Homeಮುಖಪುಟಧರಣಿ ಆರಂಭಿಸಿ ತಿಂಗಳು ಕಳೆದರು ಇನ್ನೂ ಸಿಗದ ನ್ಯಾಯ!: ಕುಸ್ತಿಪಟುಗಳ ಪ್ರತಿಭಟನೆಗೆ ವ್ಯಾಪಕ ಬೆಂಬಲ

ಧರಣಿ ಆರಂಭಿಸಿ ತಿಂಗಳು ಕಳೆದರು ಇನ್ನೂ ಸಿಗದ ನ್ಯಾಯ!: ಕುಸ್ತಿಪಟುಗಳ ಪ್ರತಿಭಟನೆಗೆ ವ್ಯಾಪಕ ಬೆಂಬಲ

- Advertisement -
- Advertisement -

ಕುಸ್ತಿಪಟುಗಳು ಧರಣಿ ಆರಂಭಿಸಿ ಒಂದು ತಿಂಗಳಿಗೂ ಹೆಚ್ಚು ಕಾಲ ಕಳೆದರೂ ಇನ್ನೂ ಅವರಿಗೆ ನ್ಯಾಯ ಸಿಕ್ಕಿಲ್ಲ. ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರವು ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ರಕ್ಷಿಸುವುದನ್ನು ಮುಂದುವರೆಸಿತ್ತಿದ್ದರೆ, ಮತ್ತೊಂದೆಡೆ, ಪ್ರತಿಭಟನಾಕಾರರಿಗೆ ವಿವಿಧ ವಲಯಗಳಿಂದ ಬೆಂಬಲ ವ್ಯಕ್ತವಾಗುತ್ತಿದೆ.

ಬೆಂಗಳೂರಿನಲ್ಲೂ ಪ್ರತಿಭಟನೆ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಭಾರತ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ, ಬುಧವಾರ ಬೆಂಗಳೂರಿನಲ್ಲಿ ವಿವಿಧ ಜಿಲ್ಲೆಗಳ 200 ವಿದ್ಯಾರ್ಥಿಗಳು ಜಮಾಯಿಸಿ ಕುಸ್ತಿಪಟುಗಳಿಗೆ ಒಗ್ಗಟ್ಟು ವ್ಯಕ್ತಪಡಿಸಿದರು.

ಎಐಡಿಎಸ್‌ಒ ಆಶ್ರಯದಲ್ಲಿ ಈ ಪ್ರತಿಭಟನೆ ನಡೆಯುತು. ಕಳೆದ 15 ದಿನಗಳಿಂದ ತಮ್ಮ ಜಿಲ್ಲೆಗಳಲ್ಲಿ ಸಣ್ಣ ಗುಂಪುಗಳು ಕ್ಯಾಂಡಲ್‌ಲೈಟ್ ಜಾಗರಣೆ ನಡೆಸಿದರೆ, ವಿದ್ಯಾರ್ಥಿಗಳು ಈ ಬಾರಿ ತಮ್ಮ ತರಗತಿಗಳನ್ನು ಬಹಿಷ್ಕರಿಸಿ ಕ್ರಿಡಾಪಟುಗಳಿಗೆ ಬೆಂಬಲದ ಪ್ರದರ್ಶನದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಹಾಜರಾಗಿದ್ದರು.

200 students from dists hold protest in support of women wrestlers

ಈ ವೇಳೆ ಮಾತನಾಡಿದ ಚಲನಚಿತ್ರ ನಿರ್ದೇಶಕ ಬಿ.ಸುರೇಶ ಅವರು, ”ಕ್ರೀಡಾ ಕ್ಷೇತ್ರದಿಂದ ಸಿನಿಮಾದವರೆಗೆ ಮಹಿಳೆಯರನ್ನು ಕೇವಲ ವಸ್ತುವಿನಂತೆ ನೋಡಲಾಗುತ್ತದೆ. ಈ ಪದ್ಧತಿ ಇಡೀ ಸಮಾಜಕ್ಕೆ ಅನಾರೋಗ್ಯಕರ” ಎಂದು ಹೇಳಿದರು.

