Homeಕರ್ನಾಟಕಲೈಂಗಿಕ ಕಿರುಕುಳ ಆರೋಪ: ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ

ಲೈಂಗಿಕ ಕಿರುಕುಳ ಆರೋಪ: ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ

- Advertisement -
- Advertisement -

ಲೈಂಗಿಕ ಕಿರುಕುಳ ಆರೋಪದ ಪ್ರಕರಣದಲ್ಲಿ ಭಾರತೀಯ ಯುವ ಕಾಂಗ್ರೆಸ್ ಮುಖ್ಯಸ್ಥ ಶ್ರೀನಿವಾಸ್ ಬಿವಿ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ನೀಡಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಭಾರತೀಯ ಯುವ ಕಾಂಗ್ರೆಸ್ ಮುಖ್ಯಸ್ಥ ಬಿ.ವಿ.ಶ್ರೀನಿವಾಸ್ ಅವರು ಮಹಿಳೆ ಮೇಲೆ ಹಲ್ಲೆ ಮತ್ತು ಕಿರುಕುಳ ನೀಡಿದ್ದಾರೆಂಬ ಆರೋಪದ ಮೇಲೆ ಅಸ್ಸಾಂ ಪೊಲೀಸರು ಏಪ್ರಿಲ್ 22 ರಂದು ಪ್ರಕರಣ ದಾಖಲಾಗಿತ್ತು.

ಅಸ್ಸಾಂ ರಾಜ್ಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಅಂಗಿತಾ ದತ್ತಾ ಅವರು ನೀಡಿದ ದೂರಿನ ಅನ್ವಯ ಎಫ್‌ಐಆರ್‌ ದಾಖಲಾಗಿತ್ತು. ಕಿರುಕುಳ, ಹಲ್ಲೆ ಮತ್ತು ಮಹಿಳೆಯ ನಮ್ರತೆಯನ್ನು ಆಕ್ರೋಶಗೊಳಿಸುವ ಉದ್ದೇಶದಿಂದ ಪದ ಬಳಕೆ ಅಥವಾ ಸನ್ನೆ ಮಾಡಿರುವ ಆರೋಪದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ದಿಸ್ಪುರ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಶ್ರೀನಿವಾಸ್ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 67ರ ಅಡಿಯಲ್ಲಿಯೂ ಆರೋಪ ಮಾಡಲಾಗಿದೆ. ಎಲೆಕ್ಟ್ರಾನಿಕ್ ವಸ್ತುವಿನ ಮೂಲಕ ಅಶ್ಲೀಲ ಸಂಗತಿಯನ್ನು ಪ್ರಕಟಿಸುವುದು ಅಥವಾ ಪ್ರಸಾರ ಮಾಡುವುದನ್ನು ಈ ಸೆಕ್ಷನ್‌ ಶಿಕ್ಷಿಸುತ್ತದೆ.

“ಶ್ರೀನಿವಾಸ್ ನನಗೆ ಮಾನಸಿಕ ಕಿರುಕುಳ ನೀಡಿದ್ದಾರೆ, ಆರು ತಿಂಗಳ ಕಾಲ ನನ್ನ ವಿರುದ್ಧ ತಾರತಮ್ಯ ಎಸಗಿದ್ದಾರೆ. ನನಗೆ ಮೌನವಾಗಿರಲು ಹೇಳಲಾಯಿತು. ನನ್ನ ಆರೋಪಗಳ ಬಗ್ಗೆ ಯಾವುದೇ ತನಿಖೆಯನ್ನು ಪ್ರಾರಂಭಿಸಲಿಲ್ಲ” ಎಂದು ದತ್ತಾ ಏಪ್ರಿಲ್ 18 ರಂದು ದೂರಿದ್ದಾರೆ.

ಮೇ 4 ರಂದು ಗೌಹಾಟಿ ಹೈಕೋರ್ಟ್ ಪ್ರಥಮ ಮಾಹಿತಿ ವರದಿಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ಹೈಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು, ನಂತರ ಅವರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು.

