Homeಕರ್ನಾಟಕಸಾಗರದ ದಲಿತ ಬಾಲಕಿಯ ಸಂಶಯಾಸ್ಪದ ಸಾವು ಪ್ರಕರಣ: ಲೈಂಗಿಕ ಕಿರುಕುಳದ ಶಂಕೆ; ವನಶ್ರೀ ಮುಖ್ಯಸ್ಥ ಮಂಜಪ್ಪ...

ಸಾಗರದ ದಲಿತ ಬಾಲಕಿಯ ಸಂಶಯಾಸ್ಪದ ಸಾವು ಪ್ರಕರಣ: ಲೈಂಗಿಕ ಕಿರುಕುಳದ ಶಂಕೆ; ವನಶ್ರೀ ಮುಖ್ಯಸ್ಥ ಮಂಜಪ್ಪ ವಶಕ್ಕೆ

- Advertisement -
- Advertisement -

ಶಿವಮೊಗ್ಗ ಜಿಲ್ಲೆ ಸಾಗರದ ವನಶ್ರೀ ವಸತಿ ವಿದ್ಯಾಲಯದ ವಿದ್ಯಾರ್ಥಿನಿ ತೇಜಸ್ವಿನಿ (13) ಸಾವಿನ ಪ್ರಕರಣ ಸಂಬಂಧ ಪೊಲೀಸರು ವಿದ್ಯಾಲಯದ ಮುಖ್ಯಸ್ಥ ವನಶ್ರೀ ಮಂಜಪ್ಪ (ಎಚ್.ಪಿ.ಮಂಜಪ್ಪ) ಅವರನ್ನು ಶನಿವಾರ ವಶಕ್ಕೆ ಪಡೆದಿದ್ದಾರೆ.

ಸೊರಬ ತಾಲ್ಲೂಕು ಶಿವಪುರ ಗ್ರಾಮದ ಕಡುಬಡ ದಲಿತ ಕುಟುಂಬದ 8ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿಯನ್ನು ಸಾಗರದ ವನಶ್ರೀ ಎಂಬ ವಸತಿ ಶಾಲೆಗೆ ಐದು ದಿನಗಳ ಹಿಂದೆ ಸೇರಿಸಲಾಗಿತ್ತು. ವನಶ್ರೀ ಶಾಲೆ ನಡೆಸುವ ಎಚ್‌.ಪಿ. ಮಂಜಪ್ಪ ಬಲವಂತವಾಗಿ ನೀರು ಕುಡಿಸಿದ್ದರು ಎಂದು ಸ್ಥಳದಲ್ಲಿದ್ದ ವಿದ್ಯಾರ್ಥಿಗಳು ಹೇಳುತ್ತಿರುವುದಾಗಿ ವರದಿಯಾಗಿದೆ. ಗುರುವಾರ (ಜೂನ್ 8) ವಾಂತಿ ಮಾಡಿಕೊಂಡು ತೀವ್ರವಾಗಿ ಅಸ್ವಸ್ಥಗೊಂಡಿದ್ದ ಆಕೆಯನ್ನು ಶಾಲೆಯ ವಾಹನದಲ್ಲೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಆಕೆ ಅಸುನೀಗಿದ್ದಳು.

ವಿದ್ಯಾಲಯದ ಮುಖ್ಯಸ್ಥ ವನಶ್ರೀ ಮಂಜಪ್ಪ (ಎಚ್.ಪಿ.ಮಂಜಪ್ಪ) ಅವರು ಆರ್‌ಎಸ್‌ಎಸ್ ಹಿನ್ನೆಲೆಯವರೆಂದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ.

ಈ ಬಗ್ಗೆ ತೇಜಸ್ವಿನಿ ಪಾಲಕರು ಮಾಧ್ಯಮಗಳ ಜೊತೆ ಮಾತನಾಡಿ, ”ಐದು ದಿನಗಳ ಹಿಂದಷ್ಟೇ ಮಗಳನ್ನು ವಿದ್ಯಾಲಯಕ್ಕೆ ಸೇರಿಸಿದ್ದೆವು. ಅವಳಿಗೆ ಯಾವುದೇ ಆರೋಗ್ಯದ ಸಮಸ್ಯೆ ಇರಲಿಲ್ಲ. ದಿಢೀರನೆ ಆಕೆ ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ನಮಗೆ ನ್ಯಾಯ ಒದಗಿಸಿಕೊಡಬೇಕು” ಎಂದು ಒತ್ತಾಯಿಸಿದರು.