ಜೆಎನ್‌ಯುನಲ್ಲೂ ಪ್ರತಿಭಟನೆ

ಕುಸ್ತಿಪಟುಗಳ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಸಿಂಗ್ ಬಂಧನಕ್ಕೆ ಒತ್ತಾಯಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರು, ಕುಸ್ತಿಪಟು ಸಾಕ್ಷಿ ಮಲಿಕ್ ಅವರ ಪ್ರತಿಭಟನೆಯಲ್ಲಿ ಭಾಗಿಯಾದರು.

ಈ ಪ್ರತಿಭಟನಾ ಮೆರವಣಿಗೆಯನ್ನು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಕ್ಕೂಟ (ಜೆಎನ್‌ಯುಎಸ್‌ಯು) ಮತ್ತು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ಶಿಕ್ಷಕರ ಸಂಘ (ಜೆಎನ್‌ಯುಟಿಎ) ಜಂಟಿಯಾಗಿ ಕ್ಯಾಂಪಸ್‌ನಲ್ಲಿ ಆಯೋಜಿಸಿದ್ದವು.

ಇದನ್ನೂ ಓದಿ: ನಾರ್ಕೋ ಪರೀಕ್ಷೆಗೆ ಒಳಗಾಗುತ್ತೇನೆ, ಆದರೆ ಒಂದು ಷರತ್ತು.. : ಬ್ರಿಜ್ ಭೂಷಣ್ ಶರಣ್ ಸಿಂಗ್

ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷೆ ಐಶೆ ಘೋಷ್ ಫೇಸ್‌ಬುಕ್ ಪೋಸ್ಟ್‌ನಲ್ಲಿ, ಇಂದು, ನೂರಾರು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಜೆಎನ್‌ಯುಎಸ್‌ಯು ಮತ್ತು ಜೆಎನ್‌ಯುಟಿಎ ಕ್ಯಾಂಪಸ್‌ನೊಳಗೆ ಆಯೋಜಿಸಿದ್ದ ಐಕಮತ್ಯ ಕೂಟದಲ್ಲಿ ಸೇರಿಕೊಂಡರು. ಸಾಕ್ಷಿ ಮಲಿಕ್ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ನಾಳೆ (ಮಂಗಳವಾರ) ಇಂಡಿಯಾ ಗೇಟ್‌ನಲ್ಲಿ ಕ್ಯಾಂಡಲ್‌ಲೈಟ್ ಜಾಗರಣೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

JNU students, teachers hold march in solidarity with protesting wrestlers, seek action against WFI chief - India Today

ಅಪ್ರಾಪ್ತ ವಯಸ್ಕ ಸೇರಿದಂತೆ ಏಳು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳು ಏಪ್ರಿಲ್ 23 ರಿಂದ ಇಲ್ಲಿನ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನಾ ನಿರತ ಕುಸ್ತಿಪಟುಗಳು ಮಂಗಳವಾರ ಜಂತರ್ ಮಂತರ್ ನಿಂದ ಇಂಡಿಯಾ ಗೇಟ್ ವರೆಗೆ ಕ್ಯಾಂಡಲ್ ಮೆರವಣಿಗೆ ನಡೆಸಲಿದ್ದಾರೆ.

ಖ್ಯಾತ ಚಿತ್ರನಟ ಕಮಲ್ ಹಾಸನ್‌ನಿಂದ ಬೆಂಬಲ

ಪ್ರತಿಭಟನೆಯ ಒಂದು ತಿಂಗಳು ಕಳೆದಿರುವ ಈ ಸಂದರ್ಭದಲ್ಲಿ ಕಮಲ್ ಹಾಸನ್ ಅವರು ಟ್ವಿಟ್ ಮಾಡಿದ್ದು, ”ಇಂದು ಕುಸ್ತಿ ಭ್ರಾತೃತ್ವದ ಕ್ರೀಡಾಪಟುಗಳ ಪ್ರತಿಭಟನೆಗೆ 1 ತಿಂಗಳಾಗಿದೆ. ರಾಷ್ಟ್ರೀಯ ಕೀರ್ತಿಗಾಗಿ ಹೋರಾಡುವ ಬದಲು ವೈಯಕ್ತಿಕ ಸುರಕ್ಷತೆಗಾಗಿ ಹೋರಾಡುವಂತೆ ಒತ್ತಾಯಿಸಿದ್ದೇವೆ. ಸಹ ಭಾರತೀಯರೇ, ನಮ್ಮ ಗಮನಕ್ಕೆ ಅರ್ಹರು, ನಮ್ಮ ರಾಷ್ಟ್ರೀಯ ಕ್ರೀಡಾ ಐಕಾನ್‌ಗಳು ಅಥವಾ ವ್ಯಾಪಕ ಅಪರಾಧ ಇತಿಹಾಸ ಹೊಂದಿರುವ ರಾಜಕಾರಣಿಯಾ? ಎಂದು ಪ್ರಶ್ನೆ ಮಾಡಿದ್ದಾರೆ.

