Homeಮುಖಪುಟದ.ಆಫ್ರಿಕಾ, ನಮೀಬಿಯಾದಿಂದ ಭಾರತಕ್ಕೆ ಸ್ಥಳಾಂತರಿಸಿದ್ದ ಚೀತಾ ಮರಿ ಸಾವು; 2 ತಿಂಗಳೊಳಗೆ 4 ಚೀತಾಗಳ ಸಾವು

ದ.ಆಫ್ರಿಕಾ, ನಮೀಬಿಯಾದಿಂದ ಭಾರತಕ್ಕೆ ಸ್ಥಳಾಂತರಿಸಿದ್ದ ಚೀತಾ ಮರಿ ಸಾವು; 2 ತಿಂಗಳೊಳಗೆ 4 ಚೀತಾಗಳ ಸಾವು

- Advertisement -
- Advertisement -

ಮಂಗಳವಾರ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಎರಡು ತಿಂಗಳ ಚೀತಾ ಮರಿ ಸಾವನ್ನಪ್ಪಿದೆ ಎಂದು ವನ್ಯಜೀವಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜ್ವಾಲಾ ಎಂಬ ಹೆಣ್ಣು ಚೀತಾಗೆ ಜನಿಸಿದ ನಾಲ್ಕು ಮರಿಗಳಲ್ಲಿ ಒಂದು ಮರಿ ಸಾವನ್ನಪ್ಪಿದೆ.ಇದು ದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾದಿಂದ ಭಾರತಕ್ಕೆ ಸ್ಥಳಾಂತರಗೊಂಡ 20 ಚೀತಾಗಳಲ್ಲಿ ಒಂದಾಗಿದೆ.

ಮರಿಯ ಸಾವಿನೊಂದಿಗೆ ಉದ್ಯಾನವನದಲ್ಲಿ ಎರಡು ತಿಂಗಳೊಳಗೆ ನಾಲ್ಕು ಚೀತಾಗಳು ಸಾವನ್ನಪ್ಪಿವೆ. ಮೊದಲ ಚೀತಾ ಸಶಾ ಮಾರ್ಚ್ 27 ರಂದು ಮೂತ್ರಪಿಂಡದ ಕಾಯಿಲೆಯಿಂದ ಸಾವನ್ನಪ್ಪಿತ್ತು. ಎರಡನೇ ಚೀತಾ ಉದಯ್ ಏಪ್ರಿಲ್ 24 ರಂದು ಕಾರ್ಡಿಯೋ-ಪಲ್ಮನರಿ ವೈಫಲ್ಯದಿಂದ ಸಾವನ್ನಪ್ಪಿತು. ಮೂರನೇ ಚೀತಾ ದಕ್ಷ ಮೇ 9 ರಂದು ಸಂಯೋಗದ ಪ್ರಯತ್ನದಲ್ಲಿ ಸಾವನ್ನಪ್ಪಿತು.

ಈ ಬಗ್ಗೆ ಮಂಗಳವಾರ ಮಾಹಿತಿ ನೀಡಿದ ವನ್ಯಜೀವಿ ಅಧಿಕಾರಿಗಳು, ”ಜ್ವಾಲಾ ತನ್ನ ಎಲ್ಲಾ ಮರಿಗಳೊಂದಿಗೆ  ಒಂದು ಸ್ಥಾಳದಲ್ಲಿ ಕಾಣಿಸಿಕೊಂಡಿದ್ದಾಳೆ. ಆದರೆ, ಆನಂತರ ಜ್ವಾಲಾ ನಡೆಯಲು ಪ್ರಾರಂಭಿಸಿದಾಗ, ನಾಲ್ಕನೇ ಮರಿ ಅದರ ಸ್ಥಳದಲ್ಲಿಯೇ ಮಲಗಿತ್ತು” ಎಂದು ಅವರು ಹೇಳಿದರು.

