Homeಮುಖಪುಟ'ಆಸಕ್ತಿದಾಯಕ ಸಂಭಾಷಣೆ': ಹೆದ್ದಾರಿಯಲ್ಲಿ ಟ್ರಕ್ ಸವಾರಿಯ ವಿಡಿಯೋ ಹಂಚಿಕೊಂಡ ರಾಹುಲ್

‘ಆಸಕ್ತಿದಾಯಕ ಸಂಭಾಷಣೆ’: ಹೆದ್ದಾರಿಯಲ್ಲಿ ಟ್ರಕ್ ಸವಾರಿಯ ವಿಡಿಯೋ ಹಂಚಿಕೊಂಡ ರಾಹುಲ್

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೆಹಲಿ-ಚಂಡೀಗಡ ಹೆದ್ದಾರಿಯಲ್ಲಿ ಪ್ರಯಾಣಿಸುವಾಗ ಟ್ರಕ್ ಡ್ರೈವರ್‌ಗಳೊಂದಿಗಿನ ತಮ್ಮ ರಾತ್ರಿಯ “ಯಾತ್ರೆ” ಮತ್ತು ಅವರೊಂದಿಗೆ ನಡೆಸಿದ ಸಂಭಾಷಣೆಯ ವಿಡಿಯೋವನ್ನು ಸೋಮವಾರ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಟ್ರಕ್ ಚಾಲಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಲು ರಾಹುಲ್ ಗಾಂಧಿ ಕಳೆದ ಸೋಮವಾರ ದೆಹಲಿಯಿಂದ ಚಂಡೀಗಡಕ್ಕೆ ಪ್ರಯಾಣ ಬೆಳೆಸಿದರು. ಆ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್‌ ಆಗಿದ್ದವು.

ತಮ್ಮ ಟ್ರೇಡ್‌ಮಾರ್ಕ್ ಬಿಳಿ ಟಿ-ಶರ್ಟ್ ಅನ್ನು ಧರಿಸಿರುವ ರಾಹುಲ್ ಗಾಂಧಿ, ಟ್ರಕ್‌ನೊಳಗೆ ಕುಳಿತು, ಚಾಲಕನೊಂದಿಗೆ ಪ್ರಯಾಣಿಸುತ್ತಿರುವುದನ್ನು ಮತ್ತು ಧಾಬಾದಲ್ಲಿ ಚಾಲಕರೊಂದಿಗೆ ಮಾತನಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

”ಆರು ಗಂಟೆಗಳ ದೆಹಲಿ-ಚಂಡೀಗಡ ಪ್ರಯಾಣದಲ್ಲಿ ಟ್ರಕ್ ಡ್ರೈವರ್‌ಗಳೊಂದಿಗೆ ಆಸಕ್ತಿದಾಯಕ ಸಂಭಾಷಣೆ! 24 ಗಂಟೆಗಳ ಕಾಲ ರಸ್ತೆಯಲ್ಲಿ ಕಳೆಯುವ ಅವರು ಭಾರತದ ಪ್ರತಿಯೊಂದು ಮೂಲೆಯನ್ನು ಒಂದುಗೂಡಿಸುತ್ತಾರೆ” ಎಂದು ರಾಹುಲ್ ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ. ತಮ್ಮ ಪ್ರಯಾಣದ ಸಮಯದಲ್ಲಿನ 35 ಸೆಕೆಂಡ್ ವಿಡಿಯೋವನ್ನು ಹಂಚಿಕೊಂಡಿದ್ದು, ಇನ್ನು ತಮ್ಮ ಪ್ರಯಾಣದ ಸಂಪೂರ್ಣ ವಿಡಿಯೋದ ಲಿಂಕ್‌ನ್ನು ತಮ್ಮ ಯೂಟ್ಯೂಬ್ ಪುಟದಲ್ಲಿ ಹಂಚಿಕೊಂಡಿದ್ದಾರೆ.

”ಭಾರತ್ ಜೋಡೋ ಯಾತ್ರೆಯಂತೆಯೇ ಜನರೊಂದಿಗೆ ತಮ್ಮ ಸಂವಾದವನ್ನು ಮುಂದುವರೆಸುತ್ತಾ, ರಾಹುಲ್ ಗಾಂಧಿಯವರು NH-44ರ ಮುರ್ಥಾಲ್‌ನಲ್ಲಿರುವ ಧಾಬಾದಲ್ಲಿ ಟ್ರಕ್ ಡ್ರೈವರ್‌ಗಳ ಗುಂಪನ್ನು ಭೇಟಿಯಾಗಿ ಮಾತನಾಡಿದರು ಮತ್ತು ಅಲ್ಲಿಂದ ಚಂಡೀಗಢಕ್ಕೆ ಟ್ರಕ್‌ನಲ್ಲಿ ಪ್ರಯಾಣಿಸಿದರು, ಶಿಮ್ಲಾಗೆ ತೆರಳುತ್ತಿದ್ದರು” ಎಂದು ಕಾಂಗ್ರೆಸ್‌ ಹೇಳಿದೆ.

