Homeಮುಖಪುಟಈ ಭಯದ ವಾತಾವರಣದಲ್ಲಿ ನಮಗೆ ನ್ಯಾಯ ಸಿಗುವುದೇ?: ಕುಸ್ತಿಪಟು ವಿನೇಶ್ ಫೋಗಟ್ ಆತಂಕ

ಈ ಭಯದ ವಾತಾವರಣದಲ್ಲಿ ನಮಗೆ ನ್ಯಾಯ ಸಿಗುವುದೇ?: ಕುಸ್ತಿಪಟು ವಿನೇಶ್ ಫೋಗಟ್ ಆತಂಕ

- Advertisement -
- Advertisement -

ಈ ”ಭಯದ ವಾತಾವರಣದಲ್ಲಿ” ಭಾರತದ ಹೆಣ್ಣುಮಕ್ಕಳಿಗೆ ನ್ಯಾಯ ಸಿಗುತ್ತದೆಯೇ ಎಂದು ವಿನೇಶ್ ಫೋಗಟ್ ಆತಂಕ ವ್ಯಕ್ತಪಡಿಸಿದ್ದಾರೆ.

ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದ ಅಪ್ರಾಪ್ತೆ ತನ್ನ ಲೈಂಗಿಕ ಕಿರುಕುಳದ ಆರೋಪಗಳನ್ನು ಹಿಂತೆಗೆದುಕೊಂಡ ಬಳಿಕ ನ್ಯಾಯ ಸಿಗುವ ಬಗ್ಗೆ ಫೋಗಟ್ ಟ್ವೀಟ್ ಮಾಡಿ ತಮ್ಮ ಆತಂಕ ಹೊರಹಾಕಿದ್ದಾರೆ.

”ಹೆಣ್ಣುಮಕ್ಕಳಿಗೆ ಭಯಪಡಿಸಿ ಬೆದರಿಕೆಯ ವಾತಾವರಣ ಸೃಷ್ಟಿ ಮಾಡಲಾಗುತ್ತಿದೆ. ಹೀಗಿದ್ದಾಗ ನಮಗೆ ನ್ಯಾಯ ಸಿಗುವುದೇ???” ಎಂದು ವಿನೇಶ್ ತಮ್ಮ ಅಧಿಕೃತ ಹ್ಯಾಂಡಲ್‌ನಿಂದ ಟ್ವೀಟ್ ಮಾಡಿದ್ದಾರೆ.

”ಇದೇ ಬೃಜಭೂಷಣನ ತಮ್ಮ ರಾಜಕೀಯ ಪ್ರಭಾವ ಮತ್ತು ಸುಳ್ಳು ಹೇಳಿಕೆಗಳಿಂದ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡುವಲ್ಲಿ ನಿರತರಾಗಿದ್ದಾರೆ. ಆದ್ದರಿಂದ ಅವರ ಬಂಧನ ಅಗತ್ಯವಾಗಿದೆ. ಪೊಲೀಸರು ನಮ್ಮ ನಡುವೆ ಬಿರುಕು ಉಂಟುಮಾಡುವ ಬದಲು ಆತನನ್ನು ಬಂಧಿಸಿದರೆ, ನ್ಯಾಯ ಸಿಗುವ ಭರವಸೆ ಇದೆ, ಇಲ್ಲದಿದ್ದರೆ ಇಲ್ಲ”.

”ಮಹಿಳಾ ಕುಸ್ತಿಪಟುಗಳು ಪೊಲೀಸ್ ತನಿಖೆಗಾಗಿ ಅಪರಾಧ ಸ್ಥಳಕ್ಕೆ ಹೋಗಿದ್ದರು, ಆದರೆ ಅವರು ರಾಜಿ ಮಾಡಿಕೊಳ್ಳಲು ಹೋಗಿದ್ದಾರೆ ಎಂದು ಮಾಧ್ಯಮಗಳಲ್ಲಿ ಪ್ರಸಾರವಾಯಿತು” ಎಂದು ಹೇಳಿದ್ದಾರೆ.

17 ವರ್ಷದೊಳಗಿನವರ ಏಷ್ಯನ್ ಚಾಂಪಿಯನ್‌ಶಿಪ್‌ಗಾಗಿನ ಟ್ರಯಲ್ಸ್‌ನಲ್ಲಿ ತಮ್ಮ ಮಗಳ ಸೋಲಿಗೆ ಸಿಂಗ್ ಅವರನ್ನು ಹೊಣೆಗಾರರನ್ನಾಗಿ ಮಾಡಿದ್ದರಿಂದ ಅವರೊಂದಿಗೆ ಅಂಕವನ್ನು ಇತ್ಯರ್ಥಪಡಿಸಲು ಬಯಸಿದ್ದರಿಂದ ಸಿಂಗ್ ವಿರುದ್ಧ ಆರೋಪಗಳನ್ನು ಹೊರಿಸಲಾಗಿದೆ ಎಂದು ಅಪ್ರಾಪ್ತರ ತಂದೆ ಪಿಟಿಐಗೆ ತಿಳಿಸಿದ್ದಾರೆ.