”ಸ್ವಲ್ಪ ಸಮಯದ ನಂತರ, ನಾಲ್ಕನೇ ಮರಿಯನ್ನು ಗಮಣಿಸಲಾಯಿತು. ಈ ಮರಿಯು ಎದ್ದೇಳಲು ಸಾಧ್ಯವಾಗದೆ ನೆಲದ ಮೇಲೆ ಬಿದ್ದಿರುವುದು ಕಂಡುಬಂದಿತು ಮತ್ತು ಮೇಲ್ವಿಚಾರಣಾ ತಂಡವನ್ನು ನೋಡಿದ ನಂತರ ತಲೆ ಎತ್ತಲು ಪ್ರಯತ್ನಿಸಿತು” ಎಂದು ಅರಣ್ಯ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

”ಈ ಚೀತಾ ಮರಿ ಸಾವಿಗೆ ಅಶಕ್ತತೆ ಕಾರಣವಾಗಿರಬಹುದು. ಎರಡು ತಿಂಗಳ ಮರಿಯು ತುಂಬಾ ದುರ್ಬಲವಾಗಿತ್ತು. ಸಾಮಾನ್ಯವಾಗಿ ದುರ್ಬಲ ಚೀತಾ ಮರಿಯು ಇತರ ಮರಿಗಳಿಗಿಂತ ಕಡಿಮೆ ಹಾಲು ಕುಡಿಯುತ್ತದೆ. ಇದರಿಂದಾಗಿ ಅದರ ಬದುಕುಳಿಯುವ ನಿರೀಕ್ಷೆ ಕಡಿಮೆಯಾಗುತ್ತದೆ ಮತ್ತು ಅಂತಿಮವಾಗಿ ಅಂತಹ ಮರಿಗಳು ದೀರ್ಘಕಾಲ ಬದುಕುವುದಿಲ್ಲ” ಎಂದು ಇಲಾಖೆ ಹೇಳಿರುವುದಾಗಿ ಹಿಂದೂ ವರದಿ ಮಾಡಿದೆ.

ಆಫ್ರಿಕಾದ ಚೀತಾಗಳು ಕಾಡಿನಲ್ಲಿ ವಾಸಿಸುವಾಗ ಚಿರತೆ ಮರಿಗಳು 10% ರಷ್ಟು ಬದುಕುಳಿಯುವ ಪ್ರಮಾಣವನ್ನು ಹೊಂದಿವೆ. 10 ಚೀತಾ ಮರಿಗಳಲ್ಲಿ 1 ಮಾತ್ರ ಕಾಡಿನಲ್ಲಿ ಪ್ರೌಢಾವಸ್ಥೆಗೆ ಬರುತ್ತವೆ” ಎಂದು ಅರಣ್ಯ ಅಧಿಕಾರಿಯೊಬ್ಬರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಕಳೆದ ವಾರ, ಸುಪ್ರೀಂ ಕೋರ್ಟ್ ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು ಮತ್ತು ಚೀತಾಗಳು ಪರ್ಯಾಯ ಸ್ಥಳಕ್ಕೆ ಸ್ಥಳಾಂತರಿಸಲು ಕೇಂದ್ರ ಸರ್ಕಾರಕ್ಕೆ ಹೇಳಿತು. ಸಾವಿನ ಬಗ್ಗೆ ತಜ್ಞರ ಅಭಿಪ್ರಾಯಗಳು ಮತ್ತು ಸುದ್ದಿ ಲೇಖನಗಳನ್ನು ಉಲ್ಲೇಖಿಸಿದ ನ್ಯಾಯಾಲಯ, ಕುನೋ ರಾಷ್ಟ್ರೀಯ ಉದ್ಯಾನವನವು ಹಲವಾರು ಚೀತಾಗಳಿಗೆ ಸ್ಥಳಾವಕಾಶ ಕಲ್ಪಿಸಲು ಸಾಕಾಗುವುದಿಲ್ಲ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...