Homeಮುಖಪುಟಅಣ್ಣಾಮಲೈರನ್ನ ಹಿಡಿತದಲ್ಲಿ ಇಟ್ಟುಕೊಳ್ಳಿ: ಕೇಂದ್ರದ ಬಿಜೆಪಿ ನಾಯಕರಿಗೆ ಮೈತ್ರಿ ಪಕ್ಷ ಎಐಎಡಿಎಂಕೆ ಎಚ್ಚರಿಕೆ

ಅಣ್ಣಾಮಲೈರನ್ನ ಹಿಡಿತದಲ್ಲಿ ಇಟ್ಟುಕೊಳ್ಳಿ: ಕೇಂದ್ರದ ಬಿಜೆಪಿ ನಾಯಕರಿಗೆ ಮೈತ್ರಿ ಪಕ್ಷ ಎಐಎಡಿಎಂಕೆ ಎಚ್ಚರಿಕೆ

- Advertisement -
- Advertisement -

ಬಿಜೆಪಿ ತನ್ನ ರಾಜ್ಯ ಪಕ್ಷದ ಮುಖ್ಯಸ್ಥ ಕೆ ಅಣ್ಣಾಮಲೈ ಅವರನ್ನು ಹಿಡಿತದಲ್ಲಿ ಇಟ್ಟುಕೊಳ್ಳಬೇಕು  ಎಂದು  ಮಿತ್ರಪಕ್ಷ ಎಐಎಡಿಎಂಕೆ ಸೋಮವಾರ ಹೇಳಿದೆ. ಉನ್ನತ ನಾಯಕತ್ವದಲ್ಲಿ ಕೇಸರಿ ಪಕ್ಷದೊಂದಿಗಿನ ತನ್ನ ಸಂಬಂಧವನ್ನು ಮರುಪರಿಶೀಲಿಸಬೇಕು ಎಂದು ಎಐಎಡಿಎಂಕೆ ಹೇಳಿದೆ.

ಅಣ್ಣಾಮಲೈ ಅವರು ಮಾಜಿ ಮುಖ್ಯಮಂತ್ರಿ ಮತ್ತು ದಿವಂಗತ ಎಐಎಡಿಎಂಕೆ ವರಿಷ್ಠೆ ಜೆ ಜಯಲಲಿತಾ ಅವರನ್ನು ಪರೋಕ್ಷವಾಗಿ ಕೆಣಕಿದ ನಂತರ ಅವರ ಮೇಲೆ ಹಿರಿಯ ಎಐಎಡಿಎಂಕೆ ನಾಯಕ ಡಿ ಜಯಕುಮಾರ್ ಅವರು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

ಪ್ರಮುಖ ಪತ್ರಿಕೆಯೊಂದಕ್ಕೆ ಅಣ್ಣಾಮಲೈ ಅವರು ನೀಡಿದ ಸಂದರ್ಶನದಲ್ಲಿ ”ಸಾರ್ವಜನಿಕ ಖಜಾನೆಯನ್ನು ಲಪಟಾಯಿಸಿದ ಯಾವುದೇ ಸರ್ಕಾರವನ್ನು ಪ್ರಶ್ನಿಸುತ್ತೇವೆ ಎಂದಿದ್ದಾರೆ. ತಮಿಳುನಾಡಿನ ಹಲವು ಸರ್ಕಾರಗಳ ಅವಧಿಯಲ್ಲಿ ಭ್ರಷ್ಟಚಾರ ನಡೆದಿವೆ. ಮಾಜಿ ಮುಖ್ಯಮಂತ್ರಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆಯಾಗಿದೆ. ಹಾಗಾಗಿಯೇ ತಮಿಳುನಾಡು ಅತ್ಯಂತ ಭ್ರಷ್ಟ ರಾಜ್ಯಗಳಲ್ಲೊಂದಾಗಿದೆ. 1991-96ರ ನಡುವಿನ ಅವಧಿಯು (ಜಯಲಲಿತಾ ಅವರು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾಗ) ಭ್ರಷ್ಟಾಚಾರದಲ್ಲಿ ನಂಬರ್ ಒನ್ ಅವಧಿ ಎಂದು ಹೇಳುತ್ತೇನೆ” ಎಂದು ಅಣ್ಣಾಮಲೈ ಹೇಳಿದರು.

ಅಣ್ಣಾಮಲೈ ಅವರ ಹೇಳಿಕೆಯಿಂದ ಎಐಎಡಿಎಂಕೆ ಪದಾಧಿಕಾರಿಗಳು ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಚೆನ್ನೈನಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಜಯಕುಮಾರ್, ”ತಮಿಳುನಾಡು ರಾಜಕೀಯದ ಇತಿಹಾಸ ಗೊತ್ತಿಲ್ಲದ ಅನನುಭವಿ ನಾಯಕ ಅಣ್ಣಾಮಲೈ” ಎಂದು ಕರೆದರು.

