Homeಮುಖಪುಟಪ್ರಧಾನಿಯ ಪದವಿ ಪ್ರಕರಣ: ಮಾನನಷ್ಟ ಮೊಕದ್ದಮೆಯಲ್ಲಿ ಕೇಜ್ರಿವಾಲ್, ಎಎಪಿ ಸಂಸದನಿಗೆ ಸಮನ್ಸ್

ಪ್ರಧಾನಿಯ ಪದವಿ ಪ್ರಕರಣ: ಮಾನನಷ್ಟ ಮೊಕದ್ದಮೆಯಲ್ಲಿ ಕೇಜ್ರಿವಾಲ್, ಎಎಪಿ ಸಂಸದನಿಗೆ ಸಮನ್ಸ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಗೆ ಸಂಬಂಧಿಸಿದಂತೆ ಗುಜರಾತ್ ವಿಶ್ವವಿದ್ಯಾಲಯ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜಿವಾಲ್‌, ಎಎಪಿ ರಾಜ್ಯಸಭೆ ಸದಸ್ಯ ಸಂಜಯ್ ಸಿಂಗ್ ಅವರಿಗೆ ಸ್ಥಳೀಯ ಕೋರ್ಟ್ ಮಂಗಳವಾರ ಸಮನ್ಸ್ ಜಾರಿ ಮಾಡಿದೆ.

ಜೂನ್ 7ರಂದು ವಿಚಾರಣೆಗೆ ಹಾಜರಾಗಬೇಕು ಎಂದು ಸಮನ್ಸ್‌ನಲ್ಲಿ ಸೂಚಿಸಿದೆ. ಪ್ರಧಾನಿ ಮೋದಿ ಅವರ ಶೈಕ್ಷಣಿಕ ವಿದ್ಯಾರ್ಹತೆ ಕುರಿತು ಇಬ್ಬರ ಹೇಳಿಕೆಗೆ ಸಂಬಂಧಿಸಿ ಗುಜರಾತ್ ವಿಶ್ವವಿದ್ಯಾಲಯವು ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲಿಸಿತ್ತು.

ಈ ಹಿಂದೆ ಮೇ 23 ರಂದು ಇಬ್ಬರೂ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿ ಸಮನ್ಸ್‌ ನೀಡಿದ್ದರೂ ಕೂಡ ಯಾರೊಬ್ಬರೂ ಹಾಜರಾಗಿರಲಿಲ್ಲ ಎಂದು ದೂರದಾರರ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಆ ನಂತರ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಸ್‌ಜೆ ಪಾಂಚಾಲ್ ಅವರ ನ್ಯಾಯಾಲಯವು ಕೇಜ್ರಿವಾಲ್ ಮತ್ತು ಸಿಂಗ್‌ಗೆ ಸಮನ್ಸ್ ನೀಡಿತು.

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಯ ವಿಚಾರವಾಗಿ ಗುಜರಾತ್ ವಿಶ್ವವಿದ್ಯಾಲಯದ ವಿರುದ್ಧ ಕೇಜ್ರಿವಾಲ್ ಅವರು “ವ್ಯಂಗ್ಯ” ಮತ್ತು “ಅವಹೇಳನಕಾರಿ” ಹೇಳಿಕೆ ನೀಡಿದ್ದರು. ಅವರ ಹೇಳಿಕೆಗಳಿಗಾಗಿ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಜಯೇಶ್ ಚೋವಾಟಿಯಾ ಅವರ ನ್ಯಾಯಾಲಯವು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸಮನ್ಸ್ ಜಾರಿ ಮಾಡಿತ್ತು.

ಇದನ್ನೂ ಓದಿ: ಮೋದಿ ಪದವಿ ವಿಚಾರ: ಮಾನಹಾನಿ ಪ್ರಕರಣದಲ್ಲಿ ಕೇಜ್ರಿವಾಲ್‌, ಸಂಜಯ್ ಸಿಂಗ್‌ಗೆ ಗುಜರಾತ್ ಕೋಟ್‌ ಸಮನ್ಸ್

ಅರವಿಂದ್ ಕೇಜ್ರಿವಾಲ್ ಮತ್ತು ಸಂಜಯ್ ಸಿಂಗ್ ಅವರಿಗೆ ನ್ಯಾಯಾಲಯ ನೀಡಿರುವ ಸಮನ್ಸ್ ಇನ್ನೂ ಬಂದಿಲ್ಲ ಎಂದು ಗುಜರಾತ್‌ನ ಎಎಪಿಯ ಕಾನೂನು ಘಟಕದ ಮುಖ್ಯಸ್ಥ ಪ್ರಣವ್ ಠಕ್ಕರ್ ಸೋಮವಾರ ಹೇಳಿದ್ದಾರೆ.