ಏಪ್ರಿಲ್ 18 ರಂದು ಯುವ ಕಾಂಗ್ರೆಸ್ ನಾಯಕನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ದತ್ತಾ ಅವರು ತನಗೆ ಮಾನಸಿಕ ಕಿರುಕುಳ ಮತ್ತು ಆರು ತಿಂಗಳ ಕಾಲ ತಾರತಮ್ಯ ಮಾಡಿದ್ದಾರೆ ಎಂದು ಆರೋಪಿಸಿದರು. ತನಗೆ ಮೌನವಾಗಿರಲು ಹೇಳಲಾಯಿತು ಮತ್ತು ತನ್ನ ಆರೋಪಗಳ ಬಗ್ಗೆ ಯಾವುದೇ ತನಿಖೆಯನ್ನು ಪ್ರಾರಂಭಿಸಲಿಲ್ಲ ಎಂದು ಅವರು ಆರೋಪಿಸಿದ್ದಾರೆ. ಏಪ್ರಿಲ್ 22 ರಂದು, ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ದತ್ತಾ ಅವರನ್ನು ಆರು ವರ್ಷಗಳ ಕಾಲ ಸಂಘಟನೆಯ ಪ್ರಾಥಮಿಕ ಸದಸ್ಯತ್ವದಿಂದ ಹೊರಹಾಕಲಾಯಿತು.

ಬುಧವಾರ, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಸಂಜಯ್ ಕರೋಲ್ ಅವರನ್ನು ಒಳಗೊಂಡ ವಿಭಾಗೀಯ ಪೀಠವು ರಾಯಪುರದಲ್ಲಿ ಫೆಬ್ರವರಿ 24 ಮತ್ತು 26 ರ ನಡುವೆ ನಡೆದ ಘಟನೆ ಎಂದು ಹೇಳಲಾಗಿದೆ ಮತ್ತು ಏಪ್ರಿಲ್‌ನಲ್ಲಿ ಅಸ್ಸಾಂನಲ್ಲಿ ದೂರು ದಾಖಲಿಸಲಾಗಿದೆ ಎಂದು ಗಮನಿಸಿದರು.

ಎಫ್‌ಐಆರ್ ದಾಖಲಿಸಲು ಎರಡು ತಿಂಗಳ ವಿಳಂಬವನ್ನು ಪರಿಗಣಿಸಿ, ಅರ್ಜಿದಾರರಿಗೆ ಮಧ್ಯಂತರ ರಕ್ಷಣೆಗೆ ಅರ್ಹರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ”ಬಂಧನದ ಸಂದರ್ಭದಲ್ಲಿ ಅರ್ಜಿದಾರರನ್ನು ರೂ 50,000 ಮೊತ್ತಕ್ಕೆ ಶ್ಯೂರಿಟಿಗಳನ್ನು ಒದಗಿಸುವ ಮೇಲೆ ನಿರೀಕ್ಷಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕೆಂದು ನಾವು ನಿರ್ದೇಶಿಸುತ್ತೇವೆ” ಎಂದು ತಿಳಿಸಲಾಗಿದೆ.

ಶ್ರೀನಿವಾಸ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ”ದೂರು ಸಲ್ಲಿಸುವ ಮುನ್ನ ದತ್ತಾ ಅವರು ಮಾಡಿರುವ ಟ್ವೀಟ್‌ಗಳು ಪಕ್ಷದಲ್ಲಿ ತಾರತಮ್ಯಕ್ಕೆ ಸಂಬಂಧಿಸಿವೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ದೂರು ದಾಖಲಿಸುವ ಮೊದಲು ಅವರು ಆರು ಮಾಧ್ಯಮ ಸಂದರ್ಶನಗಳನ್ನು ನೀಡಿದ್ದರು, ಆದರೆ ಲೈಂಗಿಕ ಕಿರುಕುಳದ ಯಾವುದೇ ಆರೋಪಗಳನ್ನು ಮಾಡಿಲ್ಲ” ಎಂದು ಅವರು ಹೇಳಿದರು.