ಮೂರು ಕೋಟಿ ಭಾರತೀಯರು ನೇರವಾಗಿ ಟ್ರಕ್ ಉದ್ಯಮದಲ್ಲಿ ಉದ್ಯೋಗದಲ್ಲಿದ್ದಾರೆ ಮತ್ತು ಪ್ರತಿ ವರ್ಷ ಒಂಬತ್ತು ಲಕ್ಷ ಹೊಸ ಟ್ರಕ್ ಡ್ರೈವರ್‌ಗಳಿಗೆ ಬೇಡಿಕೆಯಿದೆ ಎಂದು ವರದಿಗಳು ಸೂಚಿಸುತ್ತವೆ ಎಂಬ ಕಥೆಯನ್ನು ಸಂಪೂರ್ಣ ವಿಡಿಯೋ ವಿವರಿಸುತ್ತದೆ.

ಇದನ್ನೂ ಓದಿ: ಕರ್ನಾಟಕ ಚುನಾವಣಾ ಫಲಿತಾಂಶ, ಮಧ್ಯಪ್ರದೇಶದಲ್ಲೂ ಪುನರಾವರ್ತನೆ: 150 ಸ್ಥಾನ ಗೆಲ್ಲುತ್ತೇವೆ ಎಂದ ರಾಹುಲ್ ಗಾಂಧಿ

ಯುಪಿಯ ಲೋಧಿ ಯುವಕ ಪ್ರೇಮ್ ರಾಜ್‌ಪೂತ್ ಮಾತನಾಡುತ್ತಾ, ”ಸುಮಾರು 98 ಪ್ರತಿಶತದಷ್ಟು ಟ್ರಕ್ ಡ್ರೈವರ್‌ಗಳು, ತಮ್ಮ ಕುಟುಂಬ ಸದಸ್ಯರು ತಮ್ಮ ವೃತ್ತಿಗೆ ಸೇರಲು ಬಯಸುವುದಿಲ್ಲ. ಅವರಲ್ಲಿ ಹೆಚ್ಚಿನವರು ಪೊಲೀಸರಿಂದ ಕಿರುಕುಳ, ಕಡಿಮೆ ಮತ್ತು ಅನಿಯಮಿತ ಆದಾಯ ಬರುತ್ತದೆ” ಎಂದು ದೂರು ಹೇಳಿರುವುದು ವಿಡಿಯೋ ಹೇಳಿದೆ.

ಆಗ ರಾಹುಲ್ ಗಾಂಧಿ ಅವರು ಮುಂದಿನ ಕಾಂಗ್ರೆಸ್ ಸರ್ಕಾರವು ಅವರ ದುಃಸ್ಥಿತಿಯನ್ನು ಸುಧಾರಿಸಲು ಅತ್ಯುತ್ತಮವಾಗಿ ಪ್ರಯತ್ನಿಸುತ್ತದೆ ಎಂದು ಭರವಸೆ ನೀಡಿದರು ಎಂದು ಪಕ್ಷವು ಹೇಳಿದೆ.

ರಾಹುಲ್ ಗಾಂಧಿಯವರು ಜನರನ್ನು ಭೇಟಿಯಾಗುತ್ತಿದ್ದಾರೆ ಮತ್ತು ಸಾಮಾನ್ಯ ಭಾರತೀಯರ ಧ್ವನಿಯನ್ನು ನಿಯಮಿತವಾಗಿ ಕೇಳುತ್ತಿದ್ದಾರೆ. ಹಳೆ ದೆಹಲಿ ಮತ್ತು ಮುಖರ್ಜಿ ನಗರ ಮತ್ತು ದೆಹಲಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಭೇಟಿಯಿಂದ ಹಿಡಿದು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಮತ್ತು ಬ್ಲಿಂಕಿಟ್ ಬೈಕ್ ಸವಾರಿ ಮಾಡುವವರೆಗೆ, ಅವರು ಸಮಾಜದ ವಿವಿಧ ವರ್ಗಗಳ ಜನರೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ, ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಜನರನ್ನು ಆಲಿಸುವ ಪ್ರಕ್ರಿಯೆಯನ್ನು ಮುಂದುವರೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...