Homeಕರ್ನಾಟಕಚುನಾವಣಾ ಫಲಿತಾಂಶ ಹೊರಬಿದ್ದು 24 ದಿನಗಳು ಕಳೆದರೂ ಪ್ರತಿಪಕ್ಷ ನಾಯಕನ ನೇಮಕ ಮಾಡದ ಬಿಜೆಪಿ

ಚುನಾವಣಾ ಫಲಿತಾಂಶ ಹೊರಬಿದ್ದು 24 ದಿನಗಳು ಕಳೆದರೂ ಪ್ರತಿಪಕ್ಷ ನಾಯಕನ ನೇಮಕ ಮಾಡದ ಬಿಜೆಪಿ

- Advertisement -
- Advertisement -

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದು 24 ದಿನಗಳು ಕಳೆದಿವೆ. ಕಾಂಗ್ರೆಸ್ ಪಕ್ಷ ಅತ್ಯಧಿಕ ಸ್ಥಾನ ಪಡೆದು ಸರ್ಕಾರ ಕೂಡ ರಚನೆ ಮಾಡಿದೆ. ಆದರೆ ಬಿಜೆಪಿಯು ರಾಜ್ಯದಲ್ಲಿ ಶಾಸಕಾಂಗ ಪಕ್ಷದ ನೂತನ ನಾಯಕನನ್ನು, ಅಂದರೆ ಪ್ರತಿಪಕ್ಷದ ನಾಯಕನನ್ನು ಇನ್ನೂ ಆಯ್ಕೆ ಮಾಡಿಲ್ಲ.

ಈ ವಿಚಾರವಾಗಿ ದೆಹಲಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮುಂದಿನ ಮೂರು ದಿನಗಳಲ್ಲಿ ಪಕ್ಷವು ಪ್ರತಿಪಕ್ಷ ನಾಯಕನ ಆಯ್ಕೆ ಮಾಡಲಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಮುಂದಿನ ಮೂರು ದಿನಗಳಲ್ಲಿ ಪ್ರತಿಪಕ್ಷ ನಾಯಕ ಸ್ಥಾನದ ಬಗ್ಗೆ ಪಕ್ಷವು ನಿರ್ಧಾರ ಕೈಗೊಳ್ಳಲಿದೆ” ಎಂದು ತಿಳಿಸಿದ್ದಾರೆ.

”ವಿರೋಧ ಪಕ್ಷದ ನಾಯಕರ ಆಯ್ಕೆ ಈಗಾಗಲೇ ನೇಮಿಸಿಬೇಕಿತ್ತು. ಆದರೆ ನಮ್ಮ ನಾಯಕರು ಒಡಿಶಾ ರೈಲು ಅಪಘಾತದ ಮೇಲೆ ಗಮನ ಕೇಂದ್ರೀಕರಿಸಿದ್ದಾರೆ” ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ, ಸುನೀಲ್ ಕುಮಾರ್ ಹಾಗೂ ಅರವಿಂದ್ ಬೆಲ್ಲದ್ ಅವರ ಹೆಸರು ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಮುಂಚೂಣಿಯಲ್ಲಿವೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ನಮ್ಮ ಸಚಿವರಿವರು; ಕಾಂಗ್ರೆಸ್‌ ಪಕ್ಷದ ಕಟ್ಟಾಳು, ಛಲದಂಕಮಲ್ಲ ಆರ್.ಬಿ.ತಿಮ್ಮಾಪೂರಗೆ ಅಬಕಾರಿ ಖಾತೆ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಬದಲಾಯಿಸುವ ಮಾತುಗಳು ಕೇಳಿಬಂದಿವೆ. ಈಗಾಗಲೇ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಕಳೆದ ವರ್ಷ ಆಗಸ್ಟ್‌ನಲ್ಲಿ ಕೊನೆಗೊಂಡಿತ್ತು. ವಿಧಾನಸಭಾ ಚುನಾವಣೆಯ ಕಾರಣದಿಂದ ಅವಧಿಯನ್ನು ವಿಸ್ತರಿಸಲಾಗಿತ್ತು. ಇದೀಗ ಬಿಜೆಪಿಯ ಹೀನಾಯ ಸೋಲಿನ ನಂತರೆ ರಾಜ್ಯಾಧ್ಯಕ್ಷರನ್ನು ಬದಲಾಯಿಸುವ ಮಾತುಗಳು ಮುನ್ನೆಲೆಗೆ ಬಂದಿದೆ.

