Homeಕರ್ನಾಟಕಇದ್ರೀಸ್ ಪಾಶ ಹತ್ಯೆಗೆ ಪೊಲೀಸರ ಕರ್ತವ್ಯ ಲೋಪವೂ ಕಾರಣ: ಸತ್ಯಶೋಧನಾ ವರದಿ ಬಿಡುಗಡೆ

ಇದ್ರೀಸ್ ಪಾಶ ಹತ್ಯೆಗೆ ಪೊಲೀಸರ ಕರ್ತವ್ಯ ಲೋಪವೂ ಕಾರಣ: ಸತ್ಯಶೋಧನಾ ವರದಿ ಬಿಡುಗಡೆ

ಇದಕ್ಕೂ ಮುಂಚೆ ಇಂತದ್ದೇ ಕೃತ್ಯಗಳಲ್ಲಿ ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರು ತೊಡಗಿಸಿಕೊಂಡಿದ್ದರೂ ಸಹ ಅವರನ್ನು ಸೆದೆ ಬಡಿಯುವಲ್ಲಿ ಪೊಲೀಸರ ನಿಷ್ಕ್ರಿಯತೆ ಹಾಗೂ ವೈಫಲ್ಯತೆ ಸ್ಪಷ್ಟವಾಗಿ ಕಂಡುಬಂದಿದೆ.

- Advertisement -
- Advertisement -

ಟ್ರಕ್ ಚಾಲಕ ಇದ್ರೀಸ್ ಪಾಶ ಹತ್ಯೆಯಲ್ಲಿ ಪೊಲೀಸರ ಕರ್ತವ್ಯ ಲೋಪ ಕಂಡುಬಂದಿದೆ. ವಿಷಯ ತಿಳಿದ ತಕ್ಷಣ ಪೊಲೀಸರು ನಕಲಿ ಗೋರಕ್ಷಕರಿಗೆ ಎಚ್ಚರಿಕೆ ನೀಡಿ, ವಶಕ್ಕೆ ಪಡೆದಿದ್ದಲ್ಲಿ ಹತ್ಯೆಯನ್ನು ತಡೆಗಟ್ಟಬಹುದಿತ್ತು ಎಂದು ಸತ್ಯ ಶೋಧನಾ ವರದಿ ತಿಳಿಸಿದೆ.

ವಕೀಲ ಶಿವಮಾನಿತನ್, ಸಿದ್ಧಾರ್ಥ್ ಕೆ.ಜಿ, ಡಾ. ಸಿಲ್ವಿಯಾ ಕರ್ಪಗಂ, ಖಾಸಿಂ ಶೋಯೆಬ್ ಖುರೇಷಿ ಮತ್ತು ಅಖಿಲ ಭಾರತ ಜಮೈತುಲ್ ಖುರೇಷ್ (ಕರ್ನಾಟಕ) ಸದಸ್ಯರ ಸತ್ಯಶೋಧನಾ ತಂಡವು ಇದ್ರೀಸ್ ಪಾಶ ಹತ್ಯೆ ಪ್ರಕರಣದ ಸತ್ಯಶೋಧನಾ ವರದಿಯನ್ನು ಪ್ರಕಟಿಸಿದ್ದು, ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಶಿಫಾರಸ್ಸುಗಳನ್ನು ಸಲ್ಲಿಸಿದ್ದಾರೆ.

