Homeಕರ್ನಾಟಕಗ್ಯಾರಂಟಿ ಜಾರಿಯ ಕುರಿತು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು?

ಗ್ಯಾರಂಟಿ ಜಾರಿಯ ಕುರಿತು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು?

- Advertisement -
- Advertisement -

ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳ ಕುರಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರತಿಕ್ರಿಯೆ ನೀಡಿದ್ದು, “ಈ ಯೋಜನೆಗಳು ಜನರ ದಿಕ್ಕು ತಪ್ಪಿಸುತ್ತಿವೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನ ತಮ್ಮ ಸರ್ಕಾರಿ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, “ಚುನಾವಣೆ ವೇಳೆ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್ ಎಂದು ಹೇಳಿದ್ದರು. ಆದರೆ ಈಗ 200 ಯೂನಿಟ್ ಒಳಗೆ ಬಳಸಿದರೆ ಮಾತ್ರ ಉಚಿತ ಎನ್ನುತ್ತಿದ್ದಾರೆ. ಈಗ ಸಿಎಂ ವಾರ್ಷಿಕ ಸರಾಸರಿ ಲೆಕ್ಕ ಹಾಕಿ ಉಚಿತ ಕೊಡುವುದಾಗಿ ಹೇಳುತ್ತಾರೆ. ಇದು ಇವರ ಹಿಡನ್ ಅಜೆಂಡಾ ಆಗಿದೆ. ಇದರಿಂದ ಸರಾಸರಿ 120 ರಿಂದ 125 ಯೂನಿಟ್ ವ್ಯತ್ಯಾಸವಾಗುತ್ತದೆ.‌ ಸರಾಸರಿ ಬಳಕೆ ಲೆಕ್ಕ ಹಾಕುವುದು ಹಿಡನ್ ಅಜೆಂಡಾ. ಇವರು ಗ್ಯಾರಂಟಿಯಲ್ಲಿ ದೋಖಾ ಮಾಡುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

“ಸಿದ್ದರಾಮಯ್ಯ ಅವರದ್ದು ಚುನಾವಣೆ ಮೊದಲು ಒಂದು ಮಾತು ಈಗ ಒಂದು ಮಾತು. ಅನ್ನಭಾಗ್ಯ ಯೋಜನೆ ಜಾರಿಯಲ್ಲೂ ಸ್ಪಷ್ಟತೆ ಇಲ್ಲ. ಮೊದಲು ನಾವೇ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದಿದ್ದರು. ಈಗ ಆಹಾರ ಧಾನ್ಯ ಕೊಡುತ್ತೇವೆ ಎಂದಿದ್ದಾರೆ. ಹಾಗೆಯೇ ಕೇಂದ್ರ ಸರ್ಕಾರದ ಉಚಿತ ಅಕ್ಕಿಯನ್ನೂ ಬಳಸಿಕೊಂಡು ತಮ್ಮ ಕ್ರೆಡಿಟ್ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದ ಜನರನ್ನ ಯಾಮಾರಿಸುವ ಕೆಲಸ ಮಾಡುತ್ತಿದೆ. 10 ಕೆಜಿಯಲ್ಲಿ ರಾಗಿ, ಜೋಳ ಸೇರಿದೆಯಾ, ಇಲ್ಲಾ ಹೆಚ್ಚುವರಿ ಕೊಡ್ತಾರಾ?” ಎಂದು ಪ್ರಶ್ನಿಸಿದ್ದಾರೆ.

“ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ದೋಖಾ ಇದೆ. ವಿಶೇಷವಾಗಿ ಬಡವರ ಮನೆಯಲ್ಲಿ ಹಿರಿಯ ಮಹಿಳೆಯರಿರುತ್ತಾರೆ. ಆನ್‌ಲೈನ್ ಅರ್ಜಿ ಹಾಕಲು ಹೇಳಿ ಅವರಿಗೆ ಯೋಜನೆ ಲಾಭ ಸಿಗದಂತೆ ಮಾಡುವ ಹುನ್ನಾರ ಅಡಗಿದೆ. ಎಲ್ಲ ಪಂಚಾಯತಿಗಳಲ್ಲಿ ಪಿಡಿಒಗಳಿದ್ದಾರೆ. ಅವರ ಮೂಲಕ ಮಾಹಿತಿ ಸಂಗ್ರಹಿಸಿ ಕೊಡಬೇಕಿತ್ತು. ಅರ್ಜಿ ಹಾಕಲು ಒಂದು ತಿಂಗಳು, ಪ್ರಕ್ರಿಯೆ ಮಾಡಲು ಒಂದು ತಿಂಗಳು ಕಾಲಹರಣ ಮಾಡುವ ಲೆಕ್ಕ ಇದರಲ್ಲಿ ಅಡಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಹೆಚ್ಚಿನ ಕಂಡಿಷನ್‌ಗಳಿಲ್ಲದೆ ಐದು ಗ್ಯಾರಂಟಿಗಳನ್ನು ಘೋಷಿಸಿದ ಸಿದ್ದರಾಮಯ್ಯ

