Homeಮುಖಪುಟರಾಜ್ಯದ ಬೊಕ್ಕಸ ಬರಿದಾಗಿಸಿರುವುದನ್ನು ಸ್ವತಃ ಒಪ್ಪಿಕೊಂಡ ಬಿಜೆಪಿ: ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ

ರಾಜ್ಯದ ಬೊಕ್ಕಸ ಬರಿದಾಗಿಸಿರುವುದನ್ನು ಸ್ವತಃ ಒಪ್ಪಿಕೊಂಡ ಬಿಜೆಪಿ: ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ

- Advertisement -
- Advertisement -

ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಲು ಹೋಗಿ ಹಿಂದೆ ಆಡಳಿತ ನಡೆಸಿದ್ದ ಬಿಜೆಪಿ ಪಕ್ಷ ಪೇಚಿಗೆ ಸಿಲುಕಿಕೊಂಡಿದೆ. ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ರಾಜ್ಯದ ಬೊಕ್ಕಸದಲ್ಲಿ ದುಡ್ಡಿಲ್ಲ, ಎಲ್ಲವೂ ಮುಳುಗುವ ಹಾದಿಯಲ್ಲಿವೆ ಎಂದು ಫೇಸ್‌ಬುಕ್ ಪೋಸ್ಟ್ ಹಾಕುವ ಮೂಲಕ ತನ್ನ ಕೆಟ್ಟ ಆಡಳಿತವನ್ನು ಒಪ್ಪಿಕೊಂಡಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ನಡೆಯುತ್ತಿದೆ.

“ರಾಜ್ಯದಲ್ಲಿ ಅವಾಸ್ತವಿಕ ಗ್ಯಾರಂಟಿಗಳ ಅನುಷ್ಠಾನಕ್ಕೆ ಪತರುಗುಟ್ಟುತ್ತಿರುವ ಸಿದ್ದರಾಮಯ್ಯ ಅವರ ಸರ್ಕಾರ ಸಿಕ್ಕ ಸಿಕ್ಕ ಇಲಾಖೆಗೆ ‘ಕೈ’ ಹಾಕಿ ಆರ್ಥಿಕ ದಿವಾಳಿ ಎಬ್ಬಿಸುತ್ತಿದೆ.
ಬಿಎಂಟಿಸಿ- ಆರ್ಥಿಕ ಇಂಧನವಿಲ್ಲ
ಜಲಮಂಡಳಿ- ಹಣಕಾಸಿನ ಹಾಹಾಕಾರ
ಕೆಎಸ್‌ಆರ್‌ಟಿಸಿ – ನಷ್ಟದ ಹೆದ್ದಾರಿಯಲ್ಲಿ
ವಿದ್ಯುತ್ ಸರಬರಾಜು ಕಂಪೆನಿಗಳು – ಮುಳುಗುವ ಹಾದಿಯಲ್ಲಿ
ಇನ್ನು ಹಲವು ಇಲಾಖೆಗಳ ಸಂಸ್ಥೆಗಳು ಅಧಃಪತನದ ಪಟ್ಟಿಯಲ್ಲಿದ್ದು,
‘ಅರ್ಥ’ವಿಲ್ಲದ #ATMSarkara ಸೃಷ್ಟಿಸಿರುವ ಅರಾಜಕತೆಗೆ ಬಲಿಯಾಗಲು ‘ಸಿದ್ದ’ವಾಗಿವೆ” ಎಂದು ಬಿಜೆಪಿ ತನ್ನ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.

ಕಾಂಗ್ರೆಸ್ ಸರಕಾರ ಬಂದು ಎಷ್ಟು ದಿನ ಆಯಿತು. ಈ ಬಿಜೆಪಿಯವರು ಎಷ್ಟು ವರ್ಷ ಇದ್ದರು? ಇನ್ನೂ ಬಜೆಟೇ ಆಗಿಲ್ಲ! ಅಷ್ಟರಲ್ಲೇ ಸರಕಾರವನ್ನು ದೂರುವ ಭರದಲ್ಲಿ ತಮ್ಮ ವೈಫಲ್ಯವನ್ನೇ ಹರಾಜು ಹಾಕಿದ್ದಾರೆ ಈ ಬಿಜೆಪಿ ಮೂರ್ಖರು! ಮಹಾನ್ ಬುದ್ಧಿವಂತಿಕೆ ತೋರಲು ಹೋಗಿ ಶತಮೂರ್ಖರಾಗುವುದು ಹೀಗೆಯೇ! ಎಂದು ಹಿರಿಯ ಪತ್ರಕರ್ತ ನಿಖಿಲ್ ಕೋಲ್ಪೆ ಅಭಿಪ್ರಾಯಪಟ್ಟಿದ್ದಾರೆ.

