Homeಮುಖಪುಟವಿಧಾನ ಸಭಾಧ್ಯಕ್ಷ ಸ್ಥಾನಕ್ಕೆ ಯು.ಟಿ ಖಾದರ್ ನಾಮಪತ್ರ ಇಂದು: ಅವಿರೋಧ ಆಯ್ಕೆ ಸಾಧ್ಯತೆ

ವಿಧಾನ ಸಭಾಧ್ಯಕ್ಷ ಸ್ಥಾನಕ್ಕೆ ಯು.ಟಿ ಖಾದರ್ ನಾಮಪತ್ರ ಇಂದು: ಅವಿರೋಧ ಆಯ್ಕೆ ಸಾಧ್ಯತೆ

- Advertisement -
- Advertisement -

ವಿಧಾನ ಸಭಾಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಕಾಂಗ್ರೆಸ್‌ನ ಹಿರಿಯ ತಲೆಗಳು ನಿರಾಕರಿಸಿದ ಕಾರಣ ಮಾಜಿ ಸಚಿವ, ಮಂಗಳೂರಿನ ಶಾಸಕ ಯು.ಟಿ ಖಾದರ್ ರನ್ನು ಕಾಂಗ್ರೆಸ್ ಹೆಸರಿಸಿದ್ದು, ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಬೇರೆ ಯಾರೂ ಸಹ ನಾಮಪತ್ರ ಸಲ್ಲಿಸುವ ಸಾಧ್ಯತೆ ಇಲ್ಲದಿರುವುದರಿಂದ, ನಾಳೆ ಅವರು ಅವಿರೋಧವಾಗಿ ಆಯ್ಕೆಯಾಗುವ ಸಂಭವವಿದೆ. ಅವರು ಆಯ್ಕೆಯಾದಲ್ಲಿ ಕರ್ನಾಟಕದ ಸ್ಪೀಕರ್ ಹುದ್ದೆ ಏರಿದ ಮೊದಲ ಮುಸ್ಲಿಂ ಮುಖಂಡರಾಗಲಿದ್ದಾರೆ.

ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಸಭಾಧ್ಯಕ್ಷ ಸ್ಥಾನಕ್ಕೆ ಯು.ಟಿ ಖಾದರ್ ನಾಮಪತ್ರ ಸಲ್ಲಿಸಲಿದ್ದು, ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ. ಮೇ 24 ರಂದು ವಿಧಾನಸಭಾಧ್ಯಕ್ಷರ ಆಯ್ಕೆ ನಡೆಯಲಿದೆ. ಮಂಗಳವಾರ ಮಧ್ಯಾಹ್ನ 12ರ ಒಳಗೆ ಸ್ಪೀಕರ್ ಚುನಾವಣೆಗೆ ಸ್ಪರ್ಧಿಸುವವರು ನಾಮಪತ್ರ ಸಲ್ಲಿಸಬೇಕಾಗುತ್ತದೆ ಎಂದು ವಿಧಾನಸಭೆ ಬುಲೆಟಿನ್ ಹೊರಡಿಸಿದೆ.

ಸೋಮವಾರ ಆರಂಭವಾದ ನೂತನ ಸರ್ಕಾರದ ಮೊದಲ ಅಧಿವೇಶನದಲ್ಲಿ ಹಂಗಾಮಿ ಸ್ವೀಕರ್ ಆಗಿ ಕಾಂಗ್ರೆಸ್‌ನ ಹಿರಿಯ ಮುಖಂಡ ಆರ್‌.ವಿ ದೇಶಪಾಂಡೆ ಕಾರ್ಯ ನಿರ್ವಹಿಸಿದ್ದರು. 224 ಶಾಸಕರ ಪೈಕಿ 182 ಶಾಸಕರಿಗೆ ಪ್ರಮಾಣ ವಚನ ಸಹ ಬೋಧಿಸಿದರು. ಆದರೆ ಅವರು ತಮ್ಮ ಆರೋಗ್ಯ ಸಮಸ್ಯೆಯ ನೆಪ ಹೇಳಿ ಪೂರ್ಣಾವಧಿ ಸ್ಪೀಕರ್ ಆಗಲು ನಿರಾಕರಿಸಿದ್ದಾರೆ.

ಹಿರಿಯ ನಾಯಕ ಹಾಗೂ ಮಾಜಿ ಸಚಿವ ಎಚ್‌.ಕೆ ಪಾಟೀಲ್ ಅವರನ್ನು ಕೂಡ ಸ್ಪೀಕರ್ ಹುದ್ದೆಗೆ ಪಕ್ಷ ಪರಿಗಣಿಸಿತ್ತು ಕೇಳಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿರುವ ಆಳಂದ ಶಾಸಕ ಬಿ ಆರ್ ಪಾಟೀಲ್ ಅವರನ್ನೂ ಸಂಪರ್ಕಿಸಲಾಗಿತ್ತು. ಮಾಜಿ ಸಚಿವ ಟಿ ಬಿ ಜಯಚಂದ್ರ, ಬಸವರಾಜ ರಾಯರೆಡ್ಡಿ, ಮಧುಗಿರಿಯ ಶಾಸಕ ಕೆ ಎನ್ ರಾಜಣ್ಣ, ಮೊಳಕಾಲ್ಮೂರಿನ ಶಾಸಕ ಎನ್ ವೈ ಗೋಪಾಲಕೃಷ್ಣರವರು ಸಹ ಸ್ಪೀಕರ್ ಆಗಲು ನಿರಾಕರಿಸಿದ ಕಾರಣ ಕೊನೆಗೆ ಆ ಜವಾಬ್ದಾರಿ ಯು.ಟಿ ಖಾದರ್ ಹೆಗಲೇರಿದೆ.

