Homeಮುಖಪುಟಒಡಿಸ್ಸಾ ರೈಲು ದುರಂತ ನಿರ್ಲಕ್ಷ್ಯದಿಂದ ಸಂಭವಿಸಿದೆ; ಅಪರಿಚಿತರ ವಿರುದ್ಧ ಎಫ್‌ಐಆರ್‌

ಒಡಿಸ್ಸಾ ರೈಲು ದುರಂತ ನಿರ್ಲಕ್ಷ್ಯದಿಂದ ಸಂಭವಿಸಿದೆ; ಅಪರಿಚಿತರ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಒಡಿಸ್ಸಾದ ಬಾಲಸೋರ್‌ನಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಸೋಮವಾರ ಎಫ್‌ಐಆರ್‌ ದಾಖಲಾಗಿದ್ದು, “ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ” ಎಂದು ಉಲ್ಲೇಖಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಒಡಿಶಾದ ಸರ್ಕಾರಿ ರೈಲ್ವೆ ಪೊಲೀಸರು ದಾಖಲಿಸಿದ ಎಫ್‌ಐಆರ್‌ನಲ್ಲಿ, ಅಪರಿಚಿತ ವ್ಯಕ್ತಿಗಳನ್ನು ಪ್ರಕರಣದ ಆರೋಪಿಗಳೆಂದು ಹೆಸರಿಸಲಾಗಿದೆ.

ಭಾರತದಲ್ಲಿ ನಡೆದ ಅತ್ಯಂತ ಭೀಕರ ರೈಲು ಅಪಘಾತಗಳಲ್ಲಿ ಒಂದಾದ ಬಾಲಸೋರ್‌ ದುರಂತದಲ್ಲಿ 288 ಪ್ರಯಾಣಿಕರು ಸಾವನ್ನಪ್ಪಿದರು ಮತ್ತು 900 ಕ್ಕೂ ಹೆಚ್ಚು ಜನರು ಗಾಯಗೊಂಡರು.

ಐಪಿಸಿ ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗುವುದು), ದುಷ್ಕೃತ್ಯ ಅಥವಾ ನಿರ್ಲಕ್ಷ್ಯದ ಕ್ರಿಯೆಯ ಮೂಲಕ ಜೀವಕ್ಕೆ ಹಾನಿ, ಅಪಾಯವನ್ನುಂಟುಮಾಡುವ ಆರೋಪಗಳಿಗೆ ಸಂಬಂಧಿಸಿದ ಸೆಕ್ಷನ್ 37, 38 ಮತ್ತು ಸೆಕ್ಷನ್‌ 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ರೈಲ್ವೆ ಕಾಯ್ದೆಯ ಸೆಕ್ಷನ್‌ 153 (ರೈಲ್ವೇ ಪ್ರಯಾಣಿಕರ ಜೀವಕ್ಕೆ ಅಪಾಯವನ್ನುಂಟು ಮಾಡುವ ಕಾನೂನುಬಾಹಿರ ಮತ್ತು ನಿರ್ಲಕ್ಷ್ಯದ ಕ್ರಮ), 154 ಮತ್ತು 175 (ಜೀವಕ್ಕೆ ಅಪಾಯ ತಂದೊಡ್ಡುವುದು) ಅಡಿಯಲ್ಲೂ ಅಪರಿಚಿತ ವ್ಯಕ್ತಿಗಳ ವಿರುದ್ಧ ಆರೋಪಗಳನ್ನು ಹೊರಿಸಲಾಗಿದೆ.

“ಪ್ರಸ್ತುತ ನಿರ್ದಿಷ್ಟ ರೈಲ್ವೆ ಉದ್ಯೋಗಿಗಳ ಅಪರಾಧವನ್ನು ಖಚಿತಪಡಿಸಲಾಗಿಲ್ಲ, ಇದು ತನಿಖೆಯ ಸಮಯದಲ್ಲಿ ಬೆಳಕಿಗೆ ಬರಲಿದೆ” ಎಂದು ಎಫ್‌ಐಆರ್ ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. ಸಬ್ ಇನ್ಸ್ ಪೆಕ್ಟರ್ ಪಾಪುಕುಮಾರ್ ನಾಯ್ಕ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಜೂನ್ 2 ರಂದು ಹೌರಾದಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್, ಒಡಿಶಾದ ಬಾಲಸೋರ್ ಬಳಿ ಲೂಪ್ ಲೈನ್‌ನಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿತ್ತು. ಕೋರಮಂಡಲ್ ಎಕ್ಸ್‌ಪ್ರೆಸ್‌ಗೆ ಮೇಲ್ಮುಖ ಮಾರ್ಗವನ್ನು ಪ್ರವೇಶಿಸುವಂತೆ ಆರಂಭದಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿತ್ತು, ಆದರೆ ನಂತರ ಸಿಗ್ನಲ್ ತೆಗೆಯಲಾಯಿತು. ಇದರ ಬೆನ್ನಲ್ಲೇ ಎಕ್ಸ್ ಪ್ರೆಸ್ ರೈಲು ಲೂಪ್ ಲೈನ್ ಪ್ರವೇಶಿಸಿತು.