ಏಪ್ರಿಲ್ 18 ರಂದು, ಶ್ರೀನಿವಾಸ್ ಅವರು ದತ್ತಾ ಅವರ ವಿರುದ್ಧ ”ಸಂಪೂರ್ಣವಾಗಿ ಅಸಂಸದೀಯ, ಅವಮಾನಕರ, ಮಾನಹಾನಿಕರ, ದುರುದ್ದೇಶಪೂರಿತ ಪದಗಳನ್ನು ಬಳಸಿದ್ದಾರೆ” ಎಂದು ಆರೋಪಿಸಿ ಕಾನೂನು ನೋಟಿಸ್ ಕಳುಹಿಸಿದ್ದರು. ದತ್ತಾ ಅವರು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರುವ ಉದ್ದೇಶದಿಂದ ಕಾಂಗ್ರೆಸ್ ತೊರೆಯುವ ವಾತಾವರಣವನ್ನು ಸೃಷ್ಟಿಸಲು ಪಕ್ಷವನ್ನು ಕೆಣಕುತ್ತಿದ್ದಾರೆ ಮತ್ತು ಮಾನಹಾನಿ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

RSS ಕುರಿತು ಪೋಸ್ಟ್ ಹಾಕಿದ್ದಕ್ಕೆ ಎಕ್ಸ್‌ ಖಾತೆ ಬ್ಲಾಕ್ ಮಾಡಲು ಸೂಚಿಸಿದ ದೆಹಲಿ ಪೊಲೀಸರು : ಕೋರ್ಟ್ ಮೆಟ್ಟಿಲೇರುವುದಾಗಿ ಎಚ್ಚರಿಸಿದ ಐಎಫ್‌ಎಫ್‌

ತನ್ನ ಖಾತೆ ಮತ್ತು ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ಪೋಸ್ಟ್‌ಗಳನ್ನು ತೆಗೆದು ಹಾಕುವಂತೆ ದೆಹಲಿ ಪೊಲೀಸರು ಸಾಮಾಜಿಕ ಜಾಲತಾಣ ಎಕ್ಸ್‌ಗೆ ಕೋರಿದ್ದಾರೆ ಎಂದು ಇಂಟರ್‌ನೆಟ್ ಫ್ರೀಡಂ ಫೌಂಡೇಶನ್ (ಐಎಫ್‌ಎಫ್‌) ಮಂಗಳವಾರ (ನ.3) ತಿಳಿಸಿದೆ. ಐಎಫ್‌ಎಫ್‌ ಭಾರತದಲ್ಲಿ...

ರಾಜ್ಯದ 226 ತಾಲೂಕುಗಳಲ್ಲಿ 57.93 ಲಕ್ಷ ಹೆಕ್ಟೇರ್ ಬೆಳೆ ಹಾನಿ; ಕೇಂದ್ರದ ಸಣ್ಣ ನೆರವು ಸಾಕಾಗಲ್ಲ; ಪ್ರಧಾನಿ ಮೋದಿಗೆ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಪತ್ರ!

ಕರ್ನಾಟಕದ 226 ತಾಲೂಕುಗಳಲ್ಲಿ ಬರದ ಭೀಕರತೆಯಿಂದ ತತ್ತರಿಸಿರುವ ಲಕ್ಷಾಂತರ ರೈತರನ್ನು ರಕ್ಷಿಸಲು ತಕ್ಷಣವೇ ಬೃಹತ್ ಮಟ್ಟದ ಆರ್ಥಿಕ ನೆರವು ಬಿಡುಗಡೆ ಮಾಡುವಂತೆ ಆಗ್ರಹಿಸಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಪ್ರಧಾನಮಂತ್ರಿ ನರೇಂದ್ರ...