ಹಣ ಸುಲಿಗೆ ಮಾಡುವ ಹಾಗೂ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ, ದಾಳಿ ನಡೆಸುವ ಉದ್ದೇಶದಿಂದ ಸಮಾಜ-ವಿರೋಧಿ ಗುಂಪುಗಳು ಬಹಿರಂಗವಾಗಿ ಕಾನೂನನ್ನು ಕೈಗೆತ್ತಿಕೊಂಡಿವೆ. ಪೊಲೀಸರ ಯಾವುದೇ ಭಯವಿಲ್ಲದೆ ಪೊಲೀಸ್ ಠಾಣೆಯ ಹತ್ತಿರವೇ ಮೂರು ಜನ ನಾಗರೀಕರ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ. ಆದರೆ ಪೊಲೀಸರು ತಕ್ಷಣವೇ ಈ ದಾಳಿಕೋರರನ್ನು ಬಂಧಿಸುವ ಬದಲು ಇನ್ನುಳಿದ ಸಂತ್ರಸ್ಥರನ್ನು ಹುಡುಕಲು ದಾಳಿಕೋರರನ್ನು ಬಿಟ್ಟಿದ್ದಾರೆ. ಪೊಲೀಸ್ ಠಾಣೆಯ ಸಿಬ್ಬಂಧಿಯೊಬ್ಬರು ಸಂತ್ರಸ್ಥರ ಮೇಲೆ ನಡೆಯುತ್ತಿದ್ದ ಹಲ್ಲೆಯನ್ನು ಕಣ್ಣಾರೆ ಕಂಡ ನಂತರ ಹಾಗೂ ಪೊಲೀಸ್ ಠಾಣೆ ಹೊರಗೆ ಸ್ವತಃ ದಾಳಿಕೋರರೇ ಫೇಸ್‌ಬುಕ್ ಲೈವ್ ಮಾಡಿದರೂ ಸಹ ದಾಳಿಕೋರರನ್ನು ಬಂಧಿಸಿರುವುದಿಲ್ಲ. ಇದರಿಂದಾಗಿಯೇ ಇದ್ರೀಸ್ ಪಾಶರವರ ಹತ್ಯೆಯಾಗಿದೆ ಎಂದು ವರದಿ ಹೇಳಿದೆ.

ವಾಹನಗಳನ್ನು ಅಡ್ಡಗಟ್ಟಿ ನಿಲ್ಲಿಸಿ, ಪೊಲೀಸ್ ಠಾಣೆಯ ಹತ್ತಿರವೇ ಹಣ ಸುಲಿಗೆ ಮಾಡುವುದು ಹಾಗೂ ಪೊಲೀಸರು ಸಂತ್ರಸ್ಥರ ರಕ್ಷಣೆಗೆ ಕಾಳಜಿ ವಹಿಸದಿರುವುದು ಈ ಗೂಂಡಾಗಳು ಎಷ್ಟು ನಿರ್ಭೀತಿಯಿಂದ ಇದನ್ನೆಲ್ಲಾ ಮಾಡುತ್ತಿದ್ದಾರೆ ಎಂಬುದನ್ನು ಸೂಚಿಸುತ್ತದೆ. ತಕ್ಷಣವೇ ಪೊಲೀಸರು ಎಲ್ಲಾ ದಾಳಿಕೋರರನ್ನು ಬಂಧಿಸಿ, ಸಂತ್ರಸ್ಥರನ್ನು ಹುಡುಕಿದ್ದರೆ, ಇದ್ರಿಸ್ ಪಾಷಾ ಅವರ ಪ್ರಾಣವನ್ನು ಉಳಿಸುವುದು ಸಾಧ್ಯವಿತ್ತು. ಇದಕ್ಕೂ ಮುಂಚೆ ಇಂತದ್ದೇ ಕೃತ್ಯಗಳಲ್ಲಿ ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರು ತೊಡಗಿಸಿಕೊಂಡಿದ್ದರೂ ಸಹ ಅವರನ್ನು ಸೆದೆ ಬಡಿಯುವಲ್ಲಿ ಪೊಲೀಸರ ನಿಷ್ಕ್ರಿಯತೆ ಹಾಗೂ ವೈಫಲ್ಯತೆ ಸ್ಪಷ್ಟವಾಗಿ ಕಂಡುಬಂದಿದೆ ಎಂದು ವರದಿ ಹೇಳಿದೆ.

