Homeಮುಖಪುಟಮಣಿಪುರದಲ್ಲಿ ಹಿಂಸಾಚಾರ ತಡೆಯಲು ಅಮಿತ್ ಶಾ ಮನೆ ಎದುರು ಕುಕಿ ಬುಡಕಟ್ಟು ಮಹಿಳೆಯರಿಂದ ಪ್ರತಿಭಟನೆ

ಮಣಿಪುರದಲ್ಲಿ ಹಿಂಸಾಚಾರ ತಡೆಯಲು ಅಮಿತ್ ಶಾ ಮನೆ ಎದುರು ಕುಕಿ ಬುಡಕಟ್ಟು ಮಹಿಳೆಯರಿಂದ ಪ್ರತಿಭಟನೆ

- Advertisement -
- Advertisement -

ಮಣಿಪುರದ ಕುಕಿ ಬುಡಕಟ್ಟಿನ ಮಹಿಳೆಯರು ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವನ್ನು ತಡೆಯುವಂತೆ ಮನವಿಯ ಫಲಕಗಳನ್ನು ಹಿಡಿದು ನವದೆಹಲಿಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದ ಹೊರಗೆ ಬುಧವಾರ ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಮಾತನಾಡಿದ ಪ್ರತಿಭಟನಾಕಾರರು, ”ಶಾಂತಿ ಮರುಸ್ಥಾಪಿಸಲಾಗುವುದು ಎಂದು ಅವರು ಭರವಸೆ ನೀಡಿದರು ಆದರೆ ಮಣಿಪುರದಲ್ಲಿ ನಮ್ಮ ಸಮುದಾಯದ ಮೇಲೆ ದಾಳಿಗಳು ಮುಂದುವರೆಯುತ್ತಲೇ ಇವೆ. ನಮ್ಮವರ ಜೀವಗಳು ಅಪಾಯದಲ್ಲಿದೆ. ಗೃಹ ಸಚಿವ ಮತ್ತು ಪ್ರಧಾನಿ ನರೇಂದ್ರ ಮೋದಿ ಮಾತ್ರ ನಮಗೆ ಸಹಾಯ ಮಾಡಬೇಕು” ಎಂದು ಹೇಳಿದರು.

ಮಣಿಪುರದಲ್ಲಿ ಭದ್ರತಾ ಪಡೆಗಳು ಮತ್ತು ದಂಗೆಕೋರರ ನಡುವಿನ ಗುಂಡಿನ ಕಾಳಗದಲ್ಲಿ ಮಂಗಳವಾರ ಮುಂಜಾನೆ ಒಬ್ಬ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಸೇನೆಯು ತಿಳಿಸಿದೆ, ಕಾರ್ಯಾಚರಣೆಯಲ್ಲಿ ಅನೇಕ ಬಂಡುಕೋರರನ್ನು ಕೊಲ್ಲಲಾಯಿತು ಎಮದು ಹೇಳಲಾಗಿದೆ.

ಮ್ಯಾನ್ಮಾರ್‌ನ ಗಡಿಯಲ್ಲಿರುವ ಈಶಾನ್ಯ ರಾಜ್ಯವು ಕಳೆದ ಕೆಲವು ವಾರಗಳಲ್ಲಿ ಉದ್ವಿಗ್ನವಾಗಿದೆ, ಗಲಭೆಗಳು ಮತ್ತು ಜನಾಂಗೀಯ ಘರ್ಷಣೆಗಳು ಮೇ ಆರಂಭದಿಂದ ಇಲ್ಲಿಯವರೆಗೆ ಕನಿಷ್ಠ 80 ಜನರು ಸಾವಿಗೀಡಾಗಿದ್ದಾರೆ. 35,000 ಜನರನ್ನು ಸ್ಥಳಾಂತರಿಸಿವೆ. ಕಳೆದ ತಿಂಗಳು ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ ನಂತರ 30ಕ್ಕೂ ಹೆಚ್ಚು ದಂಗೆಕೋರರು ಸಾವಿಗೀಡಾದರು.

”ಜೂನ್ 05/06 ರ ರಾತ್ರಿಯಿಡೀ ಭದ್ರತಾ ಪಡೆಗಳು ಮತ್ತು ದಂಗೆಕೋರರ ಗುಂಪಿನ ನಡುವೆ ಗುಂಡಿನ ದಾಳಿ ನಡೆದಿದೆ. ಭದ್ರತಾ ಪಡೆಗಳು ಅವರ ವಿರುದ್ದ ಪರಿಣಾಮಕಾರಿಯಾಗಿ ಪ್ರತೀಕಾರ ತೀರಿಸಿಕೊಂಡವು” ಎಂದು ಭಾರತೀಯ ಸೇನೆಯು ಟ್ವಿಟರ್‌ನಲ್ಲಿ ತಿಳಿಸಿದೆ.

