Homeಕರ್ನಾಟಕಜಿಲ್ಲಾ ಉಸ್ತುವಾರಿ ಸಚಿವರು ಎಂಬ ಕಲ್ಪನೆ ಮತ್ತು ಮಹತ್ವ

ಜಿಲ್ಲಾ ಉಸ್ತುವಾರಿ ಸಚಿವರು ಎಂಬ ಕಲ್ಪನೆ ಮತ್ತು ಮಹತ್ವ

- Advertisement -
- Advertisement -

ಆಡಳಿತಾತ್ಮಕ ಅನುಕೂಲಕ್ಕಾಗಿ ಕೆಲ ರಾಜ್ಯಗಳಲ್ಲಿ ಮಾತ್ರ ಸೃಷ್ಟಿಯಾದ ಜಿಲ್ಲಾ ಉಸ್ತುವಾರಿ ಸಚಿವರು ಎಂಬ ಹುದ್ದೆಯು ಸದ್ಯ ಭಾರತದ ಬಹುತೇಕ ರಾಜ್ಯಗಳಲ್ಲಿ ಅಸ್ತಿತ್ವದಲ್ಲಿದೆ. ಮಹಾರಾಷ್ಟ್ರದಲ್ಲಿ ಪಾಲಿಕ ಸಚಿವರು ಎಂಬುದಾಗಿ ಅದನ್ನು ಕರೆಯಲಾಗುತ್ತಿತ್ತು. ತದನಂತರ ಕರ್ನಾಟಕದಲ್ಲಿ 70-80ರ ದಶಕದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಎಂಬ ಹುದ್ದೆಗಳನ್ನು ಸೃಷ್ಟಿಸಲಾಯಿತು. ಇಂಗ್ಲಿಷ್‌ನಲ್ಲಿ District In-Charge Minister ಎಂಬುದನ್ನು Guardian minister ಅಂತಲೂ ಕರೆಯುತ್ತಾರೆ. ತೀರಾ ಇತ್ತೀಚೆಗೆ 2021ರಲ್ಲಿ ಅಸ್ಸಾಂ ರಾಜ್ಯ ಸಹ ಈ ವ್ಯವಸ್ಥೆಯನ್ನು ಅಳವಡಿಸಿಕೊಂಡಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕಲ್ಪನೆ ಹೇಗೆ ಬಂತು?

ರಾಜ್ಯದೊಳಗಿನ ಹಲವು ಜಿಲ್ಲೆಗಳಲ್ಲಿ ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಜಿಲ್ಲೆಯ ಅಧಿಕಾರಿಗಳ ಜೊತೆಗೆ ಸರ್ಕಾರದ ಕಡೆಯಿಂದ ಒಬ್ಬ ಮಂತ್ರಿ ಇದ್ದರೆ ಅನುಕೂಲ ಎಂದು ಭಾವಿಸಿ ಈ ಹುದ್ದೆಯನ್ನು ಸೃಷ್ಟಿಸಲಾಯಿತು. ಇದು ಸಾಂವಿಧಾನಿಕ ಹುದ್ದೆಯಲ್ಲ. ಬದಲಿಗೆ ಆಡಳಿತದ ಅನುಕೂಲಕ್ಕಾಗಿ ಸೃಷ್ಟಿಸಿದ ಹುದ್ದೆಯಾಗಿದೆ. ಆದರೆ ಉಪಮುಖ್ಯಮಂತ್ರಿ ಹುದ್ದೆಯ ರೀತಿಯ ಮಹತ್ವ ಮತ್ತು ಪ್ರತಿಷ್ಠೆಯನ್ನು ಇದು ಹೊಂದಿದೆ. ಈಗಾಗಲೇ ಮಂತ್ರಿಯಾಗಿ ಸಂಪುಟದಲ್ಲಿ ಸ್ಥಾನ ಪಡೆದವರಿಗೆ ಕೆಲ ಜಿಲ್ಲೆಗಳ ಉಸ್ತುವಾರಿಯನ್ನು ಮುಖ್ಯಮಂತ್ರಿಗಳು ವಹಿಸುತ್ತಾರೆ.