ಕಮಲ್ ಹಾಸನ್ ಟ್ವೀಟ್ ಬೆನ್ನಲ್ಲೇ ಎಲ್ಲಾ ಕಡೆಯಿಂದ ಕಾಮೆಂಟ್‌ಗಳು ಬರತೊಡಗಿದವು. ಅವರಲ್ಲಿ ಒಬ್ಬ, ”ಬಹುತೇಕ ಬಾಲಿವುಡ್ ಕಲಾವಿದರು ಮತ್ತು ಸೆಲೆಬ್ರಿಟಿಗಳು ಈ ವಿಷಯದ ಬಗ್ಗೆ ಮೌನವಾಗಿದ್ದಾಗ, ನಮ್ಮ ರಾಷ್ಟ್ರೀಯ ಐಕಾನ್‌ಗಳನ್ನು ಅವರ ನ್ಯಾಯಕ್ಕಾಗಿ ಮುಂದೆ ಬಂದು ಬೆಂಬಲಿಸುವ ಏಕೈಕ ದೊಡ್ಡ ತಾರೆ #KH. #ಕಮಲ್ ಹಾಸನ್’, ಮತ್ತೊಬ್ಬರು, ‘ಧನ್ಯವಾದ ನಾಯಕರೇ. ನಮ್ಮ ರಾಷ್ಟ್ರೀಯ ಕ್ರೀಡಾ ಐಕಾನ್‌ಗಳು ಗಮನ ಮತ್ತು ನ್ಯಾಯಕ್ಕೆ ಅರ್ಹರಾಗಿದ್ದಾರೆ #IStandWithMyChampions #Wrestlers Protest.” ಎಂದು ಕಾಮೆಂಟ್ ಮಾಡಿದ್ದಾರೆ.

ಈ ಹಿಂದೆ ಪೂಜಾ ಭಟ್, ಸೋನು ಮುಂತಾದ ಸೆಲೆಬ್ರಿಟಿಗಳು ಬೆಂಬಲ ಸೂಚಿಸಿದ್ದರು. ಸೂದ್, ಗೌಹರ್ ಖಾನ್, ವಿದ್ಯುತ್ ಜಮ್ವಾಲ್ ಮತ್ತು ಸ್ವರಾ ಭಾಸ್ಕರ್ ಕುಸ್ತಿಪಟುಗಳನ್ನು ಬೆಂಬಲಿಸಿದರು.

NRC/CAA ಹಾಗೂ ರೈತರ ಬೃಹತ್ ಪ್ರತಿಭಟನೆಯಂತೆ ಈ ಪ್ರತಿಭಟನೆ ಸಾಗಬೇಕಿದೆ

ಈ ಹಿಂದೆ ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಅವರು ಕುಸ್ತಿಪಟುಗಳ ಪ್ರತಿಭಟನೆಯಲ್ಲಿ ಮಾತನಾಡಲು ನಿರಾಕರಿಸಲಾಗಿತ್ತು. ಏಕೆಂದರೆ ಈ ಪ್ರತಿಭಟನೆಯು ‘ರಾಜಕೀಯಗೊಳಿಸಲಾದರೆ’ ತಮಗೆ ನ್ಯಾಯ ಸಿಗುವುದಿಲ್ಲ ಎಂಬ ಭಯದಿಂದ ರಾಜಕೀಯ ನಾಯಕರನ್ನು ದೂರವಿಡಲಾಗಿತ್ತು. ಆದರೆ, ಈಗ ಕ್ರೀಡಾಪಟುಗಳು ತಮ್ಮ ಕಾರ್ಯತಂತ್ರವನ್ನು ಬದಲಾಯಿಸಿದ್ದಾರೆ. ನಮ್ಮ ಪ್ರತಿಭಟನೆಯನ್ನು ಬೆಂಬಲಿಸುವವ ಎಲ್ಲ ಪಕ್ಷಗಳಿಗೆ ಅfವಾಗತ ಎಂದು ಹೇಳಿದ್ದಾರೆ.