“ರಾಜ್ಯ ಸರ್ಕಾರವೇ ಎಲ್ಲರ ಮನೆಗಳಿಗೆ ಹೋಗಿ ಮಾಹಿತಿ ಪಡೆದು ಯೋಜನೆ ಜಾರಿ ಮಾಡಬೇಕು. ಇನ್ನು ಎಸಿ ಬಸ್ಸು, ಲಗ್ಜುರಿ ಬಸ್ ಇಲ್ಲ ಅಂತ ಹೇಳಿದ್ದಾರೆ. ಕೆಂಪು ಬಸ್ ಮಾತ್ರ ಗ್ಯಾರಂಟಿ ಅಂತ ಆಯಿತು. ಯುವ ನಿಧಿ ಯೋಜನೆಯನ್ನು 2022-23 ಪಾಸಾದ ಡಿಗ್ರಿ ಹೋಲ್ಡರ್ಸ್‌ಗೆ ಕೊಡುವುದಾಗಿ ಹೇಳುತ್ತಾರೆ. ಡಿಗ್ರಿ ಮುಗಿಸಿ ಹೆಚ್ಚಿನ ವಿದ್ಯಾಭ್ಯಾಸಕ್ಕೆ ತೆರಳುತ್ತಾರೆ. ಹೀಗಾಗಿ ಹೆಚ್ಚಿನ ನಿರುದ್ಯೋಗಿಗಳಿಗೆ ಅನುಕೂಲ ಆಗುವುದಿಲ್ಲ. ಮತ್ತೆ ಈ ಯೋಜನೆಗಳ ಜಾರಿಗೆ ಎಷ್ಟು ಖರ್ಚಾಗುತ್ತದೆ ಎನ್ನುವುದನ್ನು ಹೇಳಿಲ್ಲ” ಎಂದಿದ್ದಾರೆ.

“ಸರ್ಕಾರ ಹೆಚ್ಚಿನ ಆದಾಯ ತರದೇ ಇರುವ ಹಣವನ್ನೇ ಖರ್ಚು ಮಾಡಿದರೆ, ರಾಜ್ಯ ಆರ್ಥಿಕ ಸಂಕಷ್ಟಕ್ಕೆ ಸಿಲುಕಲಿದೆ. ನಮ್ಮ ರಾಜ್ಯ ಅತಿ ಹೆಚ್ಚು ತೆರಿಗೆ ಸಂಗ್ರಹಿಸುವ ರಾಜ್ಯವಾಗಿದೆ. ಈಗಿರುವ ಆರ್ಥಿಕ ಪರಿಸ್ಥಿತಿ ಸರಿಯಾಗಿ ನಿರ್ವಹಣೆ ಮಾಡದೇ ಹೋದರೆ, ಆರ್ಥಿಕ ಹೊರೆ ಬೀಳಲಿದೆ. ಇವರು ಯಾವ ರೀತಿಯ ಸಾಲ ಪಡೆಯುತ್ತಾರೆ ಎನ್ನುವುದು ಸ್ಪಷ್ಟವಾಗಬೇಕು” ಎಂದು ಆಗ್ರಹಿಸಿದ್ದಾರೆ.

“ಇವರು ತಾವು ಮಾಡುವ ಯೋಜನೆಗಳಿಂದ ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ನೂಕುವ ಕೆಲಸ ಮಾಡಬಾರದು. ಅವರು ಮಾತಿಗೆ ತಪ್ಪಿದ್ದಾರೆ‌. ಹೇಳುವುದೊಂದು ಮಾಡುವುದೊಂದು ಮಾಡಿದ್ದಾರೆ. ರಾಜ್ಯದ ಜನತೆ ಇದೆಲ್ಲವನ್ನು ಗಮನಿಸುತ್ತಿದೆ. ರಾಜ್ಯದ ಜನರ ನಿರೀಕ್ಷೆಗಳು ಹುಸಿಯಾಗಿವೆ. ಒಟ್ಟಿನಲ್ಲಿ ರಾಜ್ಯದ ಜನರ ತೆರಿಗೆ ಹಣ ಅಭಿವೃದ್ದಿ ಯೋಜನೆಗೆ ಖರ್ಚಾಗಲಿ” ಎಂದು ಒತ್ತಾಯಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ದೆಹಲಿ ಅಬಕಾರಿ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ಕಸ್ಟಡಿ ಅವಧಿ ಮೇ 31ರವರೆಗೆ ವಿಸ್ತರಿಸಿದ...

0
ದೆಹಲಿ ಮದ್ಯದ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಮೇ 31 ರವರೆಗೆ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಮಂಗಳವಾರ ವಿಸ್ತರಿಸಿದೆ. ಫೆಬ್ರವರಿ 26,...