ಲೈಂಗಿಕ ಕಿರುಕುಳಕ್ಕೆ ಕಾರಣವಾದ ಘಟನೆಗಳನ್ನು ಮರುಸೃಷ್ಟಿಸಲು ದೆಹಲಿ ಪೊಲೀಸರು ಶುಕ್ರವಾರ ಕುಸ್ತಿಪಟು ಸಂಗೀತಾ ಫೋಗಟ್ ಅವರನ್ನು ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಅಧಿಕೃತ ನಿವಾಸಕ್ಕೆ ಕರೆದೊಯ್ದಿದ್ದಾರೆ. ಪಿಟಿಐ ಮೂಲಗಳ ಪ್ರಕಾರ, ಫೋಗಟ್ ಜೊತೆಗೆ ಮಹಿಳಾ ಕಾನ್‌ಸ್ಟೆಬಲ್‌ಗಳು ಕೂಡಾ ಇದ್ದರು. ಮಧ್ಯಾಹ್ನ 1.30ಕ್ಕೆ ಮಹಿಳಾ ಅಧಿಕಾರಿಗಳು ಸಂಗೀತಾ ಫೋಗಟ್ ಅವರನ್ನು ದೆಹಲಿಯ ಬ್ರಿಜ್ ಭೂಷಣ್ ಅವರ ಅಧಿಕೃತ ನಿವಾಸಕ್ಕೆ ಕರೆದೊಯ್ದರು. ಅವರು ಅರ್ಧ ಗಂಟೆ ಅಲ್ಲಿಯೇ ಇದ್ದರು. ಅವರು ದೃಶ್ಯವನ್ನು ಮರುಸೃಷ್ಟಿಸಲು ಮತ್ತು ಕಿರುಕುಳಕ್ಕೊಳಗಾದ ಸ್ಥಳಗಳನ್ನು ನೆನಪಿಸಿಕೊಳ್ಳುವಂತೆ ಕೇಳಿದರು ಎಂದು ಮೂಲಗಳು ತಿಳಿಸಿವೆ.

ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಮತ್ತು ಉತ್ತರ ಪ್ರದೇಶದ ಕೈಸರ್‌ಗಂಜ್‌ನ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಿಂಗ್ ವಿರುದ್ಧ ದಾಖಲಾಗಿರುವ ಎರಡು ಪ್ರಕರಣಗಳ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಸಾಧ್ಯತೆಯಿದೆ.

ತನಿಖೆಯ ಭಾಗವಾಗಿ, ಎಸ್‌ಐಟಿ 180ಕ್ಕೂ ಹೆಚ್ಚು ಜನರನ್ನು ವಿಚಾರಣೆಗೆ ಒಳಪಡಿಸಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರು ತಮ್ಮ ತನಿಖೆಯನ್ನು ಜೂನ್ 15ರೊಳಗೆ ಪೂರ್ಣಗೊಳಿಸುವವರೆಗೆ ಕಾಯುವಂತೆ ಸರ್ಕಾರ ಜೂನ್ 7ರಂದು, ಮನವಿ ಮಾಡಿತು. ಹಾಗಾಗಿ ಅಲ್ಲಿಯವರೆಗೂ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ಒಂದು ವಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಒಪ್ಪಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

RSS ಕುರಿತು ಪೋಸ್ಟ್ ಹಾಕಿದ್ದಕ್ಕೆ ಎಕ್ಸ್‌ ಖಾತೆ ಬ್ಲಾಕ್ ಮಾಡಲು ಸೂಚಿಸಿದ ದೆಹಲಿ ಪೊಲೀಸರು : ಕೋರ್ಟ್ ಮೆಟ್ಟಿಲೇರುವುದಾಗಿ ಎಚ್ಚರಿಸಿದ ಐಎಫ್‌ಎಫ್‌

ತನ್ನ ಖಾತೆ ಮತ್ತು ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ಪೋಸ್ಟ್‌ಗಳನ್ನು ತೆಗೆದು ಹಾಕುವಂತೆ ದೆಹಲಿ ಪೊಲೀಸರು ಸಾಮಾಜಿಕ ಜಾಲತಾಣ ಎಕ್ಸ್‌ಗೆ ಕೋರಿದ್ದಾರೆ ಎಂದು ಇಂಟರ್‌ನೆಟ್ ಫ್ರೀಡಂ ಫೌಂಡೇಶನ್ (ಐಎಫ್‌ಎಫ್‌) ಮಂಗಳವಾರ (ನ.3) ತಿಳಿಸಿದೆ. ಐಎಫ್‌ಎಫ್‌ ಭಾರತದಲ್ಲಿ...

