Homeಮುಖಪುಟಪ್ರಧಾನಿಗೆ ಖರ್ಗೆ ಬರೆದ ಪತ್ರಕ್ಕೆ ಕರ್ನಾಟಕದ ಸಂಸದರಿಂದ ಆಕ್ಷೇಪ: ಇದು 'ಬಿಜೆಪಿಗರ ಅಸಹಿಷ್ಣುತೆಗೆ ಉದಾಹರಣೆಯಾಗಿದೆ' ಎಂದ...

ಪ್ರಧಾನಿಗೆ ಖರ್ಗೆ ಬರೆದ ಪತ್ರಕ್ಕೆ ಕರ್ನಾಟಕದ ಸಂಸದರಿಂದ ಆಕ್ಷೇಪ: ಇದು ‘ಬಿಜೆಪಿಗರ ಅಸಹಿಷ್ಣುತೆಗೆ ಉದಾಹರಣೆಯಾಗಿದೆ’ ಎಂದ ಪಿ. ಚಿದಂಬರಂ

- Advertisement -
- Advertisement -

ಒಡಿಶಾ ಭೀಕರ ರೈಲು ದುರಂತಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಆ ಪತ್ರಕ್ಕೆ ಕರ್ನಾಟಕದ ನಾಲ್ವರು ಬಿಜೆಪಿ ಸಂಸದರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಕ್ರಿಯೆ ನೀಡಿದ್ದರು. ಇದು ‘ಬಿಜೆಪಿಗರ ಅಸಹಿಷ್ಣುತೆಗೆ ಉದಾಹರಣೆಯಾಗಿದೆ’ ಎಂದು ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರು ಶನಿವಾರ ಹೇಳಿದ್ದಾರೆ.

ಕರ್ನಾಟಕದ ಸಂಸದರಾದ ತೇಜಸ್ವಿ ಸೂರ್ಯ, ಸದಾನಂದ ಗೌಡ, ಪಿ.ಸಿ. ಮೋಹನ್ ಮತ್ತು ಎಸ್. ಮುನಿಸ್ವಾಮಿ ಅವರು ಖರ್ಗೆ ಅವರ ಪತ್ರವನ್ನು ಆಕ್ಷೇಪಿಸಿ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾಗಿ ಈ ವಿಚಾರವಾಗಿ  ಮಾತನಾಡಿದ ಚಿದಂಬರಂ ಅವರು, ”ಈ ಪ್ರತಿಕ್ರಿಯೆಯಲ್ಲಿ ಸತ್ವವಿಲ್ಲ ಮತ್ತು ವಿಷಯ ಮಂಡನೆಯು ಪೊಳ್ಳಾಗಿದೆ” ಎಂದಿದ್ದಾರೆ.

ಖರ್ಗೆ ಅವರು ಪತ್ರದಲ್ಲಿ, ”ರೈಲ್ವೆ ಭದ್ರತೆಯ ಕುರಿತು ಅಶ್ವಿನಿ ವೈಷ್ಣವ್ ಅವರು ನೀಡಿದ್ದ ಟೊಳ್ಳು ಭರವಸೆಗಳ ನಿಜ ಬಣ್ಣ ಈಗ ಬಯಲಾಗಿದೆ ಎಂದು ಉಲ್ಲೇಖಿಸಿದ್ದರು. ಜೊತೆಗೆ, ರೈಲು ಅಪಘಾತ ತನಿಖೆಯನ್ನು ಸಿಬಿಐಗೆ ವಹಿಸುವುದನ್ನು ವಿರೋಧಿಸಿದ್ದ ಅವರು, ಸಿಬಿಐ ಇರುವುದು ಅಪರಾಧ ಪ್ರಕರಣಗಳ ತನಿಖೆ ನಡೆಸಲು ಹೊರತು ಅಪಘಾತದ ತನಿಖೆ ನಡೆಸಲು ಅಲ್ಲ” ಎಂದು ಟೀಕಿಸಿದ್ದರು.