ಗಡಿ ಭದ್ರತಾ ಪಡೆಯ ಒಬ್ಬ ಯೋಧ ಸಾವನ್ನಪ್ಪಿದ್ದು, ಭಾರತದ ಈಶಾನ್ಯ ಭಾಗದಲ್ಲಿ ಅರೆಸೇನಾ ಪಡೆ ಅಸ್ಸಾಂ ರೈಫಲ್ಸ್‌ನ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅದು ಹೇಳಿದೆ. ”ಶೋಧನಾ ಕಾರ್ಯಾಚರಣೆಗಳು ಪ್ರಗತಿಯಲ್ಲಿವೆ” ಎಂದು ಸೇನೆ ಹೇಳಿದೆ.

ಇದನ್ನೂ ಓದಿ: ಪರಿಶಿಷ್ಟ ಪಂಗಡಕ್ಕೆ ಮೈತಿ ಸಮುದಾಯ ಸೇರಿಸುವ ವಿಚಾರ; ಮಣಿಪುರ ಹೈಕೋರ್ಟ್ ಆದೇಶ ವಾಸ್ತವವಾಗಿ ತಪ್ಪು ಎಂದ ಸುಪ್ರೀಂ

ಹಿಂಸಾಚಾರಕ್ಕೆ ಕಾರಣವೇನು?

ಮೇ 3ರಂದು ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿತು, ಮೈತಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂಬ ಬೇಡಿಕೆಯನ್ನು ವಿರೋಧಿಸಿ ಮಣಿಪುರದ ಎಲ್ಲಾ ಬುಡಕಟ್ಟು ವಿದ್ಯಾರ್ಥಿಗಳ ಒಕ್ಕೂಟವು ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು.

ಪ್ರತಿಭಟನಾಕಾರರಲ್ಲಿ ಮಣಿಪುರದ ದೊಡ್ಡ ಬುಡಕಟ್ಟು ಸಮುದಾಯಗಳಲ್ಲಿ ಒಂದಾದ ಕುಕಿಗಳು ಸೇರಿದ್ದಾರೆ. ಅವರು ರಾಜ್ಯ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದಾರೆ ಮತ್ತು ನಿರ್ದಿಷ್ಟವಾಗಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಮೈತಿ ಸಮುದಾಯದ ಪರವಾಗಿದ್ದಾರೆ ಎಂದು ಸಮುದಾಯವು ಹೇಳಿಕೊಳ್ಳುತ್ತದೆ. ಈ ಘರ್ಷಣೆಯಲ್ಲಿ ಕನಿಷ್ಠ 80 ಜನರು ಸಾವನ್ನಪ್ಪಿದ್ದಾರೆ.

ರಾಜ್ಯದ ಜನಸಂಖ್ಯೆಯ 60% ರಷ್ಟಿರುವ ಮೈತಿ ಸಮುದಾಯದ ಸದಸ್ಯರು ಹೆಚ್ಚಾಗಿ ಇಂಫಾಲ್ ಕಣಿವೆಯಲ್ಲಿ ಕೇಂದ್ರೀಕೃತರಾಗಿದ್ದಾರೆ. ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶಿ ಪ್ರಜೆಗಳಿಂದ ದೊಡ್ಡ ಪ್ರಮಾಣದ ಅಕ್ರಮ ವಲಸೆಯಿಂದಾಗಿ ತೊಂದರೆಗಳನ್ನು ಎದುರಿಸುತ್ತಿದೆ ಎಂದು ಸಮುದಾಯವು ಹೇಳಿಕೊಂಡಿದೆ. ಕಾನೂನಿನ ಪ್ರಕಾರ ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಮೈಟೀಸ್‌ಗೆ ನೆಲೆಸಲು ಅವಕಾಶವಿಲ್ಲ.

ಮಣಿಪುರದ ಬುಡಕಟ್ಟು ಬೆಟ್ಟದ ಜಿಲ್ಲೆಗಳು ಸಂವಿಧಾನದ ಆರ್ಟಿಕಲ್ 371C ಅಡಿಯಲ್ಲಿ ವಿಶೇಷ ರಕ್ಷಣೆಗಳನ್ನು ಅನುಭವಿಸುತ್ತವೆ, ಅದು ಜಿಲ್ಲೆಗಳ ಮೇಲೆ ಪರಿಣಾಮ ಬೀರುವ ಎಲ್ಲಾ ಕಾನೂನುಗಳನ್ನು ಮಣಿಪುರ ವಿಧಾನಸಭೆಯ ಗುಡ್ಡಗಾಡು ಪ್ರದೇಶಗಳ ಸಮಿತಿಯು ಪರಿಶೀಲಿಸಬೇಕು ಎಂದು ಹೇಳುತ್ತದೆ.