ರಾಜ್ಯದ 226 ತಾಲೂಕುಗಳಲ್ಲಿ 57.93 ಲಕ್ಷ ಹೆಕ್ಟೇರ್ ಬೆಳೆ ಹಾನಿ; ಕೇಂದ್ರದ ಸಣ್ಣ ನೆರವು ಸಾಕಾಗಲ್ಲ; ಪ್ರಧಾನಿ ಮೋದಿಗೆ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಪತ್ರ!

ಕರ್ನಾಟಕದ 226 ತಾಲೂಕುಗಳಲ್ಲಿ ಬರದ ಭೀಕರತೆಯಿಂದ ತತ್ತರಿಸಿರುವ ಲಕ್ಷಾಂತರ ರೈತರನ್ನು ರಕ್ಷಿಸಲು ತಕ್ಷಣವೇ ಬೃಹತ್ ಮಟ್ಟದ ಆರ್ಥಿಕ ನೆರವು ಬಿಡುಗಡೆ ಮಾಡುವಂತೆ ಆಗ್ರಹಿಸಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಪ್ರಧಾನಮಂತ್ರಿ ನರೇಂದ್ರ...

‘ಭಾರತ ಒಂದು ಜಾತ್ಯತೀತ ದೇಶ’: ದಿಯಾ ಮಿರ್ಜಾ ವಿಡಿಯೋ ಕುರಿತ ಬಿಜೆಪಿ ನಾಯಕರ ಟೀಕೆಗೆ ಬಾಂಬೆ ಹೈಕೋರ್ಟ್ ಆಕ್ಷೇಪ : ವಿಡಿಯೋ ಮರುಸ್ಥಾಪಿಸಲು ಬಿಎಂಸಿಗೆ ಆದೇಶ

ಸಾರ್ವಜನಿಕ ರಸ್ತೆಗಳಲ್ಲಿ ಪಟಾಕಿ ಸಿಡಿಸದಂತೆ ದೀಪಾವಳಿ ಹಬ್ಬದ ಮುನ್ನ ನಾಗರಿಕರಲ್ಲಿ ನಟಿ ದಿಯಾ ಮಿರ್ಜಾ ಮನವಿ ಮಾಡಿಕೊಂಡಿದ್ದ ವಿಡಿಯೋ ವಿರುದ್ಧ ಕೆಲವು ರಾಜಕಾರಣಿಗಳು ಮಾಡಿದ ಟೀಕೆಗಳನ್ನು ಬಾಂಬೆ ಹೈಕೋರ್ಟ್ ತೀವ್ರವಾಗಿ ಖಂಡಿಸಿದೆ. ನ್ಯಾಯಮೂರ್ತಿ ಗಿರೀಶ್...

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ: ‘ಕುಮಾರಸ್ವಾಮಿ ಸಮ್ಮುಖದಲ್ಲೇ ವಿಡಿಯೋ ಅಪ್‌ಲೋಡ್’; ವರದಿಯ ಶೇ.10ರಷ್ಟನ್ನೇ ಬಹಿರಂಗಪಡಿಸಿದ್ದೇವೆ ಎಂದ ಕಾಂಗ್ರೆಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣ ಇದೀಗ ರಾಜಕೀಯ ಸಂಘರ್ಷಕ್ಕೆ ಮತ್ತಷ್ಟು ತಿರುವು ನೀಡಿದೆ. ಸ್ಟಿಂಗ್ ಕಾರ್ಯಾಚರಣೆಗೆ ಬಳಸಲಾಗಿದೆ ಎನ್ನಲಾದ ಮೊಬೈಲ್ ಫೋನ್‌ಗಳನ್ನು ಕೇಂದ್ರ ಸಚಿವ...

ಕರ್ನಾಟಕ ಎಸ್‌ಐಆರ್‌ನ ಹಲವು ಅವಾಂತರಗಳು ಬಯಲು : ಸಂಪೂರ್ಣ ಮೌನ ಪಾಲಿಸಿದ ಚುನಾವಣಾ ಆಯೋಗ

ತೀವ್ರ ವಿರೋಧದ ನಡುವೆಯೂ ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸಿದ ಚುನಾವಣಾ ಆಯೋಗ, 2026ರ ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿ ಕೈತೊಳೆದುಕೊಂಡಿದೆ. ರಾಜ್ಯದ ಮುಖ್ಯ ಚುನಾವಣಾ ಆಯುಕ್ತ...