ಸ್ಪೀಕರ್ ಸ್ಥಾನ ನಿರಾಕರಿಸುವುದಕ್ಕೆ ಕಾರಣ ಅವರೆಲ್ಲರೂ ಸಚಿವರಾಗಲು ಹಾತೊರೆಯುತ್ತಿರುವುದೇ ಆಗಿದೆ. ಗುರುವಾರದ ನಂತರ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, 50ರಷ್ಟು ಆಕಾಂಕ್ಷಿಗಳಿದ್ದಾರೆ ಎನ್ನಲಾಗಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸೋಮವಾರ ಸಂಜೆ ಬೆಂಗಳೂರಿಗೆ ಆಗಮಿಸಿದ್ದು, ಸ್ಪೀಕರ್ ಆಯ್ಕೆಯಲ್ಲಿ ಯು.ಟಿ ಖಾದರ್ ಮನವೊಲಿಸಲು ಸಫಲರಾಗಿದ್ದಾರೆ ಎನ್ನಲಾಗಿದೆ.

ಯು ಟಿ ಖಾದರ್ ವ್ಯಕ್ತಿ ಪರಿಚಯ

1969ರ ಅಕ್ಟೋಬರ್‌ 12ರಂದು ಜನಿಸಿದ ಯು ಟಿ ಅಬ್ದುಲ್ ಖಾದರ್ ಫರೀದ್ ಅವರ ತಂದೆ ಹೆಸರು ಯು ಟಿ ಫರೀದ್ ಮತ್ತು ತಾಯಿ ಯು ಟಿ ನಸೀಮಾ ಫರೀದ್ ಇವರು ಬಿ.ಎ ಎಲ್‌ಎಲ್‌ಬಿ ವಿದ್ಯಾರ್ಹತೆ ಹೊಂದಿದ್ದಾರೆ. ಯು ಟಿ ಖಾದರ್ ಅವರು ಪದವಿ ಪೂರ್ವ ಶಿಕ್ಷಣವನ್ನು ಮೂಡಬಿದಿರೆಯ ಮಹಾವೀರ ಕಾಲೇಜಿನಲ್ಲಿ ಕಲಿತು ನಂತರ ಎಸ್‌ಡಿಎಂ ಕಾಲೇಜಿನಲ್ಲಿ ಬಿ.ಎ ಎಲ್ಎಲ್‌ಬಿ ಪದವಿ ಶಿಕ್ಷಣ ಮುಗಿಸಿದರು.

1990ರಲ್ಲಿ ಎನ್‌ಎಸ್‌ಯುಐ ದಕ್ಷಿಣಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, 1994 ರಿಂದ 1999ರ ವರೆಗೆ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷರಾಗಿ, 1999 ರಿಂದ 2001ರ ವರೆಗೆ ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 2003 ರಲ್ಲಿ ಘಟಪ್ರಭದಲ್ಲಿ ನಡೆದ ರಾಷ್ಟ್ರ ಮಟ್ಟದ ಸೇವಾದಳ ತರಬೇತಿ ಶಿಬಿರದಲ್ಲಿ, 2004 ರಲ್ಲಿ ಹಿಮಾಚಲ ಪ್ರದೇಶದ ಕಂದಘಾಟ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಸೇವಾದಳ ತರಬೇತಿ ಶಿಬಿರದಲ್ಲಿ ಭಾಗವಹಿಸಿ 2005ರಲ್ಲಿ ಸೇವಾದಳದ ಹೆಚ್ಚುವರಿ ಮುಖ್ಯ ಸಲಹೆಗಾರರಾಗಿ ಆಯ್ಕೆಯಾಗಿದ್ದರು. ನಂತರ ಕೆಪಿಸಿಸಿ ಸದಸ್ಯರಾಗಿ 2008 ರಲ್ಲಿ ಕೆಪಿಸಿಸಿ ಕಾರ್ಯದರ್ಶಿಯಾಗಿ ಆಯ್ಕೆಯಾದರು.