ದೇವರಾಜ ಅರಸು

ಆಯಾಯ ಜಿಲ್ಲೆಯ ಸಚಿವರು ತಮ್ಮದೇ ಜಿಲ್ಲೆಗಳ ಉಸ್ತುವಾರಿ ವಹಿಸಿಕೊಂಡರೆ ಸರಾಗವಾಗಿ ಕೆಲಸ ಮಾಡಬಹುದು ಎಂಬ ಕಲ್ಪನೆಯೊಂದಿಗೆ ಸಾಮಾನ್ಯವಾಗಿ ಸಚಿವರನ್ನು ನೇಮಿಸಲಾಗುತ್ತದೆ. ಆದರೆ ಒಂದು ಜಿಲ್ಲೆಯಿಂದ ಇಬ್ಬರು-ಮೂವರು ಸಚಿವರಿದ್ದಾಗ ಅವರಲ್ಲಿ ಒಬ್ಬರನ್ನು ಮತ್ತು ಆಡಳಿತ ಪಕ್ಷದ ಸಚಿವರು ಇಲ್ಲದ ಜಿಲ್ಲೆಗಳಲ್ಲಿ ಬೇರೆ ಜಿಲ್ಲೆಯ ಸಚಿವರೊಬ್ಬರನ್ನು ನಿಯೋಜಿಸುವುದು ವಾಡಿಕೆಯಲ್ಲಿದೆ. ಕೆಲ ಸಚಿವರಿಗೆ ಎರಡೆರಡು ಜಿಲ್ಲೆಗಳ ಹೊಣೆ ಸಹ ಇರುತ್ತದೆ. ಉಸ್ತುವಾರಿ ಸಚಿವರು ತಾವು ಜವಾಬ್ದಾರಿ ವಹಿಸಿಕೊಂಡ ಜಿಲ್ಲೆಗಳ ಸಮಗ್ರ ಅಭಿವೃದ್ದಿಯ ಹೊಣೆ ಹೊತ್ತಿರುತ್ತಾರೆ. ತಮ್ಮ ಜಿಲ್ಲೆಗಳ ಬೇಕುಬೇಡಗಳನ್ನು ಗ್ರಹಿಸಿ ಅದನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕಾರ್ಯಗತಗೊಳಿಸುವುದು ಅವರ ಕೆಲಸ.

ಒಂದರ್ಥದಲ್ಲಿ ಉಸ್ತುವಾರಿ ಮಂತ್ರಿಗಳು ರಾಜ್ಯ ಸರ್ಕಾರ ಮತ್ತು ಸ್ಥಳೀಯ ಆಡಳಿತದ ನಡುವಿನ ಕೊಂಡಿಯಾಗಿ ಕೆಲಸ ನಿರ್ವಹಿಸಬೇಕು. ಪ್ರತಿ ತಿಂಗಳು ಎಲ್ಲಾ ಇಲಾಖೆಗಳ ಸಭೆಯಲ್ಲಿ ಭಾಗವಹಿಸಿ ಜಿಲ್ಲೆಯ ಮೇಲ್ವಿಚಾರಣೆ ಮಾಡಬೇಕಿರುತ್ತದೆ. ಜಿಲ್ಲೆಗೆ ಬೇಕಾದ ಅನುದಾನ ತರಲು ಯತ್ನಿಸಬೇಕು, ಜಿಲ್ಲೆಯಲ್ಲಿ ನಡೆಯುವ ಯಾವುದೇ ಅವಘಡದ, ಸಮಸ್ಯೆಗಳ ಹೊಣೆ ಹೊರಬೇಕು- ಹೀಗೆ ಮುಂತಾದ ಜವಾಬ್ದಾರಿಗಳು ಇರುತ್ತವೆ. ಉತ್ತರ ಪ್ರದೇಶದಂತಹ ಕೆಲ ರಾಜ್ಯಗಳನ್ನು ಹೊರತುಪಡಿಸಿ ಬಹುತೇಕ ರಾಜ್ಯಗಳು ಈ ಮಾದರಿಯನ್ನು ಅಳವಡಿಸಿಕೊಂಡಿವೆ.