ವಿಶ್ವಾಸ ಹೆಚ್ಚಿಸುವ ಕ್ರಮಗಳ ಭಾಗವಾಗಿ ಕಳೆದ ವಾರ ನಾಲ್ಕು ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡಿದ ಅಮಿತ್ ಶಾ ಅವರು ಎಲ್ಲಾ ಸಮುದಾಯಗಳ ಪ್ರತಿನಿಧಿಗಳು ಮತ್ತು ಮುಖಂಡರನ್ನು ಭೇಟಿಯಾಗಿದ್ದರು.

ಮಣಿಪುರದ ಶಾಂತಿ ಮತ್ತು ಸಮೃದ್ಧಿಯು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಗೃಹ ಸಚಿವರು ಹೇಳಿದ್ದಾರೆ ಮತ್ತು ಶಾಂತಿ ಕದಡುವ ಯಾವುದೇ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ಎದುರಿಸಲು ಭದ್ರತಾ ಪಡೆಗಳಿಗೆ ಸೂಚನೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Karnataka SIR | ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಿದ ಹೋರಾಟಗಾರರು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ಗೆ ಬಹಿರಂಗ ಸವಾಲು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಹೋರಾಟಗಾರರು ತಿರಸ್ಕರಿಸಿದ್ದು, ಹೋರಾಟ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಬುಧವಾರ (ಅ.28) ಬೆಂಗಳೂರಿನ ಶಾಸಕರ ಭವನದಲ್ಲಿ...

ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ; ಪ್ರತಿಭಟನಾ ಸ್ಥಳಕ್ಕೆ ರಾಹುಲ್ ಗಾಂಧಿ ಭೇಟಿ ಸಾಧ್ಯತೆ

ಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡುವ ನಿರೀಕ್ಷೆಯಿರುವ ಬೆನ್ನಲ್ಲೇ, ವಿದ್ಯಾರ್ಥಿಗಳ ಹೋರಾಟಕ್ಕೆ ಪಕ್ಷವು ಬೆಂಬಲ ವ್ಯಕ್ತಪಡಿಸಿದೆ. ವಿದ್ಯಾರ್ಥಿ ಸಂಘವನ್ನು (ಜೆಎಂಐಎಸ್‌ಯು)...

ಎಂಎಲ್‌ಸಿ ಚುನಾವಣೆ ಸೋಲಿನ ಹಿಂದಿರುವ ರಾಜಕೀಯ – ಸಂಘಟನಾತ್ಮಕ ಕಾರಣಗಳ ಕುರಿತು ಪರಾಮರ್ಶಿಸುತ್ತೇವೆ: ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್

ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ನಡೆದ ವಿಧಾನ ಪರಿಷತ್ ಚುನಾವಣೆಯ ಸೋಲಿನ ಹಿಂದಿರುವ ರಾಜಕೀಯ ಹಾಗೂ ಸಂಘಟನಾತ್ಮಕ ಕಾರಣಗಳ ಕುರಿತು ಸಮಗ್ರ ಪರಾಮರ್ಶೆ ನಡೆಸುತ್ತೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್...

ಸ್ಪೇನ್‌ನಲ್ಲಿ ಅತಿ ವೇಗದ ರೈಲುಗಳ ನಡುವೆ ಡಿಕ್ಕಿ; ಕನಿಷ್ಠ 46 ಮಂದಿ ಸಾವು

ಸ್ಪೇನ್‌ನ ಟೊಲೆಡೊ ಪ್ರಾಂತ್ಯದಲ್ಲಿ ಬುಧವಾರ ಬೆಳಿಗ್ಗೆ ಎರಡು ಅತಿ ವೇಗದ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ ಕನಿಷ್ಠ 46 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಪೇನ್‌ನ ಎಬಿಸಿ (ಎಬಿಸಿ) ಸುದ್ದಿ ಸಂಸ್ಥೆ ವರದಿ ಮಾಡಿದೆ....

ಇಸ್ರೇಲ್ ಚುನಾವಣೆಯಲ್ಲಿ ಸಿಗದ ಬಹುಮತ; ಆದರೂ ಗೆಲುವಿನ ಹಕ್ಕು ಮಂಡಿಸಿದ ನೆತನ್ಯಾಹು

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅರಬ್ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಜೆರುಸಲೇಮ್‌ನಲ್ಲಿರುವ ಲಿಕುಡ್ ಪಕ್ಷದ ಪ್ರಧಾನ ಕಚೇರಿಯಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಯಹೂದಿ ಮತ್ತು ಝಿಯೋನಿಸ್ಟ್...