2008 ರಲ್ಲಿ ತಮ್ಮ ತಂದೆಯ ನಿಧನದಿಂದ ತೆರವಾದ ಶಾಸಕ ಸ್ಥಾನಕ್ಕೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿ ನಂತರ 2008, 2013, 2018 ಹಾಗೂ 2023ರಲ್ಲಿ ಸತತ ಐದು ಬಾರಿ ಶಾಸಕರಾಗಿ ಆಯ್ಕೆಯಾದರು. ಅಲ್ಲದೆ ತಾವು ಶಾಸಕರಾಗಿದ್ದ 2008 ರಿಂದ 2013 ರ ಅವಧಿಯ ವಿಧಾನಸಭೆಯ ಅತ್ಯುತ್ತಮ ಕಾರ್ಯ ವೈಖರಿಗಾಗಿ ಸದನ ವೀರ ಹಾಗೂ ಶೈನಿಂಗ್ ಇಂಡಿಯಾ ಅವಾರ್ಡ್ ಪ್ರಶಸ್ತಿ ಗಳಿಸಿದರು.

2013ರ ಸಿದ್ದರಾಮಯ್ಯ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿ 2016ರ ತನಕ ಕಾರ್ಯ ನಿರ್ವಹಿಸಿದರು. ಈ ಅವಧಿಯಲ್ಲಿ ರಾಜ್ಯದಲ್ಲಿ ಗುಟ್ಕಾ ನಿಷೇಧ, ಬೈಕ್ ಅಂಬ್ಯುಲೆನ್ಸ್, 108, ಆರೋಗ್ಯಶ್ರೀ, ದಂತ ಭಾಗ್ಯ, ಸರ್ಕಾರಿ ತಾಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಘಟಕ, ಹರೀಶ್ ಸಾಂತ್ವನ ಯೋಜನೆ ಮುಂತಾದ ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೆ ತಂದು ಕೇಂದ್ರ ಸರ್ಕಾರ ನೀಡುವ ಉತ್ತಮ ಆರೋಗ್ಯ ಸಚಿವ ಪ್ರಶಸ್ತಿ ಕೂಡ ತನ್ನದಾಗಿಸಿ ಕೊಂಡಿದ್ದರು.

2016 ರಿಂದ 2018ರ ವರೆಗೆ ಆಹಾರ ಸಚಿವರಾಗಿ ಅಧಿಕಾರ ಸ್ವೀಕರಿಸಿ, ಬಡವರು ಪಡಿತರ ಚೀಟಿಗಾಗಿ ಸಲ್ಲಿಸಬೇಕಾಗಿದ್ದ 10 ರಿಂದ 13 ದಾಖಲೆಗಳನ್ನು ಕಡಿತಗೊಳಿಸಿ ಕೇವಲ ಆಧಾರ್ ಕಾರ್ಡ್ ಮೂಲಕ ಅರ್ಜಿ ಸಲ್ಲಿಸಿ ಮನೆ ಬಾಗಿಲಿಗೆ ರೇಷನ್ ಕಾರ್ಡ್ ತಲುಪಿಸುವ ಯೋಜನೆಗೆ ಚಾಲನೆ ನೀಡಿದರು. ಬಿಪಿಎಲ್ ಕಾರ್ಡ್ ಪಡೆಯಲು ನಿಗದಿಪಡಿಸಿದ್ದ ಆದಾಯ ಮಿತಿಯನ್ನು ಕಡಿತಗೊಳಿಸಿ ಬಿಪಿಎಲ್ ಕಾರ್ಡ್ ನಿಂದ ವಂಚಿತರಾಗಿದ್ದ ಲಕ್ಷಾಂತರ ಮಂದಿ ರೇಷನ್ ಕಾರ್ಡ್ ಪಡೆಯಲು ನೆರವಾದರು.

2018 ರ ಮೈತ್ರಿ ಸರ್ಕಾರದಲ್ಲಿ ನಗರಾಭಿವೃದ್ದಿ ಮತ್ತು ವಸತಿ ಸಚಿವರಾಗಿ ಅಧಿಕಾರ ಸ್ವೀಕರಿಸಿ ಮಂಗಳೂರು ಸ್ಮಾರ್ಟ್ ಸಿಟಿ ಸಹಿತ ಅನೇಕ ಯೋಜನೆಗಳನ್ನು ಪರಿಚಯಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ವಸತಿ ನಿಗಮದ ಅಧ್ಯಕ್ಷರಾಗಿ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾಗಿ, ರಾಜೀವ್ ಗಾಂಧಿ ಹೌಸಿಂಗ್ ಬೋರ್ಡ್ ನ ಅಧ್ಯಕ್ಷರಾಗಿ, ಕರ್ನಾಟಕ ಕೊಳಗೇರಿ ಮಂಡಳಿಯ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. 2021 ರಲ್ಲಿ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕರಾಗಿ ಆಯ್ಕೆಯಾಗಿ 2023ರ ವರೆಗೆ ಕಾರ್ಯ ನಿರ್ವಹಿಸಿದರು.

ಇದನ್ನೂ ಓದಿ: ನಿರಾಳತೆ ನೀಡಿದ ನಿಟ್ಟುಸಿರಿನ ನಂತರ ಜೊತೆಗೂಡಿ ಮಾಡಬೇಕಾದ್ದು ಬಹಳ ಇದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...