ಕರ್ನಾಟಕದಲ್ಲಿ ಉಸ್ತುವಾರಿ ಮಂತ್ರಿಗಳಿಗೆ ಇರುವ ಮಹತ್ವ

ಜಿಲ್ಲೆಯ ಯಾವುದೇ ಸರ್ಕಾರಿ ಕಾರ್ಯಕ್ರಮಗಳ ಉದ್ಘಾಟನೆಯನ್ನು ಉಸ್ತುವಾರಿ ಸಚಿವರೇ ನೆರವೇರಿಸಬೇಕೆಂಬ ಪ್ರೊಟೋಕಾಲ್‌ಅನ್ನು ರಾಜ್ಯದಲ್ಲಿ ವಿಧಿಸಿಕೊಳ್ಳಲಾಗಿದೆ. ಸಚಿವರು ನಿಜವಾಗಿಯೂ ಇಚ್ಛಾಶಕ್ತಿಯಿಂದ ಕೆಲಸ ಮಾಡಿದ್ದಾದರೆ, ಇಡೀ ಜಿಲ್ಲೆಯಲ್ಲಿ ತಮ್ಮ ವರ್ಚಸ್ಸು ಮತ್ತು ಆಡಳಿತ ಸರ್ಕಾರದ ಪ್ರಭಾವ ಬೀರಬಹುದು. ಹಿಂದೆ ಮಹಾರಾಷ್ಟ್ರದ ಪುಣೆ ನಗರದ ಉಸ್ತುವಾರಿ ವಹಿಸಿಕೊಂಡ ಎನ್‌ಸಿಪಿ ಪಕ್ಷದ ಅಜಿತ್ ಪವಾರ್‌ರವರು ಅಲ್ಲಿ ಸಾಕಷ್ಟು ಪ್ರಭಾವ ಬೀರಿದ ನಂತರ, ಅಲ್ಲಿಯವರೆಗೂ ಅಷ್ಟೇನೂ ನೆಲೆ ಹೊಂದಿರದ ಎನ್‌ಸಿಪಿ ಪಕ್ಷವು ನಂತರದ ದಿನಗಳಲ್ಲಿ ಅಲ್ಲಿನ ಮಹಾನಗರ ಪಾಲಿಕೆ ಸೇರಿದಂತೆ ಇತರ ಚುನಾವಣೆಗಳಲ್ಲಿ ಗೆದ್ದು ಅಧಿಕಾರ ಹಿಡಿದಿತ್ತು ಎಂದು ಹೇಳಲಾಗುತ್ತದೆ.

ಸಿದ್ದರಾಮಯ್ಯ

ಕರ್ನಾಟಕದಲ್ಲಿ ದೇವರಾಜ ಅರಸುರವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಕಾಲದಲ್ಲಿ ಈ ಉಸ್ತುವಾರಿ ಸಚಿವರು ಬಹಳ ಒಳ್ಳೆಯ ಕೆಲಸ ಮಾಡಿದ್ದರೆಂಬ ಅಭಿಪ್ರಾಯಗಳಿವೆ. ನಜೀರ್ ಸಾಬ್‌ರವರು ಸೇರಿದಂತೆ ಹಲವು ಸಚಿವರ ಪರಿಣಾಮಕಾರಿಯಾಗಿ ಕೆಲಸ ಮಾಡಿ ಹೆಸರುಗಳಿಸಿದ್ದಾರೆ.