ಇದನ್ನೂ ಓದಿ: ಸಿಬಿಐ ಕೆಲಸ ಅಪರಾಧಗಳನ್ನು ತನಿಖೆ ಮಾಡುವುದು, ರೈಲ್ವೆ ಅಪಘಾತಗಳ ತನಿಖೆ ಮಾಡುವುದಲ್ಲ: ಪ್ರಧಾನಿಗೆ ಖರ್ಗೆ ಪತ್ರ

ಇದಕ್ಕೆ ಸಂಸರು ಪ್ರತಿಕ್ರಿಯಿ, ”ವಾಟ್ಸ್‌ಆ್ಯಪ್ ವಿಶ್ವವಿದ್ಯಾಲಯದಿಂದ ಎರವಲು ಪಡೆದ ಮಾಹಿತಿ ಆಧರಿಸಿ ಪ್ರಧಾನಿ ಅವರಿಗೆ ಪತ್ರ ಬರೆಯುವುದು ನಿಮ್ಮಂಥ ಉನ್ನತ ನಾಯಕರಿಗೆ ಸರಿಹೊಂದುವುದಿಲ್ಲ. ವಾಟ್ಸ್‌ಆ್ಯಪ್ ವಿ.ವಿಯ ಕುಲಪತಿಗಳಾದ ನೀವು ಸುಳ್ಳು ಸುದ್ದಿಗಳನ್ನು ಉಗುಳಲೇಬೇಕು ಎಂಬ ಒತ್ತಡಕ್ಕೆ ಒಳಗಾಗಿರುತ್ತೀರಿ” ಎಂದು ಸಂಸದರು ಹೇಳಿದ್ದಾರೆ.

ಬಿಜೆಪಿ ಸಂಸದರ ಈ ಹೇಳಿಕೆಯನ್ನು ವಿರೋಧಿಸಿರುವ ಚಿದಂಬರಂ ಅವರು, ”ಕಾರ್ಯಪ್ರವೃತ ಪ್ರಜಾಪ್ರಭುತ್ವದಲ್ಲಿ ಇಂಥ ಪತ್ರಗಳಿಗೆ ಪ್ರಧಾನಿ ಉತ್ತರಿಸಲಿ ಎಂದು ಜನರು ಎದುರು ನೋಡುತ್ತಾರೆ. ಆದರೆ ನಮ್ಮದೇಶದ ಪ್ರಜಾಪ್ರಭುತ್ವ ಹೇಗಿದೆ ಎಂದರೆ, ಪ್ರಧಾನಿಯು ಪತ್ರಕ್ಕೆ ಪ್ರತಿಕ್ರಿಯಿಸಬೇಕು ಎಂಬುದನ್ನು ಪರಿಗಣಿಸುವುದೂ ಇಲ್ಲ” ಎಂದು ಹೇಳಿದ್ದಾರೆ.

”ಖರ್ಗೆ ಅವರು ಎತ್ತಿದಂಥ ಪ್ರಶ್ನೆಗಳನ್ನೇ ಹೋಲುವಂಥ ಅಂಶಗಳನ್ನು ಮಹಾಲೇಖಪಾಲರು 2022ರ ಡಿಸೆಂಬರ್‌ನಲ್ಲಿ ನೀಡಿದ್ದ ವರದಿಯು ಉಲ್ಲೇಖಿಸಿತ್ತು. ಆಗ್ನೆಯ ವಿಭಾಗೀಯ ರೈಲ್ವೆಯ ಮುಖ್ಯ ಕಾರ್ಯಕಾರಿ ನಿರ್ವಾಹಕರು 2023ರ ಫೆಬ್ರುವರಿ 9ರಂದು ಬರೆದಿದ್ದ ಪತ್ರದಲ್ಲಿ ಒಡಿಶಾದ ಬಾಲೇಶ್ವರ ರೈಲು ದುರಂತದಂಥ ಘಟನೆಗಳು ನಡೆಯುವ ಸಂಭವದ ಕುರಿತು ಎಚ್ಚರಿಸಿದ್ದರು. ಈ ಪತ್ರಕ್ಕೆ ಸಂಬಂಧಿಸಿ ಸರ್ಕಾರವು ಯಾವ ಕ್ರಮ ಕೈಗೊಂಡಿದೆ ಎಂದು ಗೌರವಾನ್ವಿತ ಸಂಸದರು ಮಾಹಿತಿ ನೀಡುತ್ತಾರೆಯೇ?” ಎಂದು ಚಿದಂಬರಂ ಅವರು ಪ್ರಶ್ನೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...