Homeಮುಖಪುಟಅತ್ಯಾಚಾರ ಸಂತ್ರಸ್ತೆಯ ‘ಕುಜದೋಷ’ ಪರೀಕ್ಷಿಸಲು ಅಲಹಾಬಾದ್ ಹೈಕೋರ್ಟ್ ಆದೇಶ; ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಅತ್ಯಾಚಾರ ಸಂತ್ರಸ್ತೆಯ ‘ಕುಜದೋಷ’ ಪರೀಕ್ಷಿಸಲು ಅಲಹಾಬಾದ್ ಹೈಕೋರ್ಟ್ ಆದೇಶ; ಸುಪ್ರೀಂ ಕೋರ್ಟ್ ತಡೆಯಾಜ್ಞೆ

- Advertisement -
- Advertisement -

ಅತ್ಯಾಚಾರ ಸಂತ್ರಸ್ತೆಗೆ ಕುಜದೋಷವಿದೆಯೇ ಎಂದು ಮೂರು ವಾರಗಳಲ್ಲಿ ಪರೀಕ್ಷಿಸಿ ನಿರ್ಧರಿಸುವಂತೆ ಲಕ್ನೋ ವಿಶ್ವವಿದ್ಯಾಲಯದ ಜ್ಯೋತಿಷ್ಯ ವಿಭಾಗದ ಮುಖ್ಯಸ್ಥರಿಗೆ ಸೂಚಿಸಿದ್ದ ಅಲಹಾಬಾದ್ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ಶನಿವಾರ ತಡೆ ನೀಡಿದೆ.

ಹೈಕೋರ್ಟ್‌ನ ಲಕ್ನೋ ಪೀಠ ನೀಡಿದ ಆದೇಶವನ್ನು ಸ್ವಯಂಪ್ರೇರಿತವಾಗಿ ಸ್ವೀಕರಿಸಿದ ಸುಪ್ರೀಂ ಕೋರ್ಟ್, ಪ್ರಕರಣದಲ್ಲಿ ಜ್ಯೋತಿಷ್ಯವನ್ನು ತರುವ ಅಗತ್ಯವೇನಿದೆ ಎಂದು ಪ್ರಶ್ನಿಸಿದೆ.

ನ್ಯಾಯಮೂರ್ತಿ ಸುಧಾಂಶು ಧುಲಿಯಾ ಮತ್ತು ನ್ಯಾಯಮೂರ್ತಿ ಪಂಕಜ್ ಮಿಥಾಲ್ ಅವರ ಪೀಠವು ಪ್ರಕರಣವನ್ನು ಕೈಗೆತ್ತಿಕೊಂಡಿದೆ. ಅಲಹಾಬಾದ್ ಹೈಕೋರ್ಟ್ ಆದೇಶವು ಸಂಪೂರ್ಣವಾಗಿ ಸಂದರ್ಭವನ್ನು ಮೀರಿ ನಿಂತಿದೆ. ಪ್ರಕರಣದಲ್ಲಿ ಖಾಸಗಿತನದ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಪ್ರತಿಕ್ರಿಯಿಸಿ, ಈ ಆದೇಶ ಗೊಂದಲಕ್ಕೀಡಾಗುವಂತೆ ಇದೆ. ಅದನ್ನು ತಡೆಹಿಡಿಯಬಹುದು ಎಂದು ಹೇಳಿದ್ದಾರೆ.

ಮದುವೆಯ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಜಾಮೀನು ಅರ್ಜಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಆರೋಪಿಯು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, “ಈ ಮಹಿಳೆಗೆ ಕುಜದೋಷವಿದೆ. ಹೀಗಾಗಿ ವಿವಾಹವಾಗಲು ಸಾಧ್ಯವಿಲ್ಲ” ಎಂದು ವಾದಿಸಿದ್ದಾರೆ.

ಕುಜದೋಷವೆಂಬ ಮೌಢ್ಯ

ಹಿಂದೂ ಜ್ಯೋತಿಷ್ಯದ ಪ್ರಕಾರ, ‘ಮಂಗಳಿ/ಮಾಂಗಲಿಕ’ ಮಂಗಳನ ಪ್ರಭಾವದ ಅಡಿಯಲ್ಲಿ ಜನಿಸಿದ ವ್ಯಕ್ತಿಯಾಗಿರುತ್ತಾರೆ’. ಅಂತಹ ವ್ಯಕ್ತಿಗಳನ್ನು ಮದುವೆಯಾದರೆ ಆಪತ್ತು. ಮದುವೆಯಾದವರು ತೊಂದರೆಗೆ ಸಿಲುಕುತ್ತಾರೆ ಎಂಬ ಮೌಢ್ಯ ಚಾಲ್ತಿಯಲ್ಲಿದೆ.

