Homeಮುಖಪುಟಸುಪ್ರೀಂ ತೀರ್ಪು ವಿರೋಧಿಸಿ ಕೇಂದ್ರ ಸುಗ್ರೀವಾಜ್ಞೆ; ಎಎಪಿ ಪರ ನಿಲ್ಲುವುದೇ ಕಾಂಗ್ರೆಸ್? ಮುಖಂಡರ ಸಭೆಗೆ ಖರ್ಗೆ...

ಸುಪ್ರೀಂ ತೀರ್ಪು ವಿರೋಧಿಸಿ ಕೇಂದ್ರ ಸುಗ್ರೀವಾಜ್ಞೆ; ಎಎಪಿ ಪರ ನಿಲ್ಲುವುದೇ ಕಾಂಗ್ರೆಸ್? ಮುಖಂಡರ ಸಭೆಗೆ ಖರ್ಗೆ ಕರೆ

- Advertisement -
- Advertisement -

“ಆಡಳಿತ ಸೇವೆಗಳು ರಾಜ್ಯ ಸರ್ಕಾರದ ನಿಯಂತ್ರಣದಲ್ಲಿ ಇರಬೇಕು” ಎಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ನಿರಾಕರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸುಗ್ರೀವಾಜ್ಞೆಯನ್ನು ಹೊರಡಿಸಿದ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್‌ ವಿರೋಧ ಪಕ್ಷಗಳ ಬೆಂಬಲಕ್ಕೆ ಮೊರೆ ಹೋಗಿದ್ದಾರೆ.

“ಕೇಂದ್ರದ ಸುಗ್ರೀವಾಜ್ಞೆ ವಿರೋಧಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬೆಂಬಲಿಸುವ ಅಗತ್ಯವಿದೆಯೇ?” ಎಂದು ಚರ್ಚಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೇ 29 ರಂದು ದೆಹಲಿಯಲ್ಲಿ ಪಕ್ಷದ ಮುಖಂಡರ ಸಭೆ ಕರೆದಿದ್ದಾರೆ.

ಈ ಬಗ್ಗೆ ಚರ್ಚಿಸಲು ಖರ್ಗೆ ಅವರು ಪಕ್ಷದ ಮುಖಂಡರ ಸಭೆಯನ್ನು ಪಕ್ಷದ ಮೇ 29ರಂದು ಬೆಳಿಗ್ಗೆ 10.30ಕ್ಕೆ ಆಯೋಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಅವರು ಸುಗ್ರೀವಾಜ್ಞೆ ವಿಚಾರವಾಗಿ ಖರ್ಗೆ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಈ ಸಭೆ ಮುನ್ನೆಲೆಗೆ ಬಂದಿದೆ.

ಶುಕ್ರವಾರ ಟ್ವೀಟ್ ಮಾಡಿರುವ ಕೇಜ್ರಿವಾಲ್, “ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಅಪ್ರಜಾಸತ್ತಾತ್ಮಕ, ಅಸಾಂವಿಧಾನಿಕ ಸುಗ್ರೀವಾಜ್ಞೆಯ ವಿರುದ್ಧ ಸಂಸತ್ತಿನಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲ ಪಡೆಯಲು ಮತ್ತು ಫೆಡರಲ್ ರಚನೆಯ ಮೇಲಿನ ದಾಳಿಯ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಸಮಯ ಕೋರಿರುವೆ” ಎಂದು ತಿಳಿಸಿದ್ದಾರೆ.