‘ಭಾರತ ಒಂದು ಜಾತ್ಯತೀತ ದೇಶ’: ದಿಯಾ ಮಿರ್ಜಾ ವಿಡಿಯೋ ಕುರಿತ ಬಿಜೆಪಿ ನಾಯಕರ ಟೀಕೆಗೆ ಬಾಂಬೆ ಹೈಕೋರ್ಟ್ ಆಕ್ಷೇಪ : ವಿಡಿಯೋ ಮರುಸ್ಥಾಪಿಸಲು ಬಿಎಂಸಿಗೆ ಆದೇಶ

ಸಾರ್ವಜನಿಕ ರಸ್ತೆಗಳಲ್ಲಿ ಪಟಾಕಿ ಸಿಡಿಸದಂತೆ ದೀಪಾವಳಿ ಹಬ್ಬದ ಮುನ್ನ ನಾಗರಿಕರಲ್ಲಿ ನಟಿ ದಿಯಾ ಮಿರ್ಜಾ ಮನವಿ ಮಾಡಿಕೊಂಡಿದ್ದ ವಿಡಿಯೋ ವಿರುದ್ಧ ಕೆಲವು ರಾಜಕಾರಣಿಗಳು ಮಾಡಿದ ಟೀಕೆಗಳನ್ನು ಬಾಂಬೆ ಹೈಕೋರ್ಟ್ ತೀವ್ರವಾಗಿ ಖಂಡಿಸಿದೆ. ನ್ಯಾಯಮೂರ್ತಿ ಗಿರೀಶ್...

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ: ‘ಕುಮಾರಸ್ವಾಮಿ ಸಮ್ಮುಖದಲ್ಲೇ ವಿಡಿಯೋ ಅಪ್‌ಲೋಡ್’; ವರದಿಯ ಶೇ.10ರಷ್ಟನ್ನೇ ಬಹಿರಂಗಪಡಿಸಿದ್ದೇವೆ ಎಂದ ಕಾಂಗ್ರೆಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣ ಇದೀಗ ರಾಜಕೀಯ ಸಂಘರ್ಷಕ್ಕೆ ಮತ್ತಷ್ಟು ತಿರುವು ನೀಡಿದೆ. ಸ್ಟಿಂಗ್ ಕಾರ್ಯಾಚರಣೆಗೆ ಬಳಸಲಾಗಿದೆ ಎನ್ನಲಾದ ಮೊಬೈಲ್ ಫೋನ್‌ಗಳನ್ನು ಕೇಂದ್ರ ಸಚಿವ...

ಕರ್ನಾಟಕ ಎಸ್‌ಐಆರ್‌ನ ಹಲವು ಅವಾಂತರಗಳು ಬಯಲು : ಸಂಪೂರ್ಣ ಮೌನ ಪಾಲಿಸಿದ ಚುನಾವಣಾ ಆಯೋಗ

ತೀವ್ರ ವಿರೋಧದ ನಡುವೆಯೂ ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸಿದ ಚುನಾವಣಾ ಆಯೋಗ, 2026ರ ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿ ಕೈತೊಳೆದುಕೊಂಡಿದೆ. ರಾಜ್ಯದ ಮುಖ್ಯ ಚುನಾವಣಾ ಆಯುಕ್ತ...

ವಕ್ಫ್ ತಿದ್ದುಪಡಿ ಕಾಯ್ದೆ 2025: ಸೀಮಿತ 5 ಅರ್ಜಿಗಳ ನಿಯಮ ತೆರವು; ಹೊಸ ರಿಟ್ ಅರ್ಜಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ!

ಕೇವಲ ಮಧ್ಯಂತರ ಅರ್ಜಿದಾರರಾಗಿ ವಾದ ಮಂಡಿಸಲು ಸಾಧ್ಯವಿಲ್ಲ ಎಂದ ಪೀಠ: 2027ರ ಜನವರಿಯಲ್ಲಿ ಅಂತಿಮ ವಿಸ್ತೃತ ವಿಚಾರಣೆ! ಕೇಂದ್ರ ಸರ್ಕಾರದ ವಿವಾದಾತ್ಮಕ ‘ವಕ್ಫ್ (ತಿದ್ದುಪಡಿ) ಕಾಯ್ದೆ 2025’ ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ನಡೆಯುತ್ತಿರುವ...