ವಕ್ಫ್ ತಿದ್ದುಪಡಿ ಕಾಯ್ದೆ 2025: ಸೀಮಿತ 5 ಅರ್ಜಿಗಳ ನಿಯಮ ತೆರವು; ಹೊಸ ರಿಟ್ ಅರ್ಜಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ!

ಕೇವಲ ಮಧ್ಯಂತರ ಅರ್ಜಿದಾರರಾಗಿ ವಾದ ಮಂಡಿಸಲು ಸಾಧ್ಯವಿಲ್ಲ ಎಂದ ಪೀಠ: 2027ರ ಜನವರಿಯಲ್ಲಿ ಅಂತಿಮ ವಿಸ್ತೃತ ವಿಚಾರಣೆ! ಕೇಂದ್ರ ಸರ್ಕಾರದ ವಿವಾದಾತ್ಮಕ ‘ವಕ್ಫ್ (ತಿದ್ದುಪಡಿ) ಕಾಯ್ದೆ 2025’ ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ನಡೆಯುತ್ತಿರುವ...

ಸ್ಥಳೀಯ ಸಂಸ್ಥೆ ಚುನಾವಣೆಗೆ ಯಾವುದೇ ಕಾರಣಕ್ಕೂ ‘SIR’ ಪಟ್ಟಿಯನ್ನು ಬಳಸಬೇಡಿ! ರಾಜ್ಯ ಸರ್ಕಾರಕ್ಕೆ ಹೋರಾಟಗಾರರ ಎಚ್ಚರಿಕೆ!

ಯುಪಿ, ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರಗಳೇ ಬದಿಗೊತ್ತಿದ ‘SIR’ ಪಟ್ಟಿಯನ್ನು ಕರ್ನಾಟಕ ಸರ್ಕಾರವೂ ಕೈಬಿಡಬೇಕು! ಕೇಂದ್ರ ಚುನಾವಣಾ ಆಯೋಗವು ‘ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅಂತಿಮ ಪಟ್ಟಿ ಪ್ರಕಟಿಸಿದ ನಂತರವೂ ಲಕ್ಷಾಂತರ...

ಬಿಡದಿ ಟೌನ್‌ಶಿಪ್ : 2 ಗ್ರಾಮಗಳ 1,895 ಎಕರೆ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ

ರಾಮನಗರ ತಾಲೂಕಿನ ಬಿಡದಿ ಹೋಬಳಿಯಲ್ಲಿರುವ ಕಂಚುಗಾರನಹಳ್ಳಿ ಮತ್ತು ಬೈರಮಂಗಲ ಗ್ರಾಮಗಳಲ್ಲಿ, ಪ್ರಸ್ತಾವಿತ 'ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್' (GBIT) ಯೋಜನೆಗಾಗಿ 1,895 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಅಂತಿಮ ಅಧಿಸೂಚನೆಯನ್ನು ಕರ್ನಾಟಕ ಸರ್ಕಾರ ಹೊರಡಿಸಿದೆ...

ಪಂಜಾಬ್ : ಮೂವರು ಎಎಪಿ ಶಾಸಕರು ಬಿಜೆಪಿ ಸೇರ್ಪಡೆ; ವಿಧಾನಸಭೆ ಚುನಾವಣೆಗೆ ಮುನ್ನ ಮಹತ್ವದ ಬೆಳವಣಿಗೆ

ಪಂಜಾಬ್ ವಿಧಾನಸಭಾ ಚುನಾವಣೆಗೆ (2027) ಮುನ್ನ ಆಮ್ ಆದ್ಮಿ ಪಾರ್ಟಿ (ಎಎಪಿ) ನೇತೃತ್ವದ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದ್ದು, ಸೋಮವಾರ (ನ.2) ಮೂವರು ಶಾಸಕರಾದ ಹರ್ಮೀತ್ ಸಿಂಗ್ ಪಠಾನ್‌ಮಜ್ರಾ, ಚೇತನ್ ಸಿಂಗ್ ಜೌರಾಮಜ್ರಾ ಮತ್ತು...

‘ಹೆಸರುಗಳನ್ನು ತೆಗೆದುಹಾಕುವುದು ಕಳ್ಳತನವಲ್ಲ’; ಎಸ್‌ಐಆರ್ ಬಗ್ಗೆ ಪ್ರತಿಪಕ್ಷಗಳು ಗೊಂದಲ ಹರಡುತ್ತಿವೆ: ಸಂಬಿತ್ ಪಾತ್ರ

ವಾರಾಣಸಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಪಕ್ಷಗಳು ಗೊಂದಲ ಸೃಷ್ಟಿಸುತ್ತಿವೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಹಾಗೂ ಪುರಿ ಸಂಸದ ಸಂಬಿತ್ ಪಾತ್ರ ಆರೋಪಿಸಿದ್ದಾರೆ. ಮತದಾರರ ಪಟ್ಟಿಯಿಂದ...