ವಿದ್ಯಾರ್ಥಿನಿ ಸಾವು: ವಸತಿ ಶಾಲೆ ಮುಖ್ಯಸ್ಥ ಪೊಲೀಸ್ ವಶಕ್ಕೆ

”ಬಾಲಕಿಯ ಸಾವಿಗೆ ಕಾರಣವೇನು? ತಾಸುಗಟ್ಟಲೆ ಬಾಲಕಿಯನ್ನು ಕೂಡಿಹಾಕಲಾಗಿತ್ತು. ಯಾಕೆ ಈ ಭಯಾನಕ ಕೃತ್ಯ ಎಸಗಲಾಯಿತು? ಸತ್ಯ ಹೊರಗೆ ಬರಬೇಕು” ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತರು ಆಗ್ರಹಿಸುತ್ತಿದ್ದಾರೆ.

ವಿದ್ಯಾರ್ಥಿನಿಯ ಪೋಷಕರು ಹಾಗೂ ಶಿವಪುರ ಗ್ರಾಮಸ್ಥರು ಶನಿವಾರ ವರದಹಳ್ಳಿ ರಸ್ತೆಯಲ್ಲಿರುವ ವಿದ್ಯಾಲಯದ ಎದುರು ಈ ಸಾವಿನ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ತಪ್ಪಿತಸ್ಥರನ್ನು ಬಂಧಿಸುವಂತೆ ಪಟ್ಟು ಹಿಡಿದರು. ಪ್ರತಿಭಟನಕಾರರು ವಿದ್ಯಾಲಯದ ಒಳಗೆ ನುಗ್ಗಲೂ ಮುಂದಾದರು. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನಕಾರರನ್ನು ತಡೆದರು. ವಿದ್ಯಾಲಯದ ಮುಖ್ಯಸ್ಥ ಮಂಜಪ್ಪ ಅವರನ್ನು ವಶಕ್ಕೆ ಪಡೆದು, ವಿಚಾರಣೆಗೆ ಒಳಪಡಿಸಿದರು.

”ಆರೋಗ್ಯವಾಗಿದ್ದ ಮಗಳು, ವಸತಿ ಶಾಲೆಗೆ ಹೋದ ಕೆಲವೇ ದಿನದಲ್ಲಿ ಅನಾರೋಗ್ಯಕ್ಕೊಳಗಾಗಿದ್ದು ಹೇಗೆ? ಈ ಕುರಿತು ವಸತಿ ಶಾಲೆಯವರು ಯಾವುದೇ ಮಾಹಿತಿಯನ್ನು ಪೋಷಕರಿಗೆ ಕೊಟ್ಟಿರಲಿಲ್ಲ. ಈ ಹಿನ್ನಲೆಯಲ್ಲಿ ಮೃತಳ ಶವವನ್ನು ಮರಣೋತ್ತರ ಪರೀಕ್ಷೆಗೆ ಮೆಗ್ಗಾನ್ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಮೃತಳ ಶವವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ಹಾಸ್ಟೆಲ್‌ನಲ್ಲಿರುವ ಅವ್ಯವಸ್ಥೆಯಿಂದಲೇ ವಿದ್ಯಾರ್ಥಿನಿಯು ಮೃತಪಟ್ಟಿದ್ದಾಳೆ” ಎಂದು ಕುಟುಂಬಸ್ಥರು ದೂರಿದ್ದಾರೆ.

