Homeಕರ್ನಾಟಕಗ್ಯಾರಂಟಿ ಯೋಜನೆ ಜಾರಿ ಕುರಿತು ಟೀಕೆ ಮಾಡಿದ್ದ ಪ್ರತಾಪ್‌ ಸಿಂಹ ವಿರುದ್ಧ ಡಿ.ಕೆ.ಸುರೇಶ್ ವಾಗ್ದಾಳಿ

ಗ್ಯಾರಂಟಿ ಯೋಜನೆ ಜಾರಿ ಕುರಿತು ಟೀಕೆ ಮಾಡಿದ್ದ ಪ್ರತಾಪ್‌ ಸಿಂಹ ವಿರುದ್ಧ ಡಿ.ಕೆ.ಸುರೇಶ್ ವಾಗ್ದಾಳಿ

- Advertisement -
- Advertisement -

ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಬಿಜೆಪಿ ಹಾಗೂ ‌ಪ್ರತಾಪ್ ಸಿಂಹ ಸರ್ಕಾರದ ವಿರುದ್ಧ ಟೀಕೆಗಳನ್ನು ಮಾಡಿದ್ದಾರೆ. ಇದಕ್ಕೆ ಕಾಂಗ್ರೆಸ್​​​ ಸಂಸದ ಡಿ.ಕೆ.ಸುರೇಶ್ ಅವರು ಬಿಜೆಪಿ ಹಾಗೂ ಪ್ರತಾಪ್ ಸಿಂಹರದ್ದು ಒಡೆದು ಆಳುವ ಸಂಸ್ಕೃತಿ ಎಂದು ವಾಗ್ದಾಳಿ ನಡೆಸಿದರು.

ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಾಪ್​ ಸಿಂಹ ಟೀಕೆ ವಿಚಾರಕ್ಕೆ ತಿರುಗೇಟು ನೀಡಿದರು. ”ಕಾಂಗ್ರೆಸ್​ನಲ್ಲಿ ಒಡೆದು ಆಳುವ ಸಂಸ್ಕೃತಿ ಇಲ್ಲ. ಪ್ರತಾಪ್ ಸಿಂಹ ಅವರು ಒಡೆದು ಆಳುವ ಸಂಸ್ಕೃತಿ ಇಟ್ಟುಕೊಂಡು ಮನೆಹಾಳು ಮಾಡುತ್ತಾರೆ” ಎಂದು ಕಿಡಿಕಾರಿದ್ದಾರೆ.

”ಸಂಸದ ಪ್ರತಾಪ್​ ಸಿಂಹ ಮುಸ್ಲಿಮರನ್ನು ವಿರೋಧ ಮಾಡುತ್ತಿದ್ದರು. ಈಗ ಯಾಕೆ ಮುಸ್ಲಿಮರ ಮೇಲೆ ಪ್ರೀತಿ. ಅವರು ತತ್ವ ಸಿದ್ಧಾಂತ ‌ಇಟ್ಟುಕೊಂಡಿದ್ದಾರೆ ಅದರಿಂದ ಆಚೆ ಬರುವುದು ಬೇಡ. ಕಾಂಗ್ರೆಸ್ ಪಕ್ಷ​ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುತ್ತದೆ. ನಾವು ಏನು ಗ್ಯಾರಂಟಿ ಕೊಟ್ಟಿದ್ದೆವೋ ಅದನ್ನ ಅನುಷ್ಠಾನ ಮಾಡುತ್ತೇವೆ. ರಾಜ್ಯದಲ್ಲಿ ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಕೆಲಸ ಕಾಂಗ್ರೆಸ್​ ಮಾಡುತ್ತಿದೆ” ಎಂದು ಹೇಳಿದರು.

ಈ ವೇಳೆ ಗೋ ಹತ್ಯೆ ನಿಷೇದ ಕಾಯ್ದೆ ರದ್ದು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಸಿದ್ದು, ”ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಸರ್ಕಾರ ಏನು ತೀರ್ಮಾನ ಮಾಡುತ್ತೇ ನೋಡೋಣ. ರೈತರಿಗೆ ಅನುಪಯುಕ್ತವಾದ ಜಾನುವಾರುಗಳನ್ನ ಇಂದಿನಿಂದಲೂ ಬೇರೆ ಬೇರೆದಕ್ಕೆ ಬಳಸುತ್ತಿದ್ದಾರೆ. ಈ ಬಗ್ಗೆ ವ್ಯಾಪಾಕ ಚರ್ಚೆ ಆಗಬೇಕು. ರೈತರ ದೃಷ್ಟಿಯಿಂದ ಮತ್ತು ಸಂಸ್ಕೃತಿ‌ ದೃಷ್ಟಿಯಿಂದ ಏನು ಮಾಡಬೇಕು ಎಂದು ಚರ್ಚೆ ಮಾಡಬೇಕಾಗುತ್ತದೆ” ಎಂದು ಹೇಳಿದರು.

