Homeಮುಖಪುಟಮಣಿಪುರ; ಮತ್ತೆ ಉದ್ವಿಗ್ನತೆ, ಗುಂಡಿನ ದಾಳಿಗೆ ವ್ಯಕ್ತಿ ಬಲಿ

ಮಣಿಪುರ; ಮತ್ತೆ ಉದ್ವಿಗ್ನತೆ, ಗುಂಡಿನ ದಾಳಿಗೆ ವ್ಯಕ್ತಿ ಬಲಿ

- Advertisement -
- Advertisement -

ಮಣಿಪುರದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿದ್ದು, ಬುಧವಾರ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಬಿಷ್ಣುಪುರ್ ಜಿಲ್ಲೆಯ ತಮ್ನಾಪೋಕ್ಪಿ ತಪ್ಪಲಿನಲ್ಲಿ ವ್ಯಕ್ತಿಯೊಬ್ಬರು ಗುಂಡಿಗೆ ಬಲಿಯಾಗಿದ್ದಾರೆ.

ಬುಧವಾರ ಬೆಳಿಗ್ಗೆ ಉಗ್ರರು ಗುಂಡಿನ ದಾಳಿ ನಡೆಸಿದಾಗ ವ್ಯಕ್ತಿ ಬಲಿಯಾಗಿದ್ದಾನೆ. ಗಾಯಗೊಂಡಿದ್ದ ಅವರನ್ನು ಇಂಫಾಲ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲಿಯೇ ಸಾವನ್ನಪ್ಪಿದ್ದಾರೆ.

ಹತ್ಯೆಗೀಡಾದ ವ್ಯಕ್ತಿಯನ್ನು ಚುರಾಚಂದ್‌ಪುರದ ಥೆಂಗ್ರಾ ಲೈರಾಕ್‌ನ ತೋಯಿಜಮ್ ಚಂದ್ರಮಣಿ ಸಿಂಗ್ ಎಂದು ಗುರುತಿಸಲಾಗಿದೆ. ಅವರು ಮೊಯಿರಾಂಗ್‌ನ ನಿರಾಶ್ರಿತ ಶಿಬಿರದಲ್ಲಿ ತಂಗಿದ್ದರು ಎಂದು ವರದಿಯಾಗಿದೆ.

ಬಿಷ್ಣುಪುರ್ ಜಿಲ್ಲೆಯಲ್ಲೂ ಉದ್ವಿಗ್ನತೆ ಭುಗಿಲೆದ್ದಿದೆ. ರಾಜ್ಯ ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದಾಸ್ ಕೊಂತೌಜಮ್ ಅವರ ಮನೆಯನ್ನು ಧ್ವಂಸಗೊಳಿಸಲಾಗಿದೆ.

ಬುಧವಾರ ಸಂಜೆ ನಿಂಗ್‌ತೌಖೋಂಗ್ ಪಟ್ಟಣದಲ್ಲಿರುವ ಸಚಿವರ ನಿವಾಸಕ್ಕೆ ಗುಂಪೊಂದು ನುಗ್ಗಿತು. ಘಟನೆ ನಡೆದಾಗ ಸ್ವತಃ ಸಚಿವರಾಗಲೀ ಅವರ ಕುಟುಂಬದವರಾಗಲೀ ಮನೆಯಲ್ಲಿ ಇರಲಿಲ್ಲ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ತಿಳಿಸಿದೆ.

ಬಿಷ್ಣುಪುರ್ ಜಿಲ್ಲೆಯಲ್ಲಿ ಮತ್ತೆ ಅನಿರ್ದಿಷ್ಟ ಕರ್ಫ್ಯೂ ವಿಧಿಸಲಾಗಿದೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ. ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಕರ್ಫ್ಯೂವನ್ನೂ ನಾಲ್ಕು ಗಂಟೆಗಳ ಕಾಲ ಮುಂದುವರಿಸಲಾಗಿದೆ.