ಇದನ್ನೂ ಓದಿ: ಸಾಗರ: ದಲಿತ ಬಾಲಕಿಯ ಅನುಮಾನಾಸ್ಪದ ಸಾವು; 2 ಬಕೆಟ್‌ ನೀರು ಕುಡಿಸಿದ್ದ ವಸತಿ ಶಾಲೆ ಮುಖ್ಯಸ್ಥ- ಆರೋಪ

”ಕಾಲು ನೋವು ಇರುವುದಾಗಿ ತೇಜಸ್ವಿನಿ ಹೇಳಿದ್ದಳು. ಮಂಜಪ್ಪ, ಮುಲಾಮು ಹಚ್ಚುವ ನೆಪದಲ್ಲಿ ಆಕೆಯನ್ನು ತಮ್ಮ ಕೊಠಡಿಗೆ ಕರೆದುಕೊಂಡು ಹೋಗಿದ್ದಾರೆ. ಇದನ್ನು ವಿದ್ಯಾಲಯದ ಇತರ ವಿದ್ಯಾರ್ಥಿನಿಯರು ನೋಡಿದ್ದಾರೆ. ಬಾಲಕಿಯರು ತಂಗಿರುವ ವಸತಿ ವಿದ್ಯಾಲಯದಲ್ಲಿ ರಾತ್ರಿ ವೇಳೆ ಪುರುಷರು ಇರಲು ಅವಕಾಶ ಕಲ್ಪಿಸಿದ್ದಾದರೂ ಏಕೆ?” ಎಂದು ಪ್ರತಿಭಟನಕಾರರು ಪ್ರಶ್ನಿಸಿದ್ದಾರೆ.

”ಬಾಲಕಿಯು ಅಸ್ವಸ್ಥಗೊಂಡಾಗಲೇ ಪಾಲಕರಿಗೆ ವಿಷಯ ತಿಳಿಸದೆ, ಮೃತಪಟ್ಟ ನಂತರ ಮಾಹಿತಿ ನೀಡಿರುವುದು ಅನುಮಾನ ಮೂಡಿಸಿದೆ. ಮಂಜಪ್ಪ ಅವರು ಚಿಕಿತ್ಸೆಯ ನೆಪದಲ್ಲಿ ತೇಜಸ್ವಿನಿಗೆ ಬಲವಂತವಾಗಿ ಅಗಾಧ ಪ್ರಮಾಣದಲ್ಲಿ ನೀರು ಕುಡಿಸಿದ್ದಾರೆ. ಇದನ್ನೂ ವಿದ್ಯಾಲಯದ ಇತರ ವಿದ್ಯಾರ್ಥಿನಿಯರು ನೋಡಿದ್ದಾರೆ. ಆಕೆಗೆ ಲೈಂಗಿಕ ಕಿರುಕುಳ ನೀಡಿರುವ ಸಾಧ್ಯತೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಪೊಲೀಸರು ಸಮಗ್ರ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದರು.

ಮಂಜಪ್ಪ ತಮ್ಮ ದೇಹದ ಖಾಸಗಿ ಭಾಗಗಳನ್ನು ಸ್ಪರ್ಶಿಸುವ ಮೂಲಕ ಲೈಂಗಿಕ ಕಿರುಕುಳ ನೀಡಿರುವುದಾಗಿ ವಿದ್ಯಾಲಯದ ಕೆಲ ವಿದ್ಯಾರ್ಥಿನಿಯರು ಪೊಲೀಸರಿಗೆ ದೂರಿದ್ದಾರೆ.

