಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿದ್ದ ಪೂಜಾರಗೆ ಟಿಕೆಟ್ ಕೈ ತಪ್ಪಿ ವೀರಣ್ಣ ಚರಂತಿಮಠ ಪಾಲಾಯಿತು. ಆಗ ಸತತವಾಗಿ 2004 ಮತ್ತು 2008ರ ಚುನಾವಣೆಯಲ್ಲಿ ಸುಲಭವಾಗಿ ಚರಂತಿಮಠ ಗೆಲುವು ಸಾಧಿಸಿದರು. ಒಂದು ಕಡೆ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷರೂ ಆಗಿರುವ ಚರಂತಿಮಠ ಅಲ್ಲಿಯೂ ಸತತವಾಗಿ ಅಧಿಕಾರದಲ್ಲಿ ಮುಂದುವರೆದಿದ್ದಾರೆ. ಸಂಘದ ನೌಕರರ ಮೇಲೂ ಅಧಿಕಾರದ ದರ್ಪ ದೋರಿಸುತ್ತಾರೆ ಎನ್ನುವ ಆರೋಪಗಳು ಆಗಾಗ ಕೇಳಿಬರುತ್ತಲೇ ಇರುತ್ತವೆ.

ಇನ್ನು ಕ್ಷೇತ್ರದಲ್ಲಿ ಸತತವಾಗಿ ಎರಡು ಬಾರಿ ಆಯ್ಕೆಯಾಗಿದ್ದ ಚರಂತಿಮಠ ಬಳಿಗೆ ಕ್ಷೇತ್ರದ ಜನರು ತಮ್ಮ ಅಳಲು ಹೇಳಿಕೊಳ್ಳಲು ಹೋದರೆ, ಕನಿಷ್ಟ ಮಾನವೀಯತೆಯಿಂದಲೂ ನಡೆದುಕೊಳ್ಳುತ್ತಿರಲಿಲ್ಲ ಎನ್ನುವ ಆರೋಪಗಳಿವೆ. ತಮ್ಮ ಪಕ್ಷದ ಕಾರ್ಯಕರ್ತರು ಕೂಡ ಇವರ ಮುಂಗೋಪಕ್ಕೆ ಬೇಸತ್ತು ಹೊರಬಂದಿರುವ ಸಾಕಷ್ಟು ಉದಾಹರಣೆಗಳಿವೆ.

ಸತತವಾಗಿ ಎರಡು ಬಾರಿ ಗೆದ್ದಿದ್ದ ಚರಂತಿಮಠ ಅಧಿಕಾರದ ಮದವೇರಿಸಿಕೊಂಡಿದ್ದರು, ಆಗ ಅವರ ವರ್ತನೆಯಿಂದ ಬೇಸತ್ತಿದ್ದ ಕಾರ್ಯಕರ್ತರು ಹಾಗೂ ಮುಖಂಡರು 2013ರ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯನ್ನೇ ತೊರೆದಿದ್ದರು. ಹಾಗಾಗಿ ಆ ಚುನಾವಣೆಯಲ್ಲಿ ಚರಂತಿಮಠ ಅವರು ಸೋಲುಕಂಡರು.

2018ರ ಚುನಾವಣೆಯಲ್ಲಿ ಎದುರಾಳಿಯು ಸಿ.ಡಿ ಸುಳಿಯಲ್ಲಿ ಸಿಲುಕಿದ್ದರಿಂದ ಅದರ ಲಾಭ ಪಡೆದು ಮೂರನೇ ಬಾರಿಗೆ ಚರಂತಿಮಠ ಶಾಸಕರಾದರು. ತಮ್ಮ ಅಧಿಕಾರ ಅವಧಿಯಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿ ಒಳ್ಳೆಯ ಹೆಸರು ಸಂಪಾದಿಸಿದ್ದರೂ ಕೂಡ, ಜನನಾಯಕನಾಗಿ ಜನರ ಜೊತೆ ಹೇಗಿರಬೇಕು ಎನ್ನುವ ಸಾಮಾನ್ಯಜ್ಞಾನವಿಲ್ಲದೇ ವರ್ತಿಸುತ್ತಾರೆ ಎನ್ನುವ ಆರೋಪಗಳು ಅವರ ಮೇಲಿವೆ. ಜನರೊಟ್ಟಿಗೆ ಬೆರೆಯದೇ, ಮನಸೋಇಚ್ಛೆ ಮಾತನಾಡುತ್ತಾರೆ ಎನ್ನುವ ಆಕ್ರೋಶ ಒಂದೆಡೆಯಾದರೆ, ಪಕ್ಷದೊಳಗಿದ್ದ ಕಾರ್ಯಕರ್ತರು ಹಾಗೂ ಬಿಜೆಪಿಯ ಬೆನ್ನಿಗೆ ನಿಲ್ಲುವ ಸಂಘಪರಿವಾರದವರನ್ನು ತನ್ನ ನಡವಳಿಕೆಯಿಂದ ದೂರ ಮಾಡಿಕೊಂಡಿದ್ದಾರೆ.

2023ರ ವಿಧಾನಸಭಾ ಚುನಾವಣೆಯಲ್ಲಿ ವೀರಣ್ಣ ಚರಂತಿಮಠ ವಿರುದ್ಧ ಕೆಲಸ ಮಾಡಲು ಅವರ ಸಹೋದರ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಒಂದಾಗಿದ್ದರು. ಸಂಘಪರಿವಾರದ ಮುಖಂಡರು ಬಹಿರಂಗವಾಗಿಯೇ ಶಾಸಕನ ಸೊಕ್ಕು ಇಳಿಸುತ್ತೇವೆ ಎನ್ನುವ ಹೇಳಿಕೆ ನೀಡುತ್ತಿದ್ದರು. ಮತ್ತೊಂದು ಕಡೆ ಅನೇಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಬಿಜೆಪಿ ಮುಖಂಡ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಪ್ರಕಾಶ್ ತಪಶೆಟ್ಟಿಯವರು ಕೂಡ ಕಾಂಗ್ರೆಸ್ ಸೇರಿದರು. ಇನ್ನು ಬಿಜೆಪಿ ಮುಖಂಡ ಪಿ.ಎಚ್. ಪೂಜಾರ ಅವರು ಚರಂತಿಮಠನ ಜೊತೆಗೆ ಪ್ರಚಾರಕ್ಕೂ ತೆರಳದೇ ತಟಸ್ಥವಾಗಿ ಉಳಿದರು. ಪೂಜಾರ ಅವರ ಬೆಂಬಲಿಗರೆಲ್ಲರೂ ಪಕ್ಷೇತರ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡಿದ್ದಾರೆ.

2023ರ ಚುನಾವಣೆಯಲ್ಲಿ ವೀರಣ್ಣ ಚರಂತಿಮಠ ಅವರು 73458 ಮತಗಳನ್ನು ಪಡೆದರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಚ್‌ವೈ ಮೇಟಿ ಅವರು 79,336 ಮತ ಪಡೆಯುವ ಮೂಲಕ 5,878 ಮತಗಳ ಅಂತರದಲ್ಲಿ ಚರಂತಮಠ ಅವರಿಗೆ ಸೋಲುಣಿಸಿದರು. ಇನ್ನೂ ಪಕ್ಷೇತರರಾಗಿ ಸ್ಪರ್ಧೆ ಮಾಡಿದ್ದ ಮಲ್ಲಿಕಾರ್ಜುನ್ ಚರಂತಿಮಠ ಅವರು 10116 ಮತಗಳನ್ನು ಪಡೆಯುವ ಮೂಲಕ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...