Homeಕರ್ನಾಟಕಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಟೀಕಿಸಿದ ಬಿಜೆಪಿಗೆ ತಿರುಗೇಟು ಕೊಟ್ಟ ಶೆಟ್ಟರ್, ಸವದಿ

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಟೀಕಿಸಿದ ಬಿಜೆಪಿಗೆ ತಿರುಗೇಟು ಕೊಟ್ಟ ಶೆಟ್ಟರ್, ಸವದಿ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆ ಸಮಯದಲ್ಲಿ ಬಿಜೆಪಿಯ ಪ್ರಬಲ ನಾಯಕರಾಗಿದ್ದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅವರು ಪಕ್ಷ ತೊರೆದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಸಧ್ಯ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಇಬ್ಬರಿಗೂ ಸಚಿವ ಸ್ಥಾನ ನೀಡಬಹುದು ಎನ್ನುವ ಮಾತುಗಳು ಕೇಳಿಬಂದಿದ್ದವು ಆದರೆ ಇಬ್ಬರಿಗೂ ಸಚಿವ ಸ್ಥಾನ ಕೈತಪ್ಪಿದೆ. ಈ ಬಗ್ಗೆ ಬಿಜೆಪಿ ಟೀಕೆ ಮಾಡಿದ್ದು, ಅದಕ್ಕೆ ಶೆಟ್ಟರ್ ಹಾಗೂ ಸವದಿ ಅವರು ತಿರುಗೇಟು ನೀಡಿದ್ದಾರೆ.

ಅಥಣಿ​ ಶಾಸಕ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ಕೈತಪ್ಪಿದ ವಿಚಾರವಾಗಿ ಬಿಜೆಪಿ ನಾಯಕರ ಟೀಕೆಗೆ ಲಕ್ಷ್ಮಣ ಸವದಿ ಅವರು ತಿರುಗೇಟು ನೀಡಿದ್ದಾರೆ. ”ರಾಜಕಾರಣದಲ್ಲಿ ಮನುಷ್ಯನಿಗೆ ದೂರದೃಷ್ಟಿ, ತಾಳ್ಮೆ ಬಹಳ ಮುಖ್ಯ. ನನಗೆ ನಿರಾಸೆಯಾಗಿಲ್ಲ, ಒಳ್ಳೆಯ ದಿನಗಳು ಬರುತ್ತವೆ” ಎಂದಿದ್ದಾರೆ.

ಸಚಿವಸ್ಥಾನ ಸಿಗುವ ನಿರೀಕ್ಷಯಲ್ಲಿದ್ರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ”ನಿರೀಕ್ಷೆಗಳು ಯಾರಿಗೆ ಇರಲ್ಲ ಹೇಳಿ, ಎಲ್ಲರಿಗೂ ನಿರೀಕ್ಷೆಗಳಿರುತ್ತೆ. ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ. ಎಲ್ಲರೂ ಸಚಿವರಾಗಬೇಕು, ನಂತರ ಡಿಸಿಎಂ ಆಗಬೇಕು, ತದನಂತರ ಸಿಎಂ ಆಗಬೇಕೆಂದು ಎಲ್ಲರೂ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಆಸೆಗಳಿಗೆ ಕೊನೆ ಇರುವುದಿಲ್ಲ, ಅದು ಮನುಷ್ಯನ ಸಹಜ ಗುಣ” ಎಂದು ಪ್ರತಿಕ್ರಿಯಿಸಿದ್ದಾರೆ.

