Homeಮುಖಪುಟಕಲುಷಿತ ನೀರು ಸೇವಿಸಿ ಬಾಲಕ ಸಾವು: ನ್ಯಾಯಾಂಗ ತನಿಖೆಗೆ ಸಿಪಿಐ(ಎಂಎಲ್) ಲಿಬರೇಶನ್ ಆಗ್ರಹ

ಕಲುಷಿತ ನೀರು ಸೇವಿಸಿ ಬಾಲಕ ಸಾವು: ನ್ಯಾಯಾಂಗ ತನಿಖೆಗೆ ಸಿಪಿಐ(ಎಂಎಲ್) ಲಿಬರೇಶನ್ ಆಗ್ರಹ

- Advertisement -
- Advertisement -

ದೇವದುರ್ಗ ತಾಲೂಕಿನ ರೇಕಲಮರಡಿಯಲ್ಲಿ ಕಲುಷಿತ ನೀರು ಕುಡಿದು ಬಾಲಕ ಮೃತಪಟ್ಟು, 30 ಜನರು ಅಸ್ವಸ್ಥಗೊಂಡ ಘಟನೆಯನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಬೇಕು ಎಂದು ಸಿಪಿಐ(ಎಂಎಲ್) ಲಿಬರೇಶನ್ ರಾಜ್ಯ ಸಮಿತಿ ಆಗ್ರಹಿಸಿದೆ.

ರಾಜ್ಯ ಸಮಿತಿ ಸದಸ್ಯ ನಾಗರಾಜ ಪೂಜಾರ್, ತಾಲೂಕು ಕಾರ್ಯದರ್ಶಿ ಬಸವರಾಜ ಬೆಳಗುರ್ಕಿ ಜಂಟಿ ಹೇಳಿಕೆ ನೀಡಿದ್ದು, “ಕಳೆದ ನಾಲ್ಕಾರು ವರ್ಷಗಳಿಂದ ಕುಡಿವ ನೀರಿನ ಟ್ಯಾಂಕ್ ಸ್ವಚ್ಛಗೊಳಿಸದೇ ಇರುವುದು ಹಾಗೂ ಪೈಪ್‌ಲೈನ್‌ನಲ್ಲಿ ಚರಂಡಿ ನೀರು ಮಿಶ್ರಣವಾಗಿ ಪೂರೈಕೆಯಾಗಿದ್ದೆ ಈ ದುರಂತಕ್ಕೆ ಕಾರಣವಾಗಿದೆ. ಈ ದುರ್ಘಟನೆಗೆ ತಾಲೂಕು ಹಾಗೂ ಜಿಲ್ಲಾಡಳಿತದ ಆಡಳಿತ ವೈಫಲ್ಯವೇ ಕಾರಣವಾಗಿದ್ದು, ನ್ಯಾಯಾಂಗ ತನಿಖೆಗೆ ಒಳಪಡಿಸಿ ತಪ್ಪಿತಸ್ಥರ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

ರಾಯಚೂರು ಜಿಲ್ಲೆಯಲ್ಲೇ ಅತ್ಯಂತ ಹಿಂದುಳಿದ ತಾಲೂಕು ಆಗಿರುವ ದೇವದುರ್ಗ ವ್ಯಾಪ್ತಿಯಲ್ಲಿ ಕೃಷ್ಣಾ ನದಿಯೇ ಹರಿದುಹೋಗಿದ್ದರೂ ಸಮರ್ಪಕ ಕುಡಿವ ನೀರು ಪೂರೈಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ. ರೇಕಲಮರಡಿ ಗ್ರಾಮದಲ್ಲಿ ಕಳೆದ ಹಲವು ವರ್ಷಗಳಿಂದ ಕುಡಿವ ನೀರಿಗೆ ತತ್ವಾರವಿದ್ದು, ಶುದ್ಧ ನೀರು ಪೂರೈಕೆಯಾಗುತ್ತಿಲ್ಲ. ನೀರಿನಲ್ಲಿ ಆರ್ಸೆನಿಕ್ ಅಂಶವಿದ್ದರೂ ಅಧಿಕಾರಿಗಳು ಗಮನ ಹರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಗ್ರಾಮದಲ್ಲಿ 50 ವರ್ಷ ವಯಸ್ಸಾದವರು ಮೊಣಕಾಲು, ಕೀಲು ಹಾಗೂ ಮೈಕೈಬೇನೆ ಸೇರಿದಂತೆ ಇನ್ನಿತರೆ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಇನ್ನೂ ಗ್ರಾಮೀಣ ಪ್ರದೇಶದ ಜನರಿಗೆ ತಾಲೂಕು, ಜಿಲ್ಲಾಡಳಿತಗಳು ಕನಿಷ್ಠ ಶುದ್ಧ ಕುಡಿವ ನೀರು ಪೂರೈಸಲಾರದಷ್ಟು ಅಸಮರ್ಥವಾಗಿರುವುದು ನಾಚಿಕೆಗೇಡಿತನದ ಸಂಗತಿಯಾಗಿದೆ ಎಂದಿದ್ದಾರೆ.

