Homeಮುಖಪುಟಸಿಬಿಎಸ್ಸಿ ಪರೀಕ್ಷಾ ಶುಲ್ಕ ಹೆಚ್ಚಳ ವಿರೋಧಿಸಿ ಕೇಂದ್ರಕ್ಕೆ ಪತ್ರ ಬರೆದ ಒಡಿಸ್ಸಾ ಸಿಎಂ ನವೀನ್ ಪಟ್ನಾಯಕ್,...

ಸಿಬಿಎಸ್ಸಿ ಪರೀಕ್ಷಾ ಶುಲ್ಕ ಹೆಚ್ಚಳ ವಿರೋಧಿಸಿ ಕೇಂದ್ರಕ್ಕೆ ಪತ್ರ ಬರೆದ ಒಡಿಸ್ಸಾ ಸಿಎಂ ನವೀನ್ ಪಟ್ನಾಯಕ್, ದನಿಗೂಡಿಸಿದ ಕೇಜ್ರಿವಾಲ್

- Advertisement -
- Advertisement -

ಸಿಬಿಎಸ್ಸಿ ಪರೀಕ್ಷಾ ಶುಲ್ಕ ಹೆಚ್ಚಳವನ್ನು ವಿರೋಧಿಸಿ ಒಡಿಸ್ಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಯವರು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ರಮೇಶ್ ಮೋಖ್ರಿಯಾಲ್ ನಿಶಾಂಕ್ ರವರಿಗೆ ಪತ್ರ ಬರೆದಿದ್ದಾರೆ. ಇದಕ್ಕೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಹಮತ ವ್ಯಕ್ತಪಡಿಸಿ ದನಿಗೂಡಿಸಿದ್ದಾರೆ.

ಹಾಲಿ ಈ ಶಾಲೆಗಳಲ್ಲಿ ಸಾಮಾನ್ಯ ವಿದ್ಯಾರ್ಥಿಗಳು 750 ರೂ ಪಾವತಿಸುತ್ತಿದ್ದರೆ ಈಗ ಏಕಾಏಕಿ 1500ಕ್ಕೆ ಅಂದರೆ ಎರಡು ಪಟ್ಟು ಏರಿಸಲಾಗಿದೆ. ಇನ್ನು ಎಸ್ಸಿ, ಎಸ್ಟಿ ವಿದ್ಯಾರ್ಥಿಗಳು 50 ರೂ ಪಾವತಿಸುತ್ತಿದ್ದರೆ ಇನ್ನು ಮುಂದೆ 1200ಕ್ಕೆ ಅಂದರೆ ಇಪ್ಪಲ್ನಾಕ್ಕು ಪಟ್ಟು ಹೆಚ್ಚು ಮಾಡಲಾಗಿದೆ. ಅತ್ಯಂತ ಕಡಿಮೆ ಶುಲ್ಕದಲ್ಲಿ ಅತ್ಯುತ್ತಮ ಶಿಕ್ಷಣಕ್ಕೆ ಹೆಸರುವಾಸಿಯಾಗಿದ್ದ ಕೇಂದ್ರೀಯ ಶಾಲೆಗಳಲ್ಲಿನ ಈ ದುಬಾರಿ ಶುಲ್ಕ ಹೆಚ್ಚಳವು ಜನರಿಗೆ ದೊಡ್ಡ ಶಾಕ್ ಆಗಿದೆ.

ಇಷ್ಟು ದೊಡ್ಡ ಮಟ್ಟದಲ್ಲಿ ಶುಲ್ಕ ಹೆಚ್ಚಳ ಮಾಡಿರುವುದು ಅಸಹಜ ಏರಿಕೆಯಾಗಿದೆ, ಅದರಲ್ಲೂ ದಲಿತ ವಿದ್ಯಾರ್ಥಿಗಳ 24 ಪಟ್ಟು ಫೀಸು ಹೆಚ್ಚಳ ದೊಡ್ಡ ಶಾಕ್ ಆಗಿದೆ ಎಂದು ತಮ್ಮ ಪತ್ರದಲ್ಲಿ ನವೀನ್ ಪಟ್ನಾಯಕ್ ಉಲ್ಲೇಖಿಸಿದ್ದಾರೆ.

