Homeಕರ್ನಾಟಕಮಹಿಳೆಯರ ಉಚಿತ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್ ಕಡ್ಡಾಯ: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಮಹಿಳೆಯರ ಉಚಿತ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್ ಕಡ್ಡಾಯ: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

- Advertisement -
- Advertisement -

ರಾಜ್ಯ ಸರ್ಕಾರ ಘೋಷಿಸಿದ 5 ಗ್ಯಾರಂಟಿಗಳಲ್ಲಿ ಮಹಿಳೆಯರ ಉಚಿತ ಪ್ರಯಾಣವೂ ಒಂದಾಗಿದೆ. ಇದೀಗ ಸರ್ಕಾರ ಜಾರಿಗೆ ತಂದಿರುವ ‘ಶಕ್ತಿ’ ಯೋಜನೆಗೆ ಸಂಬಂಧಿಸಿದಂತೆ ಸೋಮವಾರ ಮಾರ್ಗಸೂಚಿ ಪ್ರಕಟಿಸಿದೆ.

ರಾಜ್ಯದೊಳಗಿನ ಪುಯಾಣಕ್ಕೆ ಮಾತ್ರ ಈ ಯೋಜನೆಯು ಅನ್ವಯಿಸುತ್ತದೆ. ಮಹಿಳೆಯರು ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಪಡೆಯಬೇಕಾಗುತ್ತದೆ. ಶಕ್ತಿ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸುವ ಪ್ರಕ್ರಿಯೆ ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಜೂನ್‌ 11ರಿಂದ ಮಹಿಳೆಯರು ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ ನಡೆಸಬಹುದು.

ಈ ಸವಲತ್ತು ಪಡೆಯಲು ಸ್ಮಾರ್ಟ್ ಕಾರ್ಡ್ ಕಡ್ಡಾಯ ಎಂದು ಸರ್ಕಾರ ತಿಳಿಸಿದೆ. ಸೇವಾ ಸಿಂಧು ಮೂಲಕ ಅರ್ಜಿ ಪಡೆದು, ಮುಂದಿನ ಮೂರು ತಿಂಗಳ ಒಳಗಾಗಿ ಕಾರ್ಡ್ ವಿತರಣೆ ಕಾರ್ಯ ಪೂರ್ಣಗೊಳಿಸಬೇಕು ಎಂದು ಸರ್ಕಾರವು ಸಾರಿಗೆ ಇಲಾಖೆ ಸೂಚಿಸಿದೆ.

ಶಕ್ತಿ, ಸ್ಮಾರ್ಟ್ ಕಾರ್ಡ್ ವಿತರಿಸುವವರೆಗೆ ಭಾರತ ಸರ್ಕಾರ/ಕರ್ನಾಟಕ ಸರ್ಕಾರದ ಇಲಾಖೆ/ಸರ್ಕಾರಿ ಸ್ವಾಮ್ಯದ ಕಛೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಶೂನ್ಯ ಟಿಕೆಟ್ ವಿತರಿಸುವ ಸಂದರ್ಭದಲ್ಲಿ ಪರಿಗಣಿಸಲಾಗುತ್ತದೆ.

ಈ ಬಸ್‌ಗಳಲ್ಲಿ ಉಚಿತ ಪ್ರಯಾಣ ಇಲ್ಲ?

ರಾಜ್ಯದ ಒಳಗೆ ಸಂಚರಿಸುವ ಐಷಾರಾಮಿ (Luxury) ಬಸ್‌ಗಳಾದ ರಾಜಹಂಸ, ನಾನ್-ಎ.ಸಿ.ಸ್ಲೀಪರ್‌, ವಜ್ರ, ವಾಯುವಜ್ರ, ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್ ಪ್ಲಸ್ (ಎ.ಸಿ. ಬಸ್‌ಗಳು) ಇವುಗಳಿಗೆ ಈ ಯೋಜನೆಯು ಅನ್ವಯಿಸುವುದಿಲ್ಲ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಹೊರತುಪಡಿಸಿ ಉಳಿದ ರಸ್ತೆ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯವ್ಯ ಕರ್ನಾಟಕ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಎಲ್ಲಾ ಬಸ್ಸುಗಳಲ್ಲಿ (ಅಂತರರಾಜ್ಯ ಎ.ಸಿ. ಮತ್ತು ಐಷಾರಾಮಿ ಬಸ್ಸುಗಳನ್ನು ಹೊರತುಪಡಿಸಿ) ಶೇ 50ರಷ್ಟು ಆಸನಗಳನ್ನು ಪುರುಷರಿಗೆ ಕಾಯ್ದಿರಿಸಿಬೇಕು ಎಂದು ಆದೇಶದಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...