ಸಾಧಕ-ಬಾಧಕಗಳು

ಸಚಿವರು ತಮ್ಮದಲ್ಲದ ಜಿಲ್ಲೆಗೆ ಉಸ್ತುವಾರಿಯಾದಾಗ ಹೆಚ್ಚಿನ ಸಮಯ ಕೊಡಲಾಗುವುದಿಲ್ಲ ಎಂಬ ಆರೋಪವಿದೆ. ಅದರಲ್ಲಿಯೂ ಅವರ ಸ್ವಕ್ಷೇತ್ರ ಮತ್ತು ಉಸ್ತುವಾರಿ ಜಿಲ್ಲೆಯ ನಡುವಿನ ಅಂತರ ಹೆಚ್ಚಿದ್ದಷ್ಟು ಅವರ ಭೇಟಿ ಕಡಿಮೆಯಾಗುತ್ತಿರುತ್ತದೆ. ಇನ್ನೊಂದೆಡೆ ಸ್ವಂತ ಜಿಲ್ಲೆಯ ಉಸ್ತುವಾರಿ ಪಡೆದವರು ಸಹ ತಮ್ಮತಮ್ಮ ಕ್ಷೇತ್ರಕ್ಕೆ ಮಾತ್ರ ಹೆಚ್ಚು ಸೀಮಿತರಾಗಿರುತ್ತಾರೆಯೇ ಹೊರತು ಇಡೀ ಜಿಲ್ಲೆಯ ಅಭಿವೃದ್ಧಿ ಕುರಿತು ಗಮನವಹಿಸುವುದಿಲ್ಲ ಎಂಬ ಆಪಾದನೆಗಳಿವೆ.

ಇದನ್ನೂ ಓದಿ: ಎಂಎಲ್‌ಸಿ ಚುನಾವಣೆ: ಮಹಿಳೆಯರ ವಿಚಾರದಲ್ಲಿ ಮಾಡಿದ ತಪ್ಪನ್ನು ಕಾಂಗ್ರೆಸ್‌ ಈಗಲಾದರೂ ತಿದ್ದಿಕೊಂಡೀತೇ?

ಗಮನಿಸಬೇಕಾದ ಅಂಶವೆಂದರೆ ಕಳೆದ ಬೊಮ್ಮಾಯಿಯವರ ಸರ್ಕಾರದಲ್ಲಿ ಬಿ.ಶ್ರೀರಾಮುಲು ಒಬ್ಬರು ತಮ್ಮ ಸ್ವಂತ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದರು. ಆದರೆ ಅವರು ಶಾಸಕರಾಗಿ ಆಯ್ಕೆಯಾಗಿದ್ದು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದಿಂದ. ಉಳಿದ 30 ಸಚಿವರಿಗೆ ತಮ್ಮದಲ್ಲದ ಬೇರೆಯ ಜಿಲ್ಲೆಯ ಉಸ್ತುವಾರಿ ನೀಡಲಾಗಿತ್ತು. ತುಮಕೂರಿನವರಾದ ಬಿ.ಸಿ ನಾಗೇಶ್ ಅವರಿಗೆ ಕೊಡಗು ಜಿಲ್ಲೆಯ ಜವಾಬ್ದಾರಿ ನೀಡಿದರೆ, ಶಿವಮೊಗ್ಗದ ಆರಗ ಜ್ಞಾನೇಂದ್ರರವರಿಗೆ ತುಮಕೂರಿನ ಜವಾಬ್ದಾರಿ ವಹಿಸಲಾಗಿತ್ತು. ಅದಕ್ಕೂ ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗ 8 ಸಚಿವರಿಗೆ ಮಾತ್ರ ಅವರ ಸ್ವಂತ ಜಿಲ್ಲೆಗಳ ಜವಾಬ್ದಾರಿ ವಹಿಸಲಾಗಿತ್ತು. 11 ಸಚಿವರಿಗೆ ತಲಾ 2 ಜಿಲ್ಲೆಗಳ ಉಸ್ತುವಾರಿ ನೀಡಲಾಗಿತ್ತು.

