ಕೊಳ್ಳೇಗಾಲ ಮತ್ತು ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿನ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಭೀಕರ ಅಪಘಾತ ಸಂಭವಿಸಿ ಹತ್ತು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಖಾಸಗಿ ಬಸ್ ಮತ್ತು ಇನೋವಾ ಕಾರು ನಡುವೆ ಅಪಘಾತ ಸಂಭವಿಸಿದೆ. ಸೋಮವಾರ ಮಧ್ಯಾಹ್ನ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಬಳಿಕ ಇನೋವಾ ಕಾರು ಖಾಸಗಿ ಬಸ್‌ಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ.
ಅಪಘಾತದ ಭೀಕರತೆಗೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡಿದ್ದವರು ಕೂಡ ಆಸ್ಪತ್ರೆ ಮಾರ್ಗ ಮಧ್ಯೆದಲ್ಲಿ ಕೊನೆಯುಸಿರೆಳೆದಿದ್ದಾರೆ. ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಹತ್ತುಮಂದಿ ಸಾವನ್ನಪ್ಪಿದ್ದಾರೆ.
ಸೋಮವಾರ ಮಧ್ಯಾಹ್ನ ಮೈಸೂರು ಜಿಲ್ಲೆಯ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಬಳಿಕ ಇನೋವಾ ಕಾರು ಖಾಸಗಿ ಬಸ್‌ಗೆ ಡಿಕ್ಕಿಯಾಗಿದೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ಕರೆತರಲಾಗುತ್ತಿತ್ತು. ಆದರೆ ಮಾರ್ಗ ಮಧ್ಯೆದಲ್ಲಿ ಕೊನೆಯುಸಿರೆಳೆದಿದ್ದಾರೆ. ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಹತ್ತುಮಂದಿ ಸಾವನ್ನಪ್ಪಿದ್ದಾರೆ.
ಮೃತ ಹತ್ತು ಜನರು ಬಳ್ಳಾರಿ ಮೂಲದವರೆಂದು ತಿಳಿದು ಬಂದಿದೆ. ಟಿ.ನರಸೀಪುರ ಮುಖ್ಯ ರಸ್ತೆಯ ಮಾರ್ಗವಾಗಿ ತೆರಳುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಖಾಸಗಿ ಬಸ್‌ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಟಿ.ನರಸೀಪುರ ಪೊಲೀಸರು ಆಗಮಿಸಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರಿನಲ್ಲಿ ಇಬ್ಬರು ಮಕ್ಕಳು ಹಾಗೂ ಮಹಿಳೆಯರು ಸೇರಿ 13 ಮಂದಿ ಇದ್ದರು ಎನ್ನಲಾಗಿದೆ. ಖಾಸಗಿ ಬಸ್ ಕೊಳ್ಳೇಗಾಲದ ಕಡೆಗೆ ಹೋಗುತ್ತಿತ್ತು. ಮೃತರ ವಿವರ ಲಭ್ಯವಾಗಿಲ್ಲ. ಸ್ಥಳೀಯರ ನೆರವಿನಲ್ಲಿ ಶವಗಳನ್ನು ಹೊರ ತೆಗೆಯಲಾಗುತ್ತಿದೆ.
ನಿನ್ನೆ ಕೊಪ್ಪಳದಲ್ಲಿ ಅಪಘಾತ; ಆರು ಮಂದಿ ಸಾವು
ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ಕಲಕೇರಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ ಆರು ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ ಮೃತರ ಕುಟುಂಬಕ್ಕೆ ತಲಾ ₹ 2 ಲಕ್ಷ ಪರಿಹಾರ ಘೋಷಿಸಿದ್ದರು.
ಸೊಲ್ಲಾಪುರದ ಜಯಶ್ರೀ ಕಾಂಬಳೆ (25), ಚಾಲಕ ರಾಘವೇಂದ್ರ ಕಾಂಬಳೆ (28), ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ನಂದ್ರಾಳ ಗ್ರಾಮದ ಖಾಜಪ್ಪ ಬನಸೋಡೆ (36), ಶಿರನಾಳದ ಅಕ್ಷಯ ಶಿವಶರಣ (22), ರಾಕಿ (4) ಮತ್ತು ರಶ್ಮಿಕಾ (2) ಮೃತಪಟ್ಟವರು.
ಜಯಶ್ರೀ ಗೃಹಿಣಿಯಾಗಿದ್ದರು. ರಾಘವೇಂದ್ರ ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದರು. ಖಾಜಪ್ಪ ಮತ್ತು ಅಕ್ಷಯ ಕೂಲಿ ಕೆಲಸ ಮಾಡುತ್ತಿದ್ದರು. ತಮಿಳುನಾಡಿನ ಲಾರಿ ಗುಜರಾತ್ ಕಡೆಗೆ ತೆರಳುತ್ತಿತ್ತು. ಕಾರು ವಿಜಯಪುರದಿಂದ ಬೆಂಗಳೂರು ಕಡೆಗೆ ತೆರಳುವಾಗ ಅಪಘಾತ ಸಂಭವಿಸಿತ್ತು.
‘ವೇಗವಾಗಿ ಬರುತ್ತಿದ್ದ ಕಾರಿನ ಟಯರ್ ಸಿಡಿದು ರಸ್ತೆ ವಿಭಜಕ ದಾಟಿ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ’ ಎಂದು ಪೊಲೀಸರು ತಿಳಿಸಿದ್ದಾರೆ.


