Homeಸಿನಿಮಾಕ್ರೀಡೆಇಂದು ಬೆಂಗಳೂರಿನಲ್ಲಿ RCB ಪಂದ್ಯ: ಮಳೆ ಬಂದರೆ ಪ್ಲೇಆಫ್ ಸಾಧ್ಯತೆ ಕ್ಷೀಣ

ಇಂದು ಬೆಂಗಳೂರಿನಲ್ಲಿ RCB ಪಂದ್ಯ: ಮಳೆ ಬಂದರೆ ಪ್ಲೇಆಫ್ ಸಾಧ್ಯತೆ ಕ್ಷೀಣ

- Advertisement -
- Advertisement -

ಐಪಿಎಲ್ 15ನೇ ಆವೃತ್ತಿಯ ಲೀಗ್ ಹಂತ ಮುಕ್ತಾಯದ ಹಂತಕ್ಕೆ ಬಂದಿದೆ. 18 ಅಂಕ ಗಳಿಸಿರುವ ಗುಜರಾತ್ ಟೈಟನ್ಸ್ ಮತ್ತು ತಲಾ 17 ಅಂಕ ಗಳಿಸಿರುವ ಚನ್ನೈ ಮತ್ತು ಲಕ್ನೋ ತಂಡಗಳು ಈಗಾಗಲೇ ಪ್ಲೇಆಫ್ ಪ್ರವೇಶಿಸಿವೆ. ಡೆಲ್ಲಿ ಕ್ಯಾಪಿಟಲ್ಸ್, ಸನ್‌ರೈಸರ್ಸ್ ಹೈದರಾಬಾದ್, ಕೋಲ್ಕತ್ತ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್‌ ತಂಡಗಳು ಹೆಚ್ಚು ಸೋಲು ಕಂಡ ಪರಿಣಾಮ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿವೆ. ಹಾಗಾಗಿ ಉಳಿದ 1 ಪ್ಲೇಆಫ್ ಸ್ಥಾನಕ್ಕಾಗಿ 3 ತಂಡಗಳು ಪೈಪೋಟಿ ನಡೆಸುತ್ತಿವೆ. ಇನ್ನೊಂದು ಪಂದ್ಯ ಗೆದ್ದರೆ RCB ಪ್ಲೇಆಫ್ ಪ್ರವೇಶ ಸಾಧ್ಯ. ಆದರೆ ಮಳೆ ಬಂದು ಪಂದ್ಯ ರದ್ದಾದರೆ ಅಥವಾ ಆರ್‌ಸಿಬಿ ಕಡಿಮೆ ಅಂತರದಲ್ಲಿ ಸೋತರೂ ಮುಂಬೈ ಇಂಡಿಯನ್ಸ್ ತಂಡ ಕೂಡ ಸೋಲು ಕಂಡರೆ ಆರ್‌ಸಿಬಿ ಪ್ಲೇ ಆಫ್‌ ಪ್ರವೇಶಿಸಬಹುದು. ಬನ್ನಿ ಆರ್‌ಸಿಬಿ ಪ್ಲೇಆಫ್ ಸಾಧ್ಯತೆಗಳನ್ನು ನೋಡೋಣ.

12 ಪಂದ್ಯಗಳಿಂದ 7 ಜಯ ಮತ್ತು 6 ಸೋಲಿನೊಂದಿಗೆ 14 ಅಂಕ ಗಳಿಸಿರುವ RCB ಅಂಕ ಪಟ್ಟಿಯಲ್ಲಿ 4 ನೇ ಸ್ಥಾನದಲ್ಲಿದ್ದು, ಸತತ ನಾಲ್ಕನೇ ಬಾರಿಗೆ ಪ್ಲೇ ಆಫ್‌ ಪ್ರವೇಶಿಸಲು ಕಾದು ಕುಳಿತಿದೆ. ತಲಾ 14 ಅಂಕ ಪಡೆದಿರುವ ರಾಜಸ್ಥಾನ್ ರಾಯಲ್ಸ್ 5ನೇ, ಮುಂಬೈ 6ನೇ ಸ್ಥಾನದಲ್ಲಿವೆ. ಈ ಎಲ್ಲಾ ತಂಡಗಳಿಗೂ ಪ್ಲೇ ಆಫ್ ತಲುಪುವ ಅವಕಾಶವಿದೆ.