ದೆಹಲಿ: 2020ರ ಮುಸ್ಲಿಂ ವಿರೋಧಿ ಹಿಂಸಾಚಾರದಲ್ಲಿ 22 ವರ್ಷದ ಯುವಕನ ಹತ್ಯೆ: ಐವರು ಹಿಂದುತ್ವವಾದಿಗಳಿಗೆ ಏಳು ವರ್ಷ ಜೈಲು ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್

2020ರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಮುಸ್ಲಿಂ ವಿರೋಧಿ ಹಿಂಸಾಚಾರದ ಸಂದರ್ಭದಲ್ಲಿ 22 ವರ್ಷದ ಮುಸ್ಲಿಂ ಯುವಕ ಮೋನಿಷ್  ಅವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಐವರು ಹಿಂದುತ್ವವಾದಿ ಪುರುಷರಿಗೆ ವಿಧಿಸಲಾಗಿದ್ದ ಏಳು ವರ್ಷಗಳ...

ಅರ್ನಬ್ ಚಂಡಮಾರುತ: ಆಂಧ್ರಪ್ರದೇಶದಲ್ಲಿ ಮೂವರ ಸಾವು; ಹಲವು ಮನೆಗಳಿಗೆ ಹಾನಿ

ಅರ್ನಬ್ ಚಂಡಮಾರುತವು ಆಂಧ್ರಪ್ರದೇಶದಲ್ಲಿ ಭಾರೀ ಹಾನಿಯನ್ನುಂಟುಮಾಡಿದೆ. ಚಂಡಮಾರುತದಿಂದಾಗಿ ಮೂವರು ಮೃತಪಟ್ಟಿದ್ದು, 31 ಮನೆಗಳು ಹಾನಿಗೀಡಾಗಿವೆ ಎಂದು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್‌)ಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಸ್ತುತ ಚಂಡಮಾರುತವು ಪುದುಚೇರಿಯ ಯಾನಂ ಸಮೀಪದ...

ಉತ್ತರ ಪ್ರದೇಶದ ವಿಧಾನ ಪರಿಷತ್ತಿನ ಫಲಿತಾಂಶ: ವಾರಣಾಸಿಯ ಎರಡೂ ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷಕ್ಕೆ ಭರ್ಜರಿ ಗೆಲುವು

ಉತ್ತರ ಪ್ರದೇಶ: ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ (ಎಸ್‌ಪಿ) ಗಮನಾರ್ಹ ಸಾಧನೆ ಮಾಡಿದೆ. ವಾರಣಾಸಿ ಶಿಕ್ಷಕರ...

ಎಂಎಲ್‌ಸಿ ಚುನಾವಣೆ ಫಲಿತಾಂಶ: ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟಕ್ಕೆ ಜಯ; ಕಾಂಗ್ರೆಸ್‌ಗೆ ಭಾರೀ ಹಿನ್ನಡೆ

ಕರ್ನಾಟಕ ವಿಧಾನ ಪರಿಷತ್ತಿನ ಇತ್ತೀಚಿನ ಚುನಾವಣೆಯಲ್ಲಿ ಕಾಂಗ್ರೆಸ್ ಒಂದೇ ಒಂದು ಸ್ಥಾನವನ್ನೂ ಗೆಲ್ಲಲು ವಿಫಲವಾಗಿದೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ನಾಲ್ಕೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದರೆ, ಅದರ...

ಥೇಣಿ ಉಪಜೈಲಿನಿಂದ 17 ವಿಚಾರಣಾಧೀನ ಕೈದಿಗಳ ಪರಾರಿ ಪ್ರಕರಣ; ಡ್ರೋನ್ ತಂತ್ರಜ್ಞಾನದ ನೆರವಿನಿಂದ 13 ಮಂದಿ ಸೆರೆ

ತಮಿಳುನಾಡಿನ ಥೇಣಿ ಜಿಲ್ಲಾ ಜೈಲಿನಿಂದ 17 ಕೈದಿಗಳು ಪರಾರಿಯಾದ ಒಂದು ದಿನದೊಳಗೆ, ಮಂಗಳವಾರ ಸಂಜೆಯ ವೇಳೆಗೆ ತಮಿಳುನಾಡು ಪೊಲೀಸರು ಡ್ರೋನ್ ತಂತ್ರಜ್ಞಾನವನ್ನು ಬಳಸಿಕೊಂಡು ಅವರ ಪೈಕಿ 13 ಮಂದಿಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ದಕ್ಷಿಣ ವಲಯದ...