ಈ ಕುರಿತು ವರದಿ ಮಾಡಿರುವ ‘ವಿಜಯ ಕರ್ನಾಟಕ’ ಪತ್ರಿಕೆಯು, ಸಾವಿಗೀಡಾದ ಬಾಲಕಿಯ ಅಣ್ಣನ ಹೇಳಿಕೆಯನ್ನು ದಾಖಲಿಸಿದೆ. ”ಬುಧವಾರ ರಾತ್ರಿ ವಸತಿ ಶಾಲೆಯಲ್ಲಿದ್ದವರು ತಮ್ಮ ಕುಟುಂಬದವರೊಂದಿಗೆ ಮಾತನಾಡಿದಾಗ ಹೇಳಿದ್ದೇ ಬೇರೆ. ಶಾಲೆಯಲ್ಲಿ ಯೋಗಾಸನ ಮಾಡಿಸಿದ್ದರಿಂದ ತೇಜಸ್ವಿನಿ ಕಾಲು ನೋವಾಗಿದೆ. ಇದಕ್ಕೆ ಮುಲಾಮು ಹಚ್ಚಿದ್ದು, ಗುಣಮುಖರಾಗುತ್ತಾರೆ ಎಂದು ಮಂಜಪ್ಪ ತಿಳಿಸಿದ್ದರು. ಗುರುವಾರ ಘಟನೆ ನಡೆದ ಬಳಿಕ ಮಕ್ಕಳೊಂದಿಗೆ ಮಾತನಾಡಿದಾಗ, ನಾನು ನೀರು ಕುಡಿಸಿಯೇ ಇದನ್ನು ಪರಿಹರಿಸುತ್ತೇನೆ ಎಂದು ಮಂಜಪ್ಪ ಅವರು ಕುಡಿಯಲು ಲೀಟರ್‌ಗಟ್ಟಲೆ ನೀರು ಕೊಟ್ಟಿದ್ದಾರೆ. ಕಾಲಿಗೆ ಬಿದ್ದು ಪೋಷಕರೊಂದಿಗೆ ಮಾತನಾಡಲು ಕೇಳಿಕೊಂಡರೂ ಅವರು ಒಪ್ಪಿಲ್ಲ” ಎಂದು ನೋವು ತೋಡಿಕೊಂಡಿದ್ದಾರೆ.

ಸಾಗರ ತಾಲೂಕಿನ ವನಶ್ರೀ ವಸತಿ ಶಾಲೆಯಲ್ಲಿ ಸ್ಥಳೀಯ ಬಡ ಹೆಣ್ಣು ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಇಲ್ಲಿ ಆರೋಗ್ಯ ಸಮಸ್ಯೆ ಆಗಿದ್ದರೂ, ಹಾಸ್ಟೇಲ್​ನಲ್ಲಿರುವ ಸಿಬ್ಬಂದಿ ಮತ್ತು ವಾರ್ಡನ್‌ಗಳು ನಿರ್ಲಕ್ಷ್ಯ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯ ಸಾವು ಹಾಸ್ಟೇಲ್​ನಲ್ಲೇ ಆಗಿದೆ ಎನ್ನುವುದು ಕುಟುಂಬಸ್ಥರ ವಾದವಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿಯ ಅನುಮಾನಸ್ಪದ ಸಾವು ಕುರಿತು ಕೇಸ್ ದಾಖಲಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿದ್ದ ವಸತಿ ಶಾಲೆ ಮುಖ್ಯಸ್ಥ ಎಚ್‌.ಪಿ. ಮಂಜಪ್ಪ, ”ಭಾನುವಾರ 8ನೇ ತರಗತಿಗೆ ತೇಜಸ್ವಿನಿ ಅವರನ್ನು ದಾಖಲಿಸಿಕೊಳ್ಳಲಾಗಿತ್ತು. ಇವರ ಜತೆ ಇವರದೇ ಕುಟುಂಬದ 7 ಮಕ್ಕಳನ್ನು ಸೇರಿಸಿಕೊಳ್ಳಲಾಗಿತ್ತು. ಬುಧವಾರ ರಾತ್ರಿ ವಿದ್ಯಾರ್ಥಿನಿ ಸುಸ್ತು ಎಂದು ಹೇಳಿದ್ದಾಳೆ. ಕೂಡಲೇ ಶಾಲೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಗುರುವಾರ ಬೆಳಗ್ಗೆ ತೇಜಸ್ವಿನಿ ರೂಮಿನಲ್ಲಿ ವಾಂತಿ ಮಾಡಿಕೊಂಡಿದ್ದಾಳೆ. ಸುದ್ದಿ ತಿಳಿಯುತ್ತಿದ್ದಂತೆ ಆಕೆಯನ್ನು ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಯಿತು. ವಿದ್ಯಾರ್ಥಿನಿ ಶಾಲೆಗೆ ಬಂದು ಐದು ದಿನವಾಗಿದ್ದರಿಂದ ಹೆಚ್ಚಿನ ಮಾಹಿತಿ ನಮಗಿಲ್ಲ. ನಮ್ಮ ವಸತಿ ಶಾಲೆಯಲ್ಲಿ ಯಾವುದೇ ಲೋಪದೋಷಗಳಾಗಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸತ್ಯ ತಿಳಿಯಲಿದೆ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...