ಇದೇವೇಳೆ ಅಧಿಕಾರ ಹಂಚಿಕೆ ಪ್ರಶ್ನೆಗೆ ಉತ್ತರಿಸಿದ ಸವದಿ, ”ಅದನ್ನ ಸಿದ್ದರಾಮಯ್ಯ ಅವರನ್ನೇ ಕೇಳಬೇಕು ಹೈಕಮಾಂಡ್​ದಲ್ಲಿ ಯಾವ ರೀತಿ ಚರ್ಚೆ ಆಗಿದೆ ಗೊತ್ತಿಲ್ಲ. ಅವು ನಾಲ್ಕು ಗೋಡೆಗಳ ಮಧ್ಯೆ ನಡೆದಿರುವಂತದ್ದು. ಸಿದ್ದರಾಮಯ್ಯ ಮತ್ತು ಪಕ್ಷದ ವರಿಷ್ಠರ ನಡುವೆ ನಡೆದ ಚರ್ಚೆಯನ್ನು ಬಹಿರಂಗ ಪಡಿಸಿಲ್ಲ. ಹೊರಗಡೆ ಕೇವಲ ಊಹಾಪೂಹಗಳು ಮಾತ್ರ ಇವೆ. ಅವುಗಳಿಗೆ ರೆಕ್ಕೆಪುಕ್ಕ ಕಟ್ಟಿ ಕಾಗೆ ಹಾರಿಸುವ ಕೆಲಸ ಕೆಲ ಜನ ಮಾಡುತ್ತಿದ್ದಾರೆ” ಎಂದು ಉತ್ತರಿಸಿದರು.

ಗ್ಯಾರಂಟಿ ಯೋಜನೆಗಳ ಕುರಿತು ಬಿಜೆಪಿ  ಗೊಂದಲ ಸೃಷ್ಟಿಸುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ”ಮೊದಲು ಸರ್ವ ಕಾರ್ಯ ಮುಗಿಯಲಿ, ಸರ್ವೆ ಆದ ಮೇಲೆ ಗೈಡ್ ಲೈನ್ಸ್ ಬರುತ್ತೆ. ಅದರ ಮೇಲೆ ಎಲ್ಲವೂ ನಿರ್ಧಾರ ಆಗುತ್ತೆ” ಎಂದು ತಿಳಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ:

ಸಚಿವ ಸ್ಥಾನ ಕೈತಪ್ಪಿದ್ದರ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆ ಉತ್ತರಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆವರು, ”ಕಾಂಗ್ರೆಸ್ ಪಾರ್ಟಿಗೆ ಅನ್ ಕಂಡೀಷನ್​ ಆಗಿ ಬಂದಿದ್ದೇನೆ” ಎಂದು ಹೇಳಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ”ಕ್ಯಾಬಿನೆಟ್​ನಲ್ಲಿ ನಾನು ಮಿನಿಸ್ಟರ್ ಆಗಬೇಕು ಅನ್ನೋದು ಜನರ ಅಭಿಲಾಷೆ ಇತ್ತು. ಹಲವು ಕಾರಣದಿಂದ ಆಗಿಲ್ಲ. ಇನ್ನು ಹಲವಾರು ಸ್ಥಾನಮಾನಗಳಿವೆ. ಯಾವುದೇ ಸ್ಥಾನ ಕೊಟ್ಟರೂ ನಿಭಾಯಿಸಿಕೊಂಡು ಹೋಗುತ್ತೇನೆ. ಈಗಿನ ಸಂಪುಟ ರಚನೆ ನಂತರ ಕೂತು ಚರ್ಚಿಸುವ ಬಗ್ಗೆ ಮಾತಾಗಿದೆ. ವೈಯಕ್ತಿಕವಾಗಿ ನಾನು ಯಾವುದೇ ಆಸೆ ವ್ಯಕ್ತಪಡಿಸಿಲ್ಲ” ಎಂದು ತಿಳಿಸಿದರು.

ಈ ವೇಳೆ ಪರೋಕ್ಷವಾಗಿ ಬಿಎಲ್ ಸಂತೋಷ್ ಅವರಿಗೆ ಟಾಂಗ್ ಕೊಟ್ಟಿದ್ದು, ”ನನ್ನೊಬ್ಬನನ್ನ ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ. ನಾನು ಕಾಂಗ್ರೆಸ್ ಸೇರೋ ಸಮಯದಲ್ಲಿ ಹೇಳಿರೋ ಪ್ರಶ್ನೆಗೆ ಇದುವರೆಗೂ ಬಿಜೆಪಿ‌ಯವರು ಯಾರೂ ಉತ್ತರ ಕೊಟ್ಟಿಲ್ಲ. ಬಿಜೆಪಿಯವರು ಎಲ್ಲಿದಾರೆ? ಗೊತ್ತಿಲ್ಲ” ಎಂದಿದ್ದಾರೆ.

