Homeಮುಖಪುಟಪುಲ್ವಾಮಾ ದಾಳಿ: ಸೈನಿಕರ ಶವಗಳ ಮೇಲೆ 2019ರ ಚುನಾವಣೆ ನಡೆಯಿತು; ಮೋದಿ ವಿರುದ್ಧ ಸತ್ಯಪಾಲ್ ಮಲಿಕ್...

ಪುಲ್ವಾಮಾ ದಾಳಿ: ಸೈನಿಕರ ಶವಗಳ ಮೇಲೆ 2019ರ ಚುನಾವಣೆ ನಡೆಯಿತು; ಮೋದಿ ವಿರುದ್ಧ ಸತ್ಯಪಾಲ್ ಮಲಿಕ್ ವಾಗ್ದಾಳಿ

- Advertisement -
- Advertisement -

ನಮ್ಮ ಸೈನಿಕರ ಶವಗಳ ಮೇಲೆ 2019ರ ಲೋಕಸಭೆ ಚುನಾವಣೆ ನಡೆಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಪುನರುಚ್ಚರಿಸುವ ಮೂಲಕ ಸರ್ಕಾರದ ಮೇಲೆ ಮತ್ತೊಮ್ಮೆ ವಾಗ್ಧಾಳಿ ನಡೆಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಸೋಮವಾರ ಪುಲ್ವಾಮಾ ದಾಳಿಯ ವಿಷಯದ ಬಗ್ಗೆ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು ಮತ್ತು 2019 ರ ಲೋಕಸಭೆಯ ಚುನಾವಣೆಯು ”ನಮ್ಮ ಸೈನಿಕರ ಮೃತದೇಹಗಳ ಮೇಲೆ ನಡೆಸಲಾಯಿತು” ಎಂದು ಹೇಳಿದ್ದಾರೆ.

”ಆ ಘಟನೆ ನಡೆದ ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದಾಳಿಯ ಬಗ್ಗೆ ಮಾಹಿತಿ ನೀಡಿದ್ದೆ. ಆದರೆ ಅವರು ನನಗೆ ಮೌನವಾಗಿರಲು ಹೇಳಿದರು. ಆಗಲೇ ತನಿಖೆ ನಡೆಸಿದ್ದರೆ ಅಂದಿನ ಗೃಹ ಸಚಿವರು ರಾಜೀನಾಮೆ ನೀಡಬೇಕೇತ್ತು” ಎಂದರು.

”2019ರ ಲೋಕಸಭೆ ಚುನಾವಣೆಗಳು ನಮ್ಮ ಸೈನಿಕರ ಶವಗಳ ಮೇಲೆ ನಡೆಸಿದರು. ಆ ಬಗ್ಗೆ ಯಾವುದೇ ತನಿಖೆಯನ್ನು ಮಾಡಲಿಲ್ಲ. ಒಂದು ವೇಳೆ ತನಿಖೆ ನಡೆಸಿದ್ದರೆ, ಆಗಿನ ಗೃಹ ಸಚಿವ (ರಾಜನಾಥ್ ಸಿಂಗ್) ರಾಜೀನಾಮೆ ನೀಡಬೇಕಾಗಿತ್ತು. ಅನೇಕ ಅಧಿಕಾರಿಗಳು ಜೈಲು ಪಾಲಾಗುತ್ತಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು” ಎಂದು ಅಲ್ವಾರ್ ಜಿಲ್ಲೆಯ ಬನ್ಸೂರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಲಿಕ್ ಹೇಳಿದ್ದಾರೆ.

ಲಡಾಖ್ ಮತ್ತು ಜಮ್ಮು-ಕಾಶ್ಮೀರದ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ರಾಜ್ಯವನ್ನು ವಿಭಜಿಸುವ ಮೊದಲು, ಮಲಿಕ್ ಅವರು ಜಮ್ಮು ಮತ್ತು ಕಾಶ್ಮೀರದ ಗವರ್ನರ್ ಆಗಿದ್ದರು, ಅಲ್ಲಿ ಅವರು ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ್ದರು.

ಇದನ್ನೂ ಓದಿ: ಪುಲ್ವಾಮ ದಾಳಿ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಾಜಿ ಗೌವರ್ನರ್ ಸತ್ಯಪಾಲ್ ಮಲಿಕ್‌ಗೆ ಸಿಬಿಐ ನೋಟಿಸ್

2019ರ ಫೆಬ್ರವರಿ 14, ಭಾನುವಾರ ಪುಲ್ವಾಮಾ ದಾಳಿ ನಡೆಯಿತು. ಆಗ ಪ್ರಧಾನಿ ನರೇಂದ್ರ ಮೋದಿ ಅವರು ಚಿತ್ರಿಕರಣಕ್ಕಾಗಿ ಚಿಮ್ ಕಾರ್ಬೆಟ್ ನ್ಯಾಷನಲ್ ಪಾರ್ಕ್‌ನಲ್ಲಿದ್ದರು. ಅಲ್ಲಿಂದ ಅವರು ಬಂದ ಮೇಲೆ ನನಗೆ ಕರೆ ಮಾಡಿದರು. ನಮ್ಮ ಸೈನಿಕರು ಬಲಿಯಾಗಿದ್ದಾರೆ. ನಮ್ಮ ತಪ್ಪಿನಿಂದಾಗಿ ಅವರು ಬಲಿಯಾಗುವಂತಾಯಿತು ಎಂದು ಹೇಳಿದೆ. ಆದರೆ, ಅವರು ಈ ಬಗ್ಗೆ ಮಾತನಾಡಬೇಡಿ, ಸುಮ್ಮನಿರುವಂತೆ ಸೂಚಿಸಿದರು ಎಂದು ಸತ್ಯಪಾಲ್ ಮಲಿಕ್ ಅವರು ಹೇಳಿದರು.

ಆಗಸ್ಟ್ 23, 2018 ರಿಂದ ಅಕ್ಟೋಬರ್ 30, 2019 ರವರೆಗೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದಾಗ ವಿಮಾ ಯೋಜನೆಯ ಫೈಲ್‌ಗಳನ್ನು ತೆರವುಗೊಳಿಸಲು 300 ಕೋಟಿ ರೂಪಾಯಿಗಳನ್ನು ಲಂಚವಾಗಿ ನೀಡಲಾಯಿತು ಎಂಬ ಅವರ ಹೇಳಿಕೆಯ ಬಗ್ಗೆ ಸಿಬಿಐ ಇತ್ತೀಚೆಗೆ ಮಲಿಕ್ ಅವರನ್ನು ಪ್ರಶ್ನಿಸಿದೆ.

ಇದೇ ವೇಳೆ ಮೋದಿ ಮತ್ತು ಅದಾನಿ ವಿಚಾರವನ್ನು ಪ್ರಸ್ತಾಪಿಸಿದ ಮಲೀಕ್, ”ಅದಾನಿ ಕೇವಲ ಮೂರು ವರ್ಷಗಳಲ್ಲಿ ಸಾಕಷ್ಟು ಹಣವನ್ನು ಗಳಿಸಿದ್ದಾರೆ. ಅವರು ಅಷ್ಟು ಕಡಿಮೆ ಅವಧಿಯಲ್ಲಿ ಅಷ್ಟು ಶ್ರೀಮಂತರಾಗಲು ಸಾಧ್ಯವೇ?” ಎಂದು ಅಲ್ಲಿದ್ದ ಜನರನ್ನು ಕೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...