ಆರ್‌ಸಿಬಿ ಪ್ಲೇಆಫ್ ಸಾಧ್ಯತೆಗಳು ಹೀಗಿವೆ

ಆರ್‌ಸಿಬಿ ಮೇ 21 ರಂದು ಗುಜರಾತ್ ಟೈಟನ್ಸ್ ಎದುರು ಕೊನೆಯ ಪಂದ್ಯದಲ್ಲಿ ಸೆಣಸಲಿದೆ. ಆ ಪಂದ್ಯದಲ್ಲಿ ಗೆದ್ದರೆ 16 ಅಂಕಗಳೊಂದಿಗೆ ಸುಲಭವಾಗಿ ಪ್ಲೇ ಆಫ್ ತಲುಪಲಿದೆ. ಪಂದ್ಯ ಸೋತರೂ, ಸೋಲಿನ ಅಂತರ ಕಡಿಮೆ ಇದ್ದಲ್ಲಿ 14 ಅಂಕಗಳು ಮತ್ತು ಅದರ ನೆಟ್ ರನ್ ರೇಟ್ ಆಧಾರದಲ್ಲಿ ಪ್ಲೇ ಆಫ್ ಪ್ರವೇಶ ಪಡೆಯಬಹುದು. ಆರ್‌ಸಿಬಿಯ ಸದ್ಯದ ನೆಟ್ ರನ್‌ ರೇಟ್ +0.180 ಇದೆ. ಆದರೆ ಆಗ ಮುಂಬೈ ಇಂಡಿಯನ್ಸ್ ತಂಡವು ಭಾನುವಾರ ನಡೆಯುವ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಸೋಲಬೇಕಿದೆ. ಆಗ ಮುಂಬೈ ಸಹ 14 ಅಂಕ ಗಳಿಸಿರುತ್ತದೆ. ಆದರೆ ನೆಟ್ ರನ್ ರೇಟ್ (-0.128) ಆರ್‌ಸಿಬಿಗಿಂತ ಕಡಿಮೆ ಇರುವುದರಿಂದ ಆರ್‌ಸಿಬಿಗೆ ಅನುಕೂಲವಾಗುತ್ತದೆ. ಆದರೆ ಇತ್ತೀಚಿನ ಪಂದ್ಯಗಳಲ್ಲಿ ಸಾಂಘಿಕ ಪ್ರದರ್ಶನ ನೀಡುತ್ತಿರುವ ಮುಂಬೈ ತಂಡವು ಕೊನೆಯ ಸ್ಥಾನದಲ್ಲಿರುವ ಹೈದರಾಬಾದ್ ಎದುರು ಸೋಲುವುದು ಅಷ್ಟು ಸುಲಭವಲ್ಲ.

ಮಳೆ ಬಂದರೆ?

ಆರ್‌ಸಿಬಿ ಪಂದ್ಯಕ್ಕೆ ಮಳೆ ಬಂದು ಪಂದ್ಯ ರದ್ದಾದರೆ ಒಂದು ಅಂಕ ಸಿಗುತ್ತದೆ. ಆಗ ಆರ್‌ಸಿಬಿ 15 ಅಂಕ ಗಳಿಸಿರುತ್ತದೆ. ಆದರೆ ಅದಕ್ಕೂ ಮುನ್ನ ನಡೆಯುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು  ಹೈದರಾಬಾದ್ ವಿರುದ್ಧ ಸೋಲಬೇಕಿದೆ. ಇಲ್ಲವಾದಲ್ಲಿ ಮುಂಬೈ ಪ್ಲೇ ಆಫ್ ಪ್ರವೇಶಿಸುತ್ತದೆ. ಆರ್‌ಸಿಬಿ ಟೂರ್ನಿಯಿಂದ ಹೊರ ಬೀಳುತ್ತದೆ.

ಒಂದು ವೇಳೆ ಮುಂಬೈ ಸೋತು, ಆರ್‌ಸಿಬಿ ಕೂಡ ದೊಡ್ಡ ಅಂತರದಲ್ಲಿ ಸೋತಲ್ಲಿ ಎರಡೂ ತಂಡಗಳು ಟೂರ್ನಿಯಿಂದ ಹೊರಬಿದ್ದು, 14 ಅಂಕ ಮತ್ತು +0.148 ನೆಟ್ ರನ್‌ ರೇಟ್ ಹೊಂದಿರುವ ರಾಜಸ್ಥಾನ್ ರಾಯಲ್ಸ್ ತಂಡ ಪ್ಲೇ ಆಫ್ ಪ್ರವೇಶಿಸುತ್ತದೆ.

ಮೊದಲ ಕ್ವಾಲಿಫೈಯರ್ ಪಂದ್ಯ ಮೇ 23 ರಂದು ನಡೆದರೆ, ಎಲಿಮಿನೇಟರ್ ಪಂದ್ಯ 24 ರಂದು ನಡೆಯಲಿದೆ. ಎರಡನೇ ಕ್ವಾಲಿಫೈಯರ್ ಪಂದ್ಯ 26 ರಂದು ನಡೆದರೆ, ಫೈನಲ್ ಪಂದ್ಯ ಮೇ 28 ರಂದು ನಡೆಯಲಿದೆ.

ಇದನ್ನೂ ಓದಿ: ಕರಾವಳಿ: ಬೆಚ್ಚಿ ಬೀಳಿಸಿದ ಬುದ್ಧಿವಂತರ ಸೀಮೆಯ “ತಿರುಚು” ಫಲಿತಾಂಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...