ಇದಾದ ನಂತರ ಹೌರಾ ಕಡೆಗೆ ಹೊರಟಿದ್ದ ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ಬಂದಿತ್ತು. ಕೋರಮಂಡಲ್ ಎಕ್ಸ್‌ಪ್ರೆಸ್‌ನ ಹಳಿತಪ್ಪಿದ ಕೋಚ್‌ಗಳಿಗೆ ಡಿಕ್ಕಿ ಹೊಡೆಯಿತು. ಸಿಗ್ನಲ್ ದೋಷದಿಂದ ಅಪಘಾತ ಸಂಭವಿಸಿರಬಹುದು ಎಂದು ರೈಲ್ವೆಯ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಕೇಂದ್ರೀಯ ತನಿಖಾ ದಳದ 10 ಸದಸ್ಯರ ತಂಡವು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಅದರ ತನಿಖೆಯನ್ನು ಸೋಮವಾರ ಪ್ರಾರಂಭಿಸಿತು ಎಂದು ಪಿಟಿಐ ವರದಿ ಮಾಡಿದೆ.

ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಭಾನುವಾರ ಶಿಫಾರಸು ಮಾಡಿದೆ. ಈ ಕ್ರಮವನ್ನು ಕಾಂಗ್ರೆಸ್ ಸೇರಿದಂತೆ 12 ರಾಜಕೀಯ ಪಕ್ಷಗಳು ಪ್ರಶ್ನಿಸಿದ್ದು, “ತಾಂತ್ರಿಕ, ಸಾಂಸ್ಥಿಕ ಮತ್ತು ರಾಜಕೀಯ ವೈಫಲ್ಯಗಳಿಗೆ ಕಾನೂನು ಜಾರಿ ಸಂಸ್ಥೆಗಳ ತನಿಖೆ ಸರಿಯಲ್ಲ” ಎಂದು ಹೇಳಿವೆ.

ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, “ಸಿಬಿಐ ಅಪರಾಧಗಳನ್ನು ತನಿಖೆ ಮಾಡಲು ಇದೆ, ರೈಲ್ವೆ ಅಪಘಾತಗಳನ್ನಲ್ಲ” ಎಂದು ಟೀಕಿಸಿದ್ದಾರೆ.

“…ಹೆಚ್ಚುವರಿಯಾಗಿ, ಸಿಬಿಐನವರು ರೈಲ್ವೆ ಸುರಕ್ಷತೆ, ಸಿಗ್ನಲಿಂಗ್ ಮತ್ತು ನಿರ್ವಹಣೆ ವಿಚಾರಗಳಲ್ಲಿ ತಾಂತ್ರಿಕ ಪರಿಣತಿಯನ್ನು ಹೊಂದಿರುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿರಿ: ಒಡಿಶಾ ರೈಲು ಅಪಘಾತದಲ್ಲಿ ಸತ್ತವರ ಸಂಖ್ಯೆ 500 ರಷ್ಟಿದೆ, ಆದರೆ ಕೇಂದ್ರ ಕಡಿಮೆ ಲೆಕ್ಕ ತೋರಿಸುತ್ತಿದೆ: ಮಮತಾ ಬ್ಯಾನರ್ಜಿ ಆರೋಪ

ಕಾನ್ಪುರದಲ್ಲಿ 2016ರಲ್ಲಿ ರೈಲು ಹಳಿ ತಪ್ಪಿ 150 ಪ್ರಯಾಣಿಕರು ಸಾವಿಗೀಡಾಗಿದ್ದನ್ನು ಖರ್ಗೆ ಉಲ್ಲೇಖಿಸಿದ್ದಾರೆ. ಆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಿದ್ದನ್ನು ಅವರು ಪ್ರಸ್ತಾಪಿಸಿದ್ದಾರೆ.

“2017ರ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡುತ್ತಾ, ‘ಪಿತೂರಿ’ ನಡೆದಿದೆ ಎಂದು ತಮ್ಮಷ್ಟಕ್ಕೆ ತಾವೇ ಹೇಳಿಕೊಂಡಿರಿ. ಕಠಿಣ ಶಿಕ್ಷೆಯನ್ನು ವಿಧಿಸಲಾಗುವುದು ಎಂದು ದೇಶಕ್ಕೆ ಭರವಸೆ ನೀಡಲಾಯಿತು. ಆದರೆ 2018ರಲ್ಲಿ ಎನ್ಐಎ ತನಿಖೆಯನ್ನು ಮುಕ್ತಾಯಗೊಳಿಸಿತು. ಆರೋಪಪಟ್ಟಿ ಸಲ್ಲಿಸಲು ನಿರಾಕರಿಸಿತು. ರಾಷ್ಟ್ರವು ಇನ್ನೂ ಕತ್ತಲೆಯಲ್ಲಿದೆ. 150 ಸಾವುಗಳಿಗೆ ಯಾರು ಹೊಣೆ?” ಎಂದು ಖರ್ಗೆ ಕೇಳಿದ್ದಾರೆ.

ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಬೇಕು ಮತ್ತು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸಿವೆ.

ಇದರ ನಡುವೆ ತನ್ನ ಸಿಗ್ನಲಿಂಗ್ ವ್ಯವಸ್ಥೆಗಳ ವಿಶ್ವಾಸಾರ್ಹತೆಯನ್ನು ಹೆಚ್ಚಿಸುವ ಉದ್ದೇಶದಿಂದ ರಾಷ್ಟ್ರವ್ಯಾಪಿ ಸುರಕ್ಷತಾ ಅಭಿಯಾನವನ್ನು ರೈಲ್ವೆ ಇಲಾಖೆ ಪ್ರಾರಂಭಿಸಿದೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...