”ಡಿಎಂಕೆಯನ್ನು ಟೀಕಿಸುವ ಬದಲು… ಮೈತ್ರಿ ಪಾಲುದಾರರ ವಿರುದ್ಧ ಹೇಳಿಕೆಗಳನ್ನು ನೀಡುವುದು ಸ್ವೀಕಾರಾರ್ಹವಲ್ಲ. ಅವರ ಹೇಳಿಕೆಯನ್ನು ನಾವು ಬಲವಾಗಿ ಖಂಡಿಸುತ್ತೇವೆ. ಎಐಎಡಿಎಂಕೆ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಆಯ್ಕೆಯಾಗುವುದನ್ನು ನೋಡಲು ಬಯಸುತ್ತಾರೆ (2024 ರ ಲೋಕಸಭೆ ಚುನಾವಣೆಯಲ್ಲಿ). ಆದರೆ ಅಣ್ಣಾಮಲೈ ಅವರ ಹೇಳಿಕೆಯಿಂದ, ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಯನ್ನು ಮುಂದುವರಿಸಲು ಬಯಸುವುದಿಲ್ಲ, ಮೋದಿ ಮತ್ತೆ ಪ್ರಧಾನಿಯಾಗುವುದನ್ನು ಬಯಸುವುದಿಲ್ಲ ಎಂದು ಸೂಚಿಸುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಸುಳ್ಳು ಆರೋಪಕ್ಕಾಗಿ ಅಣ್ಣಾಮಲೈ 500 ಕೋಟಿ ರೂ. ಮಾನನಷ್ಟ ಪರಿಹಾರ ನೀಡಬೇಕು: ಡಿಎಂಕೆ ನೋಟಿಸ್

”ಈಗ ಚುನಾವಣೆ ನಡೆದರೆ, ಎಐಎಡಿಎಂಕೆ ನೇತೃತ್ವದ ಮೈತ್ರಿಕೂಟವು 30 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಸಾಮರ್ಥ್ಯವನ್ನು ಹೊಂದಿದೆ ಎಂದು ಜಯಕುಮಾರ್ ಹೇಳಿದರು, ಮೈತ್ರಿಕೂಟವು ಪುದುಚೇರಿ ಸೇರಿದಂತೆ ಎಲ್ಲಾ 40 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯನ್ನು ಹೊಂದಿದೆ” ಎಂದು ಹೇಳಿದರು.

”ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಣ್ಣಾಮಲೈ ಅವರನ್ನು ಚುನಾವಣಾ ಸಹ-ಪ್ರಭಾರಿಯಾಗಿ ನೇಮಕ ಮಾಡಲಾಗಿತ್ತು ಆದರೆ ಅಲ್ಲಿ ಬಿಜೆಪಿ ಬಹಳ ಹೀನಾಯವಾಗಿ ಸೋಲು ಕಂಡಿತು ಎಂದು ಅವರು ಹೇಳಿದರು. ಕರ್ನಾಟಕದ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಹೊರಿಸಲಾದ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಮಾಜಿ ಪೊಲೀಸ್ ಅಧಿಕಾರಿ ಏಕೆ ಪ್ರತಿಕ್ರಿಯಿಸಲಿಲ್ಲ?” ಎಂದು ಜಯಕುಮಾರ್ ಕೇಳಿದರು.

”ನಿಧನನಾಗಿರುವ ನಮ್ಮ ನಾಯಕರ ವಿರುದ್ಧ ಹೇಳಿಕೆಗಳನ್ನು ನೀಡುತ್ತಿರುವುದು ಅತ್ಯಂತ ಖಂಡನೀಯ. 20 ವರ್ಷಗಳ ನಂತರ, (2021) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು ಮತ್ತು ಅದಕ್ಕೆ ಎಐಎಡಿಎಂಕೆ ಕಾರಣ. ಅಣ್ಣಾಮಲೈ ಅದನ್ನು ನಿರಾಕರಿಸಬಹುದೇ? ಅವರು ಎಐಎಡಿಎಂಕೆ ನೇತೃತ್ವದ ಮೈತ್ರಿಕೂಟದ ಭಾಗವಾಗಿರುವುದರಿಂದ ಇಲ್ಲಿ ಬಿಜೆಪಿಗೆ ಗುರುತಿದೆ. ಅಮಿತ್ ಶಾ ಮತ್ತು (ಬಿಜೆಪಿ ಅಧ್ಯಕ್ಷ) ಜೆಪಿ ನಡ್ಡಾ ಅವರು ಅಣ್ಣಾಮಲೈ ಅವರಿಗೆ ಎಚ್ಚರಿಕೆ ನೀಡಬೇಕು, ಅವರನ್ನು ನಿಯಂತ್ರಿಸಬೇಕು” ಎಂದು ಎಚ್ಚರಿಕೆ ನೀಡಿದ್ದಾರೆ.

”ಎಐಎಡಿಎಂಕೆ ಮತ್ತು ಬಿಜೆಪಿ ನಡುವಿನ ಶೀತಲ ಸಮರ ಕಳೆದ ಹಲವು ತಿಂಗಳುಗಳಿಂದ ಚಾಲ್ತಿಯಲ್ಲಿದೆ, ಎರಡೂ ಪಕ್ಷಗಳ ನಾಯಕರು ಪರಸ್ಪರ ಟೀಕೆ ಮಾಡುತ್ತಿದ್ದಾರೆ. ಅಣ್ಣಾಮಲೈ ಅವರನ್ನು ಅಮ್ಮನಂಥ ಸರ್ವೋಚ್ಚ ನಾಯಕನಿಗೆ ಹೋಲಿಸಲು ಸಾಧ್ಯವಿಲ್ಲ” ಎಂದು ಜಯಕುಮಾರ್ ಹೇಳಿದರು.

ಇತ್ತೀಚಿನ ಜಟಾಪಟಿಯು ಎರಡು ಪಕ್ಷಗಳ ನಡುವಿನ ಸಂಬಂಧ ಮತ್ತು 2024 ರ ಚುನಾವಣೆಗೆ ಒಟ್ಟಿಗೆ ಸೇರುತ್ತದೆಯೇ ಎಂಬ ಅನುಮಾನವನ್ನು ಮತ್ತೊಮ್ಮೆ ಹುಟ್ಟುಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...