ಇದನ್ನೂ ಓದಿ: ಗ್ಯಾರಂಟಿ ಜಾರಿಯ ಕುರಿತು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು?

ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಾಪ್ ಸಿಂಹ ಹೇಳಿದ್ದೇನು?

ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿ ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ, ”ಗೃಹಲಕ್ಷ್ಮೀ ಯೋಜನೆ ಜಗಳ ಹಚ್ಚುವಂತಿದೆ. ಮನೆ ಯಜಮಾನಿ ಯಾರು ಅಂತಾ ತೀರ್ಮಾನ ಮಾಡಬೇಕಂತೆ? ಮನೆಯೊಳಗೆ ಅತ್ತೆ – ಸೊಸೆ ಕೂತು ಈ ತೀರ್ಮಾನ ಮಾಡಲು ಸಾಧ್ಯನಾ? ಹಿಂದೂಗಳ ಮನೆಯಲ್ಲದರೂ ಅತ್ತೆ – ಸೊಸೆ ನಡುವೆ ಯಜಮಾನಿಗೆ ಪೈಪೋಟಿ ಇರುತ್ತೆ. ಆದರೆ, ಸಾಬರ ಮನೆಯಲ್ಲಿ ಎರಡು ಹೆಂಡ್ತಿ ಮೂರು ಹೆಂಡ್ತಿ ಇದ್ದಾರೆ. ಅವರಲ್ಲಿ ಯಾರು ಯಜಮಾನಿ ಆಗುತ್ತಾರೆ? ಅವರ ಮನೆಯೊಳಗೆ ಬೆಂಕಿ ಹಾಕುತ್ತಿದ್ದಿರಿ. ಕುಟುಂಬ ಒಡೆಯುವ ಕೆಲಸ ಆಗುತ್ತಿದೆ” ಎಂದಿದ್ದರು.

”ಜನ್ ಧನ್ ಅಕೌಂಟ್ ಓಪನ್ ಆಗಿದೆ. ಅದಕ್ಕೆ ಆಧಾರ್ ಕಾರ್ಡ್ ಲಿಂಕ್ ಆಗಿದೆ. ಹೀಗಿದ್ದರು ಗೃಹ ಲಕ್ಷ್ಮಿ ಜಾರಿ ಯಾಕೆ ಆಗುತ್ತಿಲ್ಲ. ಗೃಹ ಲಕ್ಷ್ಮಿ ಯೋಜನೆ ಮುಂದೂಡಲು ಕುಂಟು ನೆಪ ಹೇಳಲಾಗುತ್ತಿದೆ. ಚುನಾವಣೆ ಮೊದಲು ಕಾಂಗ್ರೆಸ್‌ನವರು ಊರಿಗೆ ಹೋಗಿ ಗ್ಯಾರಂಟಿ ಯೋಜನೆಗಳ ಬಗ್ಗೆ ತಮಟೆ ಬಾರಿಸಿದ್ದರು. ಸದ್ಯ ಮಹಿಳೆಯರ ಉಚಿತ ಪ್ರಯಾಣದ ಬಗ್ಗೆ ಕೆಎಸ್ ಆರ್ ಟಿಸಿ ಅಧಿಕಾರಿಗಳಿಗೆ ಮಾಹಿತಿ ಕೊಟ್ಟಿಲ್ಲ” ಎಂದು ಟೀಕಿಸಿದ್ದರು.

”ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುತ್ತೇವೆ ಎನ್ನುತ್ತಿದ್ದರು. ಈಗ ಸರಾಸರಿ ಆಧರಿಸಿ ಉಚಿತ ವಿದ್ಯುತ್ ಎನ್ನುತ್ತಿದ್ದಾರೆ. ಯಾವುದೇ ಷರತ್ತು ಇಲ್ಲದೇ ಉಚಿತ ವಿದ್ಯುತ್ ಜಾರಿ ಮಾಡಿ. ಎಲ್ಲರಿಗೂ 200 ಯೂನಿಟ್ ವಿದ್ಯುತ್ ಉಚಿತ ಎಂದು ಹೇಳಿದ್ದಿರಿ. ಈಗ ಸರಾಸರಿ ತೆಗೆದು ಉಚಿತ ಕೊಡುತ್ತೇವೆ ಎಂದು ಹೇಳಿದ್ದೀರಿ ಇದು ಮೋಸ ಅಲ್ವಾ? ಯಾವುದು ಷರತ್ತು ಇಲ್ಲದೆ ಎಲ್ಲರಿಗೂ 200 ಯೂನಿಟ್ ವಿದ್ಯುತ್ ಉಚಿತವಾಗಿ ಕೊಡಲೇಬೇಕು” ಎಂದು ಆಗ್ರಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...