ರೇಕಲಮರಡಿ ಘಟನೆಯಲ್ಲಿ ಮೃತಪಟ್ಟ ಬಾಲಕನ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು, ಗ್ರಾಮದಲ್ಲಿ ಶುದ್ಧ ಕುಡಿವ ನೀರಿನ ಘಟಕವನ್ನು ಪುನಶ್ಚೇತನಗೊಳಿಸಿ ಸಮರ್ಪಕ ಪೂರೈಕೆ ಮಾಡಬೇಕು, ಇಂತಹ ಘಟನೆಗಳು ಮರುಕಳಿಸದಂತೆ ನಿಗಾವಹಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ದೇವದುರ್ಗದಲ್ಲಿ ಕಲುಷಿತ ನೀರು ಕುಡಿದ ಬಾಲಕ ಸಾವು, ಹಲವರು ಅಸ್ವಸ್ಥ: ಈ ದುರಂತಗಳಿಗೆ ಕೊನೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧವೇ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...

ಬಿಜೆಪಿ ಕಾರ್ಯಕರ್ತನ ಬಳಿ 3,400ಕ್ಕೂ ಹೆಚ್ಚು SIR ಎನ್ಯುಮರೇಷನ್‌ ಫಾರಂಗಳು ಪತ್ತೆ!-ವರದಿ

ಮತದಾರರ ವಿವರಗಳಿರುವ 3,400ಕ್ಕೂ ಹೆಚ್ಚು ಎಸ್‌ಐಆರ್ ಎನ್ಯುಮರೇಷನ್ ಫಾರಂಗಳು ಸ್ಥಳೀಯ ಬಿಜೆಪಿ ಕಾರ್ಯಕರ್ತನ ಬಳಿ ಪತ್ತೆಯಾದ ಬಳಿಕ, ನವಿ ಮುಂಬೈನಲ್ಲಿ ಐವರು ಬೂತ್ ಮಟ್ಟದ ಅಧಿಕಾರಿಗಳನ್ನು (ಬಿಎಲ್‌ಒ) ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಗುರುವಾರ (ಆ.27)...

ಹಾವೇರಿ| ಆಹಾರ ಸಂಸ್ಕರಣಾ ಘಟಕಗಳ ಮೇಲೆ ಅಧಿಕಾರಿಗಳ ದಾಳಿ; 1,033 ಕೆಜಿ ಕಲುಷಿತ ಆಹಾರ ಪದಾರ್ಥ ವಶಕ್ಕೆ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಹಶೀಲ್ದಾರ್ ನೇತೃತ್ವದ ತಂಡ ಮತ್ತು ಆಹಾರ ಸುರಕ್ಷತಾ ಅಧಿಕಾರಿಗಳು ರಾಣೆಬೆನ್ನೂರು ತಾಲೂಕಿನ ವಿವಿಧ ಆಹಾರ ಸಂಸ್ಕರಣಾ ಘಟಕಗಳ ಮೇಲೆ ದಿಢೀರ್ ದಾಳಿ ನಡೆಸಿ, 1,033 ಕೆಜಿ ಕಲುಷಿತ ಆಹಾರ...

ಹಾಸನ: ಎಡಪಂಥೀಯರು ಮೋಸ್ಟ್ ಡೇಂಜರಸ್, ಕಳ್ಳರು! ನಿಶ್ಚಲಾನಂದನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆಗೆ CPI(M) ಖಂಡನೆ

ಹಾಸನ ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಹಾಸನ ಜಿಲ್ಲಾ ಶಾಖೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ಅರ್ಥಶಾಸ್ತ್ರ ವಿಭಾಗದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ 'ವಿಶ್ವ...

ನೇಪಾಳ ಪ್ರವಾಹ : 620 ದಾಟಿದ ಮೃತರ ಸಂಖ್ಯೆ; 3 ಸಾವಿರದಷ್ಟು ಜನರು ಇನ್ನೂ ನಾಪತ್ತೆ-ವರದಿ

ನೇಪಾಳ-ಟಿಬೆಟ್ ಗಡಿ ಪ್ರದೇಶದಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದಾಗಿ ಕನಿಷ್ಠ 616 ಜನರು ಸಾವನ್ನಪ್ಪಿದ್ದಾರೆ ಎಂದು ನೇಪಾಳ ಪೊಲೀಸರು ಶನಿವಾರ (ಆ.29) ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ. ಶುಕ್ರವಾರ (ಆ.28) ಪೊಲೀಸರು...

ನಾಗೇಂದ್ರ ರಾಜೀನಾಮೆ: ಬಡಿಗೆ ಕೊಟ್ಟು ಹೊಡೆಸಿಕೊಂಡಂತಾಯ್ತು ಕಾಂಗ್ರೆಸ್ ಪರಿಸ್ಥಿತಿ

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ದಕ್ಕಿದ 136 ಸ್ಥಾನಗಳ ಅಭೂತಪೂರ್ವ ಬಹುಮತಕ್ಕೆ ಪ್ರಮುಖ ಕಾರಣ '40% ಸರ್ಕಾರ' ಮತ್ತು 'ಪೇ ಸಿಎಂ' ಅಭಿಯಾನಗಳು. ಬಿಜೆಪಿಯ ಭ್ರಷ್ಟಾಚಾರವನ್ನು ಅಸ್ತ್ರವಾಗಿಸಿಕೊಂಡು ಆಡಳಿತ ಹಿಡಿದ ಕಾಂಗ್ರೆಸ್‌ಗೆ,...