ಗುಜರಾತ್‌ನ ಎಎಪಿ ಕಾನೂನು ವಿಭಾಗದ ಮುಖ್ಯಸ್ಥ ಪ್ರಣವ್ ಠಕ್ಕರ್ ಅವರು, ಕೋರ್ಟ್ ಜಾರಿಮಾಡಿದ್ದ ಸಮನ್ಸ್ ಅನ್ನು ಇಬ್ಬರೂ ಮುಖಂಡರು ಸ್ವೀಕರಿಸಬೇಕಾಗಿದೆ ಎಂದರು. ಗುಜರಾತ್ ವಿಶ್ವವಿದ್ಯಾಲಯ ಪ್ರತಿನಿಧಿಸಿದ್ದ ವಕೀಲ ಅಮಿತ್ ನಾಯರ್‌, ನೂತನ ನ್ಯಾಯಾಧೀಶರಿಗೆ ಪ್ರಕರಣದ ಹಿನ್ನೆಲೆ ಮತ್ತು ಹಿಂದೆ ಸಮನ್ಸ್ ಜಾರಿಯಾಗಿದ್ದನ್ನು ವಿವರಿಸಿದರು.

ಪ್ರಕರಣದ ಹಿನ್ನೆಲೆ

ಪ್ರಧಾನಿ ಮೋದಿ ಅವರ ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿ ವಿಶ್ವವಿದ್ಯಾಲಯದ ವಿರುದ್ಧ ವ್ಯಂಗ್ಯ, ಮಾನಹಾನಿಕರ ಹೇಳಿಕೆ ನೀಡಲಾಗಿದೆ ಎಂದು ಆರೋಪಿಸಿ ಅರವಿಂದ ಕೇಜಿವಾಲ್‌ ಮತ್ತು ಸಂಜಯ್ ಸಿಂಗ್ ವಿರುದ್ಧ ಕ್ರಿಮಿನಲ್‌ ಮಾನಹಾನಿ ಪ್ರಕರಣ ದಾಖಲಿಸಲಾಗಿತ್ತು.

ಕೇಜ್ರಿವಾಲ್ ಅವರು ಪತ್ರಿಕಾಗೋಷ್ಠಿಗಳಲ್ಲಿ ಮತ್ತು ಟ್ವಿಟರ್ ಹ್ಯಾಂಡಲ್‌ಗಳಲ್ಲಿ ಮೋದಿ ಪದವಿಯ ಬಗ್ಗೆ ವಿಶ್ವವಿದ್ಯಾಲಯವನ್ನು ಗುರಿಯಾಗಿಸಿಕೊಂಡು “ಮಾನಹಾನಿಕರ” ಹೇಳಿಕೆಗಳನ್ನು ನೀಡಿದ್ದರು. ವಿಶ್ವವಿದ್ಯಾನಿಲಯವನ್ನು ಗುರಿಯಾಗಿಸಿಕೊಂಡು ಅವರ ಹೇಳಿಕೆಗಳು ಮಾನಹಾನಿಕರ ಮತ್ತು ಸಾರ್ವಜನಿಕ ಸಂಸ್ಥೆಯ ಪ್ರತಿಷ್ಠೆಗೆ ಧಕ್ಕೆ ತಂದಿವೆ ಎಂದು ಆರೋಪಿಸಿದ್ದಾರೆ.

”ಪದವಿ ಇದ್ದರೆ ಮತ್ತು ಅದು ನಿಜವಾಗಿದ್ದರೆ, ಅದನ್ನು ಏಕೆ ನೀಡುತ್ತಿಲ್ಲ? ಅವರು ಪದವಿಯನ್ನು ನೀಡುತ್ತಿಲ್ಲ ಏಕೆಂದರೆ ಅದು ನಕಲಿಯಾಗಿರಬಹುದು.. ಮತ್ತು ಒಂದು ವೇಳೆ ಪ್ರಧಾನ ಮಂತ್ರಿಗಳು ದೆಹಲಿ ವಿಶ್ವವಿದ್ಯಾಲಯ ಮತ್ತು ಗುಜರಾತ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿದ್ದರೆ, ಆನಂತರ ಗುಜರಾತ್ ವಿಶ್ವವಿದ್ಯಾಲಯವು ತನ್ನ ವಿದ್ಯಾರ್ಥಿ ದೇಶದ ಪ್ರಧಾನಿಯಾದುದನ್ನು ಆಚರಿಸಬೇಕಿತ್ತಲ್ಲವೇ? ಎಂದು ಕೇಜ್ರಿವಾಲ್‌ ಅವರ ಹೇಳಿಕೆಗಳನ್ನು ದೂರುದಾರರು ಉಲ್ಲೇಖಿಸಿದ್ದಾರೆ.

”ಅವರು ( ಗುಜರಾತ್ ವಿಶ್ವವಿದ್ಯಾಲಯ) ಪ್ರಧಾನಿಯ ನಕಲಿ ಪದವಿಯನ್ನು ಅಸಲಿ ಎಂದು ಸಾಬೀತುಪಡಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಸಿಂಗ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...