ಎಎಪಿ ನಾಯಕರ ಮನವಿಯ ನಂತರ, ಕಾಂಗ್ರೆಸ್ ಮೂಲಗಳು ಪ್ರತಿಕ್ರಿಯಿಸಿದ್ದು, “ಅವರ ಮನವಿಯನ್ನು ಕಾಂಗ್ರೆಸ್ ಇನ್ನೂ ಪರಿಗಣಿಸುತ್ತಿದೆ” ಎಂದಿವೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್ ಈಗಾಗಲೇ ಪ್ರತಿಕ್ರಿಯಿಸಿದ್ದು, “ಕಾಂಗ್ರೆಸ್ ಪಕ್ಷವು ಸುಗ್ರೀವಾಜ್ಞೆಯ ಸಂಬಂಧ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಪಕ್ಷವು ಕಾನೂನಿನ ನಿಯಮದಲ್ಲಿ ನಂಬಿಕೆ ಹೊಂದಿದೆ. ಅದೇ ಸಮಯದಲ್ಲಿ ಅನಗತ್ಯ ಮುಖಾಮುಖಿ, ರಾಜಕೀಯ ವಿರೋಧಿಗಳ ವಿರುದ್ಧ ಸುಳ್ಳುಗಳ ಆಧಾರದ ಮೇಲೆ ಪ್ರಚಾರಗಳನ್ನು ನಡೆಸುವುದನ್ನು ಕ್ಷಮಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ದೆಹಲಿ ಮತ್ತು ಪಂಜಾಬ್‌ನ ಹಲವು ಕಾಂಗ್ರೆಸ್ ನಾಯಕರು ಕೇಜ್ರಿವಾಲ್ ಅವರನ್ನು ಬೆಂಬಲಿಸದಂತೆ ಒತ್ತಾಯಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ನಾಯಕರಾದ ಅಜಯ್ ಮಾಕನ್, ಸಂದೀಪ್ ದೀಕ್ಷಿತ್ ಮತ್ತು ಸುಖಜೀಂದರ್ ಸಿಂಗ್ ರಾಂಧವಾ ಅವರು ಪ್ರತಿಕ್ರಿಯಿಸಿ, “ಕಾಂಗ್ರೆಸ್‌ ಪಕ್ಷವು ಎಎಪಿಗೆ ಬೆಂಬಲ ನೀಡಬಾರದು” ಎಂದಿದ್ದಾರೆ.

ಕೇಜ್ರಿವಾಲ್ ಈಗಾಗಲೇ ಮೇ 21ರಂದು ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ನಾಯಕ ನಿತೀಶ್ ಕುಮಾರ್, ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಅವರನ್ನು ಭೇಟಿ ಮಾಡಿದ್ದಾರೆ. ಇಬ್ಬರೂ ನಾಯಕರು ಸುಗ್ರೀವಾಜ್ಞೆ ವಿಚಾರದಲ್ಲಿ ಎಎಪಿಯನ್ನು ಬೆಂಬಲಿಸುವುದಾಗಿ ಘೋಷಿಸಿದ್ದಾರೆ.

ಮಂಗಳವಾರ ಕೇಜ್ರಿವಾಲ್ ಅವರು ಪಶ್ಚಿಮ ಬಂಗಾಳಕ್ಕೆ ತೆರಳಿ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿ ಬೆಂಬಲ ಕೋರಿದ್ದಾರೆ. ಬ್ಯಾನರ್ಜಿ ಅವರು ಎಎಪಿ ನಾಯಕರಿಗೆ ತಮ್ಮ ಬೆಂಬಲವನ್ನು ಘೋಷಿಸಿದ್ದಾರೆ.

ಎಎಪಿ ನಾಯಕರು ಮಹಾರಾಷ್ಟ್ರಕ್ಕೆ ತೆರಳಿ ಮಾಜಿ ಮುಖ್ಯಮಂತ್ರಿ ಮತ್ತು ಶಿವಸೇನೆ ನಾಯಕ ಉದ್ಧವ್ ಠಾಕ್ರೆ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಲ್ಲಿಯೂ ಮಾತನಾಡಿದ್ದಾರೆ. ಇಬ್ಬರೂ ನಾಯಕರು ಕೇಜ್ರಿವಾಲ್ ಅವರ ಪಕ್ಷಕ್ಕೆ ತಮ್ಮ ಬೆಂಬಲವನ್ನು ನೀಡಿದ್ದಾರೆ.

ಭಾರತ್ ರಾಷ್ಟ್ರ ಸಮಿತಿ ನಾಯಕ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರನ್ನು ಭೇಟಿ ಮಾಡಲು ಹೈದರಾಬಾದ್‌ಗೆ ತೆರಳಲಿದ್ದು, ಈ ವಿಷಯದ ಬಗ್ಗೆ ಬೆಂಬಲ ಕೋರಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದೇನು?

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಸರ್ಕಾರದ ಪರವಾಗಿ ಮಹತ್ವದ ತೀರ್ಪನ್ನು ಸುಪ್ರೀಂಕೋರ್ಟ್ ಪ್ರಕಟಿಸಿತ್ತು. ದೆಹಲಿ ಸರ್ಕಾರದ ಎಲ್ಲ ನಿರ್ಧಾರಗಳಲ್ಲಿಯೂ ಕೇಂದ್ರ ಸರ್ಕಾರ ಮೂಗು ತೂರಿಸುವಂತಿಲ್ಲ ಎಂದು ಸೂಚಿಸಿತ್ತು.