”ಇನ್ನು ನಾನು ಯಾವ ರೀತಿ ಮುಂದೆ ಹೋಗಬೇಕು ಎಂಬ ಬಗ್ಗೆ ಕಾಂಗ್ರೆಸ್ ತೀರ್ಮಾನ ಮಾಡುತ್ತೆ. ಕಾಂಗ್ರೆಸ್ ಗೆ ಜನ ಬೆಂಬಲ ನೀಡಿದ್ದಾರೆ. ಒತ್ತಡದಲ್ಲಿ ಸ್ಥಾನಮಾನ ಕೊಡಲು ಆಗಲಿಲ್ಲ. ಲೋಕಸಭಾ ಚುನಾವಣೆಗೆ ಇನ್ನು ಒಂದು ವರ್ಷ ಇದೆ. ಕಾಂಗ್ರೆಸ್ ಯಾವ ಜವಾಬ್ದಾರಿ ನೀಡುತ್ತೆ ಅದನ್ನ ನಿಭಾಯಿಸುತ್ತೇನೆ. ಉತ್ತರ ಕರ್ನಾಟಕ ಭಾಗದ ನಾಯಕರಿಗೆ ಕೆಲವು ಪ್ರಮುಖ ಸ್ಥಾನ ಸೀಗುವ ಮೂಲಕ ಸಾಕಷ್ಟು ಅವಕಾಶಗಳಿವೆ. ಮುಂದಿನ ಕ್ಯಾಬಿನೆಟ್ ನಲ್ಲಿ ಒಂದು ನಿರ್ಧಾರ ಮಾಡುವುದಾಗಿ ಹೇಳಿದ್ದಾರೆ” ಎಂದರು.

ಇದೇ ವೇಳೆ ನೂತನ ಸಂಸತ್ ಉದ್ಘಾಟನೆ ಬಗ್ಗೆ ಮಾತನಾಡಿದ ಶೆಟ್ಟರ್, ”ಉದ್ಘಾಟನೆಗೆ ರಾಷ್ಟಪತಿಗಳನ್ನು ಕರಿಯಬೇಕಿತ್ತು. ನಾನು ಸುವರ್ಣ ಸೌಧ ಉದ್ಘಾಟನೆ ಮಾಡುವ ಅವಕಾಶ ಬಂದಿತ್ತು. ಆಗ ನಾನು ಅಂದಿನ ರಾಷ್ಟಪತಿಯಾಗಿದ್ದ ಪ್ರಣವ್ ಮುಖರ್ಜಿ ಅವರನ್ನು ಕರದಿದ್ದೇ. ರಾಷ್ಟಪತಿಗಳನ್ನು ಕರೆಯಬೇಕು ಎಂದು ಪ್ರತಿ ಪಕ್ಷಗಳು ಹೇಳುತ್ತಿರುವುದು ಸರಿಯಾಗಿದೆ ಎಂದರು.

”ಬಿಜೆಪಿಯಲ್ಲಿ ಪಕ್ಷ ಕಟ್ಟುವಂತವರು ಯಾರಿದ್ದಾರೆ?, ಇದುವರೆಗೂ ವಿರೋಧ ಪಕ್ಷದ ನಾಯಕನ ಆಯ್ಕೆಯಾಗಿಲ್ಲ. ರಾಷ್ಟ್ರೀಯ ಪಕ್ಷಕ್ಕೆ ಇಂತಹ ಪರಿಸ್ಥಿತಿ ಬರಬಾರದಿತ್ತು” ಎಂದು ವ್ಯಂಗ್ಯವಾಡಿದರು.

ಇನ್ನು ”ಭಜರಂಗದಳ ಬ್ಯಾನ್​ ವಿಚಾರಕ್ಕೆ ಪ್ರತಿಕ್ರಿಯಿಸಿ, ”ಯಾರಾದರೂ ಬ್ಯಾನ್ ಮಾಡಿದ್ದಾರ? ನಾನು ಕಾಂಗ್ರೆಸ್ ಸರ್ಕಾರದ ವಕ್ತಾರ ಅಲ್ಲ, ಎಲ್ಲವುದಕ್ಕೂ ಉತ್ತರಿಸಲು…” ಎಂದು ಶೆಟ್ಟರ್ ಗರಂ ಆಗಿ ಉತ್ತರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....