Homeಕರ್ನಾಟಕಸಿಎಂ ಆಯ್ಕೆ ಕಗ್ಗಂಟು ಪರಿಹರಿಸಿದ ಕಾಂಗ್ರೆಸ್ ಹೈಕಮಾಂಡ್‌ಗೆ ಸಂಪುಟ ವಿಸ್ತರಣೆ, ಖಾತೆ ಹಂಚಿಕೆಯ ಜಂಜಾಟ ಶುರು

ಸಿಎಂ ಆಯ್ಕೆ ಕಗ್ಗಂಟು ಪರಿಹರಿಸಿದ ಕಾಂಗ್ರೆಸ್ ಹೈಕಮಾಂಡ್‌ಗೆ ಸಂಪುಟ ವಿಸ್ತರಣೆ, ಖಾತೆ ಹಂಚಿಕೆಯ ಜಂಜಾಟ ಶುರು

- Advertisement -
- Advertisement -

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ  ತೀವ್ರ ಪೈಪೋಟಿ ಏರ್ಪಟ್ಟಿತ್ತು. ಐದು ದಿನಗಳ ಕಾಲ ನಡೆದ ಕಾದಾಟಕ್ಕೆ ಬುಧವಾರ ತಡರಾತ್ರಿ ಬ್ರೇಕ್ ಬಿದ್ದಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇದೇ ಶನಿವಾರ (ಮೇ 21) ಮಧ್ಯಾಹ್ನ 12.30ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಗ್ಗಂಟನ್ನು ಪರಿಹರಿಸುವುದರಲ್ಲಿಯೇ ಹೈರಾಣಾಗಿರುವ ಕಾಂಗ್ರೆಸ್‌ ಹೈಕಮಾಂಡ್‌ಗೆ ಇದೀಗ ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆಯ ಜಂಜಾಟ ಶುರುವಾಗಲಿದೆ.

ಸಿದ್ದರಾಮಯ್ಯ, ಶಿವಕುಮಾರ್ ಅವರು ನಾಯಕತ್ವಕ್ಕಾಗಿ ಸೆಣಸಾಟ ನಡೆಸಿದ್ದರು. ಇದನ್ನು ಬಗೆಹರಿಸಲು ನಾನಾ ಪ್ರಯತ್ನ ನಡೆದರೂ ಇಬ್ಬರೂ ತಮ್ಮ ನಿಲುವಿಗೆ ಅಂಟಿಕೊಂಡರು. ಸಿಎಮ ಸ್ಥಾನ ತಮಗೆ ಯಾಕೆ ದಕ್ಕಬೇಕು ಎನ್ನುವ ಬಗ್ಗೆ ವರಿಷ್ಠರ ಮುಂದೆ ವಾದ ಮಂಡಿಸಿದ್ದರು. ಇಬ್ಬರೂ ಪಟ್ಟು ಬಿಡದಿದ್ದಾಗ, ಹೈಕಮಾಂಡ್‌ಗೆ ದೊಡ್ಡತಲೆನೋವಾಗಿ ಪರಿಣಮಿಸಿತು. ‘ಸಂಧಾನ ಸೂತ್ರ’ವನ್ನು ಹೆಣೆದ ಕಾಂಗ್ರೆಸ್‌ ವರಿಷ್ಠರು ಕೊನೆಗೂ ಇಬ್ಬರನ್ನೂ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. 2013-2018ರ ಅವಧಿಯಲ್ಲಿ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಸಿದ್ದರಾಮಯ್ಯ ಅವರು ಇದೇ 20ರಿಂದ ತಮ್ಮ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಸಿದ್ದರಾಮಯ್ಯ–ಡಿಕೆ ಶಿವಕುಮಾರ್‌ ಪದಗ್ರಹಣ: ಯಾರಿಗೆಲ್ಲಾ ಆಹ್ವಾನ?