ಕೇಂದ್ರದಿಂದ ನೇಮಕವಾಗುವ ಲೆಫ್ಟಿನೆಂಟ್ ಗವರ್ನರ್‌ಗೆ ಖಡಕ್ ಸೂಚನೆಗಳನ್ನು ನೀಡಿರುವ ಸರ್ವೋಚ್ಚ ನ್ಯಾಯಾಲಯ, “ದೆಹಲಿ ಸರ್ಕಾರವು ಸೇವೆಗಳ ಮೇಲೆ ನಿಯಂತ್ರಣ ಹೊಂದಿರಬೇಕು, ಲೆಫ್ಟಿನೆಂಟ್ ಗವರ್ನರ್ ಸರ್ಕಾರದ ನಿಯಂತ್ರಣಕ್ಕೆ ಬದ್ಧರಾಗಿರಬೇಕು” ಎಂದು ನಿರ್ದೇಶಿಸಿದೆ.

ಎಎಪಿ ಮತ್ತು ಕೇಂದ್ರ ಸರ್ಕಾರದ ನಡುವೆ ಅಧಿಕಾರದ ತಿಕ್ಕಾಟ ನಡೆಯುತ್ತಿರುವಾಗ ಈ ತೀರ್ಪು ಹೊರಬಿದ್ದಿದೆ. “ಜನರ ಇಚ್ಛೆಯನ್ನು ಪ್ರತಿನಿಧಿಸಿ ಕಾನೂನು ರೂಪಿಸುವ ಅಧಿಕಾರವನ್ನು ದೆಹಲಿ ವಿಧಾನಸಭೆಗೆ ನೀಡಲಾಗಿದೆ” ಎಂದು ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು ಸರ್ವಾನುಮತದ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.

“ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಆಡಳಿತದ ನಿಜವಾದ ಅಧಿಕಾರವು ಚುನಾಯಿತ ಸರ್ಕಾರದ ತೋಳಿನ ಮೇಲೆ ನಿಂತಿರಬೇಕು” ಎಂದು ಪೀಠವು ಅಭಿಪ್ರಾಯಪಟ್ಟಿದೆ. ಕೇಂದ್ರ ಮತ್ತು ರಾಜ್ಯಗಳೆರಡೂ ಸೇರಿ ಕಾನೂನು ರಚಿಸಬಹುದಾದ ವಿಷಯಗಳಲ್ಲಿ ಕೇಂದ್ರ ಸರ್ಕಾರವು ದೆಹಲಿ ಚುನಾಯಿತ ಸರ್ಕಾರದೊಂದಿಗೆ ಚರ್ಚಿಸಬಹುದು. ‘ಸದರಿ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಮೀರಲಾಗಿಲ್ಲ ಎಂದು ಖಚಿತಪಡಿಸಿಕೊಳ್ಳಲಷ್ಟೇ ಇದು ಸೀಮಿತವಾಗಿರುತ್ತದೆ’ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.

ಆಡಳಿತ ಸೇವೆಗಳ ಮೇಲೆ ದೆಹಲಿ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಒಪ್ಪದ ನ್ಯಾಯಾಧೀಶರು, “ಸಾರ್ವಜನಿಕ ಸುವ್ಯವಸ್ಥೆ, ಪೊಲೀಸ್ ಮತ್ತು ಭೂಮಿ ವಿಷಯಗಳನ್ನಷ್ಟೇ ಅದರ (ದೆಹಲಿ) ಅಧಿಕಾರ ವ್ಯಾಪ್ತಿಯಿಂದ ಹೊರಗಿಡಲಾಗಿದೆ” ಎಂದು ಹೇಳಿದ್ದಾರೆ.

“ಅಧಿಕಾರಿಗಳು ಮಂತ್ರಿಗಳಿಗೆ ವರದಿ ಮಾಡುವುದನ್ನು ನಿಲ್ಲಿಸಿದರೆ ಅಥವಾ ಅವರ ನಿರ್ದೇಶನಗಳನ್ನು ಪಾಲಿಸದಿದ್ದರೆ, ಸಾಮೂಹಿಕ ಜವಾಬ್ದಾರಿಯ ತತ್ವದಲ್ಲಿ ಪರಿಣಾಮ ಕಂಡುಬರುತ್ತದೆ” ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಆದೇಶಿಸಿದ್ದಾರೆ.