ಈ ಬಗ್ಗೆ ಮಾಧ್ಯಮದವರು ಜೋಶಿವರನ್ನು ಪ್ರಶ್ನಿಸಿದಾಗ, ”ಪಕ್ಷವು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷರ ಅಧಿಕಾರಾವಧಿ ಈಗಾಗಲೇ ಮುಗಿದಿದೆ ಮತ್ತು ಪಕ್ಷವು ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ” ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7ರಂದು ಬಜೆಟ್ ಅಧಿವೇಶನ ನಡೆಸುವ ಸಾಧ್ಯತೆ ಇದೆ. ಹಾಗಾಗಿ ಅದಕ್ಕೂ ಮುನ್ನವೇ ವಿರೋಧ ಪಕ್ಷದ ಸ್ಥಾನವಕ್ಕೆ ಸೂಕ್ತ ವ್ಯಕ್ತಿಯನ್ನು ಬಿಜೆಪಿ ನೇಮಿಸುವ ಸಾಧ್ಯತೆ ಇದೆ.

ವಿರೋಧ ಪಕ್ಷದ ನಾಯಕನನ್ನು ನೇಮಿಸಲು ಬಿಜೆಪಿ ವಿಳಂಬ ಮಾಡುತ್ತಿದ್ದರೂ ಪಕ್ಷದ ನಾಯಕರು ಮಾತ್ರ ಕಾಂಗ್ರೆಸ್ ಸರ್ಕಾರದ 5 ಗ್ಯಾರೆಂಟಿಗಳ ಬೆನ್ನುಬಿದ್ದಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಸಚಿವ ಸಂಪುಟ ರಚನೆಯಾದ ಬಳಿಕ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಆದರೆ ಅದಕ್ಕೂ ಮುನ್ನ ಬಿಜೆಪಿ ನಾಯಕರು, ಯಾವಾಗ ಜಾರಿ ಮಾಡುತ್ತೀರಿ? ಬೇಗ ಜಾರಿ ಮಾಡದಿದ್ದರೆ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು.

ಬಿಜೆಪಿ ನಾಯಕರ ಹೇಳಿಕೆಗಳಿಗೆ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿ ಪ್ರತಿಪಕ್ಷದ ನಾಯಕನ ಆಯ್ಕೆಗೆ ಕೇಸರಿ ಪಕ್ಷವು ಏಕೆ ಇಷ್ಟು ಸಮಯ ತೆಗೆದುಕೊಳ್ಳುತ್ತಿದೆ? ಎಂದು ತಿರುಗೇಟು ನೀಡಿತ್ತು.

”ನಾವು ಗೆದ್ದೂ ಆಯ್ತು, ಸಿಎಂ, ಡಿಸಿಎಂ ಆಯ್ಕೆಯೂ ಆಯ್ತು, ಸಚಿವ ಸಂಪುಟವೂ ರೆಡಿ ಆಯ್ತು, ಸರ್ಕಾರದ ರಚನೆಯೂ ಆಯ್ತು. ಇದುವರೆಗೂ ನಮ್ಮ ಸರ್ಕಾರವನ್ನು ಎದುರಿಸಲು ಬಿಜೆಪಿಗೆ ಸಮರ್ಥ ವಿರೋಧ ಪಕ್ಷದ ನಾಯಕ ಸಿಗದಿರುವುದು ದುರಂತ!. ನೈತಿಕತೆ ಇರದಿದ್ದರೇನಂತೆ, ಕನಿಷ್ಠ ವಿರೋಧ ಪಕ್ಷದ ನಾಯಕನನ್ನು ಮುಂದಿಟ್ಟುಕೊಂಡಾದರು ಬಿಜೆಪಿ ನಮ್ಮನ್ನು ವಿರೋಧಿಸಲಿ!” ಎಂದು ಕಾಂಗ್ರೆಸ್ ತಿರುಗೇಟು ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...