ನಿಮಗೆ ಗೊತ್ತಿರುವಂತೆ ಒಡಿಸ್ಸಾದ ಗ್ರಾಮೀಣ ಭಾಗಗಳಲ್ಲಿ ಸಿಬಿಎಸ್ಸಿ ಅಡಿಯಲ್ಲಿ 200 ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆದಿದ್ದೇವೆ. ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಮಕ್ಕಳ ಉತ್ತಮ ವಿದ್ಯಾಭ್ಯಾಸಕ್ಕಾಗಿ ಈ ಪ್ರಯತ್ನವನ್ನು ಸರ್ಕಾರದಿಂದ ಮಾಡಲಾಗಿದೆ. ಆದರೆ ಕೇಂದ್ರದ ಈ ಪರೀಕ್ಷಾ ಶುಲ್ಕ ಹೆಚ್ಚಳದಿಂದ ಆ ವಿದ್ಯಾರ್ಥಿಗಳು ತೊಂದರೆಗೊಳಗಲಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರ ಪರೀಕ್ಷಾ ಶುಲ್ಕ ಹೆಚ್ಚಳದ ತಮ್ಮ ನಿರ್ಧಾರವನ್ನು ಮರುಪರೀಶಿಲಿಸಬೇಕೆಂದು ಒತ್ತಾಯಿಸಿದ್ದಾರೆ.

ನೀವು ಈ ಸಮಸ್ಯೆಯನ್ನು ಅರ್ಥ ಮಾಡಿಕೊಳ್ಳುತ್ತೀರಿ ಮತ್ತು ಬಗೆಹರಿಸುತ್ತೀನೆಂದು ನಂಬಿದ್ದೇವೆ ಎಂದು ಪತ್ರವನ್ನು ಅಂತ್ಯಗೊಳಿಸಿದ್ದಾರೆ.

ಶಿಕ್ಷಣ ಎನ್ನುವುದು ಸೇವೆಯೇ ಹೊರತು ವ್ಯಾಪಾರವಲ್ಲ. ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುವಂತೆ ನಮ್ಮ ಸಂವಿಧಾನವೂ ಹೇಳುತ್ತದೆ. ಆದರೆ ಕೇಂದ್ರ ಸರ್ಕಾರ ಈ ರೀತಿಯ ಕ್ರಮಗಳ ಮೂಲಕ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳ ಹೆಸರು ಹಾಳುಗೆಡವಲು ಪ್ರಯತ್ನಿಸುತ್ತಿರುವುದು ಖಂಡನೀಯ. ಇದರಿಂದ ಬಡಮಕ್ಕಳು ತಮಗೆ ಸಿಗುತ್ತಿರುವ ಅತ್ಯುತ್ತಮ ಶಿಕ್ಷಣದಿಂದ ವಂಚಿತರಾಗುತ್ತಾರೆ. ಶಿಕ್ಷಣವನ್ನು ಬಂಡವಾಳ ಮಾಡಿಕೊಂಡು ಶಿಕ್ಷಣದ ವ್ಯಾಪಾರ ಮಾಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಪೂರಕವಾದ ವಾತಾವರಣವನ್ನು ಕಲ್ಪಸಿಕೊಟ್ಟಂತಾಗುತ್ತದೆ. ಹಾಗಾಗಿ ಸರ್ಕಾರ ಈ ಕ್ರಮವನ್ನು ಹಿಂತೆಗೆದುಕೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ ತಿಳಿಸಿದೆ.

ಇಂದು ಶಿಕ್ಷಣಕ್ಕೆ ಉತ್ತೇಜನ ನೀಡುವ ಹಲವಾರು ಕ್ರಮಗಳ ನಂತರವೂ ಸಾವಿರಾರು ಮಕ್ಕಳು ಶಾಲೆಯಿಂದ ಹೊರಗುಳಿದಿರುವುದು ನಮಗೆಲ್ಲಾ ಗೊತ್ತೆ ಇದೆ. ಇಂತಹ ಸಂದರ್ಭದಲ್ಲಿ ಉಚಿತ ಮತ್ತು ಗುಣಮಟ್ಟದ ಶಿಕ್ಷಣವನ್ನು ಖಾತ್ರಿಗೊಳಿಸಬೇಕಾದ ಸರ್ಕಾರ ಮಕ್ಕಳ ಶುಲ್ಕವನ್ನು ಹೆಚ್ಚು ಮಾಡುತ್ತಿರುವುದು ಮತ್ತಷ್ಟು ಮಕ್ಕಳನ್ನು ಶಾಲೆಗಳಿಂದ ಹೊರದೂಡುತ್ತಿರುವುದನ್ನು ಯಾವುದೇ ಕಾರಣಗಳಿಂದಲೂ ಒಪ್ಪಲು ಸಾಧ್ಯವಿಲ್ಲ. ಬದಲಗೆ ಶುಲ್ಕವನ್ನು ಉಚಿತ ಮಾಡುವುದರ ಜೊತೆಗೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿಯೂ ಕೇಂದ್ರೀಯ ಶಾಲೆಗಳ ಮಾದರಿಯ ಶಿಕ್ಷಣವನ್ನು ಜಾರಿಗೊಳಿಸಬೇಕೆಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...