ಆರ್ಥಿಕ ದಿವಾಳಿ ಎಬ್ಬಿಸಿ ಬಂದಿದ್ದೇವೆ, ಹೇಗೆಲ್ಲಾ ಗ್ಯಾರಂಟಿ ನೀಡ್ತಾರೆ ಅಂತ ತಲೆ ಕೆಡಿಸಿಕೊಂಡಿದ್ದ ಬಿಜೆಪಿಗೆ ಅವರ ಐಟಿ ಸೆಲ್ ಬಿಜೆಪಿ ಸರ್ಕಾರ #ATMSarkara ಆಗಿತ್ತು ಅಂತ ಎಸ್ಟು ಸಲೀಸಾಗಿ ಹೇಳಿದ್ದಾರೆ ನೋಡಿ ಎಂದು ರಾಮಚಂದ್ರ ಕಲ್ಲೇರ್ ಹೇಳಿದ್ದಾರೆ.

40% ಬ್ರಸ್ಟಾಚರವನ್ನು ನಾವು ಮಾಡಿದ್ದೊ ಅನ್ನುವುದನ್ನು ಅವರೇ ಒಪ್ಪಿಕೊಂಡಿದ್ದಾರೆ ಎಂದು ಕೀಲಾರ ನಾಗೇಗೌಡ ಶಿವಲಿಂಗಯ್ಯ ಬರೆದಿದ್ದಾರೆ.

ನನಗೆ ಬಿಜೆಪಿಗರ ‘ಪ್ರಾಮಾಣಿಕತೆ’ ಬಹಳ ಇಷ್ಟ. 10 ದಿನಗಳಷ್ಟೆ ಮುಗಿಸಿರುವ ಕಾಂಗ್ರೇಸ್ ಸರ್ಕಾರವನ್ನು ಟೀಕಿಸಲು ಹೋಗಿ ಬಿಜೆಪಿ ರಾಜ್ಯದ ಹಣಕಾಸು ಪರಿಸ್ಥಿತಿಯ ಬಗ್ಗೆ ಶ್ವೇತಪತ್ರ ಹೊರಡಿಸಿದೆ. ಬಿಜೆಪಿ ತನ್ನ ಆಡಳಿತಾವಧಿಯಲ್ಲಿ ಯಾವೆಲ್ಲಾ ಇಲಾಖೆಗಳನ್ನು ದಿವಾಳಿ ಮಾಡಿಟ್ಟಿದೆ ಎಂದು ಅವರದ್ದೇ ಮಾತಲ್ಲಿ ಓದಿ ಫ್ರೆಂಡ್ಸಾ! ಇವರ ಪೇಜ್ ಆಡ್ಮಿನ್ ಗಳು ಗುಂಡು ಹಾಕಿ ಕೊನೆಗೆ ತಮ್ಮದು ATM ಸರ್ಕಾರವಾಗಿತ್ತೆಂದೂ ಒಪ್ಕಂಡಿವೆ. ಡಬ್ಬಲ್ ಇಂಜಿನ್ ಸರ್ಕಾರದ ಬೊಕ್ಕಸ ಬರಿದಾಗಿಸಿರುವ ಅಮೋಘ ಸಾಧನೆಗಳನ್ನು ಸೇರ್ ಮಾಡುವ ಫ್ರೆಂಡ್ಸಾ.

ಹಲಾಲ್ ಹಿಜಾಬ್ ಗಳಲ್ಲಿ ಮುಳುಗಿದ್ದ ಬಿಜೆಪಿ ತನ್ನ ಸಾಧನೆಗಳ ಬಗ್ಗೆ ಕೊನೆಗೂ ಸತ್ಯ ಹೇಳಿದೆ ಎಂದು ಹಿರಿಯ ಲೇಖಕರಾದ ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ಸರ್ಕಾರದ ಆರನೇ ಸಾಧನೆ .. ಕರ್ನಾಟಕವನ್ನು ಹಲಾಲ್, ಹಿಜಾಬ್, ಹರಿಯೋಂ ಅಂತ ಉಪಯೋಗವಿಲ್ಲದ ಭಜನೆಯಲ್ಲಿ ಮುಳುಗಿಸಿದ್ದ ಬಿಜೆಪಿಯನ್ನು ಮೇಲೆತ್ತಿ ರಿಯಲ್ ಸಮಸ್ಯೆಗಳ ಕುರಿತು ಮಾತನಾಡುವಂತೆ ಮಾಡಿದ್ದು. ಅಂದಹಾಗೆ ಕೆಳಗಿನ ಎಲ್ಲಾ ಸಮಸ್ಯೆಗಳು ಹಿಂದಿನ ಸರ್ಕಾರದಲ್ಲೇ ಇತ್ತು, ಈಗ ನೆನಪಾಯ್ತು ಅಷ್ಟೇ ಎಂದು ಗಣೇಶ್ ಬರೆದಿದ್ದಾರೆ.

ಇದನ್ನೂ ಓದಿ: ಚುನಾವಣಾ ಫಲಿತಾಂಶ ಹೊರಬಿದ್ದು 24 ದಿನಗಳು ಕಳೆದರೂ ಪ್ರತಿಪಕ್ಷ ನಾಯಕನ ನೇಮಕ ಮಾಡದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...