ಎಸ್‌ಟಿ ಮೀಸಲಾತಿ ವಿಚಾರವಾಗಿ ಮಣಿಪುರ ಹೊತ್ತಿ ಉರಿಯುತ್ತಿದೆ. ಮೇ 3 ರಂದು ಕುಕಿಗಳು ಮತ್ತು ಮೈಥೇಯಿ ನಡುವಿನ ಜನಾಂಗೀಯ ಹಿಂಸಾಚಾರ ಉಲ್ಬಣಗೊಂಡ ನಂತರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್‌ಗೆ ಸಲಹೆ ನೀಡಲು ಮಣಿಪುರಕ್ಕೆ ಕಳುಹಿಸಲಾದ ಮಾಜಿ ಸಿಆರ್‌ಪಿಎಫ್ ಡಿಜಿ ಕುಲ್ದೀಪ್ ಸಿಂಗ್ ಪ್ರತಿಕ್ರಿಯಿಸಿದ್ದು, “ಇತ್ತೀಚಿನ ಹಿಂಸಾಚಾರವು ಮಂಗಳವಾರ ಮತ್ತು ಬುಧವಾರ ರಾತ್ರಿ ಪ್ರಾರಂಭವಾಯಿತು” ಎಂದು ಮಾಹಿತಿ ನೀಡಿದ್ದಾರೆ.

ಬಿಷ್ಣುಪುರ್ ಜಿಲ್ಲೆಯ ಟ್ರೋಂಗ್ಲಾಬಿ ಪ್ರದೇಶದಲ್ಲಿ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಎರಡೂ ಸಮುದಾಯಗಳಿಗೆ ಸೇರಿದ ಹೆಚ್ಚಿನ ಮನೆಗಳು ಬೆಂಕಿಗಾಹುತಿಯಾಗಿವೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

“ಬೆಳಿಗ್ಗೆ 9.30ರ ಸುಮಾರಿಗೆ ಬಿಷ್ಣುಪುರದ ಟ್ರೋಂಗ್ಲಾಬಿ ಪ್ರದೇಶದಲ್ಲಿ ಜನರ ಗುಂಪಿನ ಮೇಲೆ ಉಗ್ರಗಾಮಿಗಳು ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆದಲ್ಲೇ ಮೃತಪಟ್ಟಿದ್ದಾರೆ.”

ಕುಕಿ ಪ್ರಾಬಲ್ಯದ ಕಾಂಗ್‌ಪೋಕ್ಪಿ ಜಿಲ್ಲೆಯ ಗಡಿಯಲ್ಲಿರುವ ಇಂಫಾಲ್ ವೆಸ್ಟ್‌ನ ಸಿಂಗ್ಡಾದಲ್ಲಿ, ಶಂಕಿತ ಉಗ್ರಗಾಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಮೈಥೇಯಿ ನಿವಾಸಿಯೊಬ್ಬರು ಗಾಯಗೊಂಡಿದ್ದಾರೆ.

ಮೇ 3ರಂದು ರಾಜ್ಯದಲ್ಲಿ ಹಿಂಸಾತ್ಮಕ ಘರ್ಷಣೆಗಳು ಆರಂಭವಾದವು. 70 ಕ್ಕೂ ಹೆಚ್ಚು ಜನರು ಈ ಹಿಂಸಾಚಾರದಲ್ಲಿ ಈವರೆಗೆ ಹತರಾಗಿದ್ದಾರೆ, ಸುಮಾರು 200 ಜನರು ಗಾಯಗೊಂಡಿದ್ದಾರೆ ಮತ್ತು 40,000ಕ್ಕೂ ಹೆಚ್ಚು ಜನರನ್ನು ಸ್ಥಳಾಂತರ ಮಾಡಲಾಗಿದೆ.

ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಮೈಥೇಯಿ ಸಮುದಾಯ ಬೇಡಿಕೆ ಇಟ್ಟಿತ್ತು. ಇದನ್ನು ಗೌಹಾಟಿ ಹೈಕೋರ್ಟ್ ಬೆಂಬಲಿಸಿತು. ಆನಂತರದಲ್ಲಿ ಉದ್ವಿಗ್ನತೆ ಉಂಟಾಗಿದೆ.