ಮುಂದುವರೆದು, ದೇಶದ ಎಲ್ಲ ನಾಗರಿಕರಿಗೆ ಹಾಗೂ ರೈತ ಸಂಘಟನೆಗಳ ಬೆಂಬಲವನ್ನೂ ಕೋರಿದ್ದರು. ಆ ನಂತರ ದೇಶದಲ್ಲಿನ ಕಾರ್ಮಿಕರು, ರೈತರು, ಮಹಿಳೆಯರು, ವಿದ್ಯಾರ್ಥಿಗಳು ಮತ್ತು ಯುವಕರನ್ನು ಪ್ರತಿನಿಧಿಸುವ ಹಲವಾರು ಸಂಸ್ಥೆಗಳು ಕುಸ್ತಿಪಟುಗಳಿಗೆ ನೀಡಿದ ಬೆಂಬಲವು ಅತ್ಯಂತ ಆಸಕ್ತಿದಾಯಕವಾಗಿದೆ. ಕುಸ್ತಿಪಟುಗಳೊಂದಿಗೆ ಹಲವು ಅಸಮಾಧನಗಳಿದ್ದರೂ ಕೂಡ ಈ ಪ್ರತಿಭಟನೆಯಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದಾರೆ.

ಬಿಜೆಪಿ ಸರ್ಕಾರದ ಸಂವಿಧಾನ ಮೇಲಿನ ದಾಳಿ ಮತ್ತು ರೈತರ ಮೇಲೆ ಹೇರಿದ ಕೃಷಿ ಕಾನೂನುಗಳ ವಿರುದ್ಧ ನಿರಂತರವಾಗಿ ನಡೆದ ಪಕ್ಷಾತೀತ ಚಳುವಳಿಗಳು ತುಲನಾತ್ಮಕವಾಗಿ ಯಶಸ್ವಿಯಾಗಿದೆ. NRC/CAA ವಿರುದ್ಧದ ಚಳುವಳಿ, ಮತ್ತು ಒಂದು ಕೃಷಿ ಕಾನೂನುಗಳು. ಈ ಎರಡೂ ಸಂದರ್ಭಗಳಲ್ಲಿ ರಾಜಕೀಯ/ಸೈದ್ಧಾಂತಿಕ ಸಂಘಟನೆಗಳ ಹೊರತಾಗಿ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ದೊಡ್ಡ ಪ್ರಮಾಣದ ಪ್ರತಿಭಟನೆಗಳು ನಡೆದವು.

ಶಾಹೀನ್ ಬಾಗ್‌ನ ಮುಸ್ಲಿಂ ಮಹಿಳೆಯರ ಹೋರಾಟ ಮತ್ತು ವಿವಿಧ ಪ್ರತಿಭಟನಾ ಸ್ಥಳಗಳಲ್ಲಿ ಸಿಖ್ ಮಹಿಳಾ ರೈತರ ಪ್ರತಿಭಟನೆಯ ರೀತಿ ಅಂತರ್ಗತವಾಗಿ ಉಳಿದಿವೆ. ಅವರ ಆ ಕಾರ್ಯಕ್ಷಮತೆಯಿಂದ ಪ್ರತಿಭಟನೆ ಯಶಸ್ವಿಯಾಗಲು ಕಾರಣವಾದವು. ಈಗ ನಡೆಯುತ್ತಿರುವ ಕುಸ್ತಿಪಟುಗಳ ಪ್ರತಿಭಟನೆ ಮತ್ತು ಅದರ ಸಜ್ಜುಗೊಳಿಸುವ ತಂತ್ರವನ್ನು ಅದೇ ಮಾದರಿಯಲ್ಲಿ ನಡೆಯಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...