Homeಕರ್ನಾಟಕಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರಕ್ಕೆ ಸ್ಪಷ್ಟಣೆ ನೀಡಿದ ಹೆಚ್‌ಡಿಕೆ

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರಕ್ಕೆ ಸ್ಪಷ್ಟಣೆ ನೀಡಿದ ಹೆಚ್‌ಡಿಕೆ

- Advertisement -
- Advertisement -

2024ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯೊಂದಿಗೆ ಚುನಾವಣೆ ಎದುರಿಸುತ್ತವೆ ಎನ್ನುವ ಮಾತುಗಳು ರಾಜ್ಯದಲ್ಲಿ ಸದ್ದು ಮಾಡಿತ್ತು. ಈ ಮಾತಿಗೆ ಪ್ರತಿಕ್ರಿಯೇ ನೀಡಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಹೆಚ್.ಡಿ.ಕುಮಾರಸ್ವಾಮಿ ಅವರು ಇದು ಗಾಳಿಸುದ್ದಿ ಎಂದು ಹೇಳುವ ಮೂಲಕ ಮೈತ್ರಿಯನ್ನು ಅಲ್ಲಗಳೆದಿದ್ದಾರೆ.

ಚನ್ನಪಟ್ಟಣದಲ್ಲಿ ಸೋಮವಾರ ಕೆಡಿಪಿ ಸಭೆಯಲ್ಲಿ ಭಾಗವಹಿಸುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಚರ್ಚೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ”ಇದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

”ರಾಜಕಾರಣದಲ್ಲಿ ಊಹಾಪೋಹ ಮಾಮೂಲಿ, ಈ ವಿಚಾರವನ್ನು ನನ್ನ ಜೊತೆ ಯಾರೂ ಪ್ರಸ್ತಾಪ ಮಾಡಿಲ್ಲ. ಲೋಕಸಭಾ ಚುನಾವಣೆ ಬಗ್ಗೆ ನಾನು ಜಿಲ್ಲಾವಾರು ಸಭೆ ನಡೆಸಿ, ಗೆದ್ದ ಸೋತ ಅಭ್ಯರ್ಥಿಗಳ ಜತೆ ಮಾತನಾಡಿದ್ದೇನೆ. ಯಾವ ರೀತಿ ಚುನಾವಣೆ ಎದುರಿಸಬೇಕು ಎಂಬುದರ ಕುರಿತು ರೂಪುರೇಷೆ ಸಿದ್ಧ ಮಾಡುತ್ತಿದ್ದೇವೆ” ಎಂದು ಹೇಳಿದರು.

ಮಾಧ್ಯಮದವರು, ನೀವು ರಾಷ್ಟ್ರ ರಾಜಕಾರಣದ ಬಗ್ಗೆ ಒಲವು ವಿಚಾರ ಹೊಂದಿದ್ದೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ”ನನಗೆ ರಾಷ್ಟ್ರ ರಾಜಕಾರಣದ ಮೇಲೆ ಒಲವಿಲ್ಲ. ಕಳೆದ ಬಾರಿಯೂ ನನಗೆ ಚುನಾವಣೆ ಎದುರಿಸುವ ಆಸಕ್ತಿ ಇರಲಿಲ್ಲ. ಆದರೆ ಕಾರ್ಯಕರ್ತರ ಒತ್ತಾಸೆಯಿಂದ ರಾಜಕಾರಣದಲ್ಲಿದ್ದೇನೆ.

ಇದೇ ವೇಳೆ ಡಿಕೆ ಸುರೇಶ್ ವಿರುದ್ಧ ಹರಿಹಾಯ್ದ ಅವರು, ”ನಂದುಬಿಡಿ, ಹಾಲಿ ಸಂಸದರ ಕಥೆಯೇ ಕೇಳಿ.. ಅವರನ್ನು ಭ್ರಷ್ಟಾಚಾರದ ಮಧ್ಯೆ ಚುನಾವಣೆ ಬೇಡ ಅಂತಿದ್ದಾರೆ. ಅಂತವರೇ ಚುನಾವಣೆ ಬೇಡ ಅಂತ ಹೇಳ್ತಿರುವಾಗ ನಮ್ದೆಲ್ಲ ಯಾವ ಲೆಕ್ಕ?”ಹೆಚ್‌ಡಿಕೆ ಟಾಂಗ್ ಕೊಟ್ಟರು.