ಸ್ಥಳೀಯ ಸಂಸ್ಥೆ ಚುನಾವಣೆಗೆ ಯಾವುದೇ ಕಾರಣಕ್ಕೂ ‘SIR’ ಪಟ್ಟಿಯನ್ನು ಬಳಸಬೇಡಿ! ರಾಜ್ಯ ಸರ್ಕಾರಕ್ಕೆ ಹೋರಾಟಗಾರರ ಎಚ್ಚರಿಕೆ!

ಯುಪಿ, ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರಗಳೇ ಬದಿಗೊತ್ತಿದ ‘SIR’ ಪಟ್ಟಿಯನ್ನು ಕರ್ನಾಟಕ ಸರ್ಕಾರವೂ ಕೈಬಿಡಬೇಕು! ಕೇಂದ್ರ ಚುನಾವಣಾ ಆಯೋಗವು ‘ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅಂತಿಮ ಪಟ್ಟಿ ಪ್ರಕಟಿಸಿದ ನಂತರವೂ ಲಕ್ಷಾಂತರ...

ಬಿಡದಿ ಟೌನ್‌ಶಿಪ್ : 2 ಗ್ರಾಮಗಳ 1,895 ಎಕರೆ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ

ರಾಮನಗರ ತಾಲೂಕಿನ ಬಿಡದಿ ಹೋಬಳಿಯಲ್ಲಿರುವ ಕಂಚುಗಾರನಹಳ್ಳಿ ಮತ್ತು ಬೈರಮಂಗಲ ಗ್ರಾಮಗಳಲ್ಲಿ, ಪ್ರಸ್ತಾವಿತ 'ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್' (GBIT) ಯೋಜನೆಗಾಗಿ 1,895 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಅಂತಿಮ ಅಧಿಸೂಚನೆಯನ್ನು ಕರ್ನಾಟಕ ಸರ್ಕಾರ ಹೊರಡಿಸಿದೆ...

ಪಂಜಾಬ್ : ಮೂವರು ಎಎಪಿ ಶಾಸಕರು ಬಿಜೆಪಿ ಸೇರ್ಪಡೆ; ವಿಧಾನಸಭೆ ಚುನಾವಣೆಗೆ ಮುನ್ನ ಮಹತ್ವದ ಬೆಳವಣಿಗೆ

ಪಂಜಾಬ್ ವಿಧಾನಸಭಾ ಚುನಾವಣೆಗೆ (2027) ಮುನ್ನ ಆಮ್ ಆದ್ಮಿ ಪಾರ್ಟಿ (ಎಎಪಿ) ನೇತೃತ್ವದ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದ್ದು, ಸೋಮವಾರ (ನ.2) ಮೂವರು ಶಾಸಕರಾದ ಹರ್ಮೀತ್ ಸಿಂಗ್ ಪಠಾನ್‌ಮಜ್ರಾ, ಚೇತನ್ ಸಿಂಗ್ ಜೌರಾಮಜ್ರಾ ಮತ್ತು...

‘ಹೆಸರುಗಳನ್ನು ತೆಗೆದುಹಾಕುವುದು ಕಳ್ಳತನವಲ್ಲ’; ಎಸ್‌ಐಆರ್ ಬಗ್ಗೆ ಪ್ರತಿಪಕ್ಷಗಳು ಗೊಂದಲ ಹರಡುತ್ತಿವೆ: ಸಂಬಿತ್ ಪಾತ್ರ

ವಾರಾಣಸಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಪಕ್ಷಗಳು ಗೊಂದಲ ಸೃಷ್ಟಿಸುತ್ತಿವೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಹಾಗೂ ಪುರಿ ಸಂಸದ ಸಂಬಿತ್ ಪಾತ್ರ ಆರೋಪಿಸಿದ್ದಾರೆ. ಮತದಾರರ ಪಟ್ಟಿಯಿಂದ...