Homeಮುಖಪುಟಲೈಂಗಿಕ ಕಿರುಕುಳದ ಆರೋಪಿ ಬ್ರಿಜ್ ಭೂಷಣ್ ಸಿಂಗ್‌ಗೆ 'ಮಹಾ ರ್ಯಾಲಿ'ಯ ಅನುಮತಿ ನಿರಾಕರಿಸಿದ ಅಯೋಧ್ಯೆ ಜಿಲ್ಲಾಡಳಿತ

ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್ ಭೂಷಣ್ ಸಿಂಗ್‌ಗೆ ‘ಮಹಾ ರ್ಯಾಲಿ’ಯ ಅನುಮತಿ ನಿರಾಕರಿಸಿದ ಅಯೋಧ್ಯೆ ಜಿಲ್ಲಾಡಳಿತ

- Advertisement -
- Advertisement -

ಮಹಿಳಾ ಕ್ರೀಡಾಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನುವ ಆರೋಪ ಹೊತ್ತಿರುವ ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಜೂನ್ 5 ರಂದು ಮಹಾ ರ್ಯಾಲಿ ನಡೆಸಲು ಅಯೋಧ್ಯೆ ಜಿಲ್ಲಾಡಳಿತವು ಅನುಮತಿ ನಿರಾಕರಿಸಿದೆ.

ಈ ಬಗ್ಗೆ ಮಾತನಾಡಿರುವ ವೃತ್ತ ಅಧಿಕಾರಿ (ಅಯೋಧ್ಯೆ) ಎಸ್‌ಪಿ ಗೌತಮ್ ಅವರು, ”ಜೂನ್ 5 ರಂದು ವಿಶ್ವ ಪರಿಸರ ದಿನದಂದು ನಿಗದಿಪಡಿಸಲಾದ ಇತರ ಕಾರ್ಯಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಸಿಂಗ್ ಪರ ಬಿಜೆಪಿ ಕೌನ್ಸಿಲರ್ ಚಮೇಲಾ ದೇವಿ ಅವರು ಕೋರಿದ ಅನುಮತಿಯನ್ನು ನಿರಾಕರಿಸಲಾಗಿದೆ ಎಂದು ಹೇಳಿದ್ದಾರೆ.

ಈ ಮಧ್ಯೆ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು, ”ತಮ್ಮ ವಿರುದ್ಧದ ಕುಸ್ತಿಪಟುಗಳ ಆರೋಪಗಳ ಕುರಿತು ನಡೆಯುತ್ತಿರುವ ತನಿಖೆಯನ್ನು ಗಮನದಲ್ಲಿಟ್ಟುಕೊಂಡು ಅಯೋಧ್ಯೆ ಕಾರ್ಯಕ್ರಮ – ರಾಮ್ ಕಥಾ ಪಾರ್ಕ್‌ನಲ್ಲಿ ‘ಜನ್ ಚೇತನ ಮಹಾರಾಲಿ’ಅನ್ನು ಕೆಲವು ದಿನಗಳವರೆಗೆ ಮುಂದೂಡಲಾಗಿದೆ” ಎಂದು ಹೇಳಿದರು.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎರಡು ಎಫ್‌ಐಆರ್ ದಾಖಲಾಗಿದ್ದು. ದೂರಿನಲ್ಲಿ ಅನುಚಿತವಾಗಿ ಸ್ಪರ್ಶಿಸುವುದು, ಬೆದರಿಕೆ, ಲೈಂಗಿಕ ಕಿರುಕುಳ, ಅನುಚಿತ ವರ್ತನೆ, ಯಾವುದೇ ನೆಪದಲ್ಲಿ ಎದೆಯನ್ನು ಮುಟ್ಟುವುದು ಸೇರಿದಂತೆ 10 ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಬಿಜೆಪಿ ಸಂಸದನ ವಿರುದ್ಧ ಗಂಭೀರ ಆರೋಪಗಳಿದ್ದರೂ ಕ್ರಮ ಏಕೆ ಕೈಗೊಂಡಿಲ್ಲ?: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

2016 ರಿಂದ ಕುಸ್ತಿ ಚಾಂಪಿಯನ್‌ಶಿಪ್‌ಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿರುವ 17 ವರ್ಷದ ಬಾಲಕಿಯ ತಂದೆ ಆಕೆಯ ಪರವಾಗಿ ಪೊಲೀಸ್ ದೂರು ದಾಖಲಿಸಿದ್ದಾರೆ.

ಕುಸ್ತಿಪಟುಗಳು ಏಪ್ರಿಲ್ 21 ರಂದು ಭಾರತದ ವ್ರೆಸ್ಲಿಂಗ್ ಫೆಡರೇಶನ್ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಬ್ರಿಜ್ ಭೂಷಣ್ ವಿರುದ್ಧ ದೂರು ನೀಡಿದ್ದರು. ಕುಸ್ತಿಪಟುಗಳು ಸುಪ್ರೀಂ ಕೋರ್ಟ್‌ಗೆ ಮೊರೆ ಹೋದ ನಂತರ, ದೆಹಲಿ ಪೊಲೀಸರು ಏಪ್ರಿಲ್ 28 ರಂದು ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಈ ಎರಡೂ ಎಫ್‌ಐಆರ್‌ಗಳ ಪ್ರತಿಗಳು ಮುನ್ನೆಲೆಗೆ ಬಂದಿವೆ. ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಹಲ್ಲೆ, ಲೈಂಗಿಕ ಕಿರುಕುಳ, ಹಿಂಬಾಲಿಸುವುದು ಮತ್ತು ಸಾಮಾನ್ಯ ಉದ್ದೇಶ ಸೇರಿದಂತೆ ಆರೋಪ ಹೊರಿಸಲಾಗಿದೆ.

ಈ ಆರೋಪಗಳನ್ನು ನಿರಾಕರಿಸಿದ ಸಿಂಗ್ ಅವರು, ”ನನ್ನ ವಿರುದ್ಧದ ಒಂದೇ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ, ನಿಮ್ಮ ಬಳಿ (ಕುಸ್ತಿಪಟುಗಳು) ಏನಾದರೂ ಸಾಕ್ಷ್ಯಾಧಾರಗಳಿದ್ದರೆ ಅದನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತು ಯಾವುದೇ ಶಿಕ್ಷೆಯನ್ನು ಸ್ವೀಕರಿಸಲು ನಾನು ಸಿದ್ಧನಿದ್ದೇನೆ” ಎಂದು ಹೇಳಿದರು.

ಈ ಪ್ರಕರಣದಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಭಾರತದ ಕುಸ್ತಿ ಒಕ್ಕೂಟದ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಕೂಡ ಆರೋಪಿ ಎಂದು ಹೆಸರಿಸಲಾಗಿದೆ. ಆಂದೋಲನವು ಎಳೆತವನ್ನು ಪಡೆದುಕೊಂಡಿದೆ, ಪ್ರಮುಖ ವಿರೋಧ ಪಕ್ಷದ ನಾಯಕರು ಸಹ ಕ್ರೀಡಾಪಟುಗಳನ್ನು ಬೆಂಬಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...