ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ನಿರ್ದೇಶಕಿ ಕವಿತಾ ಲಂಕೇಶ್‌ರವರು ನಿರ್ದೇಶಿಸಿರುವ ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ರವರ ಕುರಿತ “ಗೌರಿ” ಸಾಕ್ಷ್ಯಚಿತ್ರವು 2023ರ ಮಾಂಟ್ರಿಯಲ್‌ನ ದಕ್ಷಿಣ ಏಷ್ಯಾ ಚಲನಚಿತ್ರೋತ್ಸವದಲ್ಲಿ “ಅತ್ಯುತ್ತಮ ದೀರ್ಘ ಸಾಕ್ಷ್ಯಚಿತ್ರ ಪ್ರಶಸ್ತಿ”ಜಯಿಸಿದೆ.
“ಈ ಸಾಕ್ಷ್ಯಚಿತ್ರವು 2017ರಲ್ಲಿ ರಾಜಕೀಯ ಹತ್ಯೆಗೊಳಗಾದ ಬೆಂಗಳೂರಿನ ಪತ್ರಕರ್ತೆ ಗೌರಿಲಂಕೇಶ್‌ರವರ ಕುರಿತಾಗಿದ್ದು, ಭಾರತೀಯ ರಾಜಕೀಯದಲ್ಲಿನ ಪ್ರಸ್ತುತ ಬಿಕ್ಕಟ್ಟಿನ ಸಂದರ್ಭದಲ್ಲಿ ಕೆಚ್ಚೆದೆಯ ಮತ್ತು ರಾಜಿಯಾಗದ ನಾಡಿಮಿಡಿತವಾಗಿದೆ. ಗೌರಿ ಅವರ ಸಹೋದರಿ ಕವಿತಾ ಲಂಕೇಶ್ ಅವರು ಉತ್ಸಾಹದಿಂದ ನಿರ್ದೇಶಿಸಿದ ಮತ್ತು ನಿರೂಪಿಸಿದ ಡಾಕ್ಯು-ಥ್ರಿಲ್ಲರ್ ಆಗಿದೆ” ಎಂದು ಪ್ರಶಸ್ತಿ ಘೋಷಣೆ ಸಂದರ್ಭದಲ್ಲಿ ಉಲ್ಲೇಖಿಸಲಾಗಿದೆ.
ಆಸ್ಕರ್ ನಾಮನಿರ್ದೇಶನಗೊಂಡ “ಆಲ್ ದಟ್ ಬ್ರೀಥ್ಸ್” ಸಾಕ್ಷ್ಯಚಿತ್ರವೂ ಈ ಸ್ಪರ್ಧೆಯಲ್ಲಿತ್ತು ಮತ್ತು ರನ್ನರ್ ಅಪ್ ಅನ್ನು ಪ್ರಶಸ್ತಿ ಗೆದ್ದುಕೊಂಡಿದೆ.
ಆಂಆಂಸ್ಟರ್‌ಡ್ಯಾಮ್‌ನ ಫ್ರೀ ಪ್ರೆಸ್ ಅನ್‌ಲಿಮಿಟೆಡ್ “ಗೌರಿ”ಸಾಕ್ಷ್ಯಚಿತ್ರವನ್ನು ನಿರ್ಮಾಣಕ್ಕೆ ಕೈಜೋಡಿಸಿದೆ. ಈ ಸಂಸ್ಥೆಯು ತಮ್ಮ ವೃತ್ತಿಪರ ಸೇವೆಯ ಕಾರಣದಿಂದಾಗಿ ಹಿಂಸಾಚಾರಕ್ಕೆ ಒಳಗಾಗಿ ಪ್ರಾಣ ಕಳೆದುಕೊಂಡ ಪತ್ರಕರ್ತರ ಸಾಕ್ಷ್ಯಚಿತ್ರಗಳ ಪ್ರಸ್ತಾಪಗಳಿಗೆ ಕರೆ ನೀಡಿತ್ತು. ಸುಮಾರು 300 ಪ್ರಸ್ತಾವನೆಗಳು ಬಂದಿದ್ದವು, ಆ ಪೈಕಿ ನಾಲ್ಕು ಚಿತ್ರಗಳನ್ನು ಫ್ರೀ ಪ್ರೆಸ್ ಆಯ್ಕೆ ಮಾಡಿದ್ದು, ಅದರಲ್ಲಿ ‘ಗೌರಿ’ ಅವರ ಕುರಿತ ತಮ್ಮ ಸಾಕ್ಷ್ಯಾಚಿತ್ರವೂ ಒಂದಾಗಿದೆ.
ಫ್ರೀ ಪ್ರೆಸ್ ಅನ್ಲಿಮಿಟೆಡ್ ಸಂಸ್ಥೆಯು ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯಾದ ಯಾವುದೇ ಹಸ್ತಕ್ಷೇಪವಿಲ್ಲದೆ ಪ್ರತಿಯೊಬ್ಬರಿಗೂ ಅಭಿಪ್ರಾಯ ಹೊಂದುವ, ಸ್ವೀಕರಿಸುವ, ಯಾವುದೇ ಮಾಧ್ಯಮಗಳ ಮೂಲಕ ಅಭಿವ್ಯಕ್ತಪಡಿಸುವ ಮತ್ತು ಪಸರಿಸುವ ಆರ್ಟಿಕಲ್ 19 ಅನ್ನು ಎತ್ತಿ ಹಿಡಿಯುತ್ತದೆ.
ಇದನ್ನೂ ಓದಿ: ಗೌರಿ ಸಾಕ್ಷ್ಯಚಿತ್ರ; ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಹೋರಾಡಬೇಕಾದ ಕನ್ನಡ ಪ್ರಜ್ಞೆಯನ್ನು ಜಾಗೃತಗೊಳಿಸುವ ಸಿನಿಮಾ