ಸದ್ಯ ಸಿದ್ದರಾಮಯ್ಯನವರ ಸಂಪುಟದಲ್ಲಿ 18 ಸಚಿವರು ತಮ್ಮ ಸ್ವಂತ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. 8 ಸಚಿವರಿಗೆ ಅಕ್ಕಪಕ್ಕದ ಜಿಲ್ಲೆಯ ಜವಾಬ್ದಾರಿ ನೀಡಲಾಗಿದೆ. ಉಳಿದ 5 ಸಚಿವರು ಮಾತ್ರ ದೂರದ ಬೇರೆ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾರೆ. ಸಿಎಂ ಸಿದ್ದರಾಮಯ್ಯನವರ ಜೊತೆಗೆ ಕೃಷ್ಣಭೈರೇಗೌಡ ಮತ್ತು ರಹೀಂ ಖಾನ್ ಯಾವುದೇ ಜಿಲ್ಲೆಯ ಉಸ್ತುವಾರಿಯನ್ನು ವಹಿಸಿಕೊಂಡಿಲ್ಲ. ಅಷ್ಟರಮಟ್ಟಿಗೆ ಉಸ್ತುವಾರಿ ಹಂಚಿಕೆಯಲ್ಲಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಸಕಾರಾತ್ಮಕ ಬದಲಾವಣೆ ಬಂದಿದೆ ಎನ್ನಬಹುದು. ಆದರೆ ಈ ಸಚಿವರು ತಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಮಾಡುವ ಕೆಲಸವನ್ನು ಪರಾಮರ್ಶಿಸಲು ಇನ್ನೂ ಸಾಕಷ್ಟು ಸಮಯವಿದೆ.

ಉಸ್ತುವಾರಿ ಸಚಿವರು ತಮ್ಮ ಇಡೀ ಜಿಲ್ಲೆಯನ್ನು ಸುತ್ತಿ ಜನರ ಸಂಕಷ್ಟಗಳನ್ನು ಆಲಿಸಿ ಪರಿಹಾರ ಸೂಚಿಸಬೇಕು. ಅವರು ಒಂದು ಇಲಾಖೆಯ ಸಚಿವರೂ ಸಹ ಆಗಿರುವುದರಿಂದ ಅವರಿಗೆ ಇಡೀ ರಾಜ್ಯದ ಪರಿಚಯವಿರಬೇಕು ಮತ್ತು ಇಡೀ ರಾಜ್ಯವನ್ನು ಸುತ್ತಬೇಕು. ಕೇವಲ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿದರೆ ಪ್ರಯೋಜನವಾಗುವುದಿಲ್ಲ. ಏಕೆಂದರೆ ಅಧಿಕಾರಿಗಳು ಎಂದಿಗೂ ತಮ್ಮ ವಶನ್ ಹೇಳುತ್ತಾರೆಯೇ ಹೊರತು ಜನರ ಧ್ವನಿಯಾಗಿರುವುದಿಲ್ಲ. ಇನ್ನು ಸಚಿವರು ಬೇರೆ ಜಿಲ್ಲೆಗಳಿಗೆ ಹೋದಾಗಲೆಲ್ಲ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳೇ ಅವರನ್ನು ಸುತ್ತುವರೆದಿರುತ್ತಾರೆ. ಹಾಗಾಗಿ ನಿಜವಾಗಿಯೂ ಜನರ ಸ್ಥಿತಿ ಅರಿಯಲು ಸಾಧ್ಯವಾಗುವುದಿಲ್ಲ. ಈ ಎಲ್ಲಾ ಅಡೆತಡೆಗಳನ್ನು ಮೀರಲು ಸಚಿವರು ಯತ್ನಿಸಬೇಕು. ಅದರಲ್ಲಿಯೂ ದೂರದ ಜಿಲ್ಲೆಗಳ ಉಸ್ತುವಾರಿ ಹೊತ್ತವರಂತೂ ಅದೇ ಜಿಲ್ಲೆಯ ತಾಲ್ಲೂಕು ಕೇಂದ್ರದಲ್ಲಿ ವಾಸ್ತವ್ಯ ಹೂಡಬೇಕು. ಆಗ ಮಾತ್ರ ಜನರ ಸ್ಥಿತಿ ಸ್ವಲ್ಪಮಟ್ಟಿಗೆ ಅವರ ಅರಿವಿಗೆ ಬರಲು ಸಾಧ್ಯ. ಆದರೆ ಇಷ್ಟು ಬದ್ಧತೆಯನ್ನು ನಮ್ಮ ಸಚಿವರು ತೋರುತ್ತಾರೆಯೇ? ಅವರು ಹಾಗೆ ಮಾಡಲು ಜನರು ಒತ್ತಡ ಹೇರುತ್ತಾರೆಯೇ ಎಂಬುದು ಸದ್ಯದ ಪ್ರಶ್ನೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...