ಆರೋಪಿಯ ಮೇಲೆ ಹಣ ಸುಲಿಗೆ ಯತ್ನದಂತಹ ಆರೋಪಗಳಿದ್ದರೂ ಸಹ, ಮೂರನೇ ಎಫ್‌ಐಆರ್ (ಸಿಆರ್ 0054/2023) ನಲ್ಲಿ ಭಾರತೀಯ ದಂಡ ಸಂಹಿತೆಯ ಪ್ರಮುಖ ಸೆಕ್ಷನ್‌ಗಳನ್ನು ಸೇರಿಸಿರುವುದಿಲ್ಲ. ಬದುಕುಳಿದಿರುವ ಸಂತ್ರಸ್ಥರು ಪ್ರತ್ಯಕ್ಷ ಸಾಕ್ಷಿಗಳೂ ಸಹ ಆಗಿದ್ದು, ಅಪರಾಧ ಸ್ಥಳದ ಮಹಜರು ಸಂಧರ್ಭದಲ್ಲಿ ಅವರನ್ನು ಹಾಜರುಪಡಿಸಿಲ್ಲ. ಪೊಲೀಸರು ಸಿಆರ್‌ಪಿಸಿ ಸೆಕ್ಷನ್ 164 ರ ಪ್ರಕಾರ ಪ್ರತ್ಯಕ್ಷದರ್ಶಿಗಳನ್ನು ಹೇಳಿಕೆ ನೀಡಲು ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಲಿಲ್ಲ. ಮೃತರ ಕುಟುಂಬಕ್ಕೆ ಪೋಸ್ಟ್ ಮಾರ್ಟಂ ವರದಿಯ ಪ್ರತಿಯನ್ನು ನೀಡಿರುವುದಿಲ್ಲ. ಇವೆಲ್ಲರೂ ತನಿಖೆಯಲ್ಲಿ ಕಂಡುಬಂದ ಪೊಲೀಸ್ ವೈಫಲ್ಯವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸ್ ಇಲಾಖೆಗೆ ಶಿಫಾರಸ್ಸುಗಳು

  • ಮೇಲಿನ ಅಂಶಗಳ ಆಧಾರದ ಮೇಲೆ ಈ ಕೃತ್ಯದಲ್ಲಿ ಸ್ವತಂತ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಯುವಂತೆ ಖಾತ್ರಿಪಡಿಸಿಕೊಳ್ಳಬೇಕು.
  • ಇದ್ರಿಸ್ ಪಾಷಾ ಅವರ ಕುಟುಂಬಕ್ಕೆ 10 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಬೇಕು.
  • ತಕ್ಷಣವೇ ಪೋಸ್ಟ್ ಮಾರ್ಟಂ ವರದಿಯ ಪ್ರತಿ ಒಂದನ್ನು ಮೃತರ ಕುಟುಂಬಕ್ಕೆ ನೀಡಬೇಕು.
  • ಕಾನೂನನ್ನು ಕೈಗೆತ್ತಿಕೊಳ್ಳುವ ಸಮಾಜ-ವಿರೋಧಿ ವ್ಯಕ್ತಿಗಳನ್ನು ತಕ್ಷಣವೇ ಬಂಧಿಸುವಂತೆ ಎಲ್ಲಾ ಪೊಲೀಸ್ ಠಾಣೆಗಳಿಗೆ ನಿರ್ದೇಶನ ನೀಡಬೇಕು.
  • ತಕ್ಷಣವೇ ಸಿಆರ್‌ಪಿಸಿ ಸೆಕ್ಷನ್ 164 ರ ಅಡಿಯಲ್ಲಿ ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು ದಾಖಲಿಸಿಕೊಳ್ಳಬೇಕು.
  • ಈ ಕೃತ್ಯದಲ್ಲಿ ಉಂಟಾಗಿರುವ ಪೊಲೀಸ್ ವೈಫಲ್ಯದ ಕುರಿತು ಇಲಾಖಾ ತನಿಖೆಯನ್ನು ಆದೇಶಿಸಬೇಕು

ಸರ್ಕಾರಕ್ಕೆ  ಶಿಫಾರಸ್ಸುಗಳು

  1. ಬೆದರಿಕೆ ಹಾಕುವಂತಹ ವಿಡಿಯೋಗಳು, ಅಥವಾ ಹಿಂಸಾತ್ಮಕ ಕ್ರಿಯೆಗಳನ್ನು ಹಾಗೂ ಕಿರುಕುಳವನ್ನು ಪ್ರಚೋದಿಸುವ ಅಂಶಗಳು ಬೆಳಕಿಗೆ ಬಂದ ಕೂಡಲೇ, ಪೊಲೀಸರು ಅದನ್ನು ಪರಿಗಣನೆಗೆ ತೆಗೆದುಕೊಂಡು ಅವುಗಳ ವಿರುದ್ಧ ಸುಮೊಟೋ ಎಫ್‌ಐಆರ್‌ಗಳನ್ನು ದಾಖಲಿಸಬೇಕು.