ಮಣಿಪುರದ ಗುಡ್ಡಗಾಡು ಬುಡಕಟ್ಟು ಜನಾಂಗದವರು ಬಹುಸಂಖ್ಯಾತ ಮೈಥೇಯಿ ಸಮುದಾಯಕ್ಕೆ ಎಸ್‌ಟಿ ಸ್ಥಾನಮಾನವನ್ನು ನೀಡುವುದು ಅನ್ಯಾಯವೆಂದು ಭಾವಿಸಿದ್ದಾರೆ. ಇದರಿಂದಾಗಿ ಉದ್ಯೋಗಗಳು ಮತ್ತು ಶಿಕ್ಷಣದ ಅವರ ಹಕ್ಕು ಪಲ್ಲಟಗೊಳ್ಳುತ್ತದೆ ಎಂಬುದು ಕುಕಿ ಸಮುದಾಯದ ವಾದ.

ಪ್ರಸ್ತುತ ಸೇನೆ ಮತ್ತು ಅಸ್ಸಾಂ ರೈಫಲ್ಸ್‌ನ ಸುಮಾರು 10,000 ಸಿಬ್ಬಂದಿ, ಸಿಆರ್‌ಪಿಎಫ್ ಮತ್ತು ಗಡಿ ಭದ್ರತಾ ಪಡೆ ಬಿಎಸ್‌ಎಫ್‌ನ 7,000 ಸಿಬ್ಬಂದಿ ಮಣಿಪುರದಲ್ಲಿ ಇದ್ದಾರೆ.

ಇದನ್ನೂ ಓದಿರಿ: ಸಿದ್ದರಾಮಯ್ಯ ಹತ್ಯೆಗೆ ಕರೆ: ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಎಫ್‌ಐಆರ್‌

ದೆಹಲಿಯಲ್ಲಿರುವ ಕೇಂದ್ರ ಸಚಿವ ರಾಜ್‌ಕುಮಾರ್ ರಂಜನ್ ಸಿಂಗ್ ಅವರ ನಿವಾಸದಲ್ಲಿ ಮೈಥೇಯಿ ಮತ್ತು ಕುಕಿ ಎರಡೂ ಸಮುದಾಯಗಳ ಚಿಂತಕರು ಭೇಟಿಯಾಗಿ ಮಾತನಾಡಿರುವುದಾಗಿ ವರದಿಯಾಗಿದೆ. ಮಣಿಪುರದ ಏಕೈಕ ಸಂಸದ ಲೋರ್ಹೋ ಎಸ್. ಫೋಜ್ ಕೂಡ ಸಭೆಯಲ್ಲಿ ಪಾಲ್ಗೊಂಡರು ಎಂದು ಎನ್‌ಡಿಟಿವಿ ತಿಳಿಸಿದೆ.

“ಮೈಥೇಯಿ ಮತ್ತು ಕುಕಿ ಸಮುದಾಯಗಳ ತಲಾ ಹತ್ತು ಮಂದಿ ಚಿಂತಕರು ಇದ್ದರು. ಮಣಿಪುರದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ಹೇಗೆ ತರುವುದು ಮತ್ತು ಮುಂದಿನ ದಾರಿ ಹೇಗಿರಬೇಕು ಎಂದು ಚರ್ಚಿಸಿದ್ದಾರೆ.

ಮಣಿಪುರದ ಸಾವಿರಾರು ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ನಾಗರಿಕತೆಯ ಬಗ್ಗೆ ಚಿಂತಕರು ಮಾತನಾಡಿದ್ದಾರೆ. ಇದನ್ನು ಕಳೆದುಕೊಳ್ಳಲು ಬಿಡಬಾರದೆಂದು ಚಿಂತಿಸಿದ್ದಾರೆ” ಎಂದು ಸಭೆಯಲ್ಲಿದ್ದ ವ್ಯಕ್ತಿಯೊಬ್ಬರು ‘ಎನ್‌ಡಿಟಿವಿ’ಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...