“ಕುಜ ದೋಷವನ್ನು ಅಂಗಾರಕ ದೋಷ ಮತ್ತು ಮಾಂಗಲ್ಯ ದೋಷ ಎಂದೂ ಕರೆಯುತ್ತಾರೆ. ಅಂದರೆ ಮಾಂಗಲ್ಯಕ್ಕೆ ಧಕ್ಕೆ ಬರುತ್ತದೆ. ಹಾಗಾಗಿ ಮದುವೆಗೂ ಮುನ್ನ ವಧು-ವರರ ಜಾತಕ ನೋಡಿ ದೋಷ ಇದೆಯೋ ಇಲ್ಲವೋ ಎಂಬುದನ್ನು ನಿರ್ಧರಿಸಬೇಕು. ಯಾವುದೇ ಜಾತಕದಲ್ಲಿ ಮಂಗಳ 1ನೇ ಸ್ಥಾನದಲ್ಲಿದ್ದಾಗ ಪ್ರಧಾನ ಕುಜ ದೋಷ ಉಂಟಾಗುತ್ತದೆ” ಎಂಬ ಮೌಢ್ಯ ಬೆಳೆದು ನಿಂತಿದೆ.

ಏನಿದು ಆದೇಶ

ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಬ್ರಿಜ್ ರಾಜ್ ಸಿಂಗ್ ಅವರ ಏಕಸದಸ್ಯ ಪೀಠವು ಮಹಿಳೆಯ ವಕೀಲರಿಗೆ ಈ ಆದೇಶವನ್ನು ನೀಡಿದ್ದರು. ತಮ್ಮ ಕುಂಡಲಿಯನ್ನು ಲಕ್ನೋ ವಿಶ್ವವಿದ್ಯಾಲಯದ ಜ್ಯೋತಿಷ್ಯ ವಿಭಾಗಕ್ಕೆ ಸಲ್ಲಿಸುವಂತೆ ಸೂಚಿಸಿ, ಮೂರು ವಾರಗಳಲ್ಲಿ ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ಸಲ್ಲಿಸಬೇಕು ಎಂದು ತಿಳಿಸಿದ್ದರು.

ಇದನ್ನೂ ಓದಿರಿ: ತಪ್ಪಾದ ಹಳಿಯಲ್ಲಿ ಚಲಿಸುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್‌: ಅಧಿಕಾರಿಗಳು ಹೇಳುವುದೇನು?

ಅತ್ಯಾಚಾರ ಆರೋಪಿ ಪರ ವಕೀಲರು ವಾದ ಮಂಡಿಸಿದ್ದು, “ಯುವತಿಯು ಕುಜದೋಷ ಹೊಂದಿದ್ದಾರೆ. ಆದ್ದರಿಂದ ಮದುವೆಯನ್ನು ಶಾಸ್ತ್ರೋಕ್ತವಾಗಿ ಮಾಡಲು ಸಾಧ್ಯವಿಲ್ಲ” ಎಂದಿದ್ದರು.

ಮತ್ತೊಂದೆಡೆ ಸಂತ್ರಸ್ತೆಯ ಪರ ವಕೀಲರಾದ ವಿವೇಕ್ ಕುಮಾರ್ ಸಿಂಗ್, “ಯುವತಿಯ ಜಾತಕದಲ್ಲಿ ಕುಜ ದೋಷ ಇಲ್ಲ. ಆಕೆ ‘ಮಾಂಗಲಿಕ’ ಅಲ್ಲ” ಎಂದು ವಾದಿಸಿದ್ದರು.

“ಲಕ್ನೋ ವಿಶ್ವವಿದ್ಯಾನಿಲಯದ ಜ್ಯೋತಿಷ್ಯ ವಿಭಾಗದ ಮುಖ್ಯಸ್ಥರು ಹುಡುಗಿ ಮಂಗಳಿಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಬಹುದು. ಸಂಬಂಧಪಟ್ಟವರು ಹತ್ತು ದಿನಗಳಲ್ಲಿ ಲಕ್ನೋ ವಿವಿಯ ಜ್ಯೋತಿಷ್ಯ ವಿಭಾಗದ ಮುಖ್ಯಸ್ಥರ ಮುಂದೆ ಕುಂಡಲಿಯನ್ನು ಹಾಜರುಪಡಿಸಬೇಕು. ಮೂರು ವಾರಗಳಲ್ಲಿ ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ಈ ನ್ಯಾಯಾಲಯಕ್ಕೆ ಸಲ್ಲಿಸಬೇಕು” ಎಂದು ಆದೇಶದಲ್ಲಿ ಸೂಚಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...