ರಾಷ್ಟ್ರದ ರಾಜಧಾನಿಯಲ್ಲಿ ಅಧಿಕಾರಶಾಹಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್‌ಗಳ ಮೇಲೆ ಆಡಳಿತಾತ್ಮಕ ನಿಯಂತ್ರಣವನ್ನು ಯಾರು ಹೊಂದಿದ್ದಾರೆ ಎಂಬ ಪ್ರಶ್ನೆ ಕೋರ್ಟ್ ಮುಂದಿತ್ತು. ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಈ ಪ್ರಕರಣವನ್ನು ಆಲಿಸಿತು.

ದೆಹಲಿ ಸರ್ಕಾರದಲ್ಲಿ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಲೆಫ್ಟಿನೆಂಟ್ ಗವರ್ನರ್, ಆಡಳಿತ ಸೇವೆಗಳ ವಿಚಾರದಲ್ಲಿ ಚುನಾಯಿತ ಸರ್ಕಾರದ ನಿರ್ಧಾರಕ್ಕೆ ಬದ್ಧರಾಗಿರುತ್ತಾರೆ ಎಂದು ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಮಂತ್ರಿಮಂಡಲದ ಸಹಾಯ ಮತ್ತು ಸಲಹೆಗೂ ಲೆಫ್ಟಿನೆಂಟ್ ಗವರ್ನರ್ ಬದ್ಧರಾಗಿರುತ್ತಾರೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ಜಾತಿ ಪ್ರಾತಿನಿಧ್ಯ: ಬೊಮ್ಮಾಯಿ ಸಂಪುಟಕ್ಕಿಂತ ಸಿದ್ದರಾಮಯ್ಯ ಕ್ಯಾಬಿನೆಟ್ ವೈವಿಧ್ಯಮಯ

ಲೆಫ್ಟಿನೆಂಟ್ ಗವರ್ನರ್ ಅಧಿಕಾರವನ್ನು ಹೊಂದಿದ್ದರೂ, ಅವರು ಇಡೀ ದೆಹಲಿ ಸರ್ಕಾರದ ಮೇಲೆ ಅಧಿಕಾರವನ್ನು ಹೊಂದಿದ್ದಾರೆಂದು ಅರ್ಥವಲ್ಲ. ಹಾಗೇನಾದರೂ ಇದ್ದಿದ್ದರೆ ದೆಹಲಿಯಲ್ಲಿ ಪ್ರತ್ಯೇಕ ಚುನಾಯಿತ ಸರ್ಕಾರವನ್ನು ಹೊಂದುವ ಉದ್ದೇಶಕ್ಕೆ ಅರ್ಥವಿಲ್ಲದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

“ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರವು ತನ್ನ ಅಧಿಕಾರಿಗಳನ್ನು ನಿಯಂತ್ರಿಸುವ ಅಧಿಕಾರವನ್ನು ಹೊಂದಿಲ್ಲದಿದ್ದರೆ, ಶಾಸಕಾಂಗ ಮತ್ತು ಸಾರ್ವಜನಿಕರ ಮೇಲಿನ ಅದರ ಜವಾಬ್ದಾರಿಯನ್ನು ದುರ್ಬಲಗೊಳಿಸಿದಂತಾಗುತ್ತದೆ. ಒಬ್ಬ ಅಧಿಕಾರಿ ಸರ್ಕಾರಕ್ಕೆ ಸ್ಪಂದಿಸದಿದ್ದರೆ, ಸಾಮೂಹಿಕ ಜವಾಬ್ದಾರಿ ದುರ್ಬಲಗೊಳ್ಳುತ್ತದೆ” ಎಂದು ಆತಂಕ ವ್ಯಕ್ತಪಡಿಸಿದೆ.

ದೆಹಲಿಯ ಆಡಳಿತಾರೂಢ ಎಎಪಿ 2013ರಿಂದಲೂ ಇಲ್ಲಿ ಅಧಿಕಾರದಲ್ಲಿದೆ. ಆದರೆ ವಿವಿಧ ಲೆಫ್ಟಿನೆಂಟ್ ಗವರ್ನರ್‌ಗಳೊಂದಿಗೆ ವರ್ಷಗಳ ಕಾಲ ಅದು ಗುದ್ದಾಟವನ್ನು ನಡೆಸುತ್ತಲೇ ಬರಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...