2. ಕರ್ನಾಟಕ ಜಾನುವಾರು ಹತ್ಯೆ ನಿಷೇಧ ಮತ್ತು ಸಂರಕ್ಷಣಾ ಕಾಯಿದೆ, 2020 ಜನರ ಜೀವನೋಪಾಯಗಳನ್ನು ನಾಶಮಾಡುತ್ತಿರುವ ಹಿನ್ನೆಲೆಯಲ್ಲಿ ಈ ಕಾಯಿದೆಯನ್ನು ತಕ್ಷಣವೇ ರದ್ದುಪಡಿಸಬೇಕು. ಈ ಕಾಯ್ದೆಯಡಿ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಿರಿ.

3. ಪರಿಹಾರಾತ್ಮಕ ಹಾಗೂ ದಂಡನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಖಾತ್ರಿಪಡಿಸಿಕೊಳ್ಳಲು ಘನತೆವೆತ್ತ ಸರ್ವೋಚ್ಛ ನ್ಯಾಯಾಲಯವು ತೆಲ್ಸನ್ ಪೂನಾವಾಲ ವರ್ಸಸ್ ಯೂನಿಯನ್ ಆಫ್ ಇಂಡಿಯಾ (ಎಐಆರ್ 2018 ಎಸ್‌ಸಿ 3354) ಪ್ರಕರಣದಲ್ಲಿ ನೀಡಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನೋಡಿಕೊಳ್ಳಬೇಕು. ಪ್ರತಿಯೊಂದು ಜಿಲ್ಲೆಯಲ್ಲಿ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಲು ನೋಡಲ್ ಅಧಿಕಾರಿಗಳನ್ನು ನೇಮಿಸುವುದು, ಯಾವುದೇ ತಡಮಾಡದೆ ಎಫ್‌ಐಆರ್‌ಗಳನ್ನು ದಾಖಲಿಸುವುದು, ಸಂತ್ರಸ್ಥರ ಕುಟುಂಬಸ್ಥರ ಮೇಲೆ ಆಗುವ ದೌರ್ಜನ್ಯವನ್ನು ತಡೆಗಟ್ಟುವುದು, ಪ್ರತಿ ದಿನದ ಆಧಾರದ ಮೇಲೆ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳು ಗುಂಪು ಹಿಂಸೆಯಂತಹ ಪ್ರಕರಣಗಳನ್ನು ಇತ್ಯರ್ಥಪಡಿಸುವ ಕುರಿತು ಖಾತ್ರಿಪಡಿಸಿಕೊಳ್ಳುವುದು, ಸಂತ್ರಸ್ಥ ಪರಿಹಾರ ಯೋಜನೆಯನ್ನು ಪರಿಚಯಿಸುವುದು, ಈ ಹಿಂಸೆಗಳನ್ನು ತಡೆಗಟ್ಟುವಲ್ಲಿ ವಿಫಲವಾಗುವ ಪೊಲೀಸ್ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸುವುದು. ಇವಿಷ್ಟು ಸುಪ್ರೀಂ ಕೋರ್ಟ್‌ ನೀಡಿರುವ ನಿರ್ದೇಶನಗಳಾಗಿದ್ದು ಇವುಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ವರದಿಯಲ್ಲಿ ಒತ್ತಾಯಿಸಲಾಗಿದೆ.

ಇದನ್ನೂ ಓದಿ: ಗೋರಕ್ಷಣೆ ಹೆಸರಿನಲ್ಲಿ ಹಾದಿಬೀದಿಯಲ್ಲಿ ರಕ್ತ ಹರಿಸುವ ದಂಧೆಕೋರರು: ಕೊಲ್ಲುವ ಹಂತಕ್ಕೆ ಬೆಳೆದು ನಿಂತದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...