ಗ್ಯಾರಂಟಿಗಳ ಬಗ್ಗೆ ಗೊಂದಲವಿದೆ:

ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾಂಟಿಗಳ ಜಾರಿಗೆ ಮುಂದಾಗಿದ್ದು, ಭಾನುವಾರ ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಈ ವಿಚಾರದ ಬಗ್ಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ”ಸರ್ಕಾರದ ಐದು ಗ್ಯಾರಂಟಿ ಯೋಜನೆ ಬಗ್ಗೆ ಚರ್ಚೆ ಮಾಡಲು ಇನ್ನೂ ಸಮಯ ಇದೆ. ಕೊಟ್ಟ ಮಾತನ್ನು ಉಳಿಸಿಕೊಳ್ತಿವಿ ಅಂತಿದ್ದಾರೆ. ಅದರೆ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಹೇಗೆ ತಲುಪಿಸುತ್ತಾರೆ ಅನ್ನೋದು ಮುಖ್ಯ. ಈಗಾಗಲೇ ಬಾಡಿಗೆದಾರರಿಗೆ ಉಚಿತ ವಿದ್ಯುತ್ ಇಲ್ಲ ಅಂತಿದ್ದರು. ಆಮೇಲೆ ಕೊಡ್ತೀವಿ ಅಂದ್ರು, ಈಗ ಮನೆ ಮಾಲೀಕರು ಬಾಡಿಗೆದಾರರ ಜತೆ ಅಗ್ರಿಮೆಂಟ್ ಮಾಡಿಕೊಳ್ಳುತ್ತಿಲ್ಲ. ನಾನಾ ಸಮಸ್ಯೆಗಳು ಉದ್ಭವ ಆಗ್ತಿವೆ. ಘೋಷಣೆ ಮಾಡಿದಾಗ ನನಗೂ ಫ್ರೀ, ನಿನಗೂ ಫ್ರೀ ಅಂದರು. ಈಗ ಅದನ್ನೆಲ್ಲ ಯಾವರೀತಿ ನಿಬಾಯಿಸುತ್ತಾರೆ ನೋಡಬೇಕು” ಎಂದರು.

ಈ ವೇಳೆ ಹಿಂದಿನ ಬಿಜೆಪಿ ಸರಕಾರದ ವಿರುದ್ಧ ಪರ್ಸಂಟೇಜ್ ಆರೋಪ ಮಾಡಿದ್ದರ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಇದೀಗ ನಿಮ್ಮದೇ ಸರ್ಕಾರ ಇದೆ, 40% ಆರೋಪದ ಬಗ್ಗೆ ತನಿಖೆ ನಡೆಸುವಂತೆ ಸವಾಲು ಹಾಕಿದರು.

ಕುಮಾರಸ್ವಾಮಿ ಅವರು ತಮ್ಮ ಆರೋಪಗಳ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿರುವ ಹೇಳಿಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ, ”ಹಿಂದೆ ಇದೇ ಜನ ಬಿಜೆಪಿ ಸರಕಾರದ ವಿರುದ್ಧ 40% ಆರೋಪ ಮಾಡಿದ್ದರು. ಆ ಆರೋಪವನ್ನು ಅವರು ಸಾಬೀತು ಮಾಡಿದ್ದರಾ? ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರಾ? ಈಗ ನೋಡಿದರೆ ನನಗೆ ಪುಕ್ಕಟೆ ಸಲಹೆ ನೀಡುತ್ತಿದ್ದಾರೆ” ಎಂದು ಡಿಕೆಶಿ ವಿರುದ್ಧ ಕಿಡಿಕಾರಿದರು.

”ಈಗ ಕಾಂಗ್ರೆಸ್‌ನವರದ್ದೇ ಸರ್ಕಾರ ಇದೆ. 40% ವಿಚಾರವನ್ನು ತನಿಖೆ ಮಾಡಿಸಲಿ, ಸತ್ಯ ಜನರ ಮುಂದೆ ಇಡಲಿ. ಆರೋಪ ಮಾಡಿದವರ ಬಳಿ ಸಾಕ್ಷ್ಯ ಇರಲೇಬೇಕಲ್ಲವೇ? ಗುತ್ತಿಗೆದಾರರ ಸಂಘದವರು ದೂರು ಕೊಟ್ಟಿದ್ದರಲ್ಲ, ಅವರು ಸಾಕ್ಷಿ ಇಟ್ಟಿದ್ರಾ.? ಲೋಕಾಯುಕ್ತಕ್ಕೆ ದೂರು ನೀಡಲು ಅಡ್ಡಿ ಮಾಡಿದ್ದವರು ಯಾರು?” ಎಂದು ಅವರು ಪ್ರಶ್ನಿಸಿದರು.

”ಕಳೆದ ಮೇ 8ರಂದು ಮಹಾನಗರ ಪಾಲಿಕೆಯಲ್ಲಿ 675 ಕೋಟಿ LOC ಹಣವನ್ನ ಯಾಕೆ ರಿಲೀಸ್ ಮಾಡಿಲ್ಲ? ಅದನ್ನು ಯಾಕೆ ಇಟ್ಟುಕೊಂಡಿದ್ದೀರಿ? ಅದರ ಬಗ್ಗೆ ನೀವು ಮೊದಲು ಜನತೆಗೆ ಹೇಳಿ” ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...