ಸಂಧಾನ ಯಶಸ್ವಿಯಾದ ಬಳಿಕ ಇಬ್ಬರನ್ನೂ ಒಟ್ಟಿಗೆ ನಿಲ್ಲಿಸಿ ಕೈ ಎತ್ತಿ ಹಿಡಿದು ‘ಒಗ್ಗಟ್ಟು’ ಪ್ರದರ್ಶಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಸರ್ಕಾರ ರಚನೆಯ ಹಾದಿಗೆ ಸುಗಮವಾಗಿದೆ ಎನ್ನುವ ಸಂದೇಶ ರವಾನಿಸಿದರು. ಒಂದೇ ವಿಮಾನದಲ್ಲಿ ಬೆಂಗಳೂರಿಗೆ ಬಂದ ಇಬ್ಬರು ನಾಯಕರು ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗಿಯಾದರು.

ಇದನ್ನೂ ಓದಿ: ಸಿಎಂ ಆಯ್ಕೆ ವಿಳಂಬಕ್ಕೆ ಬಿಜೆಪಿ ಟೀಕೆ; ಉದಾಹರಣೆ ಸಹಿತ ತಿರುಗೇಟು ನೀಡಿದ ಜೈರಾಮ್ ರಮೇಶ್

ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಅದೇ ದಿನ 20ಕ್ಕೂ ಹೆಚ್ಚು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಎಐಸಿಸಿ ಪ್ರದಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಸಿದ್ದಾರೆ. ಸಚಿವ ಸಂಪುಟದಲ್ಲಿ ಯಾರಿರಬೇಕು ಎಂಬುದನ್ನು ನಿಶ್ಚಯಿಸಲು ಇಬ್ಬರು ನಾಯಕರು ಶುಕ್ರವಾರವೇ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಈ ಸಮಾರಂಭದಲ್ಲಿ ಬಿಜೆಪಿಯೇತರ ವಿರೋಧ ಪಕ್ಷಗಳ ನಾಯಕರು, ವಿವಿಧ ರಾಜ್ಯಗಳ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರು ಭಾಗಿಯಾಗಲಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ 135 ಶಾಸಕರು ಆಯ್ಕೆಯಾಗಿರುವುದರಿಂದ ಯಾರಿಗೆ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂಬ ತೀರ್ಮಾನ ಕೈಗೊಳ್ಳುವುದು ಪರಿಷ್ಕರಿಗೆ ಸವಾಲಾಗಿದೆ. ಅನೇಕ ನಾಯಕರು ಈಗಾಗಲೇ ಸಚಿವ ಸ್ಥಾನಕ್ಕೆ ತಮ್ಮ ಹಕ್ಕು ಮಂಡಿಸಿದ್ದಾರೆ. ಜಾತಿ, ಪ್ರಾದೇಶಿಕತೆ ಹಾಗೂ ಸಿದ್ದರಾಮಯ್ಯ ಶಿವಕುಮಾರ್ ಅವರ ಆಪ್ತ ಬಣದ ವಾದವನ್ನು ಮುಂದಿಟ್ಟು, ಶಾಸಕರು, ಹಕ್ಕೊತ್ತಾಯ ಮಂಡಿಸುವುದರಿಂದಾಗಿ, ಆಯ್ಕೆ ಮತ್ತು ಖಾತೆ ಹಂಚಿಕೆ ವರಿಷ್ಟರನ್ನು ಇಕ್ಕಟ್ಟಿಗೆ ದೂಡುವ ಸಾಧ್ಯತೆಯೂ ಇದೆ. ಇಬ್ಬರು ನಾಯಕರು, ತಮ್ಮ ಆಪ್ತರಿಗೆ ಸಚಿವ ಸ್ಥಾನ ಹಾಗೂ ಆಯಕಟ್ಟಿನ ಖಾತೆ ಕೊಡಿಸಬೇಕಿರುವುದರಿಂದಾಗಿ ಈ ಪ್ರಕ್ರಿಯೆ ಮೇಲೆ ಎಲ್ಲರ ಕುತೂಹಲ ನೆಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...